• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, April 22, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಅಂಕಣ

ಕುಮಾರಸ್ವಾಮಿ ವಿಪಕ್ಷ ನಾಯಕ ಫಿಕ್ಸ್​.. ಶುಭ ಕೋರಿದ ಸಚಿವರು..

ಕೃಷ್ಣ ಮಣಿ by ಕೃಷ್ಣ ಮಣಿ
July 17, 2023
in ಅಂಕಣ, ಅಭಿಮತ
0
ಕರ್ನಾಟಕದಲ್ಲಿ ಬಿಜೆಪಿ ಜೊತೆಗೆ ಜೆಡಿಎಸ್‌ ಮೈತ್ರಿ ಅನಿವಾರ್ಯವೇ..? ಏನಿದು ಲೆಕ್ಕಾಚಾರ..?
Share on WhatsAppShare on FacebookShare on Telegram

ಮಾಜಿ ಸಿಎಂ ಕುಮಾರಸ್ವಾಮಿ ರಾಜ್ಯ ವಿರೋಧ ಪಕ್ಷದ ನಾಯಕ ಆಗುವುದು ಕನ್ಫರ್ಮ್ ಆಗಿದ್ಯಾ..? ಹೀಗೊಂದು ಅನುಮಾನ ಬರುವುದಕ್ಕೆ ಕಾರಣ ಹಾಲಿ ಸಚಿವ ಎಂ.ಬಿ ಪಾಟೀಲ್​ ಟ್ವೀಟ್​. ಶೀಘ್ರದಲ್ಲೇ ವಿರೋಧ ಪಕ್ಷದ ನಾಯಕ ಆಗಲಿರುವ ಶ್ರೀ ಕುಮಾರಸ್ವಾಮಿ ಅವರಿಗೆ ಶುಭಾಶಯಗಳು ಎಂದು ಟ್ವೀಟ್​​ ಮಾಡಿದ್ದಾರೆ. ಇದರ ಬೆನ್ನಲ್ಲೇ ಬಿಜೆಪಿಯನ್ನು ತರಾಟೆಗೆ ತೆಗೆದುಕೊಂಡಿರುವ ಸಚಿವ ಎಂಬಿ ಪಾಟೀಲ್​, ಕರ್ನಾಟಕ ಬಿಜೆಪಿ ಬಸವರಾಜ ಬೊಮ್ಮಾಯಿ ಅವರನ್ನು ಮೂಲೆಗುಂಪು ಮಾಡಲು ನಿರ್ಧಾರ ಮಾಡಿದೆ. ಬಸವರಾಜ ಬೊಮ್ಮಾಯಿ ಅವರಿಗೂ ಜಗದೀಶ್​​ ಶೆಟ್ಟರ್​ ಹಾಗು ಬಿ.ಎಸ್​ ಯಡಿಯೂರಪ್ಪ ಅವರಿಗೆ ಬಂದ ಸ್ಥಿತಿಯೇ ಬರಲಿದೆ ಎಂದು ರಾಜ್ಯ ಬಿಜೆಪಿಯನ್ನು ಕುಟುಕಿದ್ದಾರೆ.

ADVERTISEMENT

ಕಾಂಗ್ರೆಸ್​ ಸೇರುವಂತೆ ಬಸವರಾಜ ಬೊಮ್ಮಾಯಿಗೆ ಆಹ್ವಾನ..!

ರಾಜ್ಯ ಬಿಜೆಪಿಯಲ್ಲಿ ಲಿಂಗಾಯತ ನಾಯಕರುಗಳಿಗೆ ಯಾವುದೇ ಬೆಲೆ ಇಲ್ಲ ಎಂದು ಪರೋಕ್ಷವಾಗಿ ಹೇಳಿರುವ ಸಚಿವ ಎಂಬಿ ಪಾಟೀಲ್​, ಕಾಂಗ್ರೆಸ್​ ಸೇರುವಂತೆ ಮಾಜಿ ಸಿಎಂ ಬಸವರಾಜ ಬೊಮ್ಮಾಯಿಗೆ ಸಲಹೆ ನೀಡಿದ್ದಾರೆ. ಬಿಜೆಪಿ ಎಂಬುದು ಕುಸಿಯುವ ಕಾರ್ಡ್​ಗಳ ಮನೆ ಆಗಿದೆ. ಹೀಗಾಗಿ ಬಸವರಾಜ ಬೊಮ್ಮಾಯಿ ಅವರು ಈ ಹಿಂದಿನಂತೆ ಜಾತ್ಯಾತಿತ ನಿಲುವುಗಳಿಗೆ ವಾಪಸ್​ ಆದರೆ ಕಾಂಗ್ರೆಸ್​​ ಹೈಕಮಾಂಡ್​ ಕೂಡ ಪರಿಗಣಿಸಿ ಪಕ್ಷಕ್ಕೆ ಸೇರ್ಪಡೆ ಮಾಡಿಕೊಳ್ಳುತ್ತದೆ ಯೋಜನೆ ಮಾಡಿ ಎಂದು ಟ್ವೀಟ್​ ಮಾಡಿದ್ದಾರೆ. ಈ ಮೂಲಕ ರಾಜ್ಯದಲ್ಲಿ ಬಿಜೆಪಿ ಲಿಂಗಾಯತ ನಾಯಕರನ್ನು ಬೆಳೆಯುವುದಕ್ಕೆ ಬಿಡಲ್ಲ, ಬಿಜೆಪಿಯಲ್ಲಿ ಕೇವಲ ಬ್ರಾಹ್ಮಣ ನಾಯಕರಿಗೆ ಮಾತ್ರ ಆದ್ಯತೆ ಎಂದು ಕಿಚಾಯಿಸಿದ್ದಾರೆ.

ಕುಮಾರಸ್ವಾಮಿ ವಿಪಕ್ಷ ನಾಯಕ ಕಾನೂನು ಏನು ಹೇಳುತ್ತೆ..!?

ಮಾಜಿ ಸಿಎಂ ಕುಮಾರಸ್ವಾಮಿ ವಿರೋಧ ಪಕ್ಷದ ನಾಯಕನಾಗಲು ಕಾನೂನಿನಲ್ಲಿ ಅವಕಾಶವಿದ್ಯಾ..? ಅನ್ನೋ ಬಗ್ಗೆಯೂ ಸಾಕಷ್ಟು ಚರ್ಚೆಗಳು ನಡೆಯುತ್ತಿದೆ. ಕುಮಾರಸ್ವಾಮಿ ಜಯಗಳಿಸಿದ್ದು ಜೆಡಿಎಸ್​​ ಚಿಹ್ನೆಯಿಂದ. ವಿಧಾನಸಭೆಯಲ್ಲಿ ಹೆಚ್ಚು ಸ್ಥಾನ ಗಳಿಸಿರುವುದು ಬಿಜೆಪಿ. ಹೀಗಿರುವಾಗ ಕುಮಾರಸ್ವಾಮಿ ಅವರು ವಿಪಕ್ಷ ನಾಯಕನಾಗಲು ತಾಂತ್ರಿಕ ಸಮಸ್ಯೆ ಆಗುವುದಿಲ್ಲವೇ ಎನ್ನುವ ಮಾತುಗಳು ಕೇಳಿ ಬಂದಿವೆ. ಈ ಬಗ್ಗೆ ಮಾತನಾಡಿರುವ ಮಾಜಿ ಕಾನೂನು ಸಚಿವ ಟಿ.ಬಿ ಜಯಚಂದ್ರ, ವಿಧಾನಸಭೆ ಒಳಗೆ ಸಂಖ್ಯಾಬಲದ ಆಧಾರದಲ್ಲಿ ಆಯ್ಕೆ ಮಾಡುವ ಕಾರಣದಿಂದ ಕುಮಾರಸ್ವಾಮಿ ವಿರೋಧ ಪಕ್ಷದ ನಾಯಕ ಆಗಲು ಯಾವುದೇ ಸಮಸ್ಯೆ ಇಲ್ಲ. ಸಂಖ್ಯಾಬಲ ಅಷ್ಟೇ ಮುಖ್ಯವಾಗುತ್ತದೆ. ಸಂವಿಧಾನದಲ್ಲಿ ಈ ರೀತಿಯ ಆಯ್ಕೆ ಮಾಡಲು ಅವಕಾಶವಿದೆ ಎಂದಿದ್ದಾರೆ.

ಬಿಜೆಪಿಯಲ್ಲಿ ಲಿಂಗಾಯತ ನಾಯಕರಿಗೆ ಮಾನ್ಯತೆ ಯಾಕಿಲ್ಲ..?


ಸಚಿವ ಎಂ.ಬಿ ಪಾಟೀಲ್​ ಮಾಡಿರುವ ಟ್ವೀಟ್​​ ಲಿಂಗಾಯತ ಸಮುದಾಯವನ್ನು ಎಚ್ಚರಿಸುವ ಕೆಲಸ ಮಾಡಿದೆ. ಹೌದು, ಲಿಂಗಾಯತ ನಾಯಕರನ್ನು ಬಿಜೆಪಿ ಹೈಕಮಾಂಡ್​​ ಬೇಕಾದಾಗ ಬಳಸಿ ಬಿಸಾಡುತ್ತಿರುವುದು ಏಕೆ..? ಎನ್ನುವ ಪ್ರಶ್ನೆ ಎಲ್ಲರನ್ನೂ ಕಾಡುವಂತಾಗಿದೆ. ಎಂಬಿ ಪಾಟೀಲ್​, ಕೊಟ್ಟಿರುವ ನಿದರ್ಶನಗಳನ್ನೇ ನೋಡುವುದಾದರೆ ಮಾಜಿ ಸಿಎಂ ಯಡಿಯೂರಪ್ಪ ಇಡೀ ರಾಜ್ಯದಲ್ಲಿ ಪಕ್ಷವನ್ನು ಕಟ್ಟಿ ಬೆಳೆಸಿದ ನಾಯಕ. ಆದರೂ ಬಿಜೆಪಿ ಹೈಕಮಾಂಡ್​ ಯಡಿಯೂರಪ್ಪ ಅವರಿಗೆ ಸೂಕ್ತ ಸ್ಥಾನಮಾನ ಕೊಡಲಿಲ್ಲ.

ಹೈಕಮಾಂಡ್​​ಗೆ ಸಡ್ಡು ಹೊಡೆದು ಪಡೆದುಕೊಂಡರು. ಇನ್ನು ಮತ್ತೋರ್ವ ಮಾಜಿ ಸಚಿವ ಜಗದೀಶ್​ ಶೆಟ್ಟರ್​ಗೆ ಬೇಕೆಂದೇ ಮೂಲೆಗುಂಪು ಮಾಡುವ ಪ್ರಯತ್ನ ನಡೀತು. ಆ ಬಳಿಕ ಅವರು ಕಾಂಗ್ರೆಸ್​​ ಕಡೆಗೆ ಹೊರಟರು. ಇದೀಗ ಇನ್ನೋರ್ವ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಅವರು ವಿರೋಧ ಪಕ್ಷದ ನಾಯಕನಾಗ್ತಾರೆ ಎಂದುಕೊಂಡಿದ್ದರೆ ಅದೂ ಸುಳ್ಳಾಗುತ್ತಿದೆ. ಒಕ್ಕಲಿಗ ಸಮುದಾಯದ ಕುಮಾರಸ್ವಾಮಿ ಕಡೆಗೆ ಬಿಜೆಪಿ ನಾಯಕರ ಕಣ್ಣು ಹೊರಳಿದೆ ಎನ್ನಲಾಗ್ತಿದೆ. ಮುಂದಿನ ದಿನಗಳಲ್ಲಿ ಇನ್ಯಾವ ತಿರುವು ಪಡೆಯುತ್ತದೆ ಕಾದು ನೋಡೋಣ..

ಕೃಷ್ಣಮಣಿ

Tags: Basavaraj BommaiHDKHdKumaraswamyJDSLingayat CommunityMB PatilT.B.Jayachandra
Previous Post

ರಾಜ್ಯದಲ್ಲಿ ಕೈಗಾರಿಕಾ ಸ್ನೇಹಿ ವಾತವರಣವಿದೆ: ಸಿಎಂ ಸಿದ್ದರಾಮಯ್ಯ

Next Post

ವಿರೋಧ ಪಕ್ಷಗಳು ಒಂದುಗೂಡುತ್ತಿರುವುದು ಉತ್ತಮ ಆರಂಭ ; ಡಿಸಿಎಂ ಡಿ.ಕೆ. ಶಿವಕುಮಾರ್

Related Posts

ಸಂವಿಧಾನದ ಅಶಯಗಳು -ಬಾಬು ಜಗಜೀವನ್ ರಾಮ್-
Top Story

ಸಂವಿಧಾನದ ಅಶಯಗಳು -ಬಾಬು ಜಗಜೀವನ್ ರಾಮ್-

by ಪ್ರತಿಧ್ವನಿ
April 21, 2026
0

ವಿಶೇಷ ಲೇಖನ : ನಾ. ದಿವಾಕರ್‌.. (ಡಾ ಬಾಬು ಜಗಜೀವನ್ರಾಮ್ ಅಧ್ಯಯನ, ಸಂಶೋಧನೆ ಮತ್ತು ವಿಸ್ತರಣ ಕೇಂದ್ರ ಹಾಗೂ ಪರಿಶಿಷ್ಟ ಜಾತಿ/ಪಂಗಡ ವಿಶೇಷ ಘಟಕ ಮೈಸೂರು ವಿಶ್ವವಿದ್ಯಾನಿಲಯ...

Read moreDetails
ಅಂಬೇಡ್ಕರ್ ಮತ್ತು ಸಂವಿಧಾನ – ವಾಸ್ತವಗಳು

ಅಂಬೇಡ್ಕರ್ ಮತ್ತು ಸಂವಿಧಾನ – ವಾಸ್ತವಗಳು

April 20, 2026
ಪೋಪ್ ಫ್ರಾನ್ಸಿಸ್ ಪಾತ್ರ ಕೇವಲ ಧಾರ್ಮಿಕ ನಾಯಕರಲ್ಲ, ನೈತಿಕ ಶಕ್ತಿಯ ಪ್ರತಿನಿಧಿ, ಅಧಿಕಾರದ ವಿರುದ್ಧ ಸತ್ಯವನ್ನು ನಿಲ್ಲಿಸುವ ಧೈರ್ಯವಂತ ವ್ಯಕ್ತಿತ್ವ..

ಪೋಪ್ ಫ್ರಾನ್ಸಿಸ್ ಪಾತ್ರ ಕೇವಲ ಧಾರ್ಮಿಕ ನಾಯಕರಲ್ಲ, ನೈತಿಕ ಶಕ್ತಿಯ ಪ್ರತಿನಿಧಿ, ಅಧಿಕಾರದ ವಿರುದ್ಧ ಸತ್ಯವನ್ನು ನಿಲ್ಲಿಸುವ ಧೈರ್ಯವಂತ ವ್ಯಕ್ತಿತ್ವ..

April 19, 2026
ಅಂಬೇಡ್ಕರ್‌ ಮತ್ತು ಸಂವಿಧಾನ – ವಾಸ್ತವಗಳು

ಅಂಬೇಡ್ಕರ್‌ ಮತ್ತು ಸಂವಿಧಾನ – ವಾಸ್ತವಗಳು

April 19, 2026
ನಮ್ಮೊಡನಿದ್ದು ನಮ್ಮೊಳಗಿಲ್ಲದ ಅಂಬೇಡ್ಕರ್

ನಮ್ಮೊಡನಿದ್ದು ನಮ್ಮೊಳಗಿಲ್ಲದ ಅಂಬೇಡ್ಕರ್

April 18, 2026
Next Post
ಕರ್ನಾಟಕ ಚುನಾವಣಾ ಫಲಿತಾಂಶದಿಂದ ಕುಸಿದ ‘ಬ್ರಾಂಡ್ ಮೋದಿ’ ಮೌಲ್ಯ

ವಿರೋಧ ಪಕ್ಷಗಳು ಒಂದುಗೂಡುತ್ತಿರುವುದು ಉತ್ತಮ ಆರಂಭ ; ಡಿಸಿಎಂ ಡಿ.ಕೆ. ಶಿವಕುಮಾರ್

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada