ಬೆಂಗಳೂರು:
ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಹಿನ್ನೆಲೆಯಲ್ಲಿ ಸಿಎಂ ಸಿದ್ದರಾಮಯ್ಯ ರಾಜ್ಯದ ಜನತೆಗೆ ಸಂದೇಶವೊಂದನ್ನು ರವಾನಿಸಿದ್ದಾರೆ. ‘ಜಾತಿ, ಧರ್ಮ, ಪಂಥ, ಸಿದ್ಧಾಂತಗಳನ್ನು ತಳುಕು ಹಾಕದೆ ಮಾನಸಿಕ ಮತ್ತು ದೈಹಿಕ ಆರೋಗ್ಯಕ್ಕಾಗಿ ಯೋಗಾಭ್ಯಾಸ ಮಾಡೋಣ’ ಎಂದು ಸಿದ್ದರಾಮಯ್ಯ ಟ್ವಿಟರ್ ಮೂಲಕ ಕರೆಕೊಟ್ಟಿದ್ದಾರೆ.
ಪ್ರಧಾನಿ ಮೋದಿ ಅವರ ಮನವಿಯಿಂದಾಗಿ 2015ರಿಂದ ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಪ್ರಾರಂಭವಾಯಿತು. ಪ್ರತಿ ವರ್ಷ ಜೂನ್ 21ರಂದು ನಡೆಯುವ ವಾರ್ಷಿಕ ಕಾರ್ಯಕ್ರಮವನ್ನು ಆಯುಷ್ ಸಚಿವಾಲಯದ ಅಡಿಯಲ್ಲಿ ನಡೆಯುತ್ತದೆ.
ಯೋಗದಿಂದ ರೋಗ ದೂರ: ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್
ಬೆಂಗಳೂರು: ವಸುಧೈವ ಕುಟುಂಬಕಂ (ವಿಶ್ವವೇ ಒಂದು ಕುಟುಂಬ) ಎಂಬಂತೆ ಇಂದು ನಾವು ವಿಶ್ವಕ್ಕೆ ಯೋಗವನ್ನು ಹಂಚುತ್ತಿದ್ದೇವೆ. ಯೋಗದಿಂದ ಯಾವುದೇ ರೋಗವೂ ದೂರ ಎಂದು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಹೇಳಿದರು. ಅಂತಾರಾಷ್ಟ್ರೀಯ ಯೋಗದಿನಾಚರಣೆ ಹಿನ್ನೆಲೆಯಲ್ಲಿ ವಿಧಾನಸೌಧದ ಬೃಹತ್ ಮೆಟ್ಟಿಲುಗಳ ಬಳಿ ನಡೆದ ಕಾರ್ಯಕ್ರಮದಲ್ಲಿ ಭಾಗವಹಿಸಿ ರಾಜ್ಯಪಾಲರು ಮಾತನಾಡಿದರು.