ಈಗಾಗಲೇ ರಾಜ್ಯದ್ಯಂತ ಗೃಹಜೋತಿ ಉಚಿತ ವಿದ್ಯುತ್ ಯೋಜನೆಗೆ ಚಾಲನೆ ದೊರೆತಿದೆ ಈ ತಿಂಗಳಿನಿಂದ ಉಚಿತ ವಿದ್ಯುತ್ ದೊರೆಯಲಿದೆ ಅಂತ ಇಂಧನ ಇಲಾಖೆ ಸ್ಪಷ್ಟಪಡಿಸಿದೆ ಜೊತೆಗೆ ಸರ್ಕಾರ ಕೂಡ ಅಧಿಕೃತವಾಗಿ ಮಾಹಿತಿಯನ್ನು ನೀಡಿದೆ, ಇನ್ನು ಈ ಯೋಜನೆಯ ಸೌಲಭ್ಯವನ್ನು ಪಡೆಯಲು ಎಲ್ಲಾ ಫಲಾನುಭವಿಗಳು ಅರ್ಜಿ ಸಲ್ಲಿಸುವುದು ಕಡ್ಡಾಯವಾಗಿದ್ದು ಒಂದು ವೇಳೆ ಅರ್ಜಿ ಸಲ್ಲಿಸುವುದು ವಿಳಂಬವಾದರೆ ಅವರಿಗೆ ಉಚಿತ ವಿದ್ಯುತ್ ಸಿಗುವುದು ಅನುಮಾನ

ಇದೇ ಕಾರಣಕ್ಕಾಗಿ ಇಂಧನ ಇಲಾಖೆ ಈ ಕುರಿತು ಸ್ಪಷ್ಟನೆಯನ್ನು ನೀಡಿತು ಉಚಿತ ವಿದ್ಯುತ್ತಿಗೆ ಅರ್ಜಿಯನ್ನು ಸಲ್ಲಿಸುವವರು ಕೆಲವೊಂದು ಮಾಹಿತಿಗಳನ್ನು ತಿಳಿಯುವುದು ಅತ್ಯಗತ್ಯವಾಗಿದೆ
ನೀವು ಜುಲೈ 25 ರೊಳಗೆ ಗೃಹಜ್ಯೋತಿ ಯೋಜನೆಗೆ ನೋಂದಾಯಿಸಿಕೊಂಡರೆ ಜುಲೈ ತಿಂಗಳಿಗೆ ಉಚಿತ ವಿದ್ಯುತ್ ಪಡೆಯಲು ಸಾಧ್ಯವಾಗುತ್ತದೆ, ಅದೇ ರೀತಿ ನೀವು ಆಗಸ್ಟ್ 25 ರೊಳಗೆ ಗೃಹಜ್ಯೋತಿ ಯೋಜನೆಗೆ ನೋಂದಾಯಿಸಿಕೊಂಡರೆ, ನೀವು ಆ ತಿಂಗಳಿಗೆ ನಿಮ್ಮ ಮಾಸಿಕ ಬಳಕೆಯು ಸರಾಸರಿ 200 ಯೂನಿಟ್ಗಳಿಗಿಂತ ಕಡಿಮೆಯಿದ್ದಲ್ಲಿ ವಿದ್ಯುತ್ ಉಚಿತವಾಗಿ ಪಡೆಯಬಹುದು. ಮೀಟರ್ ರೀಡಿಂಗ್ ಪ್ರತಿ ತಿಂಗಳ 25ನೆ ತಾರೀಖಿನಿಂದ ಮುಂದಿನ ತಿಂಗಳ 25ನೇ ತಾರೀಖಿನವರೆಗೆ ನಡೆಯುತ್ತದೆ.

ಈ ಮಾಹಿತಿಯನ್ನ ಸ್ವತಃ ಇಂಧನ ಇಲಾಖೆಯ ಅಧಿಕಾರಿಗಳೇ ನೀಡುತ್ತಿದ್ದು ಆದಷ್ಟು ಬೇಗ ಈ ಗೃಹಜ್ಯೋತಿ ಉಚಿತ ವಿದ್ಯುತ್ ಯೋಜನೆಗೆ ನೋಂದಾಯಿಸಿಕೊಳ್ಳಬೇಕು ಅಂತ ಮನವಿಯನ್ನ ಕೂಡ ಮಾಡಿಕೊಳ್ಳುತ್ತಿದ್ದಾರೆ.
ಹೀಗಾಗಿ ಯಾರೆಲ್ಲಾ ಉಚಿತ ವಿದ್ಯುತ್ ಯೋಜನೆಗೆ ಅರ್ಜಿಯನ್ನು ಸಲ್ಲಿಸುತ್ತಿದ್ದೀರೋ ಅವರು ಆದಷ್ಟು ಬೇಗ ಅರ್ಜಿಯನ್ನು ಸಲ್ಲಿಸಿದರೆ ಉಚಿತ ವಿದ್ಯುತ್ ಯೋಜನೆಯ ಫಲವನ್ನು ಪಡೆಯಲು ಸಾಧ್ಯವಾಗುತ್ತದೆ