ಬೆಂಗಳೂರು : ಇಂಧನ ಸಚಿವ ಕೆಜೆ ಜಾರ್ಜ್ ಇಂದು ಕಾವೇರಿ ಭವನದಲ್ಲಿರುವ ಕೆಪಿಟಿಸಿಎಲ್ ಸಭಾಂಗಣದಲ್ಲಿ ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತದ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅಧಿಕಾರಿಗಳನ್ನುದ್ದೇಶಿಸಿ ಮಾತನಾಡಿದರು.

ರಾಜ್ಯದಾದ್ಯಂತ ಗ್ರಾಹಕರ ಅನುಕೂಲಕ್ಕಾಗಿ ದಕ್ಷ ಸೇವೆಗಳನ್ನು ಒದಗಿಸುವ ಮೂಲಕ ಸಂಸ್ಥೆಯ ದಕ್ಷತೆಯನ್ನು ಹೆಚ್ಚಿಸುವ ಅಗತ್ಯತೆಯ ಬಗ್ಗೆ ಸಚಿವ ಕೆಜೆ ಜಾರ್ಜ್ ಮಾಹಿತಿ ನೀಡಿದ್ದಾರೆ..

ಇಂಧನ ಸಚಿವಾಲಯದ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಗಳಾದ ಶ್ರೀ ಗೌರವ್ ಗುಪ್ತಾ, ಬೆಸ್ಕಾಂನ ವ್ಯವಸ್ಥಾಪಕ ನಿರ್ದೇಶಕರಾದ ಶ್ರೀ. ಮಹಾಂತೇಶ ಬೀಳಗಿ, ಕೆಪಿಟಿಸಿಎಲ್ ವ್ಯವಸ್ಥಾಪಕ ನಿರ್ದೇಶಕರಾದ ಶ್ರೀ. ಪಂಕಜ್ ಕುಮಾರ್ ಪಾಂಡೆ ಹಾಗೂ ರಾಜ್ಯದ ವಿವಿಧ ಭಾಗಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ ಹಿರಿಯ ಅಧಿಕಾರಿಗಳು ಈ ಸಭೆಯಲ್ಲಿ ಪಾಲ್ಗೊಂಡಿದ್ದರು.