• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, April 24, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ರಾಜಕೀಯ

ನೈಸ್‌ ರೋಡ್‌ ಹಗರಣ ಸಿಎಂ ಸಿದ್ದರಾಮಯ್ಯ ವಿರುದ್ಧ ಮಾಜಿ ಸಿಎಂ ಹೆಚ್‌.ಡಿ.ಕುಮಾರಸ್ವಾಮಿ ಆಕ್ರೋಶ

Any Mind by Any Mind
July 23, 2023
in ರಾಜಕೀಯ
0
ನೈಸ್‌ ರೋಡ್‌ ಹಗರಣ ಸಿಎಂ ಸಿದ್ದರಾಮಯ್ಯ ವಿರುದ್ಧ ಮಾಜಿ ಸಿಎಂ ಹೆಚ್‌.ಡಿ.ಕುಮಾರಸ್ವಾಮಿ ಆಕ್ರೋಶ
Share on WhatsAppShare on FacebookShare on Telegram

ನೈಸ್‌ ರೋಡ್‌ ವಿಚಾರದಲ್ಲಿ ನಡೆದಿದೆ ಎನ್ನಲಾದ ಹಗರಣದ ವಿಚಾರಕ್ಕೆ ಸಂಬಂಧ ಪಟ್ಟ ಹಾಗೆ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಸಿದ್ದರಾಮಯ್ಯ ವಿರುದ್ಧ ಆಕ್ರೋಶ ವ್ಯಕ್ತ ಪಡಿಸಿದ್ದಾರೆ. ಈ ಕುರಿತು ತಮ್ಮ ಫೇಸ್‌ಬುಕ್‌ನಲ್ಲಿ ಬರೆದುಕೊಂಡಿರುವ ಅವರು,

ADVERTISEMENT

“ಮಾನ್ಯ Siddaramaiah ರವರೇ; ನೀವು ಈಗ ಕರ್ನಾಟಕದ ಮುಖ್ಯಮಂತ್ರಿ. ನನಗೂ ಮುಖ್ಯಮಂತ್ರಿ, ಮಹಾದೇವಪ್ಪ ಅವರಿಗೂ ಮುಖ್ಯಮಂತ್ರಿ! ಕಾಕಾ ಪಾಟೀಲರಿಗೂ ಮುಖ್ಯಮಂತ್ರಿ!! ಇಂಥಾ ನಿಮ್ಮನ್ನು ‘ಸುಳ್ಳುರಾಮಯ್ಶ’ ಎಂದು ಕರೆಯುವುದು ನನಗೆ ಸುತಾರಾಂ ಇಷ್ಟವಿಲ್ಲ. ಏಕೆಂದರೆ, ನಿಮ್ಮ ಹೆಸರಿನಲ್ಲೇ ‘ರಾಮ’ರಿದ್ದಾರೆ.

ತಾವು ‘ಸತ್ಯರಾಮಯ್ಯ’ನವರೇ ಆಗಿದ್ದರೆ, ಸ್ವತಃ ತಾವುಗಳೇ ನೇಮಿಸಿದ್ದ, ತಮ್ಮದೇ ಸರಕಾರದ ಕಾನೂನು ಸಚಿವರೇ ಮುಖ್ಯಸ್ಥರಾಗಿದ್ದ ಸದನ ಸಮಿತಿ ನೀಡಿದ್ದ ನೈಸ್ ಕರ್ಮಕಥೆಯನ್ನು ನೀವು ದಯಮಾಡಿ ಪುರುಸೊತ್ತು ಮಾಡಿಕೊಂಡು ಪಾರಾಯಣ ಮಾಡಿ.

ನೈಸ್ ಅಕ್ರಮ ತನಿಖೆಗೆ ನಾನೇನು ಮಾಡಿದ್ದೆ ಎಂದು ಸಿಎಂ ಸಾಹೇಬರು ಕೇಳಿದ್ದಾರೆ. ಈ ಬಾಲಿಶ ಪ್ರಶ್ನೆಗೆ ಗೌರವದಿಂದಲೇ ಉತ್ತರಿಸುವೆ.

ನಾನು ಸಿಎಂ ಆಗಿದ್ದಾಗ ನನ್ನ ಜತೆಗಿದ್ದ ಅಡ್ವೋಕೇಟ್ ಜನರಲ್, ಅವರ ಕಾನೂನು ತಂಡ ನೈಸ್ ದೌಲತ್ತಿನ ಹುಟ್ಟಡಗಿಸಿತ್ತು. ಅದುವರೆಗೆ ಅಧಿಕಾರಿಗಳನ್ನು ಬೆದರಿಸಿಟ್ಟುಕೊಂಡಿದ್ದ ಆ ಕಂಪನಿಗೆ ಬೊಂಬೆ ತೋರಿಸಿದ್ದೆವು.

ವಿವಿಧ ನ್ಯಾಯಾಲಯಗಳಲ್ಲಿ ಹೂಡಲಾಗಿದ್ದ ಎಲ್ಲಾ ನಿಂದನಾ ಅರ್ಜಿಗಳನ್ನು 2019 ಜುಲೈನಲ್ಲಿ ಗೌರವಾನ್ವಿತ ಸುಪ್ರೀಂ ಕೋರ್ಟ್ ವಜಾ ಮಾಡಿತ್ತು. ಅದಕ್ಕಾಗಿ ಅಂದಿನ ಅಡ್ವೋಕೇಟ್ ಜನರಲ್, ಮತ್ತವರ ಕಾನೂನು ತಂಡವನ್ನು ನಾನು ಅಭಿನಂದಿಸಲೇಬೇಕು. ಹಿಂದಿನ BJP Karnataka ಸರಕಾರವೂ ಈ ಲೂಟಿ ಕಂಪನಿಯ ರೆಕ್ಕೆಪುಕ್ಕ ಕತ್ತರಿಸಿ ಹಾಕಿತ್ತು.

ಅಂದಿಗೇ (2018) ನೈಸಿನ ಕೊಚ್ಚೆಯಲ್ಲಿ ಹೊರಳಾಡಿ ಪೊಗದಸ್ತಾಗಿ ಮೇಯ್ದು ಬಲಿತಿದ್ದ ಪ್ರಾಣಿಗಳನ್ನು ಎದುರು ಹಾಕಿಕೊಂಡು ನಾನು ತೆಗೆದುಕೊಂಡ ರಿಸ್ಕ್ ಸಣ್ಣದೇನಲ್ಲ @siddaramaiah ನವರೇ. ನನ್ನ ಮೇಲೆ ಬಂದ ಒತ್ತಡಗಳ ಬಗ್ಗೆ ನಿಮಗೂ ಮಾಹಿತಿ ಇರಬಹುದು. ಆಗ ನೀವು ಮತ್ತು ನಿಮ್ಮ ಟೀಮು ನನಗೆ ಕೊಟ್ಟ ‘ನಿತ್ಯ ಕಿರುಕುಳ’ವನ್ನು ಮರೆಯಲಾದೀತೆ?

ನಿಮ್ಮ ಹಂಗಿನಲ್ಲಿದ್ದ ನನಗೆ, ನಿಮ್ಮದೇ ಪಕ್ಷದವರ ವಿರುದ್ಧ ತನಿಖೆ ನಡೆಸಿ, ನೈಸ್ ಯೋಜನೆಯನ್ನು ಸರಕಾರದ ವಶಕ್ಕೆ ಪಡೆಯುವ ದಮ್ಮು ತಾಕತ್ತು ಇರಲಿಲ್ಲ, ನಿಜ ಒಪ್ಪಿಕೊಳ್ಳುತ್ತೇನೆ.

ಆದರೆ, ನಿಮ್ಮದು ಪೂರ್ಣ ಬಹುಮತದ ಬಲಿಷ್ಠ ಸರಕಾರ, ನುಡಿದಂತೆ ನಡೆಯುವ ‘ಅಪರ ಹರಿಶ್ಚಂದ್ರ’ನ ಸರಕಾರ! ಹೌದಲ್ಲವೇ?

ಹಾಗಿದ್ದರೆ ಏಕೆ ತಡ? ಸ್ವತಃ ನೀವೇ ನೇಮಿಸಿದ್ದ ಸದನ ಸಮಿತಿ (2014-2016) ವರದಿಯ ಮೇಲೆ ಖಡಕ್ ಕ್ರಮ ಜರುಗಿಸಿ. ವರದಿಯಲ್ಲಿ ನೈಸ್ ಅಕ್ರಮಗಳ ಭಾಗವತವೇ ತೆರೆದುಕೊಂಡಿದೆ. ಇಡೀ ಯೋಜನೆಯನ್ನು ಸರಕಾರದ ವಶಕ್ಕೆ ಪಡೆಯಲು ದಿಟ್ಟಹೆಜ್ಜೆ ಇಡಿ. ‘ಸಿದ್ದನೆಪ’ ಹೇಳಿ ಸಮಯವನ್ನು ಕೊಲ್ಲಬೇಡಿ? ಬಹುಮತ ಇದ್ದರೆ ಸಾಲದು, ಬದ್ಧತೆಯೂ ಇರಬೇಕು. ಅಲ್ಲವೇ?

ನಾನು ರೈತರ ಸಾಲಮನ್ನಾ ಮಾಡಿದೆ ಎನ್ನುವುದು ಎಷ್ಟು ಸತ್ಯವೋ, ಅದಕ್ಕೆ ನೀವು ಹೆಜ್ಜೆಹೆಜ್ಜೆಗೂ ಅಡ್ಡಿ ಮಾಡಿದ್ದೂ ಅಷ್ಟೇ ಸತ್ಯ. ಭಾಗ್ಯಗಳಿಗೆ ನಯಾಪೈಸೆ ಕಡಿಮೆ ಆಗಬಾರದು ಎಂದು ನನಗೆ ಕೊಟ್ಟ ಚಿತ್ರಹಿಂಸೆ ಅಸತ್ಯವೇ? ಗಟ್ಟಿ ದನಿಯಲ್ಲಿ ಅಬ್ಬರಿಸಿ ಹೇಳಿದರೆ ಸುಳ್ಳು ಸತ್ಯವಾಗುವುದಿಲ್ಲ. ಸತ್ಯರಾಮಯ್ಯರಾಗಿ ಇತಿಹಾಸದಲ್ಲಿ ದಾಖಲಾಗಿ.”

ಎಂದು ಸಿಎಂ ಸಿದ್ದರಾಮಯ್ಯ ಅವರ ವಿರುದ್ಧ ತಮ್ಮ ಫೇಸ್‌ಬುಕ್‌ ಖಾತೆಯಲ್ಲಿ ಆಕ್ರೋಶ ವ್ಯಕ್ತ ಪಡಿಸಿದ್ದಾರೆ. ಈ ಮೂಲಕ ನೈಸ್‌ ರೋಡ್‌ ವಿಚಾರದಲ್ಲಿ ಬೃಹತ್‌ ಹಗರಣವಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಮತ್ತೊಮ್ಮೆ ಕಿಡಿ ಕಾರಿದ್ದಾರೆ.

Tags: CMSiddaramaiahHdKumaraswamyJDSNarendra Modi
Previous Post

ABVP ; ಗೂಂಡಗಳ ರೀತಿ ವರ್ತಿಸಿದ ಎಬಿವಿಪಿ ಕಾರ್ಯಕರ್ತರು..!?

Next Post

ಪೊಲೀಸ್‌ ಇಲಾಖೆಯ ‘ಲೋಕಸ್ಪಂದನ’ ಬಗ್ಗೆ ನಟ ರಮೇಶ್‌ ಅರವಿಂದ್‌ ಜಾಗೃತಿ

Related Posts

ಬೆಸ್ಕಾಂನ ‘ಹೆಚ್‌ಟಿ ಮಿತ್ರ’  ಪೋರ್ಟಲ್‌ಗೆ ಚಾಲನೆ ನೀಡಿದ ಇಂಧನ ಸಚಿವ ಕೆ.ಜೆ. ಜಾರ್ಜ್
Top Story

ಬೆಸ್ಕಾಂನ ‘ಹೆಚ್‌ಟಿ ಮಿತ್ರ’ ಪೋರ್ಟಲ್‌ಗೆ ಚಾಲನೆ ನೀಡಿದ ಇಂಧನ ಸಚಿವ ಕೆ.ಜೆ. ಜಾರ್ಜ್

by ಪ್ರತಿಧ್ವನಿ
April 23, 2026
0

ಬೆಂಗಳೂರು: ಬೆಸ್ಕಾಂನ ಹೈ ಟೆನ್ಷನ್ ಗ್ರಾಹಕರಿಗಾಗಿ ಸಂಸ್ಥೆಯ ಇಂಜಿನಿಯರ್‌ಗಳು ಅಭಿವೃದ್ಧಿಪಡಿಸಿರುವ ಸೇವೆ ಕೋರಿಕೆ/ಕುಂದುಕೊರತೆ ಪರಿಹಾರ ಪೋರ್ಟಲ್ 'ಹೆಚ್‌ಟಿ ಮಿತ್ರ'ಗೆ ಇಂಧನ ಸಚಿವ ಕೆ.ಜೆ. ಜಾರ್ಜ್ ಅವರು ಗುರುವಾರ...

Read moreDetails
ಇನ್ನು ಮುಂದೆ ಬೆಂಗಳೂರು ಒನ್ ಕೇಂದ್ರಗಳಲ್ಲೂ ಇ-ಸ್ವತ್ತು ಅರ್ಜಿ ಸಲ್ಲಿಸಬಹುದು. ಸಚಿವ ಪ್ರಿಯಾಂಕ ಖರ್ಗೆ

ಇನ್ನು ಮುಂದೆ ಬೆಂಗಳೂರು ಒನ್ ಕೇಂದ್ರಗಳಲ್ಲೂ ಇ-ಸ್ವತ್ತು ಅರ್ಜಿ ಸಲ್ಲಿಸಬಹುದು. ಸಚಿವ ಪ್ರಿಯಾಂಕ ಖರ್ಗೆ

April 23, 2026
ಮಹಿಳಾ ಮೀಸಲಾತಿ ಡಿಎಂಕೆ ರಾಜಕೀಯ ಹುನ್ನಾರಕ್ಕೆ ರಾಜ್ಯದ ಹಿತ ಬಲಿ:ಬಸವರಾಜ ಬೊಮ್ಮಾಯಿ

ಮಹಿಳಾ ಮೀಸಲಾತಿ ಡಿಎಂಕೆ ರಾಜಕೀಯ ಹುನ್ನಾರಕ್ಕೆ ರಾಜ್ಯದ ಹಿತ ಬಲಿ:ಬಸವರಾಜ ಬೊಮ್ಮಾಯಿ

April 23, 2026
ತಮಿಳುನಾಡು ಅಭಿವೃದ್ಧಿಗೆ ಮತದಾನ ಮಾಡಿ: ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಕರೆ

ತಮಿಳುನಾಡು ಅಭಿವೃದ್ಧಿಗೆ ಮತದಾನ ಮಾಡಿ: ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಕರೆ

April 23, 2026
ಅಬ್ಬರ, ಆರ್ಭಟದ ಬಳಿಕ ಇಂದು ಬಂಗಾಳದಲ್ಲಿ ಮತದಾನ : ದೀದಿ ಮಣಿಸಲು ಮೋದಿ ಸಕಸ್ಸ್ ಆಗ್ತಾರಾ..

ಅಬ್ಬರ, ಆರ್ಭಟದ ಬಳಿಕ ಇಂದು ಬಂಗಾಳದಲ್ಲಿ ಮತದಾನ : ದೀದಿ ಮಣಿಸಲು ಮೋದಿ ಸಕಸ್ಸ್ ಆಗ್ತಾರಾ..

April 23, 2026
Next Post
ಪೊಲೀಸ್‌ ಇಲಾಖೆಯ ‘ಲೋಕಸ್ಪಂದನ’ ಬಗ್ಗೆ ನಟ ರಮೇಶ್‌ ಅರವಿಂದ್‌ ಜಾಗೃತಿ

ಪೊಲೀಸ್‌ ಇಲಾಖೆಯ 'ಲೋಕಸ್ಪಂದನ' ಬಗ್ಗೆ ನಟ ರಮೇಶ್‌ ಅರವಿಂದ್‌ ಜಾಗೃತಿ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada