• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Tuesday, April 14, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ರಾಜ್ಯದ ವಿವಿಧೆಡೆ ಕಳ್ಳತನ ಮಾಡಿದ್ದ ಮೂವರು ಐನಾತಿಗಳ ಬಂಧನ: 15 ಲಕ್ಷ ರೂ.ಮೌಲ್ಯದ ಚಿನ್ನ ವಶ

Any Mind by Any Mind
June 14, 2023
in Top Story, ಕರ್ನಾಟಕ
0
ರಾಜ್ಯದ ವಿವಿಧೆಡೆ ಕಳ್ಳತನ ಮಾಡಿದ್ದ ಮೂವರು ಐನಾತಿಗಳ ಬಂಧನ: 15 ಲಕ್ಷ ರೂ.ಮೌಲ್ಯದ ಚಿನ್ನ ವಶ
Share on WhatsAppShare on FacebookShare on Telegram

ಕರ್ನಾಟಕದ ವಿವಿಧ ಜಿಲ್ಲೆಯ ವಿವಿಧ ಭಾಗಗಳಲ್ಲಿ ಮನೆಗಳಿಗೆ ಕನ್ನ ಹಾಕಿ ಚಿನ್ನಾಭರಣ ದೋಚುತ್ತಿದ್ದ ಮೂವರು ವೃತ್ತಿ ನಿರತ ಖದೀಮರನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಬಂಧಿತರಿಂದ 15 ಲಕ್ಷ ಮೌಲ್ಯದ
28ಓ ಗ್ರಾಂ ಚಿನ್ನಾಭರಣ ಮತ್ತು 2.4 ಕೆಜಿ ಬೆಳ್ಳಿ ಪದಾರ್ಥಗಳನ್ನು ವಶಕ್ಕೆ ಪಡೆಯಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸೀಮಾ ಲಾಟ್ಕರ್ ತಿಳಿಸಿದರು. ಮೈಸೂರು ನಗರದಲ್ಲಿರುವ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಕಚೇರಿಯಲ್ಲಿ ಬುಧವಾರ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಮೇ ತಿಂಗಳಲ್ಲಿ ಹುಣಸೂರು ಪಟ್ಟಣದ ಮಾರುತಿ, ಮಂಜುನಾಥ ಬಡಾವಣೆಯಲ್ಲಿ ಮನೆ ಕಳವು ಪ್ರಕರಣ ಸಂಬಂಧ ತನಿಖೆ ಆರಂಭಿಸಿದ್ದ ಹುಣಸೂರು ಪಟ್ಟಣ ಪೊಲೀಸರು, ಹಾಸನ ಜಿಲ್ಲೆಯ ಚನ್ನರಾಯಪ್ಪಣ್ಣದ ಮಂಜುನಾಥ್ ಅಲಿಯಾಸ್ ಚೂಟಿ ಮಂಜು (೪೦), ಮುರುಗೇಶ್ ಅಲಿಯಾಸ್ ಕಪ್ಪೆ (೪೦), ಹುಣಸೂರಿನ ಗೋಪಿಕೃಷ್ಣ ಅಲಿಯಾಸ್ ಗೋಪಿ (೫೮) ಎಂಬ ವೃತ್ತಿನಿರತ ಖದೀಮರನ್ನು ಬಂಧಿಸಿದ್ದಾರೆ ಎಂದು ಮಾಹಿತಿ ನೀಡಿದರು.

ADVERTISEMENT


ಹುಣಸೂರು ಪಟ್ಟಣದ ಪೊಲೀಸ್ ಠಾಣಾ ವ್ಯಾಪ್ತಿಯ ಮಾರುತಿ ಬಡಾವಣೆ ಮತ್ತು ಮಂಜುನಾಥ ಬಡಾವಣೆಗಳಲ್ಲಿ ರಾತ್ರಿ ಕಳವು ಪ್ರಕರಣಗಳು ಆಗಿದ್ದವು, ಈ ಸಂಬಂಧ ಹುಣಸೂರು ಪಟ್ಟಣ ಪೊಲೀಸ್ ಠಾಣೆಯಲ್ಲಿ ಮೇ ತಿಂಗಳಿನಲ್ಲಿ ನಾಲ್ಕು ಪ್ರಕರಣಗಳು ದಾಖಲಾಗಿದ್ದವು. ಈ ಪ್ರಕರಣಗಳ ಪತ್ತೆಗಾಗಿ ಹೆಚ್ಚುವರಿ ಪೊಲೀಸ್ ಅಧೀಕ್ಷಕರಾದ ಡಾ.ನಂದಿನಿ ಅವರ ನೇತೃತ್ವದಲ್ಲಿ ತಂಡವನ್ನು ರಚಿಸಿದ್ದರು. ಕಾರ್ಯಾಚರಣೆ ನಡೆಸಿದ ತಂಡವು ಮೂರು ಆರೋಪಿಗಳನ್ನು ಬಂಧಿಸಿ, ವಿಚಾರಣೆಗೆ ಒಳಪಡಿಸಿದಾಗ ಆರೋಪಿಗಳ ವಿರುದ್ಧ ಹುಣಸೂರು ಪಟ್ಟಣ ಠಾಣೆಯಲ್ಲಿ 5 ಪಿರಿಯಾಪಟ್ಟಣ ಠಾಣೆಯಲ್ಲಿ 1, ಕೆ.ಆರ್.ನಗರ ಪೊಲೀಸ್ ಠಾಣೆಯಲ್ಲಿ 1, ಒಟ್ಟು ಮೈಸೂರು ಜಿಲ್ಲೆಯಲ್ಲಿ 9 ಪ್ರಕರಣಗಳು ಇವರ ವಿರುದ್ಧ ದಾಖಲಾಗಿರುವುದು ಕಂಡು ಬಂದಿದೆ ಎಂದರು.


ಬಂಧಿತರಿಂದ 18 ಲಕ್ಷದ ರೂ.ಮೌಲ್ಯದ 289 ಗ್ರಾಂ ಚಿನ್ನಾಭರಣ ಮತ್ತು 2.4 ಕೆಜಿ ಬೆಳ್ಳಿ ಪದಾರ್ಥಗಳು ಮತ್ತು ಮನೆಗಳ ಬಾಗಿಲ ಲಾಕ್ ಮುರಿಯಲು ಬಳಸುತ್ತಿದ್ದ ಸಾಮಗ್ರಿಗಳನ್ನು ವಶಕ್ಕೆ ಪಡೆಯಲಾಗಿದೆ. ಕಳವು ಮಾಡಿದ ಸ್ವತ್ತನ್ನು ಗಿರವಿ ಇಡಲು ಹೋಗುವ ವೇಳೆ ಇಬ್ಬರನ್ನು ಹುಣಸೂರಿನಲ್ಲಿ ಮತ್ತು ಒಬ್ಬರನ್ನು ಕೆ.ಆರ್. ನಗರದಲ್ಲಿ ಬಂಧಿಸಲಾಗಿದೆ ಎಂದು ತಿಳಿಸಿದರು.


ಸುದ್ದಿಗೋಷ್ಠಿಯಲ್ಲಿ ಹೆಚ್ಚುವರಿ ಪೊಲೀಸ್ ಅಧೀಕ್ಷಕಿ ಡಾ.ನಂದಿನಿ, ಹುಣಸೂರು ಉಪವಿಭಾಗ ಡಿಎಸ್ಪಿ ಎಂ.ಕೆ.ಮಹೇಶ್, ಹುಣಸೂರು ಪಟ್ಟಣ ಪೊಲೀಸ್ ಠಾಣೆ ಇನ್ಸ್ಪೆಕ್ಟರ್ ಎಸ್.ಎಂ. ದೇವೇಂದ್ರ, ಎಎಸ್‌ಐ ಪುಟ್ಟನಾಯಕ ಹಾಗೂ ಸಿಬ್ಬಂದಿ ಇದ್ದರು.

Tags: CRIME NEWSgold jewelery seizedMysorethieves arrestedಕಳ್ಳರ ಬಂಧನಕ್ರೈಂ ನ್ಯೂಸ್​ಚಿನ್ನಾಭರಣ ವಶಕ್ಕೆಮೈಸೂರು
Previous Post

ಸಿಎಎ ವಿರೋಧಿ ನಾಟಕ ಪ್ರದರ್ಶನ ಪ್ರಕರಣ : ಬೀದರ್​​ನ ಶಾಹೀನ್​ ಶಾಲೆ ವಿರುದ್ಧ ದೇಶದ್ರೋಹ ಕೇಸ್​ ರದ್ದು

Next Post

ಮೈಶುಗರ್ಸ್ ಕಾರ್ಖಾನೆ ಪುನಶ್ಚೇತನಕ್ಕೆ ಸರ್ಕಾರದಿಂದ 50 ಕೋಟಿ ರೂ ಬಿಡುಗಡೆ

Related Posts

ಮಹತ್ವದ ಬೆಳವಣಿಗೆಯಲ್ಲಿ ಸಿಎಂ ಸ್ಥಾನಕ್ಕೆ ನಿತೀಶ್‌ ಕುಮಾರ್‌ ರಾಜೀನಾಮೆ..
Top Story

ಮಹತ್ವದ ಬೆಳವಣಿಗೆಯಲ್ಲಿ ಸಿಎಂ ಸ್ಥಾನಕ್ಕೆ ನಿತೀಶ್‌ ಕುಮಾರ್‌ ರಾಜೀನಾಮೆ..

by ಪ್ರತಿಧ್ವನಿ
April 14, 2026
0

ಬೆಂಗಳೂರು : ಸುಮಾರು ಎರಡು ದಶಕಗಳ ಕಾಲ 10 ಬಾರಿ ಉನ್ನತ ಹುದ್ದೆಯಲ್ಲಿ ಸೇವೆ ಸಲ್ಲಿಸಿದ ನಂತರ ಬಿಹಾರದ (Bihar CM) ಮುಖ್ಯಮಂತ್ರಿ ಸ್ಥಾನಕ್ಕೆ ನಿತೀಶ್ ಕುಮಾರ್...

Read moreDetails
ದೀದಿ ರಾಜ್ಯದಲ್ಲಿ ಮೋದಿ “SIR” : ಎಷ್ಟು ಲಕ್ಷ ಮತದಾರರ ಭವಿಷ್ಯ ಅತಂತ್ರ ಗೊತ್ತಾ..?

ದೀದಿ ರಾಜ್ಯದಲ್ಲಿ ಮೋದಿ “SIR” : ಎಷ್ಟು ಲಕ್ಷ ಮತದಾರರ ಭವಿಷ್ಯ ಅತಂತ್ರ ಗೊತ್ತಾ..?

April 14, 2026
ಹರಿಹರ ಪೀಠದಿಂದ ವಚನಾನಂದ ಸ್ವಾಮೀಜಿ ಉಚ್ಚಾಟನೆ : ಯತ್ನಾಳ್‌ ಹೀಗ್ಯಾಕಂದ್ರು..?

ಹರಿಹರ ಪೀಠದಿಂದ ವಚನಾನಂದ ಸ್ವಾಮೀಜಿ ಉಚ್ಚಾಟನೆ : ಯತ್ನಾಳ್‌ ಹೀಗ್ಯಾಕಂದ್ರು..?

April 14, 2026
ಕೈ ಅಲ್ಪಸಂಖ್ಯಾತ ನಾಯಕರ ಬುಡ ಅಲ್ಲಾಡಿಸುತ್ತಿರುವ ದಾವಣಗೆರೆ ದಂಗಲ್‌ : ಜಬ್ಬಾರ್‌, ನಜೀರ್‌ ಆಯ್ತು ಮುಂದೆ ಜಮೀರ್..?

ಕೈ ಅಲ್ಪಸಂಖ್ಯಾತ ನಾಯಕರ ಬುಡ ಅಲ್ಲಾಡಿಸುತ್ತಿರುವ ದಾವಣಗೆರೆ ದಂಗಲ್‌ : ಜಬ್ಬಾರ್‌, ನಜೀರ್‌ ಆಯ್ತು ಮುಂದೆ ಜಮೀರ್..?

April 14, 2026
“SIR” ಹೆಸರಲ್ಲಿ ಮತದಾನದ ಹಕ್ಕನ್ನು ಕಿತ್ತುಕೊಳ್ಳುವುದು ಒಪ್ಪಲು ಸಾಧ್ಯವಿಲ್ಲ : ಚುನಾವಣಾ ಆಯೋಗಕ್ಕೆ ಸುಪ್ರೀಂ ಚಾಟಿ :

“SIR” ಹೆಸರಲ್ಲಿ ಮತದಾನದ ಹಕ್ಕನ್ನು ಕಿತ್ತುಕೊಳ್ಳುವುದು ಒಪ್ಪಲು ಸಾಧ್ಯವಿಲ್ಲ : ಚುನಾವಣಾ ಆಯೋಗಕ್ಕೆ ಸುಪ್ರೀಂ ಚಾಟಿ :

April 14, 2026
Next Post
ಮೈಶುಗರ್ಸ್ ಕಾರ್ಖಾನೆ ಪುನಶ್ಚೇತನಕ್ಕೆ ಸರ್ಕಾರದಿಂದ 50 ಕೋಟಿ ರೂ ಬಿಡುಗಡೆ

ಮೈಶುಗರ್ಸ್ ಕಾರ್ಖಾನೆ ಪುನಶ್ಚೇತನಕ್ಕೆ ಸರ್ಕಾರದಿಂದ 50 ಕೋಟಿ ರೂ ಬಿಡುಗಡೆ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada