ಪಠಾನ್ ( Pathan ) ಸಿನಿಮಾದ ( Cinema ) ಯಶಸ್ಸಿನ ( Success ) ಬಳಿಕ ಸಾಕಷ್ಟು ನಿರೀಕ್ಷೆ ಮೂಡಿಸಿರುವ ಶಾರುಖ್ ಖಾನ್ ( Shah Rukh Khan ) ಅಭಿನಯದ ಹೊಸ ಚಿತ್ರ ‘ಜವಾನ್’ ( Jawan ) ಬಗ್ಗೆ ದಿನದಿಂದ ದಿನಕ್ಕೆ ಪ್ರೇಕ್ಷಕರಲ್ಲಿ ನಿರೀಕ್ಷೆ ಹೆಚ್ಚಾಗುತ್ತಿದೆ. ಅದಕ್ಕೆ ಸರಿಯಾಗಿ ಇಂದು ಚಿತ್ರದಲ್ಲಿ ವಿಲನ್ ( villain ) ಪಾತ್ರದಲ್ಲಿ ಕಾಣಿಸಿಕೊಂಡಿರುವ ವಿಜಯ್ ಸೇತುಪತಿ ( Vijay sethupathi ) ಅವರ ಮೊದಲ ಲುಕ್ ಅನ್ನ ಕಿಂಗ್ ಖಾನ್ ಶಾರುಖ್ ಖಾನ್ ಬಿಡುಗಡೆ ಮಾಡಿದ್ದಾರೆ.
ಬಹು ನಿರೀಕ್ಷಿತ ಜವಾನ್ ಚಿತ್ರದಲ್ಲಿ ವಿಜಯ್ ಸೇತುಪತಿ ಅವರನ್ನು ಚಿತ್ರದಲ್ಲಿ ‘ಸಾವಿನ ವ್ಯಾಪಾರಿ’ ಅಂತ ಶಾರುಖ್ ಖಾನ್ ಬಣ್ಣಿಸಿದ್ದಾರೆ, ಈ ಚಿತ್ರದಲ್ಲಿ ಅವರೊಂದಿಗೆ ಮೊದಲ ಬಾರಿಗೆ ಮುಖಾಮುಖಿಯಾಗುತ್ತಿದ್ದು, ವಿಜಯ್ ಸೇತುಪತಿ ಅಭಿಮಾನಿಗಳ ನಿರೀಕ್ಷೆ ಕೂಡ ಹೆಚ್ಚಾಗುವ ಹಾಗೆ ಮಾಡಿದೆ. ಇತ್ತೀಚೆಗೆ ಬಿಡುಗಡೆಯಾದ ‘ಜವಾನ್’ ಚಿತ್ರದ ಪ್ರಿವ್ಯೂನಲ್ಲಿ ವಿಜಯ್ ಸೇತುಪತಿ ಅವರ ಝಲಕ್ ನೋಡುವುದಕ್ಕೆ ಸಿಕ್ಕಿತ್ತು ಆದ್ರೆ ಇದು ಅವರ ಅಭಿಮಾನಿಗಳ ಬೇಸರಕ್ಕೆ ಕಾರಣವಾಗಿತ್ತು ಕಾರಣ ಅದರಲ್ಲಿ ವಿಜಯ್ ಸೇತುಪತಿ ಕೇವಲ ಕೆಲ ಸೆಕೆಂಡ್ಗಳಷ್ಟು ಮಾತ್ರ ಕಾಣಿಸಿಕೊಂಡಿದ್ದರು. ಈಗ ಅವರ ಪಾತ್ರವನ್ನು ಹೊಸ ಪೋಸ್ಟರ್ ಮೂಲಕ ಪರಿಚಯಿಸಿದ ಶಾರುಖ್ ಖಾನ್ ಅಭಿಮಾನಿಗಳ ನಿರೀಕ್ಷೆ ಇನ್ನಷ್ಟು ಹೆಚ್ಚುವಂತೆ ಮಾಡಿದ್ದಾರೆ.
ಇನ್ನು ಇತ್ತೀಚೆಗೆ ಜವಾನ್ ತನ್ನ ಪ್ರತಿ ಹೊಸ ಪೋಸ್ಟರ್ ಮೂಲಕವೂ ಪ್ರೇಕ್ಷಕರ ಹೈಪ್ ಮೂಡುವಂತೆ ಮಾಡುತ್ತಿದೆ.. ಅದ್ರಲ್ಲೂ ಈ ಚಿತ್ರ ಶಾರುಖ್ ಅವರ ಮಾಸ್ ಇಮೇಜ್ ಹೆಚ್ಚು ಮಾಡಲಿದೆ ಎಂದು ಹೇಳಲಾಗುತ್ತಿದೆ ಈ ಚಿತ್ರದಲ್ಲಿ ಇದೇ ಮೊದಲ ಬಾರಿಗೆ ಶಾರುಖ್ ಖಾನ್ ವಿಭಿನ್ನ ಲುಕ್ನಲ್ಲಿ ಅಭಿನಯಿಸುತ್ತಿದ್ದು, ಅವರ ಬೋಲ್ಡ್ ಲುಕ್ ಸಿನಿ ಪ್ರೇಮಿಗಳ ಮನ ಗೆದ್ದಿದೆ, ಇದರ ಜೊತೆಗೆ ಈ ಹಿಂದೆ ರಿಲೀಸ್ ಆಗಿದ್ದ ನಯನತಾರಾ ಅವರ ಸಾಹಸಮಯ ಪೋಸ್ಟರ್, ಹಾಗೂ ಈಗ ವಿಜಯ್ ಸೇತುಪತಿ ಅವರ ಪಾತ್ರದ ಪರಿಚಯ … ಇದೆಲ್ಲದರಿಂದ ಜವಾನ್ ಈ ವರ್ಷ ಅತೀ ಹೆಚ್ಚು ನಿರೀಕ್ಷೆ ಮೂಡಿಸಿದ ಚಿತ್ರವಾಗಿ ಗುರುತಿಸಿಕೊಂಡಿದೆ.‘ಜವಾನ್’ ಚಿತ್ರವನ್ನು ರೆಡ್ ಚಿಲ್ಲೀಸ್ ಎಂಟರ್ಟೈನ್ಮೆಂಟ್ ಲಾಂಛನದಲ್ಲಿ ಗೌರಿ ಖಾನ್ ನಿರ್ಮಿಸಿದ್ದು, ಈ ಚಿತ್ರಕ್ಕೆ ಗೌರವ ವರ್ಮ ಸಹ ನಿರ್ಮಾಪಕರಾಗಿ ಕಾಣಿಸಿಕೊಂಡಿದ್ದಾರೆ. ಈ ಚಿತ್ರವು ಸೆಪ್ಟೆಂಬರ್ 07ರಂದು ಜಗತ್ತಿನಾದ್ಯಂತ ಹಿಂದಿ, ತಮಿಳು ಮತ್ತು ತೆಲುಗಿನಲ್ಲಿ ಏಕಕಾಲಕ್ಕೆ ಬಿಡುಗಡೆಯಾಗುತ್ತಿದ್ದು ಅಭಿಮಾನಿಗಳನ್ನು ತುದಿಗಾಲಿನಲ್ಲಿ ನಿಲ್ಲುವ ಹಾಗೆ ಮಾಡುತ್ತಿದೆ.