• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, April 10, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಇತರೆ / Others

ಮಲ್ಲಿಕಾರ್ಜುನ ಖರ್ಗೆ ಮೈಬಣ್ಣದ ಬಗ್ಗೆ ನಾಲಿಗೆ ಹರಿಬಿಟ್ಟ ಆರಗ ಜ್ಞಾನೇಂದ್ರ..!

ಪ್ರತಿಧ್ವನಿ by ಪ್ರತಿಧ್ವನಿ
August 2, 2023
in ಇತರೆ / Others, ಇದೀಗ, ಕರ್ನಾಟಕ, ರಾಜಕೀಯ
0
ಮಲ್ಲಿಕಾರ್ಜುನ ಖರ್ಗೆ ಮೈಬಣ್ಣದ ಬಗ್ಗೆ ನಾಲಿಗೆ ಹರಿಬಿಟ್ಟ ಆರಗ ಜ್ಞಾನೇಂದ್ರ..!
Share on WhatsAppShare on FacebookShare on Telegram

ದಕ್ಷಿಣ ಆಫ್ರಿಕಾದಲ್ಲಿ ವರ್ಣಭೇದ ನೀತಿಯ ವಿರುದ್ಧ ಹೋರಾಡಿದ ಮಹಾತ್ಮಾ ಗಾಂಧೀಜಿ ( Mahatma Gandhi ) ಹುಟ್ಟಿದ ದೇಶದಲ್ಲಿ ಬಿಜೆಪಿ ( BJP ) ವರ್ಣಭೇದ ನೀತಿಯನ್ನು ಪೋಷಿಸುತ್ತಿರುವುದು ನಿಜಕ್ಕೂ ದುರ್ದೈವ ಎಂದು ಅರಣ್ಯ ಜೀವಿಶಾಸ್ತ್ರ ಮತ್ತು ಪರಿಸರ ( Nature )ಸಚಿವ ಸಿ ಈಶ್ವರ ಖಂಡ್ರೆ ( Eshwar Khandre ) ವಿಷಾದ ವ್ಯಕ್ತಪಡಿಸಿದ್ದಾರೆ.

ADVERTISEMENT


“ನಮ್ಮ ಭಾಗದ ಜನರು ( People ) ಸುಟ್ಟು ಕರಕಲಾಗಿರುತ್ತಾರೆ ಖರ್ಗೆ ಅವರನ್ನು ನೋಡಿದರೆ ಇದು ಗೊತ್ತಾಗುತ್ತದೆ’ಎಂದು ಹೇಳುವ ಮೂಲಕ ಆರಗ ಜ್ಞಾನೇಂದ್ರ ( Araga jnanendra ) ರಾಷ್ಟ್ರೀಯ ಕಾಂಗ್ರೆಸ್ ( National Congress ) ಅಧ್ಯಕ್ಷ ಮತ್ತು ದಲಿತ ಮುಖಂಡ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಅಷ್ಟೇ ಅಲ್ಲದೆ ರಾಜ್ಯದ ಅದರಲ್ಲೂ ಇಡೀ ಕಲ್ಯಾಣ ಕರ್ನಾಟಕದ ಜನತೆಗೆ ಅವಮಾನ ಮಾಡಿದ್ದಾರೆ ಇದು ಮಾಜಿ ಸಚಿವರ ಘನತೆಗೆ ಶೋಭೆ ತರುವುದಿಲ್ಲ ಎಂದು ಹೇಳಿದ್ದಾರೆ.


ಬೆಂಗಳೂರಿನಲ್ಲಿ ನಡೆದ ಕಾರ್ಯಕ್ರಮ ಒಂದರ ಸಂವಾದದ ವೇಳೆ ಕೆಲವರು ಕಸ್ತೂರಿರಂಗನ್ ವರದಿ ಕುರಿತಂತೆ ಕೇಳಿದ ಪ್ರಶ್ನೆಗೆ ಉತ್ತರ ನೀಡಿದ ತಾವು ಯಾವುದೇ ಹಂತದಲ್ಲೂ “ಕಸ್ತೂರಿ ರಂಗನ್ ವರದಿ ಜಾರಿಗೆ ಸರ್ಕಾರ ಬದ್ಧ’’ ಎಂದು ತಿಳಿಸಿರುವುದಿಲ್ಲ. ಇದು ತಿರುಚಿದ ಹೇಳಿಕೆ. ಈ ಬಗ್ಗೆ ಭಾನುವಾರವೇ ಬೀದರ್ ನಲ್ಲಿ ನಡೆದ ಪತ್ರಿಕಾ ದಿನಾಚರಣೆಯಲ್ಲಿ ತಾವು ಸ್ಪಷ್ಟೀಕರಣ ನೀಡಿದ್ದೇನೆ. ಸೋಮವಾರ ಮತ್ತೊಮ್ಮೆ ಸ್ಪಷ್ಟೀಕರಣ ಹೇಳಿಕೆ ಬಿಡುಗಡೆ ಮಾಡಿದ್ದು, ಇದು ಎಲ್ಲ ಮಾಧ್ಯಮದಲ್ಲೂ ಪ್ರಕಟವಾಗಿದೆ. ಹೀಗಿದ್ದೂ, ಬಿಜೆಪಿ ರಾಜಕೀಯ ದುರ್ಲಾಭಕ್ಕಾಗಿ ಮಂಗಳವಾರ ಪ್ರತಿಭಟನೆ ನಡೆಸಿರುವುದು ಅರ್ಥಹೀನ ಎಂದು ಹೇಳಿದರು.


ಆರಗ ಜ್ಞಾನೇಂದ್ರ ಅವರು ನಮ್ಮ ಕಲ್ಯಾಣ ಕರ್ನಾಟಕದಲ್ಲಿ ಮರಗಳಿಲ್ಲ ನೆರಳಿಲ್ಲ ನಮ್ಮ ತಲೆಕೂದಲೇ ನೆರಳು ಎಂದೆಲ್ಲಾ ತುಚ್ಛವಾಗಿ ಮಾತನಾಡಿರುವುದು ಅವರ ಕೀಳು ಅಭಿರುಚಿಗೆ ಹಿಡಿದ ಕನ್ನಡಿಯಾಗಿದೆ. ಗೃಹ ಮಂತ್ರಿಯಾಗಿ ಸೇವೆ ಸಲ್ಲಿಸಿದ ವ್ಯಕ್ತಿ ಮನುಷ್ಯರ ಬಣ್ಣದ ಮೇಲೆ ಟೀಕೆ ಮಾಡಿ, ಈ ರೀತಿ ನಾಡಿನ ಒಂದು ಕಾಲು ಕೋಟಿ ಜನತೆಗೆ ಅವಮಾನ ಮಾಡಿರುವುದು ನಿಜಕ್ಕೂ ದುರ್ದೈವ ಎಂದು ತಿಳಿಸಿದ್ದಾರೆ.
ಆರಗ ಜ್ಞಾನೇಂದ್ರ ಅವರು ಮಲ್ಲಿಕಾರ್ಜುನ ಖರ್ಗೆ ಹಾಗೂ ತಮಗಷ್ಟೇ ಅಲ್ಲದೆ ಇಡೀ ಕಲ್ಯಾಣ ಕರ್ನಾಟಕದ ಜನತೆಯ ಬೇಷರತ್ ಕ್ಷಮೆ ಕೋರಬೇಕು ಎಂದು ಒತ್ತಾಯಿಸಿದ್ದಾರೆ.
ತಾವು ಅರಣ್ಯ ಇಲ್ಲದ ಪ್ರದೇಶದಿಂದ ಬಂದಿರಬಹುದು. ಆದರೆ ಹಸಿರಿನ ಮಹತ್ವ ತಮಗೆ ತಿಳಿದಿದೆ. ಅರಣ್ಯ ಸಚಿವನಾಗಿ ರಾಜ್ಯದ ಹಸಿರು ವ್ಯಾಪ್ತಿಯನ್ನು ಹೆಚ್ಚಿಸಲು ಶಕ್ತಿಮೀರಿ ಶ್ರಮಿಸುತ್ತಿದ್ದು, ಕಲ್ಯಾಣ ಕರ್ನಾಟಕವನ್ನು ಹಸಿರುಮಯಗೊಳಿಸಲು ಮುಂದಾಗಿದ್ದೇನೆ. ಈ ಕಾರ್ಯವನ್ನು ಬಿಜೆಪಿ ಸರ್ಕಾರ ಮಾಡಿರಲಿಲ್ಲ ಎಂದು ಹೇಳಿದ್ದಾರೆ.


ಕಳೆದ ಹತ್ತು ವರ್ಷಗಳಿಂದ ಕೇಂದ್ರದಲ್ಲಿ ಬಿಜೆಪಿ ಸರ್ಕಾರವೇ ಇದೆ ಜೊತೆಗೆ ರಾಜ್ಯದಲ್ಲೂ ಬಿಜೆಪಿ ಸರ್ಕಾರ ಇತ್ತು ಆಗ ಇವರು ಏಕೆ ಕಸ್ತೂರಿರಂಗನ್ ವರದಿಯನ್ನು ರದ್ದು ಮಾಡಲಿಲ್ಲ ಎಂದು ಪ್ರಶ್ನಿಸಿರುವ ಈಶ್ವರ ಖಂಡ್ರೆ, ಈಗಲೂ ಮಲೆನಾಡಿನ ಮತ್ತು ಕರಾವಳಿಯ ಬಿಜೆಪಿ ಶಾಸಕರು, ಸಂಸದರು ಕೇಂದ್ರ ಸರ್ಕಾರದ ಮೇಲೆ ಒತ್ತಡ ಹೇರಿ ಕಸ್ತೂರಿರಂಗನ್ ವರದಿಯನ್ನು ರದ್ದುಪಡಿಸಲಿ ಎಂದು ಸವಾಲು ಹಾಕಿದ್ದಾರೆ.


ಈಗ ಕೇಂದ್ರ ಸರ್ಕಾರವೇ ನಿವೃತ್ತ ಐಎಫ್ಎಸ್ ಅಧಿಕಾರಿ ಸಂಜಯ್ ಕುಮಾರ್ ನೇತೃತ್ವದಲ್ಲಿ ಸಮಿತಿಯೊಂದನ್ನು ರಚಿಸಿ ಎಲ್ಲ ಪಶ್ಚಿಮ ಘಟ್ಟದ ರಾಜ್ಯಗಳಿಗೆ ಅಧ್ಯಯನಕ್ಕೆ ಕಳಿಸಿದೆ, ವರದಿ ಜಾರಿಗೆ ಪಟ್ಟು ಹಿಡಿದಿರುವುದು ಕೇಂದ್ರ ಸರ್ಕಾರವೇ ಹೊರತು ರಾಜ್ಯ ಸರ್ಕಾರವಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

Tags: Araga JnanendraBJPDKShivakumarMallikarjun KhargePriyank Kharge
Previous Post

ಸಾರ್ವಜನಿಕ ಸ್ಥಳಗಳಲ್ಲಿ ತಂಬಾಕು ಉತ್ಪನ್ನ ಬಳಕೆ ನಿಷೇಧ: ಡಾ. ಕೆ.ವಿ ರಾಜೇಂದ್ರ

Next Post

ಕುತೂಹಲ ಮೂಡಿಸಿದ ರಾಕೇಶ್‌ ಟಿಕಾಯತ್‌ ಮತ್ತು ಮುಖ್ಯಮಂತ್ರಿ ಸಿದ್ದರಾಮಯ್ಯ ಭೇಟಿ

Related Posts

ವಿದ್ಯಾರ್ಥಿಗಳ ದುಡುಕಿನ ನಿರ್ಧಾರಕ್ಕೆ ಸಿಎಂ ಸಿದ್ದರಾಮಯ್ಯ ಸಲಹೆ
ಕರ್ನಾಟಕ

ಇನ್ನು ಪಿಯುಸಿ ಅಂಕಪಟ್ಟಿ ಮುಂದಿನ ವರ್ಷದಿಂದ  ಹೀಗಿರಲಿದೆ ! ಮಧು ಬಂಗಾರಪ್ಪ ಮಹತ್ವದ ಹೇಳಿಕೆ

by ಪ್ರತಿಧ್ವನಿ
April 10, 2026
0

ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಉತ್ತೀರ್ಣರಾಗುವ ವಿದ್ಯಾರ್ಥಿಗಳಿಗೆ ಮುಂದಿನ ಶೈಕ್ಷಣಿಕ ಸಾಲಿನಿಂದ ಮುದ್ರಿತ ಅಂಕಪಟ್ಟಿ ನೀಡುವ ಪದ್ಧತಿಗೆ ಸರ್ಕಾರ ತೆರೆ ಎಳೆಯಲು ನಿರ್ಧರಿಸಿದೆ. ಬದಲಿಗೆ ಡಿಜಿಟಲ್ ಅಂಕಪಟ್ಟಿಯನ್ನೇ ಅಧಿಕೃತವಾಗಿ...

Read moreDetails
ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ: ಶೇ.86 ಉತ್ತೀರ್ಣ – ದಾಖಲೆಯ ಸಾಧನೆ, ಜಿಲ್ಲಾವಾರು ಪಟ್ಟಿ ಇಲ್ಲಿದೆ

ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ: ಶೇ.86 ಉತ್ತೀರ್ಣ – ದಾಖಲೆಯ ಸಾಧನೆ, ಜಿಲ್ಲಾವಾರು ಪಟ್ಟಿ ಇಲ್ಲಿದೆ

April 9, 2026
ದೇವನಹಳ್ಳಿ ಭೂ ಹಗರಣದಲ್ಲಿ ಅಧಿಕಾರಿ ಬಿ.ಕೆ.ಮಮತಾ ಪಾತ್ರವೇನು..? : ತಪ್ಪಿಲದಿದ್ರೆ ಪ್ರತಿಕ್ರಿಯೆಗೆ ನಿರಾಕರಣೆ ಯಾಕೆ..?

ದೇವನಹಳ್ಳಿ ಭೂ ಹಗರಣದಲ್ಲಿ ಅಧಿಕಾರಿ ಬಿ.ಕೆ.ಮಮತಾ ಪಾತ್ರವೇನು..? : ತಪ್ಪಿಲದಿದ್ರೆ ಪ್ರತಿಕ್ರಿಯೆಗೆ ನಿರಾಕರಣೆ ಯಾಕೆ..?

April 9, 2026
ತಮಿಳುನಾಡು ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆ ಮಾಡಿದ ಡಿಸಿಎಂ ಡಿ.ಕೆ. ಶಿವಕುಮಾರ್

ಮಂಡ್ಯ ರೈಲು ನಿಲ್ದಾಣ ಮೇಲ್ದರ್ಜೆಗೆ; ವಿಮಾನ ನಿಲ್ದಾಣ ಮಾದರಿಯಲ್ಲಿ ಅಭಿವೃದ್ಧಿ: ಹೆಚ್.ಡಿ. ಕುಮಾರಸ್ವಾಮಿ

April 9, 2026
ತಮಿಳುನಾಡು ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆ ಮಾಡಿದ ಡಿಸಿಎಂ ಡಿ.ಕೆ. ಶಿವಕುಮಾರ್

ತಮಿಳುನಾಡು ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆ ಮಾಡಿದ ಡಿಸಿಎಂ ಡಿ.ಕೆ. ಶಿವಕುಮಾರ್

April 9, 2026
Next Post
ಮುಖ್ಯಮಂತ್ರಿ ಸಿದ್ದರಾಮಯ್ಯ

ಕುತೂಹಲ ಮೂಡಿಸಿದ ರಾಕೇಶ್‌ ಟಿಕಾಯತ್‌ ಮತ್ತು ಮುಖ್ಯಮಂತ್ರಿ ಸಿದ್ದರಾಮಯ್ಯ ಭೇಟಿ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada