ಮೈಸೂರಿನ ವಸ್ತು ಪ್ರದರ್ಶನ ಪ್ರಾಧಿಕಾರದ ಕಚೇರಿಯಲ್ಲಿ ಇಂದು ಸಂಸದ ಪ್ರತಾಪ್ ಸಿಂಹ ಸಭೆ ನಡೆಸಿದ್ದು, ಕೇಂದ್ರ ಸರ್ಕಾರದ ‘ಸ್ವದೇಶಿ ದರ್ಶನ ‘ ಯೋಜನೆಯಡಿ ವಸ್ತು ಪ್ರದರ್ಶನ ಆವರಣವನ್ನು ಅಭಿವೃದ್ಧಿಪಡಿಸಲು ಸಭೆ ಚರ್ಚೆಯನ್ನ ನಡೆಸಲಾಯಿತು. ಡೆಲೆಟ್ ಕಂಪನಿ ವತಿಯಿಂದ ಸಿದ್ಧವಾಗುತ್ತಿರುವ ಡಿಪಿಆರ್ ಬಗ್ಗೆ ಕೂಡ ಸಭೆಯಲ್ಲಿ ಮಾಹಿತಿ ನೀಡಲಾಗಿದ್ದು, ಡೆಲೆಟ್ ಕಂಪನಿಯ ಸಿಬ್ಬಂದಿ ಮತ್ತು ವಸ್ತುಪ್ರದರ್ಶನ ಪ್ರಾಧಿಕಾರದ ಸಿಬ್ಬಂದಿಗಳು ಕೂಡ ಸಭೆಯಲ್ಲಿ ಭಾಗಿಯಾಗಿದ್ರು. 80 ಕೋಟಿ ಅನುದಾನದಲ್ಲಿ ವಸ್ತು ಪ್ರದರ್ಶನದ ಅಭಿವೃದ್ಧಿಗಾಗಿ ಡಿಪಿಆರ್ ಸಿದ್ದಪಡಿಸಲು ಸಭೆ ನಿರ್ಧಾರವನ್ನ ಕೈಗೊಳ್ಳಲಾಗಿದ್ದು, ಸಿದ್ದಪಡಿಸಿರುವ ಡಿಪಿಆರ್ ಕುರಿತು ಮಾಹಿತಿ ಕೂಡ ಸಂಸದ ಪ್ರತಾಪ್ ಸಿಂಹ ಪಡೆದುಕೊಂಡಿದ್ದಾರೆ.

ಇನ್ನು ಇದೇ ವೇಳೆ ಚಾಮುಂಡಿ ಬೆಟ್ಟದ ಪಾವಿತ್ಯ್ರತೆ ಬಗ್ಗೆ ಮಾತನಾಡಿದ ಸಂಸದ ಪ್ರತಾಪ್ ಸಿಂಹ, ಚಾಮುಂಡಿ ಬೆಟ್ಟದ ಪಾವಿತ್ಯ್ರತೆಯನ್ನು ಕಾಪಾಡುವ ನಿಟ್ಟಿನಲ್ಲಿ ಅನಧಿಕೃತವಾಗಿ ನೆಲೆಸಿರುವವರನ್ನು ತೆರವುಗೊಳಿಸಬೇಕಿದೆ, ಎಂದು ಹೇಳಿಕೆಯನ್ನ ಕೂಡ ನೀಡಿದ್ದಾರೆ. ಚಾಮುಂಡಿಬೆಟ್ಟಕ್ಕೆ ಪ್ರತ್ಯೇಕ ಪ್ರಾಧಿಕಾರ ಮಾಡಿರುವುದು ಸ್ವಾಗತಾರ್ಹ.
ಈಗಾಗಲೇ ಕೇಂದ್ರ ಸರ್ಕಾರದ ಪ್ರಸಾದ ಯೋಜನೆಯಡಿ ಚಾಮುಂಡಿ ಬೆಟ್ಟದ ಅಭಿವೃದ್ಧಿಗೆ 45 ಕೋಟಿ ಅನುದಾನ ಬಂದಿದೆ, ಹೀಗಾಗಿ ಚಾಮುಂಡಿ ಬೆಟ್ಟದ ಮೇಲ್ಬಾಗದಲ್ಲಿ ಪಾವಿತ್ಯ್ರತೆಯನ್ನು ಕಾಪಾಡುವ ನಿಟ್ಟಿನಲ್ಲಿ ಹಲವು ಕ್ರಮಗಳನ್ನು ಕೈಗೊಳ್ಳಬೇಕಿದೆ ಎಂದಿದ್ದಾರೆ.
ದೇಗುಲದ ಮುಂಭಾಗದಲ್ಲಿ ಮಂಟಪವನ್ನು ಕಟ್ಟುವ ಅಗತ್ಯವಿರಲಿಲ್ಲ, ಬೆಟ್ಟದ ಮೇಲ್ಬಾಗದಲ್ಲಿ ಬೆಂಗಳೂರಿನ ಕೆಲವರು ಆಸ್ತಿ ಮಾಡಿಕೊಂಡಿದ್ದಾರೆ, ಸಬ್ ಲೀಸ್ ಮೂಲಕ ವ್ಯವಹಾರ ನಡೆಸುತ್ತಿದ್ದಾರೆ, ಹೀಗಾಗಿ ಬೆಟ್ಟಕ್ಕೆ ಸಂಬಂಧ ಪಡದವರನ್ನು ಅಲ್ಲಿಂದ ತೆರವುಗೊಳಿಸಬೇಕು, ದೇವಾಲಯದ ಅರ್ಚಕ ಸಮುದಾಯ ಹಾಗು ನಾಯಕ ಸಮುದಾಯಕ್ಕೆ ಸೇರಿದ ಮೂಲ ನಿವಾಸಿಗಳನ್ನು ಹೊರತುಪಡಿಸಿ ಇತ್ತೀಚೆಗೆ ಎಲ್ಲಿಂದಲೋ ಬಂದು ಬೆಟ್ಟದಲ್ಲಿ ನೆಲೆಸಿರುವವರನ್ನು ತೆರವುಗೊಳಿಸಬೇಕು, ಚಾಮುಂಡಿ ಬೆಟ್ಟದ ಮೇಲ್ಬಾಗದಲ್ಲಿ ಹೊಸ ಕಟ್ಟಡಗಳು ನಿರ್ಮಾಣವಾಗದಂತೆ ಕ್ರಮ ಕೈಗೊಳ್ಳಬೇಕು ಎಂದು ಮೈಸೂರಿನಲ್ಲಿ ಸಂಸದ ಪ್ರತಾಪ್ ಸಿಂಹ ಹೇಳಿಕೆಯನ್ನ ನೀಡಿದ್ದಾರೆ.