• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Monday, May 25, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ದೆಹಲಿಗೆ ಪಯಣ ಬೆಳೆಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ಸಂಪುಟ ಸಚಿವರು ; ಕುತೂಹಲ ಮೂಡಿಸಿದ ವರಿಷ್ಠರ ಸಭೆ

ಪ್ರತಿಧ್ವನಿ by ಪ್ರತಿಧ್ವನಿ
August 2, 2023
in ಕರ್ನಾಟಕ, ರಾಜಕೀಯ
0
ಮುಖ್ಯಮಂತ್ರಿ ಸಿದ್ದರಾಮಯ್ಯ
Share on WhatsAppShare on FacebookShare on Telegram

ಮುಂದಿನ ವರ್ಷ ಬರಲಿರುವ ಲೋಕಸಭೆ ಚುನಾವಣೆಗೆ ಮುಂಚಿತವಾಗಿ ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ದೆಹಲಿಗೆ ತೆರಳಿರುವುದು ಭಾರೀ ಕುತೂಹಲ ಮೂಡಿಸಿದೆ.

ADVERTISEMENT

ರಾಜ್ಯ ಆಡಳಿತಾರೂಢ ಕಾಂಗ್ರೆಸ್‌ನಲ್ಲಿ ಶಾಸಕರು ಮತ್ತು ಕೆಲವು ನಾಯಕರ ನಡುವಿನ ಅಸಮಾಧಾನ ಶಮನಕ್ಕೆ ಸಿದ್ದರಾಮಯ್ಯ ಅವರು ದೆಹಲಿಗೆ ತೆರಳಿದ್ದಾರೆ ಎಂದು ಹೇಳಲಾಗುತ್ತಿದೆ. ಆದರೆ ವಾಸ್ತವವಾಗಿ ಅವರು ಕೇವಲ ಪಕ್ಷದ ಬೇಗುದಿ ಕಡಿಮೆ ಮಾಡಲು ತೆರಳದೆ ಮುಂಬರುವ ಲೋಕಸಭೆ ಚುನಾವಣೆಗೆ ಅಗತ್ಯ ಕಾರ್ಯತಂತ್ರ ರೂಪಿಸುವ ಬಗ್ಗೆ ದೆಹಲಿ ವರಿಷ್ಠರಲ್ಲಿ ಚರ್ಚಿಸಲಿದ್ದಾರೆ ಎಂದು ಮಾಧ್ಯಮಗಳು ವರದಿ ಮಾಡಿವೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅದಕ್ಕಾಗಿ ಎರಡು ದಿನಗಳ ದೆಹಲಿ ಪ್ರವಾಸ ಕೈಗೊಂಡಿದ್ದಾರೆ ಎನ್ನಲಾಗಿದೆ.

ದೆಹಲಿಯಲ್ಲಿ ಬುಧವಾರ (ಆಗಸ್ಟ್‌ 2) ಕಾಂಗ್ರೆಸ್‌ ವರಿಷ್ಠರು ಸಭೆ ಕರೆದಿದ್ದಾರೆ. ಅದಕ್ಕಾಗಿ ಸಿದ್ದರಾಮಯ್ಯ ಅವರು ತಮ್ಮ ಸಂಪುಟದ ಸಚಿವರ ಜೊತೆ ದೇವನಹಳ್ಳಿಯ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬೆಳಿಗ್ಗೆ 9.45ಕ್ಕೆ ದೆಹಲಿಗೆ ಪ್ರಯಾಣಿಸಿದ್ದಾರೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವರಿಷ್ಠರ ಜೊತೆಗೆ ಸಭೆ ನಡೆಸುವುದರ ಜೊತೆಗೆ ಕೇಂದ್ರ ಸಚಿವರ ಜೊತೆಗೂ ಸಭೆಯನ್ನು ನಡೆಸಲಿದ್ದಾರೆ.

ಲೋಕಸಭಾ ಚುನಾವಣೆ ಸಿದ್ದತೆ ಹಾಗೂ ಪಕ್ಷದ ಸಂಘಟನೆಯ ದೃಷ್ಟಿಯಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹಾಗೂ ರಾಹುಲ್ ಗಾಂಧಿ ಸೇರಿದಂತೆ ರಾಷ್ಟ್ರೀಯ ನಾಯಕರ ಜೊತೆಗೆ ಮೊದಲು ಸಭೆ ನಡೆಯಲಿದೆ. ಈ ಸಭೆಯಲ್ಲಿ ಚುನಾವಣೆಯ ಸಿದ್ದತೆಗಳ ಕುರಿತಾಗಿ ಚರ್ಚೆ ನಡೆಯಲಿದೆ ಎಂದು ಹೇಳಲಾಗಿದೆ.

ಈಗಾಗಲೇ ಉಪಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ದೆಹಲಿಯಲ್ಲಿ ಬೀಡು ಬಿಟ್ಟಿದ್ದಾರೆ. ಬಹುತೇಕ ಸಚಿವರು ದೆಹಲಿಗೆ ತೆರಳಿದ್ದಾರೆ.

ವರಿಷ್ಠರ ಜತೆಗಿನ ಸಭೆಯ ನಂತರ ರಾಹುಲ್ ಗಾಂಧಿ ಅವರ ಜೊತೆಗೆ ಸಚಿವರ ಸಭೆಯನ್ನು ಕರೆಯಲಾಗಿದೆ. ಸಂಜೆ 5.30 ಕ್ಕೆ ಸಚಿವರ ಸಭೆ ನಡೆಯಲಿದ್ದು, ನೂತನ ಸಚಿವರಿಗೆ ರಾಹುಲ್ ಗಾಂಧಿ ಕೆಲವು ಸಲಹೆ ಸೂಚನೆಗಳನ್ನು ನೀಡಲಿದ್ದಾರೆ. ರಾಜ್ಯದಲ್ಲಿ ಅಧಿಕಾರಕ್ಕೆ ಬಂದಿರುವ ಕಾಂಗ್ರೆಸ್ ಮುಂದಿನ ಐದು ವರ್ಷಗಳ ಕಾಲ ಹೇಗೆ ಜನ ಪರವಾದ ಆಡಳಿತ ನೀಡಬೇಕು ಎಂಬ ನಿಟ್ಟಿನಲ್ಲಿ ಕೆಲವೊಂದು ಸಲಹೆಗಳನ್ನು ನೀಡುವ ಸಾಧ್ಯತೆ ಇದೆ ಎಂದು ವರದಿ ಹೇಳಿದೆ.

ದೆಹಲಿಯಲ್ಲಿ ಕಾಂಗ್ರೆಸ್‌ ವರಿಷ್ಠರ ಜೊತೆಗಿನ ರಾಜ್ಯ ನಾಯಕರ ಸಭೆ ಬಹಳ ಮಹತ್ವ ಪಡೆದಿದೆ. ರಾಜ್ಯ ಸಚಿವರಿಗೆ ವರಿಷ್ಠರು ಲೋಕಸಭಾ ಚುನಾವಣೆ ಉಸ್ತುವಾರಿ ನೀಡುವ ಸಾಧ್ಯತೆ ಇದೆ ಎನ್ನಲಾಗಿದೆ.

ಕಾಂಗ್ರೆಸ್‌ ಮುಂಬರುವ ಲೋಕಸಭಾ ಚುನಾವಣೆಯಲ್ಲಿ 20ಕ್ಕೂ ಹೆಚ್ಚು ಸ್ಥಾನಗಳನ್ನು ಗೆಲ್ಲುವ ಗುರಿ ಹೊಂದಿದೆ. ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಹಾಗೂ ಜೆಡಿಎಸ್‌ ಮೈತ್ರಿಕೊಳ್ಳುವ ಸಾಧ್ಯತೆ ಇರುವುದರಿಂದ ಕಾಂಗ್ರೆಸ್‌ ಈ ತೀರ್ಮಾನ ಕೈಗೊಂಡಿದೆ ಎನ್ನಲಾಗಿದೆ.

ಅಲ್ಲದೆ ಸಭೆಯಲ್ಲಿ ರಾಜ್ಯ ಸಚಿವ ಸಂಪುಟ ಪುನಾರಚನೆ ಬಗ್ಗೆ ಚರ್ಚೆ ನಡೆಯಲಿದೆ ಎಂದು ಹೇಳಲಾಗಿದೆ. ಕೆಲ ಸಚಿವರಿಗೆ ಕೊಕ್‌ ನೀಡಿ ಹೊಸಬರಿಗೆ ಮಣೆ ಹಾಕಬಹುದು ಎನ್ನಲಾಗಿದೆ. ಯಾರಿಗೆ ಮಂತ್ರಿಗಿರಿ ದೊಯೆಯುವುದು ಎಂಬುದು ಸದ್ಯ ಕುತೂಹಲ ಮೂಡಿಸಿದೆ.

ಭಿನ್ನಾಭಿಪ್ರಾಯಗಳ ಬಗ್ಗೆಯೂ ಚರ್ಚೆ: ದೆಹಲಿ ಸಭೆಯಲ್ಲಿ ರಾಜ್ಯ ಕಾಂಗ್ರೆಸ್ ಭಿನ್ನಾಭಿಪ್ರಾಯಗಳ ಬಗ್ಗೆಯೂ ಚರ್ಚೆ ನಡೆಯಲಿದೆ. ಸಚಿವರ ಕಾರ್ಯವೈಖರಿಯ ಕುರಿತಾಗಿ ಕೆಲವು ಶಾಸಕರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪತ್ರವನ್ನು ಬರೆದಿದ್ದು, ರಾಜ್ಯ ಸರ್ಕಾರಕ್ಕೆ ಇದು ಮುಜುಗರ ತಂದೊಡ್ಡಿದೆ. ಈ ನಿಟ್ಟಿನಲ್ಲಿ ಹೈಕಮಾಂಡ್ ಕೆಲವೊಂದು ಸಲಹೆ ಸೂಚನೆಗಳನ್ನು ನೀಡುವ ಸಾಧ್ಯತೆ ಇದೆ.

ದೆಹಲಿಗೆ ಹೊರಟಿದ್ದ ಸಚಿವ ಸತೀಶ್ ಜಾರಕಿಹೊಳಿ ಮಾತನಾಡಿ, “ಪಕ್ಷದ ಆದೇಶದಂತೆ ದೆಹಲಿಗೆ ಹೋಗುತ್ತಿದ್ದೇವೆ. ಹೈಕಮಾಂಡ್ ಅಜೆಂಡಾ ಏನು, ಚರ್ಚೆ ಏನು ಮಾಡುತ್ತಾರೆ ಎಂದು ಗೊತ್ತಿಲ್ಲ” ಎಂದು ಹೇಳಿದರು.

ರಾಜ್ಯ ಕಾಂಗ್ರೆಸ್‌ನಲ್ಲಿ ಶಾಸಕರು, ನಾಯಕರಿಗೆ ಯಾವುದೇ ಅಸಮಾಧಾನವಿಲ್ಲ. ಇತ್ತೀಚೆಗೆ ರಾಹುಲ್ ಗಾಂಧಿಯವರು ಬೆಂಗಳೂರಿಗೆ ಬಂದಿದ್ದಾಗಲೇ ಸಭೆ ನಡೆಸಬೇಕಾಗಿತ್ತು. ಯಾವುದೋ ಕಾರಣದಿಂದ ಸಭೆ ರದ್ದಾಗಿತ್ತು, ಹಾಗಾಗಿ ಈಗ ದೆಹಲಿಗೆ ಎಲ್ಲಾ 34 ಸಚಿವರನ್ನು ಕರೆದಿದ್ದಾರೆ. ಹಾಗಾಗಿ ಹೋಗುತ್ತಿದ್ದೇವೆ ಎಂದು ಸಚಿವ ಜಮೀರ್ ಅಹ್ಮದ್ ಹೇಳಿದರು.

ಬುಧವಾರ ನಡೆಯಲಿರುವ ಮೊದಲ ಸಭೆಗೆ ರಾಜ್ಯ ಕಾಂಗ್ರೆಸ್ನ ಒಟ್ಟು 37 ನಾಯಕರಿಗೆ ಆಹ್ವಾನ ನೀಡಲಾಗಿದೆ. 37 ನಾಯಕರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಡಿ.ಕೆ ಶಿವಕುಮಾರ್ ಸೇರಿದಂತೆ 19 ಸಚಿವರು ಭಾಗಿಯಾಗಲಿದ್ದಾರೆ. ಜತೆಗೆ ಸಂಸದರಾದ ಡಿ.ಕೆ ಸುರೇಶ್, ಜಿ.ಸಿ ಚಂದ್ರಶೇಖರ್, ಎಲ್. ಹನುಮಂತಯ್ಯ ಭಾಗಿಯಾಗಲಿದ್ದು ಸಭೆಗೆ ಹಿರಿಯ ಶಾಸಕರಿಗೂ ಆಹ್ವಾನ ನೀಡಲಾಗಿದೆ.

ಈ ಸುದ್ದಿ ಓದಿದ್ದೀರಾ? ಜನರ ಕೆಲಸ ಮಾಡುವ ವಿಚಾರದಲ್ಲಿ ರಾಜಕೀಯ ಮಾಡಬಾರದು ; ಸಿಎಂ ಸಿದ್ದರಾಮಯ್ಯ

ಲಕ್ಷ್ಮಣ ಸವದಿ, ಜಗದೀಶ್ ಶೆಟ್ಟರ್, ರಾಘವೇಂದ್ರ ಹಿಟ್ನಾಳ್, ತುಕಾರಾಂ, ವಿನಯ್ ಕುಲಕರ್ಣಿ ಭಾಗಿಯಾಲಿದ್ದಾರೆ. ಅಷ್ಟೇ ಅಲ್ಲದೆ ರಮೇಶ್ ಕುಮಾರ್ ಹಾಗೂ ಆರ್.ವಿ ದೇಶಪಾಂಡೆ ಸಭೆಯಲ್ಲಿ ಭಾಗಿಯಾಗಲಿದ್ದಾರೆ. ಇತ್ತೀಚೆಗೆ ಈಡಿಗರ ಸಮಾವೇಶದಲ್ಲಿ ಪರೋಕ್ಷವಾಗಿ ಪಕ್ಷದ. ನಾಯಕರ ವಿರುದ್ಧ ಅಸಮಧಾನ ಹೊರಹಾಕಿದ್ದ ಬಿ.ಕೆ ಹರಿಪ್ರಸಾದ್ ಅವರಿಗೂ ಆಹ್ವಾನ ನೀಡಲಾಗಿದೆ.

ಎರಡನೇ ಸಭೆಯಲ್ಲಿ ಕೇವಲ ಸಚಿವರಷ್ಟೇ ಭಾಗಿಯಾಗಲಿದ್ದು, ಇಲ್ಲಿ ಪಕ್ಷದ ಹಿರಿಯ ನಾಯಕರು ಮತ್ತು ಸಚಿವರ ನಡುವೆ ಇರುವ ಮನಸ್ತಾಪ ಬಗೆಹರಿಸುವ ಕೆಲಸ ಹೈಕಮಾಂಡ್ ಮಾಡಲಿದೆ ಎಂದು ವರದಿಯಲ್ಲಿ ಹೇಳಲಾಗಿದೆ.

Tags: CM SiddaramaiahCongress High CommandDelhiDK ShivakumarLok Sabha ElectionsRahul Gandhiಡಿ.ಕೆ. ಶಿವಕುಮಾರ್ದೆಹಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ದೆಹಲಿ ಪ್ರವಾಸಮುಖ್ಯಮಂತ್ರಿ ಸಿದ್ದರಾಮಯ್ಯರಾಹುಲ್‌ ಗಾಂಧಿ
Previous Post

ಬಾಲಿವುಡ್‌ ಪ್ರಸಿದ್ಧ ಕಲಾ ನಿರ್ದೇಶಕ ನಿತಿನ್‌ ದೇಸಾಯಿ ಮೃತದೇಹ ಪತ್ತೆ ; ಆತ್ಮಹತ್ಯೆ ಶಂಕೆ

Next Post

ಸಾರ್ವಜನಿಕ ಸ್ಥಳಗಳಲ್ಲಿ ತಂಬಾಕು ಉತ್ಪನ್ನ ಬಳಕೆ ನಿಷೇಧ: ಡಾ. ಕೆ.ವಿ ರಾಜೇಂದ್ರ

Related Posts

ಕಾಂಗ್ರೆಸ್‌ ವೈಫಲ್ಯಗಳಿಂದ ಗೆಲ್ತೀವಿ ಎಂಬ ಭ್ರಮೆಯಿಂದ ಹೊರಬನ್ನಿ : ಬಿಜೆಪಿ ನಾಯಕರಿಗೆ ನಿತಿನ್‌ ನಬಿನ್‌ ಸಂಘಟನೆಯ ಪಾಠ..!
Top Story

ಕಾಂಗ್ರೆಸ್‌ ವೈಫಲ್ಯಗಳಿಂದ ಗೆಲ್ತೀವಿ ಎಂಬ ಭ್ರಮೆಯಿಂದ ಹೊರಬನ್ನಿ : ಬಿಜೆಪಿ ನಾಯಕರಿಗೆ ನಿತಿನ್‌ ನಬಿನ್‌ ಸಂಘಟನೆಯ ಪಾಠ..!

by ಪ್ರತಿಧ್ವನಿ
May 24, 2026
0

ಬೆಂಗಳೂರು : ಬಿಜೆಪಿ ರಾಷ್ಟ್ರಾಧ್ಯಕ್ಷ ನಿತಿನ್‌ ನಬಿನ್‌ ಕರ್ನಾಟಕ ರಾಜ್ಯ ಪ್ರವಾಸದಲ್ಲಿದ್ದಾರೆ. ಆಡಳಿತಾರೂಢ ಕಾಂಗ್ರೆಸ್‌ ಪಕ್ಷದ ಅಲೆಯ ಎದುರು ಪಕ್ಷವನ್ನು ಬಲಪಡಿಸುವ ನಿಟ್ಟಿನಲ್ಲಿ ಹಾಗೂ ಸಂಘಟನೆಯ ದೃಷ್ಟಿಯಿಂದಲೂ...

Read moreDetails
BREAKING NEWS : ಭಟ್ಕಳದಲ್ಲಿ ಭೀಕರ ದುರಂತ! : ಕಪ್ಪೆ ಚಿಪ್ಪು ತೆಗೆಯಲು ಹೋದವರು ಜಲಸಮಾಧಿ

BREAKING NEWS : ಭಟ್ಕಳದಲ್ಲಿ ಭೀಕರ ದುರಂತ! : ಕಪ್ಪೆ ಚಿಪ್ಪು ತೆಗೆಯಲು ಹೋದವರು ಜಲಸಮಾಧಿ

May 24, 2026
ವಿಶೇಷಚೇತನರ ಸಬಲೀಕರಣಕ್ಕೆ ಕೈ ಜೋಡಿಸೋಣ : ಸಂತೋಷ್‌ ಲಾಡ್‌ ಕರೆ..

ವಿಶೇಷಚೇತನರ ಸಬಲೀಕರಣಕ್ಕೆ ಕೈ ಜೋಡಿಸೋಣ : ಸಂತೋಷ್‌ ಲಾಡ್‌ ಕರೆ..

May 24, 2026
80 ಸಾವಿರ ಆಸನದ ಕ್ರೀಡಾಂಗಣ ನಿರ್ಮಾಣ ಪ್ರಗತಿಯ ದೂರದೃಷ್ಟಿ : ಸಿಎಂ ಸಿದ್ದರಾಮಯ್ಯ ಬಣ್ಣನೆ..

80 ಸಾವಿರ ಆಸನದ ಕ್ರೀಡಾಂಗಣ ನಿರ್ಮಾಣ ಪ್ರಗತಿಯ ದೂರದೃಷ್ಟಿ : ಸಿಎಂ ಸಿದ್ದರಾಮಯ್ಯ ಬಣ್ಣನೆ..

May 23, 2026
ದೇಶ ಕಟ್ಟುವ ಕಾರ್ಮಿಕರ ಬದುಕಿಗೆ ಸಹಾಯ ಮಾಡಿದ ಸಮಾಧಾನ ನಮ್ಮ ಸರ್ಕಾರದ್ದು :‌ ಸಚಿವ ಸಂತೋಷ್‌ ಲಾಡ್..

ದೇಶ ಕಟ್ಟುವ ಕಾರ್ಮಿಕರ ಬದುಕಿಗೆ ಸಹಾಯ ಮಾಡಿದ ಸಮಾಧಾನ ನಮ್ಮ ಸರ್ಕಾರದ್ದು :‌ ಸಚಿವ ಸಂತೋಷ್‌ ಲಾಡ್..

May 23, 2026
Next Post
ತಂಬಾಕು ಉತ್ಪನ್ನ

ಸಾರ್ವಜನಿಕ ಸ್ಥಳಗಳಲ್ಲಿ ತಂಬಾಕು ಉತ್ಪನ್ನ ಬಳಕೆ ನಿಷೇಧ: ಡಾ. ಕೆ.ವಿ ರಾಜೇಂದ್ರ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada