ಸಮಾಜ ಸಚಿವ ವಿ.ಸೋಮಣ್ಣ ವಿರುದ್ಧ ತಮ್ಮ ಕ್ಷೇತ್ರ ವರುಣಾದಿಂದ ಶಾಸಕರಾಗಿ ಆಯ್ಕೆಯಾದ ಸಿದ್ದರಾಮಯ್ಯ ಈಗ ಮುಖ್ಯಮಂತ್ರಿಯಾಗಿಯೂ ಆಯ್ಕೆಯಾಗಿದ್ದು, ಇವರ ಆಯ್ಕೆ ಕಾನೂನು ವಿರೋಧಿಯಾಗಿದೆ ಎಂಬ ಆರೋಪ ಕೇಳಿ ಬಂದಿದೆ, ಇವರ ಆಯ್ಕೆಯನ್ನು ಅಸಿಂಧುಗೊಳಿಸಬೇಕು’ ಎಂದು ಕೋರಿ ಹೈಕೋರ್ಟ್‌ಗೆ ಚುನಾವಣಾ ತಕರಾರು ಅರ್ಜಿ ಸಲ್ಲಿಸಲಾಗಿದೆ.
ಮೈಸೂರಿನ ವರುಣಾ ಹೋಬಳಿಯ ಕೂಡನಹಳ್ಳಿ ನಿವಾಸಿಯಾದ ಕೆ.ಎಂ. ಶಂಕರ್ ಎಂಬುವವರು ಈ ಅರ್ಜಿ ಸಲ್ಲಿಸಿದ್ದು, ಈ ಅರ್ಜಿಯು ಶುಕ್ರವಾರ ನ್ಯಾಯಮೂರ್ತಿ ಎಸ್. ಸುನೀಲ್ ದತ್ ಯಾದವ್ ಅವರಿದ್ದ ಏಕಸದಸ್ಯ ನ್ಯಾಯಪೀಠದ ಅರ್ಜಿಗೆ ಸಂಬಂಧಿಸಿದಂತೆ ಹೈಕೋರ್ಟ್ ದಸ್ತಾವೇಜು ಕಚೇರಿ ಎತ್ತಿರುವ ಹಲವು ಆಕ್ಷೇಪಣೆಗಳನ್ನು ನಿವಾರಿಸುವಂತೆ ಅರ್ಜಿದಾರ ಪರ ವಕೀಲರಿಗೆ ಸೂಚಿನೆ ನೀಡಿದೆ, ಜೊತೆಗೆ ನ್ಯಾಯಪೀಠ ವಿಚಾರಣೆಯನ್ನು ಜುಲೈ 28 ಕ್ಕೆ ಮುಂದೂಡಿದೆ
ಇನ್ನು ಈ ಅರ್ಜಿಯಲ್ಲಿ ಚುನಾವಣೆಗೂ ಮುನ್ನ ಕಾಂಗ್ರೆಸ್ ಪಕ್ಷವು ಮತದಾರರಿಗೆ ಗ್ಯಾರಂಟಿ ಕಾರ್ಡ್ ನೀಡಿತ್ತು ಇದು ಆಮಿಷ ಒಡ್ದಿದಂತೆ. ಈ ಗ್ಯಾರಂಟಿ ಯೋಜನೆಗಳನ್ನು ಸಿದ್ದರಾಮಯ್ಯ ಅವರ ಸಮ್ಮತಿಯೊಂದಿಗೇ ಎಲ್ಲಾ ಕಡೆಗಳಲ್ಲಿ ಪ್ರಕಟಿಸಲಾಗಿದೆ. ಇವು ವರುಣಾ ಕ್ಷೇತ್ರದಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗೆ ಮತಹಾಕಲು ಮತದಾರರನ್ನು ಪ್ರೇರೇಪಿಸಿದ ಹಾಗಾಗಿದೆ. ನನಗೆ ಮತ ಹಾಕಿದರೆ ಈ ಗ್ಯಾರಂಟಿಗಳಿ ಸಿಗುತ್ತವೆ ಎಂದು ಆಮೀಷ ಒಡ್ಡುವುದು ಲಂಚಕ್ಕೆ ಸಮವಾದುದು. ಪ್ರಜಾಪ್ರತಿನಿಧಿ ಕಾಯ್ದೆ-1951ರ ಕಲಂ 123 (1) ಪ್ರಕಾರ ಮತ್ತು ಕಲಂ 123 (2) ಪ್ರಕಾರ ಮತದಾರರ ಮೇಲೆ ಪ್ರಭಾವ ಬೀರುವ ಯತ್ನ ಕೂಡ ಇಲ್ಲಿ ನಡೆದಿದೆ. ಕಲಂ 123 (4)ರ ಪ್ರಕಾರ ಆಮಿಷವೊಡ್ಡಿ ಪ್ರಚಾರ ಮಾಡುವುದು ಕೂಡ ಅಪರಾಧ. ಆದ್ದರಿಂದ, ಅಕ್ರಮಗಳನ್ನು ಎಸಗುವ ಮೂಲಕ ಶಾಸಕರಾಗಿ ಆಯ್ಕೆಯಾಗಿರುವುದನ್ನು ಅಸಿಂಧುಗೊಳಿಸಬೇಕು’ ಎಂದು ಕೋರಿದ್ದಾರೆ.
ಒಟ್ಟಾರೆಯಾಗಿ ಈ ಪ್ರಕರಣದ ವಿಚಾರ ಇಲ್ಲದೆ ಬಾರಿ ಸದ್ದು ಮಾಡುತ್ತಿದ್ದು ಸಿದ್ದರಾಮಯ್ಯ ಅವರ ಶಾಸಕ ಸ್ಥಾನ ಆಸಿಂಧುಗೊಳ್ಳಲಿದೆಯಾ ಎಂಬ ಪ್ರಶ್ನೆ ಕೂಡ ಎಲ್ಲೆಡೆ ಕಾಡುವುದಕ್ಕೆ ಶುರುವಾಗಿದೆ