ದೇಶಾದ್ಯಂತ ಬಹುದೊಡ್ಡ ವಿವಾದವನ್ನು ಸೃಷ್ಟಿಸಿದ್ದ ಎಪಿಎಂಸಿ ತಿದ್ದುಪಡಿ ಕಾಯ್ದೆಯನ್ನು ಕರ್ನಾಟಕದಲ್ಲಿ ಈ ಹಿಂದೆ ಬಸವರಾಜ ಬೊಮ್ಮಾಯಿ ಸರ್ಕಾರ ಜಾರಿಗೆ ತಂದಿತ್ತು ಈ ಕಾಯ್ದೆಯನ್ನು ಇದೀಗ ವಾಪಸ್ ಪಡೆಯುವುದಾಗಿ ಸಿಎಂ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಇಂದು ಅಧಿಕೃತವಾಗಿ ಬಜೆಟ್ ನಲ್ಲಿ ಘೋಷಣೆ ಮಾಡಿದೆ.
ಹಿಂದೂ ವಿಧಾನಸಭೆಯಲ್ಲಿ 14ನೇ ಬಜೆಟ್ ಮಂಡನೆ ಮಾಡಿರುವ ಸಿಎಂ ಸಿದ್ದರಾಮಯ್ಯ ಎಪಿಎಂಸಿ ತಿದ್ದುಪಡಿ ಕಾಯ್ದೆಯನ್ನು ವಾಪಸು ಪಡೆಯುವುದಾಗಿ ಘೋಷಣೆಯನ್ನು ಮಾಡಿದ್ದಾರೆ ಹಿಂದಿನ ಸರ್ಕಾರವು ಎಪಿಎಂಸಿ ಕಾಯ್ದೆ ತಿದ್ದುಪಡಿ ಮಾಡುವ ಮೂಲಕ ಬಲಿಷ್ಠ ಮಾರುಕಟ್ಟೆ ವ್ಯವಸ್ಥೆಯನ್ನು ದುರ್ಬಲಗೊಳಿಸುವ ಕೆಲಸಕ್ಕೆ ಕೈಹಾಕಿತ್ತು ಎಪಿಎಂಸಿ ಗಳ ಮೇಲೆ ಅವಲಂಬಿತವಾಗಿರುವ ಲಕ್ಷಾಂತರ ರೈತರು ಸಂಕಷ್ಟಕ್ಕೆ ತುತ್ತಾಗಿದ್ರು ಎಪಿಎಂಸಿ ಕಾಯ್ದೆ ತಿದ್ದುಪಡಿ ಮೊದಲು 2018-19 ರಲ್ಲಿ ರಾಜ್ಯದ 167 ಕೃಷಿ ಉತ್ಪನ್ನ ಮಾರುಕಟ್ಟೆಗಳ ಹುಟ್ಟು ಆದಾಯ 570 ರಿಂದ 600 ಕೋಟಿಗಳಷ್ಟು ಇತ್ತು ಆದರೆ ಎಪಿಎಂಸಿ ತಿದ್ದುಪಡಿ ಕಾಯ್ದೆ ಜಾರಿಯಾದ ನಂತರ ಅಂದರೆ 2022- 23 ರಲ್ಲಿ ಕೇವಲ 193 ಕೋಟಿ ರೂಪಾಯಿಗಳಿಗೆ ಕುಸಿದಿತ್ತು
ಕೇವಲ ಇಷ್ಟು ಮಾತ್ರವಲ್ಲದೆ ಮಾರುಕಟ್ಟೆಯಲ್ಲಿ ಖಾಸಗಿ ಸಂಸ್ಥೆಗಳು ರೈತರನ್ನ ವಂಚನೆ ಮಾಡಲು ಇಳಿದಿದ್ದವು ಶೋಷಣೆಗೆ ಒಳಪಡಿಸಿದ ಹಲವಾರು ನಿದರ್ಶನಗಳು ಕೂಡ ನಮ್ಮ ಕಣ್ಣು ಮುಂದೆ ಇವೆ ಆ ವ್ಯವಸ್ಥೆಯನ್ನು ಸರಿಪಡಿಸಿ ರೈತರ ಹಿತ ಕಾಪಾಡಲು ನಮ್ಮ ಸರ್ಕಾರ ಬದ್ಧವಾಗಿದ್ದು ಎಪಿಎಂಸಿ ತಿದ್ದುಪಡಿ ಕಾಯ್ದೆಯನ್ನು ವಾಪಸ್ ಪಡೆಯುವುದಾಗಿ ಘೋಷಿಸಿದ್ದಾರೆ
ಇನ್ನು ಕೇಂದ್ರ ಸರ್ಕಾರದ ಸಲಹೆಯಂತೆ ಬಿಜೆಪಿ ರಾಜ್ಯಗಳಲ್ಲಿ ಈ ಹಿಂದೆ ಎಪಿಎಂಸಿ ತಿದ್ದುಪಡಿ ಕಾಯ್ದೆಯನ್ನು ಜಾರಿಗೆ ತರಲಾಗಿತ್ತು. ಅದರಂತೆ ಕರ್ನಾಟಕದಲ್ಲಿ ಕೂಡ ಈ ಯೋಜನೆ ಈ ಹಿಂದಿನ ಬಸವರಾಜ ಬೊಮ್ಮಾಯಿ ಸರಕಾರದಲ್ಲಿ ಜಾರಿಯಾಗಿತ್ತು ಇದಕ್ಕೆ ರೈತ ಸಂಘ ಸೇರಿದಂತೆ ವಿವಿಧ ರೈತ ಘಟಕಗಳು ಆಕ್ರೋಶವನ್ನು ವ್ಯಕ್ತಪಡಿಸಿದ್ವು ತದನಂತರ ಎಪಿಎಂಸಿ ಕಾಯ್ದೆಗೆ ತಿದ್ದುಪಡಿ ತರುವವಿದೇಕವನ್ನ ಹಲವು ವಿರೋಧದ ನಡುವೆಯೂ ಸದನದಲ್ಲಿ ಮಂಡಿಸಲಾಗಿತ್ತು ಆದರೆ ಈಗ ಈ ಎಪಿಎಂಸಿ ತಿದ್ದುಪಡಿ ಕಾಯ್ದೆಯನ್ನು ಸಿಎಂ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ವಾಪಸ್ಸು ಪಡೆದುಕೊಂಡಿದೆ