ಬೆಂಗಳೂರು ಜು 21: ಮೋದಿ ( Modi ) ಅವರು ಪ್ರಧಾನಿ ( Prime minister ) ಆಗುವವರೆಗೂ ದೇಶದ ಸಾಲ ( debt on country ) 53 ಲಕ್ಷ ಕೋಟಿ ಮಾತ್ರ ಇತ್ತು. ಆದರೆ ಈಗ ದೇಶದ ಸಾಲ 170 ಲಕ್ಷ ಕೋಟಿ ಆಗಿದೆ. ಪ್ರದಾನಿ ಮೋದಿ ಒಬ್ಬರ ಅವಧಿಯಲ್ಲಿ 118 ಲಕ್ಷ ಕೋಟಿ ಸಾಲ ಆಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ( CM Siddaramaiah ) ಅವರು ದೇಶದ ಸಾಲದ ಪ್ರಮಾಣವನ್ನು ಬಿಚ್ಚಿಟ್ಟರು.
ವಿಧಾನ ಪರಿಷತ್ ನಲ್ಲಿ ( legislative council of Karnataka ) 2023-24 ನೇ ಆಯವ್ಯಯದ ( Budget ) ಮೇಲೆ ನಡೆದ ಚರ್ಚೆಗೆ ಉತ್ತರಿಸಿದರು.
ದೇಶಕ್ಕೆ ಸ್ವಾತಂತ್ರ್ಯ ( Freedom ) ಬಂದಾಗಿನಿಂದ ಮೋದಿ ಪ್ರಧಾನಿ ಆಗುವವರೆಗೂ ಇದ್ದ ದೇಶದ ಸಾಲ ಇದ್ದದ್ದು ಕೇವಲ 53 ಲಕ್ಷ ಕೋಟಿ ಸಾಲವನ್ನು 170 ಲಕ್ಷ ಕೋಟಿಗೆ ಏರಿಸಿದ್ದೇ ಮೋದಿಯವರ ಸಾಧನೆ.
ಶ್ರೀಮಂತ ಕಾರ್ಪೋರೇಟ್‌ಗಳ 12 ಲಕ್ಷ ಕೋಟಿ ಸಾಲ ಮನ್ನಾ ಮಾಡಿದ ಮೋದಿ ಅವರು ನಾವು ಐದು ಗ್ಯಾರಂಟಿಗಳನ್ನು ಜಾರಿ ಮಾಡಿದರೆ ರಾಜ್ಯ ಆರ್ಥಿಕವಾಗಿ ದಿವಾಳಿಯಾಗುತ್ತದೆ ಎನ್ನುತ್ತಾರೆ.
ಕಚ್ಚಾತೈಲದ ಬೆಲೆ ಕಡಿಮೆ ಇದ್ದಾಗಲೂ ಪೆಟ್ರೋಲ್-ಡೀಸೆಲ್ ಬೆಲೆ ಈ ಮಟ್ಟಕ್ಕೆ ಏರಿಸಿದರೆ, ಹಾಲು-ಮೊಸರು-ಮಜ್ಜಿಗೆ- ಮಂಡಕ್ಕಿ ಮೇಲೂ ಜಿಎಸ್ ಟಿ ಹಾಕಿದರೆ ಬಡವರು, ಮಧ್ಯಮವರ್ಗದವರ ಗತಿ ಏನು ಎಂದು ಪ್ರಶ್ನಿಸಿದರು.