ಮದ್ಯಪ್ರಿಯರಿಗೆ ಸರ್ಕಾರ ಶಾಕ್ ನೀಡಿದ್ದು, ಅಬಕಾರಿ ತೆರಿಗೆ ಶೇ.20ರಷ್ಟು ಹೆಚ್ಚಳ ಮಾಡುವುದಾಗಿ ಬಜೆಟ್ ನಲ್ಲಿ ಸಿಎಂ ಸಿದ್ಧರಾಮಯ್ಯ ಘೋಷಣೆ ಮಾಡಿದ್ದಾರೆ. ವಿಧಾನಸಭೆಯಲ್ಲಿ 2023-24ನೇ ಸಾಲಿನ ಬಜೆಟ್ ಅನ್ನು ಸಿಎಂ ಸಿದ್ಧರಾಮಯ್ಯ ಮಂಡಿಸಿದ್ದು, ಅಬಕಾರಿ ತೆರಿಗೆ ಶೇ.20ರಷ್ಟು ಹೆಚ್ಚಳ ಮಾಡಲಾಗಿದೆ. ಬಿಯರ್ ಮೇಲಿನ ಅಬಕಾರಿ ಸುಂಕ ಶೇ.10ರಷ್ಟು ಹೆಚ್ಚಳ ಮಾಡಲು ನಿರ್ಧರಿಸಲಾಗಿದೆ ಎಂದು ತಿಳಿಸಿದ್ದಾರೆ.
ಗ್ಯಾರಂಟಿ ಯೋಜನೆಗಳನ್ನ ಜಾರಿಗೆ ತಂದಿರುವ ಸರ್ಕಾರ ಕೆಲ ದಿನಗಳ ಹಿಂದೆ ಮಧ್ಯದ ಬೆಲೆಯಲ್ಲಿ ವಿಪರೀತ ಏರಿಕೆಯನ್ನ ಮಾಡಿತ್ತು, ಇದು ಮಧ್ಯ ಪ್ರಿಯರ ಆಕ್ರೋಶಕ್ಕೆ ಕೂಡ ಕಾರಣವಾಗಿತ್ತು, ಸಾಕಷ್ಟು ಮಂದಿ ಮಧ್ಯ ಪ್ರಿಯರು ಮಧ್ಯದ ಮೇಲಿನ ಸುಂಕವನ್ನ ಇಳಿಕೆ ಮಾಡಬೇಕು ಎಂದು ಸರ್ಕಾರವನ್ನ ಒತ್ತಾಯಿಸಿದ್ದರು. ಆದರೆ ಇದಕ್ಕೆ ಮಣಿಯದ ಸರ್ಕಾರ ಇದೀಗ ಮದ್ಯದ ಬೆಲೆಯನ್ನ ವಿಪರೀತವಾಗುವಂತೆ ಸುಂಕವನ್ನ ವಿಧಿಸಿದೆ
ನಮ್ಮ ಸರ್ಕಾರ ಜನರ ಶ್ರೇಯೋಭಿವೃದ್ಧಿಗೆ ಶ್ರಮಿಸಲಿದೆ. ಸಮಾಜದ ದುರ್ಬಲ ವರ್ಗದ ಕಲ್ಯಾಣ, ಪರಿಸರ ಸಂರಕ್ಷಣೆ ನಮ್ಮ ಸರ್ಕಾರದ ಆಶಯವಾಗಿದೆ. ಭ್ರಷ್ಟಾಚಾರ ಮುಕ್ತ ರಾಜ್ಯವನ್ನಾಗಿ ಮಾಡೋದು ನಮ್ಮ ಗುರಿ. ಸರ್ವಜನಾಂಗದ ಶಾಂತಿಯ ತೋಟ ನಮ್ಮ ಧ್ಯೇಯವಾಗಿದೆ. ಜನರನ್ನು ದಿಕ್ಕು ತಪ್ಪಿಸುವ ಕೆಲಸ ವಿಪಕ್ಷಗಳು ಮಾಡಬಾರದು. ಗ್ಯಾರಂಟಿ ಯೋಜನೆಗಳ ಬಗ್ಗೆ ಸುಳ್ಳು ಸುದ್ದಿ ಹಬ್ಬಿಸಬಾರದು ಎಂದು ತಿಳಿಸಿದ್ದಾರೆ