ಸಿಎಂ ಸಿದ್ದರಾಮಯ್ಯ ಅವರು ತಮ್ಮ 14ನೇ ಬಜೆಟ್ ಮಂಡನೆ ಮಾಡಿದ್ದು ಇದೀಗ ಈ ಬಜೆಟ್ ನಲ್ಲಿ ಹಲವು ಕೊಡುಗೆಗಳನ್ನು ನೀಡಿದೆ. ಶಿಕ್ಷಣ ಕ್ಷೇತ್ರಕ್ಕೆ ಸಾಕಷ್ಟು ಕೊಡುಗೆಗಳನ್ನು ನೀಡಿರುವ ರಾಜ್ಯ ಸರ್ಕಾರ ಈ ಬಾರಿ ಬಜೆಟ್ ನಲ್ಲಿ ಹಲವು ಯೋಜನೆಗಳನ್ನು ಮೀಸಲಿಟ್ಟಿದೆ
ಈ ಬಾರಿ ಬಹಳ ದೊಡ್ಡ ಮಟ್ಟದಲ್ಲಿ ಚರ್ಚೆಯಾಗಿದ್ದ ಪಠ್ಯಪುಸ್ತಕ ಪರಿಷ್ಕರಣೆ ವಿಚಾರಕ್ಕೆ ಸಂಬಂಧಪಟ್ಟಂತೆಹ ಕ್ರಮವನ್ನ ಕೈಗೊಳ್ಳಲಾಗುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಈ ಬಾರಿಯ ಬಜೆಟ್ ನಲ್ಲಿ ಭರವಸೆಯನ್ನು ನೀಡಿದ್ದಾರೆ
ಸ್ಥಳೀಯವಾದ ಸಾಮಾಜಿಕ, ಸಾಂಸ್ಕೃತಿಕ ಮತ್ತು ಆರ್ಥಿಕ ವಾಸ್ತವಿಕತೆಯನ್ನು ಆದರಿಸಿ ಹೊಸ ಶಿಕ್ಷಣ ನೀತಿ ರೂಪಿಸಲು ಕ್ರಮ ಕೈಗೊಳ್ಳಲಾಗಿದೆ ಇದರ ಜೊತೆಗೆ ಒಂದರಿಂದ ಹತ್ತನೇ ತರಗತಿ ವರೆಗಿನ ವಿದ್ಯಾರ್ಥಿಗಳಿಗೆ ವಾರದಲ್ಲಿ ಎರಡು ದಿನ ನೀಡುವ ಪೂರಕ ಪೌಷ್ಟಿಕ ಆಹಾರದಿಂದ ಅರವತ್ತು ಲಕ್ಷ ಮಕ್ಕಳಿಗೆ ಅನುಕೂಲವಾಗಲಿದೆ ಇದಕ್ಕಾಗಿ 280 ಕೋಟಿ ಅನುದಾನವನ್ನ ಸರ್ಕಾರ ಈ ಬಾರಿ ಬಜೆಟ್ ನಲ್ಲಿ ಮೀಸಲಿಟ್ಟಿದೆ
ಶಾಲಾ-ಕಾಲೇಜುಗಳ ಕೊಠಡಿಗಳ ದುರಸ್ತಿ ಹಾಗೂ ಶೌಚಾಲಯ ಘಟಕ ನಿರ್ಮಾಣಕ್ಕೆ 850 ಕೋಟಿ ರೂಪಾಯಿ ಅನುದಾನವನ್ನ ಸರ್ಕಾರ ನೀಡಿದ್ದು ಬೆಂಗಳೂರಿನ ಎಸ್.ಕೆ.ಎಸ್.ಜೆ.ಟಿ.ಐ ಇಂಜಿನಿಯರಿಂಗ್ ಕಾಲೇಜಿನಲ್ಲಿ ಇರುವ ಜವಳಿ ತಂತ್ರಜ್ಞಾನ ವಿಭಾಗವನ್ನು smart and Technical textile Centre ಉನ್ನತೀಕರಣಕ್ಕೆ ಸರ್ಕಾರ ಕ್ರಮ ಕೈಗೊಳ್ಳುವ ಭರವಸೆಯನ್ನ ನೀಡಿದೆ
ಒಟ್ಟಾರೆಯಾಗಿ ಈಗ ಸಿಎಂ ಸಿದ್ದರಾಮಯ್ಯ ತಮ್ಮ 14ನೇ ಬಜೆಟ್ ನಲ್ಲಿ ಶಿಕ್ಷಣ ಕ್ಷೇತ್ರಕ್ಕೆ ಸಾಕಷ್ಟು ಕೊಡುಗೆಗಳನ್ನು ನೀಡಲು ಮುಂದಾಗಿರುವುದಕ್ಕೆ ಶಿಕ್ಷಣ ವಲಯದಲ್ಲಿ ಮೆಚ್ಚುಗೆ ವ್ಯಕ್ತವಾಗುತ್ತದೆ