• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, May 14, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ರಾಜಕೀಯ

ಸಿದ್ದರಾಮಯ್ಯ ಸರ್ಕಾರ ಹೈಕಮಾಂಡಿನ ಹಂಗಿನ ಸರ್ಕಾರವೇ..? : ಮಾಜಿ ಸಿಎಂ ಹೆಚ್​ಡಿಕೆ ವ್ಯಂಗ್ಯ

ಪ್ರತಿಧ್ವನಿ by ಪ್ರತಿಧ್ವನಿ
June 13, 2023
in ರಾಜಕೀಯ
0
ಸಿದ್ದರಾಮಯ್ಯ ಸರ್ಕಾರ ಹೈಕಮಾಂಡಿನ ಹಂಗಿನ ಸರ್ಕಾರವೇ..? : ಮಾಜಿ ಸಿಎಂ ಹೆಚ್​ಡಿಕೆ ವ್ಯಂಗ್ಯ
Share on WhatsAppShare on FacebookShare on Telegram

ಬೆಂಗಳೂರು: ರಾಜ್ಯದಲ್ಲಿ ಸಿದ್ದರಾಮಯ್ಯ ಅವರ ಸರ್ಕಾರದ ಬದಲಿಗೆ ಹೈಕಮಾಂಡಿನ ಹಂಗಿನ ಸರಕಾರ ಇದೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಕಟುವಾಗಿ ಟೀಕಿಸಿದ್ದಾರೆ.ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ರಂದೀಪ್ ಸುರ್ಜೆವಾಲಾ ಅವರು ಸಚಿವರು ಹಾಗೂ ಹಿರಿಯ ಅಧಿಕಾರಿಗಳ ಸಭೆ ನಡೆಸಿರುವ ಬಗ್ಗೆ ಸರಕಾರದ ವಿರುದ್ಧ ಟೀಕಾಪ್ರಹಾರ ನಡೆಸಿರುವ ಅವರು; ಈ ಬಗ್ಗೆ ಸರಣಿ ಟ್ವೀಟ್ ಮಾಡಿದ್ದಾರೆ.

ADVERTISEMENT

ರಾಜ್ಯದಲ್ಲಿರುವುದು ಸಿದ್ದರಾಮಯ್ಯನವರ ನೇತೃತ್ವದ ಸರಕಾರವೋ ಅಥವಾ ದಿಲ್ಲಿಯ ಜನಪಥ ರಸ್ತೆಯ 10ನೇ ನಂಬರಿನ ಹಂಗಿನ ಸರಕಾರವೋ? ಕನ್ನಡಿಗರು ಮತ ಹಾಕಿದ್ದು ಕೈ ಸರಕಾರಕ್ಕಾ?ಅಥವಾ ಕೈಗೊಂಬೆ ಸರಕಾರಕ್ಕಾ?? ಪಾಪ.. ಜನರ ವೋಟು ಹಂಗಿನ ಸರಕಾರದ ಪಾಲಾಗಿದೆ.ಸರಕಾರಕ್ಕೆ ತಿಂಗಳು ತುಂಬುವ ಮೊದಲೇ ಅದು ಸಾಬೀತಾಗಿದೆ ಎಂದು ಟೀಕಿಸಿದ್ದಾರೆ.ಅಲ್ಲದೆ, ‘ಹತ್ತನೇ ನಂಬರಿನ ಹಂಗಿನ ಸರಕಾರ’ ಎಂದು ಹ್ಯಾಷ್ ಟ್ಯಾಗ್ ಹಾಕಿ ಸರಕಾರವನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.

ಸರಕಾರದ ಅಧಿಕೃತ ಸಭೆಗಳನ್ನು ಹೈಕಮಾಂಡಿನ ನಿಲಯದ ಕಲಾವಿದರೇ ನಡೆಸುವ ಕರ್ಮ ಕರ್ನಾಟಕದ್ದು! ನಾನು ಟ್ಯಾಗ್ ಮಾಡಿರುವ ಫೋಟೋ ಆ ದೈನೇಸಿ ಸ್ಥಿತಿಗೆ ಸಾಕ್ಷಿ. ಎಐಸಿಸಿ ಪ್ರಧಾನ ಕಾರ್ಯದರ್ಶಿ ಶ್ರೀ ರಂದೀಪ್ ಸುರ್ಜೆವಾಲಾ ಅವರಿಗೆ ಸರಕಾರದ ಸಭೆಗಳನ್ನು ನಡೆಸುವ ಜವಾಬ್ದಾರಿ, ಅವಕಾಶ ಕೊಟ್ಟವರು ಯಾರು ಎಂದು ಅವರು ಪ್ರಶ್ನಿಸಿದ್ದಾರೆ.

ಸಭೆಯಲ್ಲಿ ಹಿರಿಯ ಸಚಿವರಿದ್ದಾರೆ! ಹಿರಿಯ ಐಎಎಸ್ ಅಧಿಕಾರಿಗಳೂ ಹಾಜರಿದ್ದಾರೆ!! ಅಲ್ಲಿಗೆ ಇದು ಅಧಿಕೃತ ಸಭೆಯೇ ಆಯಿತು. ಆದರೆ, ಅಲ್ಲಿ ಸುರ್ಜೆವಾಲಾ ಸೆಂಟರ್ ಸೀಟಿನಲ್ಲಿದ್ದಾರೆ! ಸಚಿವರು ಸೈಡು ಕುರ್ಚಿಗಳ ಪಾಲಾಗಿದ್ದಾರೆ!! ಇದೇನು ವಿಚಿತ್ರ? ಮಾನ್ಯ ಮುಖ್ಯಮಂತ್ರಿಗಳೇ ಉತ್ತರಿಸಬೇಕು ಎಂದು ಕುಮಾರಸ್ವಾಮಿ ಅವರು ಒತ್ತಾಯ ಮಾಡಿದ್ದಾರೆ.

Tags: BangaloreFormer CM HD Kumaraswamyhigh commandJDSsiddaramaiah
Previous Post

ಎನ್.ಪಿ.ಎಸ್ ರದ್ದುಗೊಳಿಸುವ ಕುರಿತು ಸಚಿವ ಸಂಪುಟ ಸಭೆಯಲ್ಲಿ ಚರ್ಚೆ : ಮುಖ್ಯಮಂತ್ರಿ ಸಿದ್ದರಾಮಯ್ಯ

Next Post

2018ರಲ್ಲಿ ಕಾಂಗ್ರೆಸ್​ ಸೋಲು ದಲಿತ ಸಮುದಾಯ ಕಡೆಗಣಿಸಿದ್ದಕ್ಕೆ ಸಿಕ್ಕ ಪಾಠ : ಸಚಿವ ಡಾ.ಜಿ ಪರಮೇಶ್ವರ್​

Related Posts

BREAKING NEWS : ಶಾಲಾ, ಕಾಲೇಜುಗಳಲ್ಲಿ ಧಾರ್ಮಿಕ ವಸ್ತ್ರ ಸಂಹಿತೆ ಜಾರಿ : ಸಚಿವ ಮಧು ಬಂಗಾರಪ್ಪ ಘೋಷಣೆ
Top Story

BREAKING NEWS : ಶಾಲಾ, ಕಾಲೇಜುಗಳಲ್ಲಿ ಧಾರ್ಮಿಕ ವಸ್ತ್ರ ಸಂಹಿತೆ ಜಾರಿ : ಸಚಿವ ಮಧು ಬಂಗಾರಪ್ಪ ಘೋಷಣೆ

by ಪ್ರತಿಧ್ವನಿ
May 13, 2026
0

ಬೆಂಗಳೂರು : ರಾಜ್ಯದ ಶಾಲಾ - ಕಾಲೇಜುಗಳಲ್ಲಿ ಧಾರ್ಮಿಕ ವಸ್ತ್ರ ಸಂಹಿತೆ ಜಾರಿಗೆ ತರುವುದಾಗಿ ಶಿಕ್ಷಣ ಸಚಿವ ಮಧು ಬಂಗಾರಪ್ಪ ಘೋಷಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿಂದು ಮಾತನಾಡಿ, ರಾಜ್ಯಾದ್ಯಂತ ಎಲ್ಲ...

Read moreDetails
ನೀಟ್‌ ಪ್ರಶ್ನೆ ಪತ್ರಿಕೆ ಸೋರಿಕೆ : ಮೋದಿ ಸರ್ಕಾರದ ನಡೆಯನ್ನು ಸಮರ್ಥಿಸಿಕೊಂಡ “ಕೈ” ಸಚಿವ

ನೀಟ್‌ ಪ್ರಶ್ನೆ ಪತ್ರಿಕೆ ಸೋರಿಕೆ : ಮೋದಿ ಸರ್ಕಾರದ ನಡೆಯನ್ನು ಸಮರ್ಥಿಸಿಕೊಂಡ “ಕೈ” ಸಚಿವ

May 13, 2026
ದೀದಿ ವಿರುದ್ಧ ಗೆದ್ದಿರುವ ದಾದಾ ದಿಢೀರ್ ರಾಜೀನಾಮೆ : ಕಾರಣ ಏನಿರಬಹುದು..?

ದೀದಿ ವಿರುದ್ಧ ಗೆದ್ದಿರುವ ದಾದಾ ದಿಢೀರ್ ರಾಜೀನಾಮೆ : ಕಾರಣ ಏನಿರಬಹುದು..?

May 13, 2026
ಬೆಂಗಳೂರಿಗರಿಗೆ ಡಿಕೆ ಶಿವಕುಮಾರ್‌‌ ಕೊಟ್ಟ ಗುಡ್‌ ನ್ಯೂಸ್ ಏನು..?

ಬೆಂಗಳೂರಿಗರಿಗೆ ಡಿಕೆ ಶಿವಕುಮಾರ್‌‌ ಕೊಟ್ಟ ಗುಡ್‌ ನ್ಯೂಸ್ ಏನು..?

May 13, 2026
ಮಿತ್ರ ಪಕ್ಷಗಳ ಟೀಕೆಗೆ ಮಣಿದ ಸಿಎಂ ವಿಜಯ್ : ವಿಶೇಷಾಧಿಕಾರಿ ನೇಮಕ ವಾಪಸ್‌

ಮಿತ್ರ ಪಕ್ಷಗಳ ಟೀಕೆಗೆ ಮಣಿದ ಸಿಎಂ ವಿಜಯ್ : ವಿಶೇಷಾಧಿಕಾರಿ ನೇಮಕ ವಾಪಸ್‌

May 13, 2026
Next Post
2018ರಲ್ಲಿ ಕಾಂಗ್ರೆಸ್​ ಸೋಲು ದಲಿತ ಸಮುದಾಯ ಕಡೆಗಣಿಸಿದ್ದಕ್ಕೆ ಸಿಕ್ಕ ಪಾಠ : ಸಚಿವ ಡಾ.ಜಿ ಪರಮೇಶ್ವರ್​

2018ರಲ್ಲಿ ಕಾಂಗ್ರೆಸ್​ ಸೋಲು ದಲಿತ ಸಮುದಾಯ ಕಡೆಗಣಿಸಿದ್ದಕ್ಕೆ ಸಿಕ್ಕ ಪಾಠ : ಸಚಿವ ಡಾ.ಜಿ ಪರಮೇಶ್ವರ್​

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!