• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Sunday, April 26, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಇದೀಗ

ಮುಂಬೈ | ಬಾಂಬೆ ಐಐಟಿಯಲ್ಲಿ ಮಾಂಸಾಹಾರ ಸೇವಿಸಿದ ವಿದ್ಯಾರ್ಥಿಗೆ ಅವಮಾನ ; ವಿದ್ಯಾರ್ಥಿಗಳ ಆಕ್ರೋಶ

ಪ್ರತಿಧ್ವನಿ by ಪ್ರತಿಧ್ವನಿ
July 31, 2023
in ಇದೀಗ, ದೇಶ
0
ಮುಂಬೈ
Share on WhatsAppShare on FacebookShare on Telegram

ಮುಂಬೈ ನಗರದಲ್ಲಿ ಪ್ರತಿಷ್ಠಿತ ಭಾರತೀಯ ತಂತ್ರಜ್ಞಾನ ಸಂಸ್ಥೆ (ಐಐಟಿ) ಬಾಂಬೆಯಲ್ಲಿ ವಿದ್ಯಾರ್ಥಿಯೊಬ್ಬನಿಗೆ ಮಾಂಸಾಹಾರ ಸೇವಿಸಿದ ವಿಚಾರಕ್ಕಾಗಿ ಆತನನ್ನು ಅವಮಾನ ಮಾಡಿರುವ ಘಟನೆ ಸೋಮವಾರ (ಜು.31) ವರದಿಯಾಗಿದ್ದು ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ.

ADVERTISEMENT

ಐಐಟಿಯ ಹಾಸ್ಟೆಲ್‌ ಕ್ಯಾಂಟೀನ್‌ನಲ್ಲಿ ಮಾಂಸಾಹಾರ ಸೇವಿಸಿದ ವಿಚಾರಕ್ಕೆ ವಿದ್ಯಾರ್ಥಿಯೊಬ್ಬನನ್ನು ಮತ್ತೊಬ್ಬ ವಿದ್ಯಾರ್ಥಿ ಅವಮಾನ ಮಾಡಿದ್ದಾನೆ. ಕಳೆದ ವಾರ ಹಾಸ್ಟೆಲ್‌ 12ರ ಕ್ಯಾಂಟೀನ್‌ನಲ್ಲಿ ಈ ಘಟನೆ ನಡೆದಿದೆ ಎಂದು ವಿದ್ಯಾರ್ಥಿ ಸಮೂಹವಾದ ಅಂಬೇಡ್ಕರ್ ಪೆರಿಯಾರ್ ಫುಲೆ ಸ್ಟಡಿ ಸರ್ಕಲ್ (ಎಪಿಪಿಎಸ್‌ಸಿ) ಹೇಳಿದೆ. ಇದರಿಂದ ಸಸ್ಯಾಹಾರ ಮತ್ತು ಮಾಂಸಾಹಾರಕ್ಕೆ ಸಂಬಂಧಿಸಿ ವಿದ್ಯಾರ್ಥಿಗಳ ನಡುವೆ ವಾಗ್ವಾದ ನಡೆದಿದೆ.

ಮುಬೈ ನಗರದ ಬಾಂಬೆ ಐಐಟಿ ಕ್ಯಾಂಟೀನ್‌ ಗೋಡೆಗಳ ಮೇಲೆ ಕೆಲವು ವಿದ್ಯಾರ್ಥಿಗಳು, “ಸಸ್ಯಾಹಾರಿಗಳಿಗೆ ಮಾತ್ರ ಇಲ್ಲಿ ಕುಳಿತುಕೊಳ್ಳಲು ಅವಕಾಶವಿದೆ” ಎಂದು ಘೋಷಿಸುವ ಪೋಸ್ಟರ್ಗಳನ್ನು ಹಾಕಿದ್ದರು. ಅವರು ಮಾಂಸಾಹಾರಿ ಆಹಾರಕ್ಕೆ ಆದ್ಯತೆ ನೀಡುವವರನ್ನು ಸ್ಥಳ ಖಾಲಿ ಮಾಡುವಂತೆ ಒತ್ತಾಯಿಸಿದ್ದಾರೆ. ಇದು ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ.

ವಿದ್ಯಾರ್ಥಿ ಸಮೂಹ ಪ್ರತಿನಿಧಿಗಳು ಘಟನೆ ಖಂಡಿಸಿ, ಹಾಸ್ಟೆಲ್ 12 ರ ಕ್ಯಾಂಟೀನ್ನಲ್ಲಿ ಸಸ್ಯಾಹಾರಿಗಳು ಮಾತ್ರ ಎಂಬ ಪೋಸ್ಟರ್ಗಳನ್ನು ಹರಿದು ಹಾಕಿ ಪ್ರತಿಭಟಿಸಿದ್ದಾರೆ.

ಮೂರು ತಿಂಗಳ ಹಿಂದೆ ಮುಂಬೈ ಐಐಟಿ ವಿದ್ಯಾರ್ಥಿಗಳು ಸಲ್ಲಿಸಿದ ಆರ್ಟಿಐ ಪ್ರಶ್ನೆಯಲ್ಲಿ ಸಂಸ್ಥೆಯು ಅಧಿಕೃತ ಆಹಾರ ಪ್ರತ್ಯೇಕ ನೀತಿಯನ್ನು ಹೊಂದಿಲ್ಲ ಎಂದು ಬಹಿರಂಗವಾಗಿತ್ತು. ಆದಾಗ್ಯೂ, ವಿದ್ಯಾರ್ಥಿಗಳ ಆಹಾರದ ಆಯ್ಕೆಯ ಆಧಾರದ ಮೇಲೆ ವಿವಿಧ ಆಸನ ವ್ಯವಸ್ಥೆಗಳನ್ನು ಸಂಸ್ಥೆಯಲ್ಲಿ ಇನ್ನೂ ಅಭ್ಯಾಸ ಮಾಡಲಾಗುತ್ತಿದೆ ಎಂದು ಎಪಿಪಿಎಸ್‌ಸಿ ಆರೋಪಿಸಿದೆ.

ಈ ಸುದ್ದಿ ಓದಿದ್ದೀರಾ? ರಾಹುಲ್‌ ಗಾಂಧಿಗೆ ಸೂಕ್ತ ಹುಡುಗಿ ಹುಡುಕಿಕೊಡಿ: ಹರಿಯಾಣ ರೈತ ಮಹಿಳೆ ಪ್ರಶ್ನೆಗೆ ಸೋನಿಯಾ ಉತ್ತರ

ಕ್ಯಾಂಟೀನ್ ಗೋಡೆಗಳ ಮೇಲೆ ಹಾಕಲಾಗಿರುವ ಪೋಸ್ಟರ್ನ ಫೊಟೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್‌ ಆಗಿದೆ. ಈ ಸಂಬಂಧ ಐಐಟಿ ಬಾಂಬೆಯ ಅಧಿಕಾರಿಯೊಬ್ಬರು ಪ್ರತಿಕ್ರಿಯಿಸಿದ್ದು, “ಈ ರೀತಿಯ ಪೋಸ್ಟರ್ ಅನ್ನು ಯಾರು ಹಾಕಿದ್ದಾರೆ ಎಂದು ಗೊತ್ತಿಲ್ಲ. ವಿವಿಧ ರೀತಿಯ ಆಹಾರವನ್ನು ಸೇವಿಸುವವರಿಗೆ ಇಲ್ಲಿ ನಿಗದಿತ ಸ್ಥಳವಿಲ್ಲ” ಎಂದು ಸ್ಪಷ್ಟಪಡಿಸಿದ್ದಾರೆ.

ಮುಂಬೈ ಐಐಟಿ ಕ್ಯಾಂಟೀನ್‌ನಲ್ಲಿ ಈಗ ಸಸ್ಯಾಹಾರ ವಿತರಣೆಗೆ ಬೇರೆಯೇ ಕೌಂಟರ್ ಇದೆ. ಆದರೆ ಆಹಾರ ಸೇವಿಸುವವರಿಗೆ ಗೊತ್ತುಪಡಿಸಿದ ಆಸನ ಪ್ರದೇಶವಿಲ್ಲ. ಆಹಾರ ಪಡೆದುಕೊಂಡ ಮೇಲೆ ಎಲ್ಲಿ ಬೇಕಾದರೂ ಕುಳಿತುಕೊಳ್ಳಬಹುದು. ಇಂತಹ ನಡವಳಿಕೆ ಸ್ವೀಕಾರಾರ್ಹವಲ್ಲ. ನಿರ್ದಿಷ್ಟ ಸಮುದಾಯಕ್ಕೆ ಮೀಸಲಾಗಿದೆ ಎಂಬ ಕಾರಣಕ್ಕಾಗಿ ಯಾವುದೇ ವಿದ್ಯಾರ್ಥಿಯನ್ನು ಆ ಸ್ಥಳದಿಂದ ನಿಷೇಧಿಸುವ ಹಕ್ಕನ್ನು ಯಾರೂ ಹೊಂದಿಲ್ಲ. ಘಟನೆಗಳು ಮರುಕಳಿಸಿದರೆ, ಸಂಬಂಧಪಟ್ಟವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಹಾಸ್ಟೆಲ್ನ ಪ್ರಧಾನ ಕಾರ್ಯದರ್ಶಿ ಹೇಳಿದ್ದಾರೆ.

Tags: Hostel CanteenIIT BombaymumbaiNon VegetarianStudentsVegetarianಬಾಂಬೆ ಐಐಟಿಮಾಂಸಾಹಾರಿಮುಂಬೈಸಸ್ಯಾಹಾರಿಹಾಸ್ಟೆಲ್‌ ಕ್ಯಾಂಟೀನ್‌
Previous Post

ಕೋಲಾರದಿಂದ ಜೈಪುರಕ್ಕೆ ಸಾಗಿಸುತ್ತಿದ್ದ 21 ಲಕ್ಷ ರೂ. ಮೌಲ್ಯದ ಟೊಮ್ಯಾಟೊ ಕಳ್ಳತನ ; ರಾತ್ರಿಯಿಡೀ ರೈತರ ಕಾವಲು

Next Post

ಸುಪ್ರೀಂ ಕೋರ್ಟ್‌ ಕದ ತಟ್ಟಿದ ಮಣಿಪುರ ಬೆತ್ತಲೆ ಪ್ರಕರಣ ; ಇಂದು ವಿಚಾರಣೆ

Related Posts

ಬೆಸ್ಕಾಂನ ‘ಹೆಚ್‌ಟಿ ಮಿತ್ರ’  ಪೋರ್ಟಲ್‌ಗೆ ಚಾಲನೆ ನೀಡಿದ ಇಂಧನ ಸಚಿವ ಕೆ.ಜೆ. ಜಾರ್ಜ್
Top Story

ಬೆಸ್ಕಾಂನ ‘ಹೆಚ್‌ಟಿ ಮಿತ್ರ’ ಪೋರ್ಟಲ್‌ಗೆ ಚಾಲನೆ ನೀಡಿದ ಇಂಧನ ಸಚಿವ ಕೆ.ಜೆ. ಜಾರ್ಜ್

by ಪ್ರತಿಧ್ವನಿ
April 23, 2026
0

ಬೆಂಗಳೂರು: ಬೆಸ್ಕಾಂನ ಹೈ ಟೆನ್ಷನ್ ಗ್ರಾಹಕರಿಗಾಗಿ ಸಂಸ್ಥೆಯ ಇಂಜಿನಿಯರ್‌ಗಳು ಅಭಿವೃದ್ಧಿಪಡಿಸಿರುವ ಸೇವೆ ಕೋರಿಕೆ/ಕುಂದುಕೊರತೆ ಪರಿಹಾರ ಪೋರ್ಟಲ್ 'ಹೆಚ್‌ಟಿ ಮಿತ್ರ'ಗೆ ಇಂಧನ ಸಚಿವ ಕೆ.ಜೆ. ಜಾರ್ಜ್ ಅವರು ಗುರುವಾರ...

Read moreDetails
ಇನ್ನು ಮುಂದೆ ಬೆಂಗಳೂರು ಒನ್ ಕೇಂದ್ರಗಳಲ್ಲೂ ಇ-ಸ್ವತ್ತು ಅರ್ಜಿ ಸಲ್ಲಿಸಬಹುದು. ಸಚಿವ ಪ್ರಿಯಾಂಕ ಖರ್ಗೆ

ಇನ್ನು ಮುಂದೆ ಬೆಂಗಳೂರು ಒನ್ ಕೇಂದ್ರಗಳಲ್ಲೂ ಇ-ಸ್ವತ್ತು ಅರ್ಜಿ ಸಲ್ಲಿಸಬಹುದು. ಸಚಿವ ಪ್ರಿಯಾಂಕ ಖರ್ಗೆ

April 23, 2026
ಮಹಿಳಾ ಮೀಸಲಾತಿ ಡಿಎಂಕೆ ರಾಜಕೀಯ ಹುನ್ನಾರಕ್ಕೆ ರಾಜ್ಯದ ಹಿತ ಬಲಿ:ಬಸವರಾಜ ಬೊಮ್ಮಾಯಿ

ಮಹಿಳಾ ಮೀಸಲಾತಿ ಡಿಎಂಕೆ ರಾಜಕೀಯ ಹುನ್ನಾರಕ್ಕೆ ರಾಜ್ಯದ ಹಿತ ಬಲಿ:ಬಸವರಾಜ ಬೊಮ್ಮಾಯಿ

April 23, 2026
ಸಂವಿಧಾನದ ಅಶಯಗಳು -ಬಾಬು ಜಗಜೀವನ್‌ರಾಮ್‌-

ಸಂವಿಧಾನದ ಅಶಯಗಳು -ಬಾಬು ಜಗಜೀವನ್‌ರಾಮ್‌-

April 23, 2026
ರಾಜಕಾರಣಿಗಳಿಂದ ರಸ್ತೆ ತಡೆ ಮಾಡಿಸಿ ಪ್ರತಿಭಟನೆ : ಕೆರಳಿತು ಸಾರ್ವಜನಿಕರ ತಾಳ್ಮೆ..!

ರಾಜಕಾರಣಿಗಳಿಂದ ರಸ್ತೆ ತಡೆ ಮಾಡಿಸಿ ಪ್ರತಿಭಟನೆ : ಕೆರಳಿತು ಸಾರ್ವಜನಿಕರ ತಾಳ್ಮೆ..!

April 22, 2026
Next Post
ಮಣಿಪುರ ಬೆತ್ತಲೆ ಪ್ರಕರಣ

ಸುಪ್ರೀಂ ಕೋರ್ಟ್‌ ಕದ ತಟ್ಟಿದ ಮಣಿಪುರ ಬೆತ್ತಲೆ ಪ್ರಕರಣ ; ಇಂದು ವಿಚಾರಣೆ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada