ಬೆಂಗಳೂರು : ಬಿಜೆಪಿ ನಾಯಕರೆಲ್ಲ ಸೇರಿ ಕೇಂದ್ರದ ಮೇಲೆ ಒತ್ತಡ ಹಾಕಿ ರಾಜ್ಯಕ್ಕೆ ಅಕ್ಕಿ ಸಿಗುವಂತೆ ಮಾಡಬೇಕು ಅಂತಾ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಬೆಂಗಳೂರಿನಲ್ಲಿ ಈ ವಿಚಾರವಾಗಿ ಮಾತನಾಡಿದ ಅವರು, ಬಡವರ ಕಾರ್ಯಕ್ರಮಕ್ಕೆ ಅಡ್ಡಿ ಬರಬೇಡಿ, ಅಕ್ಕಿ ಕೊಡಿಸಿ ಎಂದು ಹೇಳಿದ್ದಾರೆ.
ಭಾರತೀಯ ಆಹಾರ ನಿಗಮ ರಾಜ್ಯಕ್ಕೆ ಹೆಚ್ಚುವರಿ ಅಕ್ಕಿ ನೀಡಲು ಒಪ್ಪಿಕೊಂಡಿತ್ತು. ಆದರೆ ಕೇಂದ್ರ ಸರ್ಕಾರ ರಾಜ್ಯದ ಬಡ ಜನತೆಯ ವಿಚಾರದಲ್ಲಿ ರಾಜಕೀಯ ಮಾಡಿದೆ. ಯಾಕೆ ಬಡವರ ಕಾರ್ಯಕ್ರಮಕ್ಕೆ ಈ ರೀತಿ ಅಡ್ಡಿ ಮಾಡುತ್ತಿದ್ದೀರಿ..? ಎಂದು ಪ್ರಶ್ನಿಸಿದ್ದಾರೆ. ‘
ರಾಜ್ಯದಲ್ಲಿ ಅಕ್ಕಿ ಇಲ್ಲ, ರಾಯಚೂರಿನಲ್ಲಿ ಸೋನಾ ಮಸೂರಿ ಅಕ್ಕಿ ಮಾತ್ರ ಇದೆ. ಹೀಗಾಗಿ ಬಿಜೆಪಿಗೆ ಬಡವರ ಮೇಲೆ ಕಾಳಜಿ ಇದ್ದರೆ ಕೇಂದ್ರದ ಮೇಲೆ ಒತ್ತಡ ಹಾಕಲಿ ಅಂತಾ ಸವಾಲೆಸೆದಿದ್ದಾರೆ .