• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Monday, April 27, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಇದೀಗ

ಕಾಂಗ್ರೆಸ್ ಪ್ರಜಾಪ್ರಭುತ್ವದ, ಜಾತ್ಯತೀತತೆಯ ರಥವನ್ನು ದೇಶದಲ್ಲಿ ಮುನ್ನಡೆಸುತ್ತಿದೆ

ಪ್ರತಿಧ್ವನಿ by ಪ್ರತಿಧ್ವನಿ
July 26, 2023
in ಇದೀಗ, ಕರ್ನಾಟಕ, ರಾಜಕೀಯ
0
ಕಾಂಗ್ರೆಸ್ ಪ್ರಜಾಪ್ರಭುತ್ವದ, ಜಾತ್ಯತೀತತೆಯ ರಥವನ್ನು ದೇಶದಲ್ಲಿ ಮುನ್ನಡೆಸುತ್ತಿದೆ
Share on WhatsAppShare on FacebookShare on Telegram

ಬೆಂಗಳೂರು ಜು 26: ದೇಶದಲ್ಲಿ ನಿರುದ್ಯೋಗ ( unemployment ) ಹೆಚ್ಚುತ್ತಿದೆ, ಬೆಲೆ ಏರಿಕೆ ( Price Rise) ಕಾರಣದಿಂದ ಬಡವರು-ಮಧ್ಯಮ ವರ್ಗದವರು ಹೈರಾಣಾಗಿರುವ ಹೊತ್ತಲ್ಲೇ ಬಿಜೆಪಿಯ ( BJP ) ದ್ವೇಷ ರಾಜಕಾರಣ ಇಡಿ ದೇಶವನ್ನು ಆವರಿಸುತ್ತಿದೆ. ನಾವು ದ್ವೇಷ ಅಳಿಸಿ ಪ್ರೀತಿಯ ಭಾರತವನ್ನು ( INDIA ) ಪುನರ್ ನಿರ್ಮಿಸಲು “ಉತ್ತಮ‌ ಭಾರತಕ್ಕೆ ಅಡಿಪಾಯ” ಸಮಾವೇಷ ಸಹಕಾರಿಯಾಗಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ( chief minister siddaramaiah ) ನುಡಿದರು.

ADVERTISEMENT

ಅರಮನೆ ಮೈದಾನದಲ್ಲಿ ( Palace Ground ) ಅಖಿಲ ಭಾರತ ಯುವ ಕಾಂಗ್ರೆಸ್ ( All India youth congress ) ಆಯೋಜಿಸಿದ್ದ “ಉತ್ತಮ ಭಾರತದ ಅಡಿಪಾಯ” ರಾಷ್ಟ್ರೀಯ ಯುವ ಸಮಾವೇಶವನ್ನು ಉದ್ಘಾಟಿಸಿ ಮಾತನಾಡಿದರು.

ನಿರುದ್ಯೋಗ, ಬಡತನ ಹೆಚ್ಚಾಗುವಾಗಲೇ ದೇಶದಲ್ಲಿ ದ್ವೇಷವನ್ನು ಹರಡುವ ಪಿತೂರಿ ರಾಜಕಾರಣ ನಡೆಯುತ್ತಿದೆ. ನೆಹರೂ ಅವರ ಕಾಲದಿಂದ ಭಾರತಕ್ಕೆ ಹಾಕಲಾಗಿರುವ ಮಾನವೀಯತೆ, ಜಾತ್ಯತೀತತೆ ಮತ್ತು ವೈಜ್ಞಾನಿಕ‌ ಪ್ರಗತಿ ಮತ್ತು ಅಭಿವೃದ್ಧಿಯ ಅಡಿಪಾಯ ಮೋದಿ ಅವರು ಪ್ರಧಾನಿ ಆದ ನಂತರ ದುರ್ಬಲಗೊಳಿಸುವ ಪ್ರಯತ್ನ ನಡೆಯುತ್ತಿದೆ. ಆದರೆ, ಈ ಸಮಾವೇಶ ಮತ್ತೆ ನಮ್ಮ ಭಾರತವನ್ನು ಪ್ರಜಾಪ್ರಭುತ್ವ ಮೌಲ್ಯಗಳ ಆಧಾರದಲ್ಲಿ ಮತ್ತೆ ಎತ್ತಿ ನಿಲ್ಲಿಸಲು ನೆರವಾಗುತ್ತದೆ.

ಸಾವಿರಾರು ವರ್ಷಗಳಿಂದ ಸಾಮರಸ್ಯದಿಂದ ಇದ್ದ ಭಾರತವನ್ನು ಮೋದಿ ಅವರು ಪ್ರಧಾನಿ ಆದ ಬಳಿಕ ಬಿಜೆಪಿ-ಆರ್ ಎಸ್ ಎಸ್ ಪರಿವಾರದ ಕಾರ್ಯಕರ್ತರು ಹಾಳುಗೆಡವಿದ್ದಾರೆ.

ಈ ದೇಶದ ರೈತರು, ಕಾರ್ಮಿಕರು, ಶ್ರಮಿಕರ ಸಮಸ್ಯೆಗಳ ಬಗ್ಗೆ ಯಾವತ್ತೂ ಮಾತನಾಡದ ಬಿಜೆಪಿ ಪರಿವಾರ ಈ ರೈತ-ಕಾರ್ಮಿಕ-ಶ್ರಮಿಕರ ಮಕ್ಕಳು, ವಿದ್ಯಾರ್ಥಿಗಳನ್ನೇ ದ್ವೇಷದ ಕುಲುಮೆಗೆ ತಳ್ಳಿ ದೇಶವನ್ನು ಮತ್ತೆ ಹಿಂದಕ್ಕೆ ಎಳೆದೊಯ್ಯುವ ಪ್ರಯತ್ನ ಮಾಡುತ್ತಿದೆ. ಇದಕ್ಕೆ ಈ ದೇಶದ ಯುವಕರು, ವಿದ್ಯಾರ್ಥಿಗಳು ಯಾವುದೇ ಕಾರಣಕ್ಕೂ ಅವಕಾಶ ಕೊಡುವುದಿಲ್ಲ ಎನ್ನುವ ನಂಬಿಕೆ ನನಗಿದೆ ಎಂದರು.

ಕಾಂಗ್ರೆಸ್ ಸಂವಿಧಾನದ ಆಶಯಗಳಿಗೆ ಬದ್ದವಾಗಿದೆ. ಕಾರ್ಮಿಕರು, ಮಹಿಳೆಯರು, ದಲಿತ, ಶೂದ್ರರು, ಹಿಂದುಳಿದವರು, ಎಲ್ಲಾ ಜಾತಿಯ ಬಡವರ ಬದುಕನ್ನು ಉನ್ನತೀಕರಿಸುವ ಮತ್ತು ಈ ಎಲ್ಲಾ ಸಮುದಾಯಗಳ ಹಕ್ಕುಗಳನ್ನು ರಕ್ಷಿಸುವ ಅಭಿಯಾನವನ್ನು ಕಾಂಗ್ರೆಸ್ ನಿರಂತರವಾಗಿ ನಡೆಸುತ್ತಾ, ಹೋರಾಟ ನಡೆಸುತ್ತಿದೆ. ಸಾಮಾಜಿಕ ನ್ಯಾಯದ ಪರಂಪರೆಯನ್ನು ಮುನ್ನಡೆಸುವ ರಥ ಕಾಂಗ್ರೆಸ್ ಪಕ್ಷ ಎಂದರು.

ಬಿಜೆಪಿ ಪರಿವಾರ ಅಧಿಕಾರಕ್ಕೆ ಬಂದು ಮೋದಿ ಪ್ರಧಾನಿ ಆದ ಬಳಿಕ ದೇಶದ ಆರ್ಥಿಕತೆಯನ್ನು ಹಾಳುಗೆಡವಿದ್ದಾರೆ. ಕೇವಲ 9 ವರ್ಷದಲ್ಲಿ 118 ಲಕ್ಷ ಕೋಟಿ ಸಾಲ ಮಾಡಿ ದೇಶದ ಸಾಲವನ್ನು 170 ಲಕ್ಷ ಕೋಟಿಗೆ ಏರಿಸಿದ್ದಾರೆ. ಕಳೆದ 75 ವರ್ಷಗಳಿಂದ ಇದ್ದ ದೇಶದ ಸಾಲ 53 ಲಕ್ಷ ಕೋಟಿ ಮಾತ್ರ. ಈ ಸಾಲವನ್ನು 170 ಲಕ್ಷ ಕೋಟಿಗೆ ಏರಿಸಿದ ಕೀರ್ತಿ ಪ್ರಧಾನಿ ಮೋದಿ ಮತ್ತು ಬಿಜೆಪಿ-ಆರ್ ಎಸ್ ಎಸ್ ಪರಿವಾರದ್ದು. ಈ ಮಟ್ಟದ ಬೆಲೆ ಏರಿಕೆ ಮತ್ತು ಹಣದುಬ್ಬರ ಬಿಜೆಪಿ ಪರಿವಾರದ ಸಾಧನೆ. ಕಚ್ಚಾ ತೈಲದ ಬೆಲೆ ಕಡಿಮೆ ಇದ್ದಾಗಲೂ ಪೆಟ್ರೋಲ್, ಡೀಸೆಲ್ ಬೆಲೆ ಈ ಮಟ್ಟಕ್ಕೆ ಏರಿಕೆ ಆಗಲು ಮೋದಿ ಅವರ ತಲೆಕೆಳಗಾದ ಕೆಟ್ಟ ಆರ್ಥಿಕ ನೀತಿಗಳೇ ಕಾರಣ ಎಂದರು.

ಆದಿಕವಿ ಪಂಪ ‘ಮನುಷ್ಯ ಜಾತಿ ತಾನೊಂದೇ ವಲಂ’ ಎಂದು ಹೇಳಿದ್ದರು. ಇಂಥಾ ಮಾನವೀಯತೆ, ವೈವಿದ್ಯತೆ ಮತ್ತು ಏಕತೆಯನ್ನು ವಿಶ್ವಕ್ಕೆ ಸಾರಿದ ನೆಲ ನಮ್ಮದು. ನಮ್ಮ ಸಂವಿಧಾನ ಕೂಡ ಇದೇ ಮೌಲ್ಯವನ್ನು ಎತ್ತಿ ಹಿಡಿದಿದೆ. ಈ ನೆಲದಲ್ಲಿ ನಡೆಯುತ್ತಿರುವ “ಉತ್ತಮ ಭಾರತದ ಬುನಾದಿ” ಯುವ ಸಮಾವೇಶ ಇಡೀ ದೇಶದಲ್ಲಿ ಪ್ರತಿಧ್ವನಿಸಲಿದೆ ಎಂದರು.

ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಸಚಿವ ಕೆ.ಜೆ.ಜಾರ್ಜ್ , ರಾಷ್ಟ್ರೀಯ ಯುವ ಕಾಂಗ್ರೆಸ್ ಅಧ್ಯಕ್ಷ ಬಿ.ವಿ.ಶ್ರೀನಿವಾಸ್, ರಾಜ್ಯ ಯುವ ಅಧ್ಯಕ್ಷ ನಲಪಾಡ್ ಹಾಗೂ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಗೋವಿಂದರಾಜ್ ಸೇರಿ ಎಲ್ಲಾ ರಾಜ್ಯಗಳ ಯುವ ಕಾಂಗ್ರೆಸ್ ಅಧ್ಯಕ್ಷರು ಮತ್ತು ಪದಾಧಿಕಾರಿಗಳು ಉಪಸ್ಥಿತರಿದ್ದರು.

Tags: AICCAll India youth CongressCMSiddaramaiahDKShivakumarRahul Gandhi
Previous Post

ದಲಿತ ಶಾಸಕನ ಮನೆ ಸುಟ್ಟವರ ರಕ್ಷಣೆಯೇ ಸರ್ಕಾರದ ದಲಿತ ವಿರೋಧಿ ನಡೆಗೆ ಸಾಕ್ಷಿ : ಬಸವರಾಜ ಬೊಮ್ಮಾಯಿ

Next Post

Viral Video ; ರಸ್ತೆ ದಾಟಿದ ಜಿಂಕೆಗಳ ಹಿಂಡು, ಅಚ್ಚರಿಗೊಂಡ ನೆಟ್ಟಿಗರು

Related Posts

ಟ್ರಂಪ್ ಮೇಲೆ ಹತ್ಯೆ ಯತ್ನ: ಆರೋಪಿ ಬಂಧನ : ಯಾರಾತ ?  ಕೋಲೆ ಯತ್ನಕ್ಕೆ ಏನು ಕಾರಣ ?
ರಾಜಕೀಯ

ರಾಜಕೀಯದ ಬಗ್ಗೆ ಮುಂದಿನ ದಿನಗಳಲ್ಲಿ ಮೌನ: ಸಮಯ ಬಂದಾಗ ತಾನಾಗಿಯೇ ಸ್ಪಷ್ಟವಾಗುತ್ತದೆ – ಡಿಸಿಎಂ ಡಿ.ಕೆ. ಶಿವಕುಮಾರ್

by ಪ್ರತಿಧ್ವನಿ
April 26, 2026
0

ಬೆಂಗಳೂರು, ಏ.26: ರಾಜಕೀಯ ವಿಚಾರಗಳನ್ನು ಇನ್ನು ಮುಂದೆ ಮಾಧ್ಯಮಗಳ ಮುಂದೆ ಚರ್ಚೆ ಮಾಡುವುದಿಲ್ಲ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ. “ಯಾವಾಗ ಏನು ಆಗಬೇಕೋ ಅದು ಆಗುತ್ತದೆ....

Read moreDetails
ಎಎಪಿ ತೊರೆದು ಬಿಜೆಪಿಗೆ ರಾಘವ್ ಚಡ್ಡಾ: ಆಸ್ತಿ ವಿವರ ಇಲ್ಲಿದೆ!

ಎಎಪಿ ತೊರೆದು ಬಿಜೆಪಿಗೆ ರಾಘವ್ ಚಡ್ಡಾ: ಆಸ್ತಿ ವಿವರ ಇಲ್ಲಿದೆ!

April 26, 2026
ಬೆಂಗಳೂರು ಅಭಿವೃದ್ಧಿಗೆ ದೆಹಲಿಯಲ್ಲಿ ದೌಡಾಯಿಸಿದ ಡಿ.ಕೆ. ಶಿವಕುಮಾರ್; ಸಾವಿರಕ್ಕೂ ಹೆಚ್ಚು ಯೋಜನೆಗಳಿಗೆ ಕೇಂದ್ರದ ಗಮನ

ಬೆಂಗಳೂರು ಅಭಿವೃದ್ಧಿಗೆ ದೆಹಲಿಯಲ್ಲಿ ದೌಡಾಯಿಸಿದ ಡಿ.ಕೆ. ಶಿವಕುಮಾರ್; ಸಾವಿರಕ್ಕೂ ಹೆಚ್ಚು ಯೋಜನೆಗಳಿಗೆ ಕೇಂದ್ರದ ಗಮನ

April 26, 2026
ಅನ್ನ-ನೀರಿಗೆ ಭವಿಷ್ಯದಲ್ಲಿ ಸಂಕಷ್ಟ ಎಚ್ಚರಿಕೆ: ಹವಾಮಾನ ಬದಲಾವಣೆಯ ಕುರಿತು ಕೋಡಿಮಠ ಶ್ರೀಗಳ ಭವಿಷ್ಯವಾಣಿ

ಅನ್ನ-ನೀರಿಗೆ ಭವಿಷ್ಯದಲ್ಲಿ ಸಂಕಷ್ಟ ಎಚ್ಚರಿಕೆ: ಹವಾಮಾನ ಬದಲಾವಣೆಯ ಕುರಿತು ಕೋಡಿಮಠ ಶ್ರೀಗಳ ಭವಿಷ್ಯವಾಣಿ

April 25, 2026
ರಾಘವ್ ಚಡ್ಡಾ ರಾಜಕೀಯ ತಿರುವು: ಪಕ್ಷ ತೊರೆಯುವ ನಿರ್ಧಾರಕ್ಕೆ ರಾಷ್ಟ್ರ ರಾಜಕೀಯದಲ್ಲಿ ಚರ್ಚೆ

ರಾಘವ್ ಚಡ್ಡಾ ರಾಜಕೀಯ ತಿರುವು: ಪಕ್ಷ ತೊರೆಯುವ ನಿರ್ಧಾರಕ್ಕೆ ರಾಷ್ಟ್ರ ರಾಜಕೀಯದಲ್ಲಿ ಚರ್ಚೆ

April 25, 2026
Next Post
Viral Video ; ರಸ್ತೆ ದಾಟಿದ ಜಿಂಕೆಗಳ ಹಿಂಡು, ಅಚ್ಚರಿಗೊಂಡ ನೆಟ್ಟಿಗರು

Viral Video ; ರಸ್ತೆ ದಾಟಿದ ಜಿಂಕೆಗಳ ಹಿಂಡು, ಅಚ್ಚರಿಗೊಂಡ ನೆಟ್ಟಿಗರು

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada