ಮಣಿಪುರದಲ್ಲಿ ಇಬ್ಬರು ಮಹಿಳೆಯರನ್ನ ನಗ್ನವಾಗಿ ಮೆರವಣಿಗೆ ಮಾಡಿರುವ ವಿಡಿಯೋ ವೈರಲ್ ಆಗುತ್ತಿದ್ದಂತೆ ಪ್ರಧಾನಿ ನರೇಂದ ಮೋದಿ ನೇತೃತ್ವದ ಸರ್ಕಾರದ ವಿರುದ್ಧ ಎಲ್ಲೇಡೆ ವ್ಯಾಪಕವಾದ ಆಕ್ರೋಶ ವ್ಯಕ್ತವಾಗುತ್ತಿದೆ. ಇನ್ನು ಈ ಘಟನೆಗೆ ಸಂಬಂಧ ಪಟ್ಟಂತೆ ಸಿನಿಮಾ ನಟ ನಟಿಯರು ಪ್ರತಿಕ್ರಿಯೆಯನ್ನ ನೀಡುತ್ತಿದ್ದು, ಕನ್ನಡ ಚಿತ್ರರಂಗದ ಹೆಮ್ಮೆಯ ನಟ ಪ್ರಧಾನಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ರೋಶವನ್ನ ವ್ಯಕ್ತ ಪಡಿಸಿದ್ದಾರೆ.
ಹೌದು.. ಈ ಕುರಿತು ಫೇಸ್‌ಬುಕ್‌ನಲ್ಲಿ ಬರೆದುಕೊಂಡಿರುವ ನಟ ಕಿಶೋರ್ ಕುಮಾರ್ “ಕೇವಲ ಮತ ಮತ್ತು ಅಧಿಕಾರಕ್ಕಾಗಿ ಜನರನ್ನು ವಿಭಜಿಸುವ ನಿಮ್ಮ ರಾಜಕೀಯ, ಇಂದು ನಮ್ಮನ್ನು ಇಲ್ಲಿಗೆ ತಂದು ನಿಲ್ಲಿಸಿದೆ … ನೀವು ಈಗಲಾದರೂ ನಿಮ್ಮ ಬಾಯಿ ತೆರೆದು ಈ ಮಹಿಳೆಯರಲ್ಲಿ ಕ್ಷಮೆಯಾಚಿಸದಿದ್ದರೆ … ನಿಮ್ಮ 56 ಇಂಚಿನ ಬಡಾಯಿಗೆ ಧಿಕ್ಕಾರವಿರಲಿ.. ಹೌದು, ನಿಮ್ಮಿಂದ ನಾವು ಏನನ್ನಾದರೂ ನಿರೀಕ್ಷಿಸಲು ಹೇಗೆ ಸಾಧ್ಯ? ಮಹಿಳಾ ಕುಸ್ತಿಪಟುಗಳ ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಗಳನ್ನು ಸದ್ದಿಲ್ಲದೆ ಬೆಂಬಲಿಸಿದವರು ನೀವೇ ಅಲ್ಲವೇ?
ಬಿಲ್ಕಿಸ್ ಬಾನು ಪ್ರಕರಣದ ಆರೋಪಿಗಳನ್ನು ಸದ್ದಿಲ್ಲದೆ ಬಿಡುಗಡೆ ಮಾಡಿ ಸಂಭ್ರಮಿಸಿದವರು ನೀವೇ ಅಲ್ಲವೇ?, ಹಾತ್ರಸ್ ನ ದಲಿತ ಹೆಣ್ಣುಮಕ್ಕಳ ಮೇಲೆ ನಡೆದ ಅತ್ಯಾಚಾರ ಮತ್ತು ಹತ್ಯೆಯನ್ನು ಮುಚ್ಚಿ ಮುಗಿಸಿದವರು ನೀವೇ ಅಲ್ಲವೇ???? , ನಿಮ್ಮ ಘೋಷಣೆಗಳನ್ನು ನಿಲ್ಲಿಸಿ ಮೊದಲು ಕೆಲಸ ಮಾಡಿ.. ನಿಮ್ಮ ಬೇಟಿ ಬಚಾವೋ ನಾಟಕಕ್ಕೆ ಧಿಕ್ಕಾರವಿರಲಿ…. ಎಂದು ಪ್ರಧಾನಿ ನರೇಂದ್ರ ಮೋದಿ ಅವರ ಸರ್ಕಾರದ ವಿರುದ್ಧ ವ್ಯಾಪಕವಾದ ಆಕ್ರೋಶ ವ್ಯಕ್ತ ಪಡಿಸುತ್ತಿದ್ದಾರೆ.