ರಾಜ್ಯ ರಾಜಧಾನಿ ಬೆಂಗಳೂರಿಗೆ ಸಿಎಂ ಸಿದ‍್ಧರಾಮಯ್ಯ ಬಜೆಟ್ ನಲ್ಲಿ ಬಂಪರ್ ಕೊಡುಗೆ ನೀಡಿದ್ದಾರೆ, ಬಜೆಟ್‌ನಲ್ಲಿ ಬೆಂಗಳೂರಿಗೆ ಬರೊಬ್ಬರಿ 45 ಸಾವಿರ ಕೋಟಿ ರೂ. ಅನುದಾನ ಬಿಡುಗಡೆ ಮಾಡಿದ್ದು, ಬೆಂಗಳೂರಿನ ಸರ್ವತೋಮುಖ ಅಭಿವೃದ್ಧಿಗೆ ಸಿಎಂ ಸಿದ್ದರಾಮಯ್ಯ ಈ ಬಜೆಟ್‌ನಲ್ಲಿ ಹೆಚ್ಚಿನ ಒತ್ತು ನೀಡಿದ್ದಾರೆ.
ಈಗಾಗಲೇ ಡಿಸಿಎಂ ಡಿ.ಕೆ ಶಿವಕುಮಾರ್ ಬೆಂಗಳೂರನ್ನ ಬ್ರ್ಯಾಂಡ್ ಬೆಂಗಳೂರು ಮಾಡಲು ಸಂಕಲ್ಪ ತೊಟ್ಟಿದ್ದಾರೆ. ಬೆಂಗಳೂರಿನಲ್ಲಿ ಪ್ರಮುಖ ಯೋಜನೆಗಳನ್ನ ಜಾರಿಗೆ ತರಲು ಯೋಜನೆಗಳನ್ನ ಕೂಡ ರೂಪಿಸಿಕೊಂಡಿದ್ದಾರೆ. ಹೀಗಾಗಿ ಈ ಬಾರಿ ಬೆಂಗಳೂರಿನಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಅಧಿಕ ಅನುದಾನ ಬೇಕಾಗಿದೆ ಎಂಬ ಮಾತುಗಳು ಕೇಳಿ ಬಂದಿದ್ದವು ಹೀಗಾಗಿ ಈ ಬಾರಿ ಬೆಂಗಳೂರಿನ ಅಭಿವೃದ್ಧಿಗಾಗಿ ಸರ್ಕಾರ 45 ಸಾವಿರ ಕೋಟಿ ಅನುದಾನವನ್ನ ಬಿಡುಗಡೆ ಮಾಡಿದೆ.
ವಿಧಾನಸಭೆಯಲ್ಲಿ ಬಜೆಟ್ ಮಂಡನೆ ಮಾಡಿರುವ ಸಿಎಂ ಸಿದ್ಧರಾಮಯ್ಯ, ಬೆಂಗಳೂರು ವೈಟ್ ಟಾಪಿಂಗ್, ರಸ್ತೆ ಅಭಿವೃದ್ಧಿ, ನಗರೋತ್ಥಾನ, ತಾಜ್ಯ ನಿರ್ವಹಣೆ, ರಾಜಕಾಲುವೆ ತೆರವು & ದುರಸ್ತಿಗೆ ಅನುದಾನ, ಮೆಟ್ರೋ, ಬೆಂಗಳೂರು ಉಪನಗರ ರೈಲ್ವೆ ಯೋಜನೆ, ಬ್ರ್ಯಾಂಡ್ ಬೆಂಗಳೂರಿಗೆ ಆಧ್ಯತೆ ನೀಡುವ ನಿಟ್ಟಿನಲ್ಲಿ 45 ಸಾವಿರ ಕೋಟಿ ರೂ. ಅನುದಾನ ನೀಡಲಾಗಿದೆ ಎಂದಿದ್ದಾರೆ.
ಬೆಂಗಳೂರನ್ನು ಅಂತಾರಾಷ್ಟ್ರೀಯ ಮಟ್ಟಕ್ಕೇರಿಸುವ ಗುರಿ ಹೊಂದಲಾಗಿದ್ದು . ಸರ್. ಎಂ. ವಿಶ್ವೇಶ್ವರಯ್ಯ ಟರ್ಮಿನಲ್ ಬಳಿ ಮೇಲ್ಸೇತುವೆ ನಿರ್ಮಾಣ ಮಾಡಲಾಗುತ್ತದೆ ಎಂದು ತಿಳಿಸಿದ್ದಾರೆ