ರಾಜ್ಯ ಸರ್ಕಾರವು ಈಗಾಗಲೇ ಮೂರು ಗ್ಯಾರಂಟಿಗಳನ್ನ ಯಶಸ್ವಿಯಾಗಿ ಜಾರಿ ಮಾಡಿದೆ. ಉಳಿದ ಗ್ಯಾರಂಟಿಗಳ ಜಾರಿ ಪ್ರಕ್ರಿಯೆ ಈಗಾಗಲೇ ಆರಂಭವಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಸದನದಲ್ಲಿ ಮಾಹಿತಿ ನೀಡಿದ್ದಾರೆ.

ವಿಧಾನಸಭೆಯಲ್ಲಿ ಕಲಾಪ ಆರಂಭವಾಗುತ್ತಿದ್ದಂತೆ ವಿಪಕ್ಷಗಳು ಗ್ಯಾರಂಟಿ ವಿಚಾರಕ್ಕೆ ಸಂಬಧದಿಸಿದಂತೆ ಸರ್ಕಾರವನ್ನ ತರಾಟೆಗೆ ತೆಗೆದುಕೊಳ್ಳಲು ಆರಂಭಿಸಿದ್ದವು ಈ ಕುರಿತು ಪ್ರತಿಕ್ರಿಯೆ ನೀಡಿದ ಸಿಎಂ ಗ್ಯಾರಂಟಿ ಯೋಜನೆಗಳು ಅದಷ್ಟು ಬೇಗ ಜಾರಿಯಾಗಲಿದೆ ಎಂದಿದ್ದಾರೆ.
ವಿಧಾನಸಭೆಯಲ್ಲಿ ಸಚಿವ ಆರ್. ಅಶೋಕ್ ಅವರು ಕಾಂಗ್ರೆಸ್ ನ ಗ್ಯಾರಂಟಿ ಯೋಜನೆಗಳ ಬಗ್ಗೆ ಪ್ರಸ್ತಾಪ ಮಾಡಿ ಸರ್ಕಾರದ ವಿರುದ್ಧ ಕೆಂಡಕಾರಿದ್ದರು. ಈ ವೇಳೆ ಸಿಎಂ ಸಿದ್ದರಾಮಯ್ಯ ಗ್ಯಾರಂಟಿ ಯೋಜನೆಗಳ ಬಗ್ಗೆ ಸ್ಪಷ್ಟನೆ ನೀಡಿದ್ದಾರೆ

ಎಲ್ಲಾ ಗ್ಯಾರಂಟಿಗಳನ್ನು ನಾವು ಅನುಷ್ಠಾನಗೊಳಿಸುತ್ತೇವೆ. ಈಗಾಗಲೇ ಮೂರು ಗ್ಯಾರಂಟಿಗಳನ್ನು ಜಾರಿ ಮಾಡಿದ್ದೇವೆ. ಉಳಿದ ಗ್ಯಾರಂಟಿಗಳ ಜಾರಿ ಪ್ರಕ್ರಿಯೆ ಮುಂದುವರೆದಿದೆ ಅದರ ಲಾಭ ಬಡವರಿಗೆ ತಲುಪಲಿದೆ. ಶೀಘ್ರವೇ ಉಳಿದ ಗ್ಯಾರಂಟಿ ಯೋಜನೆಗಳನ್ನೂ ಜಾರಿ ಮಾಡುವ ಪ್ರಕ್ರಿಯೆಯ ಬಗ್ಗೆ ಸರ್ಕಾರ ಮುತುವರ್ಜಿ ವಹಿಸಿದೆ ಎಂಬ ಮಾತನ್ನ ಹೇಳಿದರು