• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Saturday, April 25, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಹೊಸ‌ ದಿಕ್ಸೂಚಿ ಇಲ್ಲದೆ ಕವಲು‌ ದಾರಿಯಲ್ಲಿ ಸರ್ಕಾರ ; ಬಸವರಾಜ ಬೊಮ್ಮಾಯಿ

Any Mind by Any Mind
July 3, 2023
in Top Story, ಕರ್ನಾಟಕ, ರಾಜಕೀಯ
0
ಹೊಸ‌ ದಿಕ್ಸೂಚಿ ಇಲ್ಲದೆ ಕವಲು‌ ದಾರಿಯಲ್ಲಿ ಸರ್ಕಾರ ; ಬಸವರಾಜ ಬೊಮ್ಮಾಯಿ
Share on WhatsAppShare on FacebookShare on Telegram

ರಾಜ್ಯಪಾಲರ ಭಾಷಣ ಸಪ್ಪೆಯಾಗಿದ್ದು ಯಾವುದೇ ಜೀವಾಳ ಇಲ್ಲ. ಹೊಸ ಸರ್ಕಾರ ಬಂದಾಗ, ಹೊಸ ಚೈತನ್ಯ, ಹೊಸ ದಿಕ್ಸೂಚಿ ಇಲ್ಲದೆ ಸರ್ಕಾರ ಕವಲು ದಾರಿಯಲ್ಲಿದೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ADVERTISEMENT

ರಾಜ್ಯಪಾಲರ ಭಾಷಣದ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಅವರು, ರಾಜ್ಯಪಾಲರ ಭಾಷಣದಲ್ಲಿ ಭರವಸೆ ಮೂಡುವಂತಹ ಯಾವುದೇ ಭಾಷಣ ಇಲ್ಲ. ಸುಳ್ಳಿನ ಕಂತೆ ಅಂತ ಸಾಭಿತಾಗಿದೆ. ಅಕ್ಕಿಯನ್ನು 10 ಕೆಜಿ ಕೊಡುತ್ತೇವೆ  ಅಂತ ಸಹಿ ಮಾಡಿ ಹೇಳಿದ್ದರು. ಈಗ ಕೇಂದ್ರ ಅಂತ ಹೇಳದೆ ಆಹಾರ ಭದ್ರತೆಯಲ್ಲಿ ಕೊಡುತ್ತೇವೆ ಅಂತಿದ್ದಾರೆ.  ಅಕ್ಕಿಯನ್ನು ಕೇಂದ್ರ ಸರ್ಕಾರ ಕೊಡುತ್ತಿದೆ ಎಂದು  ಹೇಳಲು ಅವರಿಗೆ ನಾಚಿಕೆಯಾಗಿದೆ ಅಂತ ವಾಗ್ದಾಳಿ ನಡೆಸಿದರು.


ಗೃಹ ಜ್ಯೋತಿ ಯೋಜನೆ ಅಡಿಯಲ್ಲಿ  200 ಯೂನಿಟ್ ವಿದ್ಯುತ್ ಉಚಿತ ಕೊಡುವುದಾಗಿ ಹೇಳಿದ್ದರು.  ಆದರೆ, ಈಗ ರಾಜ್ಯಪಾಲರ ಮೂಲಕ ಸುಳ್ಳು ಹೇಳಿಸಿದ್ದಾರೆ. ಜನರನ್ನು ಯಾಮಾರಿಸುವ ಕೆಲಸ ಮಾಡಿದ್ದಾರೆ. ಜವಾಬ್ದಾರಿಯಿಂದ ನುಸುಳಿಕೊಳ್ಳುತ್ತಿರುವ ಸರ್ಕಾರ ಇದು. ಅರ್ಥವಿಲ್ಲದೆ ಸುಮ್ಮನೆ ಬೊಗಳೆ ಭಾಷಣ ಮಾಡಿಸಿದ್ದಾರೆ. ಈ ಸರ್ಕಾರಕ್ಕೆ ಅಭಿವೃದ್ಧಿಯ ಚಿಂತನೆಯಿಲ್ಲ ಎಂದು ಆರೋಪಿಸಿದರು.


*ಭ್ರಷ್ಟಾಚಾರ ಬೆಂಕಿ ಇಲ್ಲದೆ ಹೊಗೆಯಾಡಲ್ಲ*


ಇನ್ನು ಸಿಎಂ ಕಚೇರಿಯಲ್ಲಿ ಭ್ರಷ್ಟಾಚಾರ ನಡೆಯುತ್ತಿದೆ ಎಂದು ಮಾಜಿ ಸಿಎಂ  ಹೆಚ್ ಡಿ ಕುಮಾರಸ್ವಾಮಿ ಮಾಡಿರುವ ಆರೋಪದ ಕುರಿತು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಅದು ಯಾವುದೋ ಸಣ್ಣ ಹುದ್ದೆ ಇರಬೇಕು ಅದಕ್ಕೆ 30 ಲಕ್ಷ‌ ಕೇಳಿದ್ದಾರೆ, ಅಲ್ಲಿ ಕೋಟ್ಯಾಂತರ ರೂಪಾಯಿ ಕೇಳುತ್ತಿದ್ದಾರೆ. ವರ್ಗಾವಣೆ ರದ್ದು ಆಗುವುದು, ಮತ್ತೆ ಅಧಿಕಾರಿ ಬಂದು ವರ್ಗಾವಣೆ ಮಾಡಿಸುವುದು. ಐಎಎಸ್‌, ಐಪಿಎಸ್ ಅಧಿಕಾರಿಗಳ ಮಾತೆ ಸ್ಪಷ್ಟವಾದ ಸಾಕ್ಷಿ, ಬೆಂಕಿ ಇಲ್ಲದೆ ಹೊಗೆ ಆಡುವುದಿಲ್ಲ‌  ಸಿಎಂ ಸಿದ್ದರಾಮಯ್ಯನವರು ಪ್ರಾಮಾಣಿಕತೆ ಬಗ್ಗೆ ಮಾತನಾಡುತ್ತಾರೆ. ಸಿಎಂ ಕಚೇರಿ ನಡೆದುಕೊಳ್ಳುವ ರೀತಿ ನೋಡಿದರೆ ಭಯ ಆಗುತ್ತಿದೆ ಎಂದು ಹೇಳಿದರು.


*ನಮ್ಮಲ್ಲಿ ಎಲ್ಲರೂ ಸಮರ್ಥರು*


ವಿಪಕ್ಷ ನಾಯಕನ ಆಯ್ಕೆ ವಿಚಾರಕ್ಕೆ ಸಿಎಂ ಸಿದ್ದರಾಮಯ್ಯ ಟೀಕಿಸಿರುವುದಕ್ಕೆ ತಿರುಗೇಟು ನೀಡಿದ ಅವರು, ಇಲ್ಲಿ ಶಿಸ್ತಿನ ಪ್ರಶ್ನೆ ಇಲ್ಲ‌ ನಾಳೆಯಿಂದ ಅಧಿವೇಶನ ಅಧಿಕೃತವಾಗಿ ಆರಂಭವಾಗಲಿದೆ. ಅಷ್ಟರೊಳಗೆ ವಿಪಕ್ಷನಾಯಕನ ಆಯ್ಕೆಯಾಗಲಿದೆ‌. ಪ್ರತಿಪಕ್ಷದ ನಾಯಕನಾಗಲು ನಮ್ಮಲ್ಲಿರುವ 66 ಜನರು ಸಮರ್ಥರಿದ್ದಾರೆ ಎಂದರು.
ಬಿಟ್ ಕಾಯಿನ್ ಪ್ರಕರಣ ಎಸ್‌ಐಟಿಗೆ ವಹಿಸಿರುವುದು ಒಳ್ಳೆದಾಯಿತು. ಸರ್ಕಾರ ಯಾವುದೇ ರೂಪದಲ್ಲಿ ತನಿಖೆ ಮಾಡಿಸಲಿ ಎಂದು ಹೇಳಿದರು.

Tags: Basavaraj BommaiBJPCMSiddaramaiahDKShivakumarಬಿಜೆಪಿ
Previous Post

ಉಸ್ತಾದ್ ರಾಮ್ ಪೋತಿನೇನಿ ಈಗ ʼಸ್ಕಂದʼ, ಟಾಲಿವುಡ್‌ನಲ್ಲಿ ಹೆಚ್ಚಾಯಿತು ನಿರೀಕ್ಷೆ

Next Post

ಅಂಬೇಡ್ಕರ್ ಕಾರಣದಿಂದ ನಾನು ಮುಖ್ಯಮಂತ್ರಿ ಆಗಿದ್ದೇನೆ: ಸಿದ್ದರಾಮಯ್ಯ

Related Posts

ರಾಘವ್ ಚಡ್ಡಾ ರಾಜಕೀಯ ತಿರುವು: ಪಕ್ಷ ತೊರೆಯುವ ನಿರ್ಧಾರಕ್ಕೆ ರಾಷ್ಟ್ರ ರಾಜಕೀಯದಲ್ಲಿ ಚರ್ಚೆ
ರಾಜಕೀಯ

ರಾಘವ್ ಚಡ್ಡಾ ರಾಜಕೀಯ ತಿರುವು: ಪಕ್ಷ ತೊರೆಯುವ ನಿರ್ಧಾರಕ್ಕೆ ರಾಷ್ಟ್ರ ರಾಜಕೀಯದಲ್ಲಿ ಚರ್ಚೆ

by ಪ್ರತಿಧ್ವನಿ
April 25, 2026
0

ನವದೆಹಲಿ: ದೇಶದ ರಾಜಕೀಯದಲ್ಲಿ ಭಾರೀ ಚರ್ಚೆಗೆ ಕಾರಣವಾಗಿರುವ ಬೆಳವಣಿಗೆಯೊಂದರಲ್ಲಿ ಆಮ್ ಆದ್ಮಿ ಪಕ್ಷದ ಪ್ರಮುಖ ನಾಯಕ ರಾಘವ ಚಡ್ಡಾ ಪಕ್ಷ ತೊರೆದು ಬಿಜೆಪಿ ಸೇರ್ಪಡೆಯಾಗಿರುವುದು ಮಹತ್ವದ ರಾಜಕೀಯ...

Read moreDetails
ಡಾ. ರಾಜ್‌ಕುಮಾರ್ ಜಯಂತಿ ಸಂಭ್ರಮದ ನಡುವೆ ಚೇತನ್ ಅಹಿಂಸ ಹೇಳಿಕೆಗೆ ವಿವಾದ

ಲಕ್ಷ್ಮಣ ಸವದಿ ಎದುರೇ ಅವರ ಆಪ್ತನ ಅಕಾಲಿಕ ನಿಧನ

April 24, 2026
ಒಳ ಮೀಸಲಾತಿ ಹಂಚಿಕೆ: ಸಂಪುಟ ಸಭೆಯಲ್ಲಿ ಮಹತ್ವದ ತೀರ್ಮಾನ

ಒಳ ಮೀಸಲಾತಿ ಹಂಚಿಕೆ: ಸಂಪುಟ ಸಭೆಯಲ್ಲಿ ಮಹತ್ವದ ತೀರ್ಮಾನ

April 24, 2026
ಸಚಿವ ಡಿ. ಸುಧಾಕರ್ ಆರೋಗ್ಯ ಸ್ಥಿತಿ ಬಗ್ಗೆ ಕಿಮ್ಸ್ ಆಸ್ಪತ್ರೆಯಿಂದ ಹೆಲ್ತ್ ಬುಲೆಟಿನ್ ಬಿಡುಗಡೆ

ಸಚಿವ ಡಿ. ಸುಧಾಕರ್ ಆರೋಗ್ಯ ಸ್ಥಿತಿ ಬಗ್ಗೆ ಕಿಮ್ಸ್ ಆಸ್ಪತ್ರೆಯಿಂದ ಹೆಲ್ತ್ ಬುಲೆಟಿನ್ ಬಿಡುಗಡೆ

April 24, 2026
ಆಯುಕ್ತರ ಹೆಸರಿನಲ್ಲಿ ವಾಟ್ಸ್‌ಆಪ್ ವಂಚನೆ ಯತ್ನ: ಬೆಂಗಳೂರು ಪಾಲಿಕೆಗಳಿಂದ ಸಾರ್ವಜನಿಕರಿಗೆ ಎಚ್ಚರಿಕೆ

ಆಯುಕ್ತರ ಹೆಸರಿನಲ್ಲಿ ವಾಟ್ಸ್‌ಆಪ್ ವಂಚನೆ ಯತ್ನ: ಬೆಂಗಳೂರು ಪಾಲಿಕೆಗಳಿಂದ ಸಾರ್ವಜನಿಕರಿಗೆ ಎಚ್ಚರಿಕೆ

April 24, 2026
Next Post
ಅಂಬೇಡ್ಕರ್ ಕಾರಣದಿಂದ ನಾನು ಮುಖ್ಯಮಂತ್ರಿ ಆಗಿದ್ದೇನೆ: ಸಿದ್ದರಾಮಯ್ಯ

ಅಂಬೇಡ್ಕರ್ ಕಾರಣದಿಂದ ನಾನು ಮುಖ್ಯಮಂತ್ರಿ ಆಗಿದ್ದೇನೆ: ಸಿದ್ದರಾಮಯ್ಯ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada