ಗ್ರಾಮೀಣಾಭಿವೃದ್ಧಿ, ಪಂಚಾಯತ್ ರಾಜ್ ಹಾಗೂ ಮಾಹಿತಿ ತಂತ್ರಜ್ಞಾನ ಸಚಿವರಾದ ಪ್ರಿಯಾಂಕ್ ಖರ್ಗೆ ಇತ್ತೀಚಿನ ದಿನಗಳಲ್ಲಿ ತಮ್ಮ ನಡೆ ನುಡಿಯಿಂದ ಸಾಕಷ್ಟು ಸದ್ದು ಮಾಡುತ್ತಿದ್ದಾರೆ ಈ ಬಾರಿ ಹೇಗಾದರೂ ಮಾಡಿ ಕಾಂಗ್ರೆಸ್ಸನ್ನ ಅಧಿಕಾರಕ್ಕೆ ತರಬೇಕು ಎಂಬ ನಿಟ್ಟಿನಲ್ಲಿ ಹಲವು ರೀತಿಯಾಗಿ ಪಕ್ಷ ಸಂಘಟನೆಯಲ್ಲಿ ತಮ್ಮನ ತಾವು ತೊಡಗಿಸಿಕೊಂಡಿದ್ದರು, ಈ ಹಿಂದೆಯಿಂದಲೂ ಕೂಡ ಪ್ರಗತಿಪರ, ಚಿಂತನಾಶೀಲ, ಸಮ ಸಮಾಜದ ಕನಸನ್ನು ಹೊತ್ತು ಅದೇ ಹಾದಿಯಲ್ಲಿ ನಡೆಯಬೇಕು ಎಂದು ಹವಣಿಸಿದ್ದವರು, ಈ ಹಿಂದೆ ತಾವು ಏನು ಹೇಳಿದ್ದರು ಅದೇ ರೀತಿಯಾಗಿ ಈಗ ಅಧಿಕಾರಕ್ಕೆ ಬಂದ ಮೇಲೂ ಕೂಡ ಪ್ರಿಯಾಂಕ ಖರ್ಗೆ ಅವರು ನಡೆದುಕೊಳ್ಳುತ್ತಿದ್ದಾರೆ ಇದು ಅವರ ಸನ್ನಡತೆಗೆ ಹಿಡಿದ ಕೈಗಾ ನಡಿಯಾಗಿ ಬಿಂಬಿತವಾಗುತ್ತಿದೆ.
ಸಾಕಷ್ಟು ಜನ ರಾಜಕಾರಣಿಗಳು ತಮಗೆ ಅಧಿಕಾರ ಸಿಕ್ಕ ತಕ್ಷಣವೇ ತಮ್ಮ ವರಸೆಯನ್ನು ಬದಲಾಯಿಸಿ, ದರ್ಪ ಅಹಂಕಾರ ಮೊಂಡು ವಾದಗಳಿಂದ ಆಗಾಗ ಸುದ್ದಿಯಲ್ಲಿರುತ್ತಾರೆ, ಆದರೆ ಸಚಿವ ಪ್ರಿಯಾಂಕ್ ಖರ್ಗೆ ಮಾತ್ರ ಇದಕ್ಕೆ ತದ್ವಿರುದ್ಧವಾಗಿದ್ದಾರೆ. ಇತ್ತೀಚಿಗೆ ರಾಜಕೀಯ ವಲಯದಲ್ಲಿ ತಮ್ಮ ನಡೆ ನುಡಿಯಿಂದ ಸಾಕಷ್ಟು ಸದ್ದು ಮಾಡುತ್ತಿದ್ದಾರೆ
ಹೌದು.. ಸಚಿವ ಪ್ರಿಯಾಂಕ್ ಖರ್ಗೆ ಅವರು ತಮ್ಮ ಅಧಿಕೃತ ನಿವಾಸದಲ್ಲಿ ಬೆಳಗಿನ ಸಮಯದಲ್ಲಿ ಸಾರ್ವಜನಿಕರನ್ನು ಭೇಟಿ ಮಾಡಿ ಅವರಿಂದ ಅರ್ಜಿಗಳನ್ನು ಸ್ವೀಕರಿಸುತ್ತಾರೆ. ತಮ್ಮ ಮತಕ್ಷೇತ್ರ ಮಾತ್ರವಲ್ಲದೆ ಕಲಬುರಗಿ ಹಾಗೂ ಇನ್ನಿತರ ಜಿಲ್ಲೆಗಳಿಂದ ಪ್ರತಿ ನಿತ್ಯ ನೂರಾರು ಮಂದಿ ಬೆಂಗಳೂರಿಗೆ ಬಂದು, ಸಚಿವರ ನಿವಾಸದಲ್ಲಿ ಭೇಟಿ ಮಾಡುತ್ತಾರೆ.
ಈ ವೇಳೆ ತಮ್ಮನ್ನು ಭೇಟಿ ಮಾಡಲು ಬರುವ ಸಾರ್ವಜನಿಕರಿಂದ ಹೂವಿನ ಬೊಕೆ, ಹಾರಗಳನ್ನು ಸಚಿವ ಪ್ರಿಯಾಂಕ್ ಖರ್ಗೆ ಇತ್ತೀಚೆಗೆ ಸ್ವೀಕರಿಸುತ್ತಿಲ್ಲ. ಬದಲಿಗೆ ಪುಸ್ತಕಗಳ ಕೊಡುಗೆ ಪಡೆಯುತ್ತಿದ್ದಾರೆ. ಆ ಮೂಲಕ ಚಿತ್ತಾಪುರ ಹಾಗೂ ರಾಜ್ಯ ಇತರ ಗ್ರಾಮ ಪಂಚಾಯತಿ ಗ್ರಂಥಾಲಯಗಳಿಗೆ ಪುಸ್ತಕಗಳನ್ನು ಕೊಡುಗೆ ನೀಡುವ ಕೆಲಸಕ್ಕೆ ಮುಂದಾಗುತ್ತಿದ್ದಾರೆ.
ಸಚಿವ ಪ್ರಿಯಾಂಕ ಖರ್ಗೆ ಅವರ ಈ ನಡೆಗೆ ಸಾರ್ವಜನಿಕ ವಲಯದಲ್ಲಿ ಭಾರಿ ಮೆಚ್ಚುಗೆ ವ್ಯಕ್ತವಾಗುತ್ತಿದ್ದು, ಸಚಿವರ ಈ ನಡೆಯಿಂದ ಕನ್ನಡ ಸಾಹಿತ್ಯ ವಲಯ ಮತ್ತು ಜ್ಞಾನಾರ್ಜನೆಗಾಗಿ ಅವಳಿಸುವ ಎಷ್ಟು ಬಡ ವಿದ್ಯಾರ್ಥಿಗಳಿಗೆ ಇದರ ಲಾಭವಾಗಲಿದೆ ಎಂಬುದು ಸಾರ್ವಜನಿಕರ ಅಭಿಪ್ರಾಯವಾಗಿದೆ ಮುಂದಿನ ದಿನಗಳಲ್ಲಿ ಸಚಿವ ಪ್ರಿಯಾಂಕ್ ಖರ್ಗೆಯವರ ಈ ನಡಿಯನ್ನೆ ಇತರ ಸಚಿವರು ನಾಯಕರಗಳು ಅನುಸರಿಸಿದರೆ ಅದರಿಂದ ನಿಜಕ್ಕೂ ಬಡ ವಿದ್ಯಾರ್ಥಿಗಳಿಗೆ ಮತ್ತು ಓದುಕರಿಗೆ ಇನ್ನಷ್ಟು ಅನುಕೂಲವಾಗುವುದರಲ್ಲಿ ಯಾವುದೇ ರೀತಿಯಾದ ಅನುಮಾನವಿಲ್ಲ