• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, April 23, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಇದೀಗ

ಗ್ಯಾರೆಂಟಿ ಯೋಜನೆಗಳ ಬಗ್ಗೆ ಟೀಕಿಸಿದ ಪ್ರಧಾನಿ ಮೋದಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ತಿರುಗೇಟು

ಪ್ರತಿಧ್ವನಿ by ಪ್ರತಿಧ್ವನಿ
August 2, 2023
in ಇದೀಗ, ದೇಶ, ರಾಜಕೀಯ
0
ಮುಖ್ಯಮಂತ್ರಿ ಸಿದ್ದರಾಮಯ್ಯ
Share on WhatsAppShare on FacebookShare on Telegram

ಕಾಂಗ್ರೆಸ್‌ ನೇತೃತ್ವದ ಕರ್ನಾಟಕ ರಾಜ್ಯ ಸರ್ಕಾರ ಘೋಷಿಸಿರುವ ಉಚಿತ ಯೋಜನೆಗಳಿಗೆ ಸರ್ಕಾರ ದಿವಾಳಿಯಾಗುತ್ತದೆ ಎಂದು ಟೀಕಿಸಿದ್ದ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬುಧವಾರ (ಆಗಸ್ಟ್‌ 2) ತಿರುಗೇಟು ನೀಡಿದ್ದಾರೆ.

ADVERTISEMENT

ಕರ್ನಾಟಕದ ಗ್ಯಾರಂಟಿ (ಉಚಿತ) ಯೋಜನೆಗಳಿಂದಾಗಿ ರಾಜ್ಯದ ಖಜಾನೆ ಬರಿದಾಗಲಿದೆ. ಇದರಿಂದ ಅಭಿವೃದ್ದಿಗೆ ಹಣ ಇಲ್ಲದಂತಾಗಿದೆ ಎಂದು ಕಾಳಜಿ ವ್ಯಕ್ತಪಡಿಸಿರುವ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಧನ್ಯವಾದಗಳು ಎಂದು ಸಿದ್ದರಾಮಯ್ಯ ದೆಹಲಿಯಲ್ಲಿ ಸುದ್ದಿಗಾರರಿಗೆ ಹೇಳಿದರು.

“ನರೇಂದ್ರ ಮೋದಿಯವರೇ, ಇದು ನಿಮ್ಮ ವೈಯಕ್ತಿಕ ಅಭಿಪ್ರಾಯವೇ, ಪ್ರಧಾನಿಯವರ ಅಭಿಪ್ರಾಯವೇ? ಇಲ್ಲವೆ ಪಕ್ಷದ ಅಭಿಪ್ರಾಯವೇ? ಎನ್ನುವುದನ್ನು ದಯವಿಟ್ಟು ಸ್ಪಷ್ಟಪಡಿಸಬೇಕೆಂದು ವಿನಂತಿ ಮಾಡುತ್ತಿದ್ದೇನೆ” ಎಂದು ಹೇಳಿದ್ದಾರೆ.

“ಗ್ಯಾರಂಟಿ ಯೋಜನೆಗಳನ್ನು ವಿರೋಧಿಸುವುದಾದರೆ ನಿಮ್ಮ ಮತ್ತು ನಿಮ್ಮ ಪಕ್ಷದ ನಿಲುವನ್ನು ಸ್ಪಷ್ಟಪಡಿಸಿ. ಕರ್ನಾಟಕದ ಬಿಜೆಪಿ ನಾಯಕರಿಗೂ ನಮ್ಮ ಗ್ಯಾರಂಟಿ ಯೋಜನೆಗಳನ್ನು ಸಾರ್ವಜನಿಕವಾಗಿ ವಿರೋಧಿಸಲು ನಿರ್ದೇಶನ ನೀಡಿ. ಮುಂದಿನ ಲೋಕಸಭಾ ಚುನಾವಣೆಯನ್ನು ಗ್ಯಾರಂಟಿ ಯೋಜನೆಗಳ ವಿಷಯವನ್ನೇ ಮುಂದಿಟ್ಟುಕೊಂಡು ಎದುರಿಸಲು ನಾವು ಸಿದ್ಧರಿದ್ದೇವೆ, ನೀವು ಸಿದ್ಧರಿದ್ದರೆ ಅದನ್ನು ಘೋಷಿಸಿ” ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕಿಡಿಕಾರಿದ್ದಾರೆ.

“ರಾಜ್ಯದಲ್ಲಿ ನಮ್ಮ ಸರ್ಕಾರದ ಗ್ಯಾರಂಟಿ ಯೋಜನೆಗಳನ್ನು ತಕ್ಷಣ ಜಾರಿಗೊಳಿಸಬೇಕೆಂದು ಕರ್ನಾಟಕದ ಬಿಜೆಪಿ ನಾಯಕರು ಒಂದೇ ಸಮನೆ ನಮ್ಮ ಬೆನ್ನು ಹತ್ತಿದ್ದಾರೆ. ಬಡವರಿಗೆ ನೀಡುವ ಹೆಚ್ಚುವರಿ ಅಕ್ಕಿಯಲ್ಲಿ ಒಂದು ಕಾಳು ಕಡಿಮೆಮಾಡಿದರೂ ಹೋರಾಟ ನಡೆಸುವುದಾಗಿ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರು ಗುಡುಗುತ್ತಲೇ ಇದ್ದಾರೆ. ಆದರೆ ತಾವು ನೀಡಿದ್ದ ಭರವಸೆಗಳ ಬಗ್ಗೆ ಬಿಜೆಪಿ ಮರೆತುಬಿಟ್ಟಿದೆ” ಎಂದು ಸಿದ್ದರಾಮಯ್ಯ ಟೀಕಿಸಿದರು.

“ಹಬ್ಬಗಳ ಸಮಯದಲ್ಲಿ ವರ್ಷಕ್ಕೆ ಮೂರು ಗ್ಯಾಸ್ ಸಿಲಿಂಡರ್ ಮತ್ತು ಬಿಪಿಎಲ್ ಕುಟುಂಬಗಳಿಗೆ ಅರ್ಧ ಲೀಟರ್ ನಂದಿನ ಹಾಲು ಉಚಿತವಾಗಿ ನೀಡುತ್ತೇವೆ ಎಂದು ಇತ್ತೀಚಿನ ವಿಧಾನಸಭಾ ಚುನಾವಣೆಯ ಪೂರ್ವದಲ್ಲಿ ಬಿಡುಗಡೆಗೊಳಿಸಿದ್ದ ಪ್ರಣಾಳಿಕೆಯಲ್ಲಿ ಕರ್ನಾಟಕದ ಬಿಜೆಪಿ ಭರವಸೆ ನೀಡಿತ್ತು. ಇದು ಫ್ರೀಬಿ, ರೇವ್ಡಿ ಯೋಜನೆಗಳಲ್ಲವೇ?” ಎಂದು ಪ್ರಶ್ನಿಸಿದರು.

“ಕೇಂದ್ರ ಸರ್ಕಾರದ್ದೇ ಯೋಜನೆಯಾಗಿರುವ ರೈತರ ಖಾತೆಗೆ ವಾರ್ಷಿಕ ಆರು ಸಾವಿರ ರೂಪಾಯಿಗಳನ್ನು ಜಮೆ ಮಾಡುವ ಕಿಸಾನ್ ಸಮ್ಮಾನ್ ಯೋಜನೆಯನ್ನು ನೀವು ಹೇಗೆ ವ್ಯಾಖ್ಯಾನಿಸುತ್ತೀರಿ? ಐದು ಕಿಲೋ ಅಕ್ಕಿಯನ್ನು ಹೆಚ್ಚುವರಿಯಾಗಿ ನೀಡಿದರೆ ರಾಜ್ಯದ ಖಜಾನೆ ಬರಿದಾಗಲಿದೆ ಎಂದಾದರೆ, ಐದು ಕಿಲೋ ಅಕ್ಕಿಯನ್ನು ಉಚಿತವಾಗಿ ನೀಡುವ ಪಿಎಂ ಗರೀಬ್ ಅನ್ನ ಕಲ್ಯಾಣ ಯೋಜನೆಯನ್ನು ಯಾವ ಗುಂಪಿಗೆ ಸೇರಿಸುತ್ತೀರಿ?” ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕುಟುಕಿದರು.

“ಉಚಿತ ಸ್ವರೂಪದ ಎಂಟು ಯೋಜನೆಗಳನ್ನು ಕೇಂದ್ರ ಸರ್ಕಾರ ಅಂದಾಜು 1.25 ಲಕ್ಷ ಕೋಟಿ ರೂ. ವೆಚ್ಚದಲ್ಲಿ ಅನುಷ್ಠಾನಗೊಳಿಸುತ್ತಿದೆ. ಉಚಿತ ಯೋಜನೆಗಳನ್ನು ವಿರೋಧಿಸುತ್ತಿರುವ ನೀವು ಈ ಯೋಜನೆಗಳನ್ನು ಹೇಗೆ ಸಮರ್ಥಿಸುತ್ತೀರಿ?” ಎಂದು ಕೇಳಿದ್ದಾರೆ.

“ಡಬಲ್ ಎಂಜಿನ್ ಸರ್ಕಾರದ ಜನವಿರೋಧಿ ಆಡಳಿತದಿಂದ ಬೇಸತ್ತು ಹೋಗಿರುವ ಕರ್ನಾಟಕದ ಜನತೆ ನಮ್ಮ ಗ್ಯಾರಂಟಿ ಯೋಜನೆಗಳಿಗೆ ಜನಾದೇಶವನ್ನು ನೀಡಿ ಬಿಜೆಪಿಯನ್ನು ತಿರಸ್ಕರಿಸಿದ್ದಾರೆ. ನುಡಿದಂತೆ ನಡೆಯುವ ಬದ್ಧತೆ ಹೊಂದಿರುವ ನಾವು ಕೊಟ್ಟ ಭಾಷೆಯನ್ನು ಉಳಿಸುವ ಪ್ರಯತ್ನ ಮಾಡುತ್ತಿದ್ದೇವೆ” ಎಂದು ಸಿದ್ದರಾಮಯ್ಯ ಪ್ರತಿಪಾದಿಸಿದರು.

ಈ ಸುದ್ದಿ ಓದಿದ್ದೀರಾ? ಸಂಸತ್ತು ಮುಂಗಾರು ಅಧಿವೇಶನ | ಗದ್ದಲದ ನಡುವೆ ದೆಹಲಿ ಸೇವಾ ಮಸೂದೆ ಮಂಡನೆ

“ಬೆಲೆ ಏರಿಕೆ ಮತ್ತು ನಿರುದ್ಯೋಗಗಳಿಂದಾಗಿ ವಿಪರೀತ ಆರ್ಥಿಕ ಒತ್ತಡಕ್ಕೆ ಸಿಕ್ಕಿ ಕೈಖಾಲಿ ಮಾಡಿಕೊಂಡಿರುವ ಜನಸಾಮಾನ್ಯರನ್ನು ಅರ್ಥಿಕ ಹೊರೆಯಿಂದ ಪಾರು ಮಾಡಲು, ಸಾಲದ ಶೂಲದಿಂದ ಕೆಳಗಿಳಿಸಲು ಮತ್ತು ಸಾಮಾಜಿಕ ಭದ್ರತೆಯನ್ನು ಒದಗಿಸಲು ಇಡೀ ದೇಶಕ್ಕೆ ಕರ್ನಾಟಕ ಮಾದರಿಯ ಆಡಳಿತದ ಅವಶ್ಯಕತೆ ಇದೆ” ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಸ್ವಾರ್ಥಕ್ಕಾಗಿ ಘೋಷಿಸಿದ ಗ್ಯಾರೆಂಟಿ ಯೋಜನೆ ಜಾರಿಯಿಂದ ಕರ್ನಾಟಕ ಸರ್ಕಾರದ ಬಳಿ ಅಭಿವೃದ್ಧಿ ಕಾರ್ಯಗಳಿಗೆ ಹಣವಿಲ್ಲ ಎಂಬ ಪ್ರಧಾನಿ ನರೇಂದ್ರ ಮೋದಿ ಅವರ ಟೀಕೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪ್ರತಿಕ್ರಿಯೆ:

Tags: CM Siddaramaiah
Previous Post

ಕುತೂಹಲ ಮೂಡಿಸಿದ ರಾಕೇಶ್‌ ಟಿಕಾಯತ್‌ ಮತ್ತು ಮುಖ್ಯಮಂತ್ರಿ ಸಿದ್ದರಾಮಯ್ಯ ಭೇಟಿ

Next Post

ಖರ್ಗೆ ಮೈಬಣ್ಣ ಅವಹೇಳನ | ಆರಗ ಜ್ಞಾನೇಂದ್ರ ವಿರುದ್ಧ ಕಾಂಗ್ರೆಸ್‌ ದೂರು

Related Posts

ರಾಜಕಾರಣಿಗಳಿಂದ ರಸ್ತೆ ತಡೆ ಮಾಡಿಸಿ ಪ್ರತಿಭಟನೆ : ಕೆರಳಿತು ಸಾರ್ವಜನಿಕರ ತಾಳ್ಮೆ..!
Top Story

ರಾಜಕಾರಣಿಗಳಿಂದ ರಸ್ತೆ ತಡೆ ಮಾಡಿಸಿ ಪ್ರತಿಭಟನೆ : ಕೆರಳಿತು ಸಾರ್ವಜನಿಕರ ತಾಳ್ಮೆ..!

by ಪ್ರತಿಧ್ವನಿ
April 22, 2026
0

ಮುಂಬೈ : ಟ್ರಾಪೀಕ್‌ ಕಿರಿ ಕಿರಿ ಅನುಭವಿಸಿದ ಮಹಿಳೆಯೊಬ್ಬಳು ಪೊಲೀಸ್‌ ಅಧಿಕಾರಿ ಹಾಗೂ ಇಲ್ಲಿನ ಸಚಿವರಿಗೆ ಖಡಕ್‌ ಕ್ಲಾಸ್‌ ತೆಗೆದುಕೊಂಡ ಘಟನೆ ನಡೆದಿದೆ. ಮಂಗಳವಾರ ವರ್ಲಿ ಪ್ರದೇಶದಲ್ಲಿ...

Read moreDetails
ಗಮನ ಸೆಳೆದ ಗದಗ ಜಿಲ್ಲಾಸ್ಪತ್ರೆ : ಬಿಸಿಲಿನ ಬೇಗೆಯಲ್ಲಿ ರೋಗಿಗಳಿ ಆಶಾಕಿರಣವಾದ ವೈದ್ಯರು, ಏನಿದು ವಿಶೇಷ..?

ಗಮನ ಸೆಳೆದ ಗದಗ ಜಿಲ್ಲಾಸ್ಪತ್ರೆ : ಬಿಸಿಲಿನ ಬೇಗೆಯಲ್ಲಿ ರೋಗಿಗಳಿ ಆಶಾಕಿರಣವಾದ ವೈದ್ಯರು, ಏನಿದು ವಿಶೇಷ..?

April 22, 2026
ಫಾರಿನ್‌ ಸ್ಟೈಲ್‌ ಲವ್‌ & ಮರ್ಡರ್‌ : ಕಿರಾತಕಿ ಪ್ರೇಮಾಳಿಂದ ಕೊಲೆ ಸ್ಫೋಟಕ ರಹಸ್ಯ ಬಯಲು..

ಫಾರಿನ್‌ ಸ್ಟೈಲ್‌ ಲವ್‌ & ಮರ್ಡರ್‌ : ಕಿರಾತಕಿ ಪ್ರೇಮಾಳಿಂದ ಕೊಲೆ ಸ್ಫೋಟಕ ರಹಸ್ಯ ಬಯಲು..

April 22, 2026
ರಾಹುಲ್‌ ಯಡವಟ್ಟಿನಿಂದ ಹೈದ್ರಾಬಾದ್‌ ಎದುರು ಶರಣಾದ ಡೆಲ್ಲಿ ಕ್ಯಾಪಿಟಲ್ಸ್..

ರಾಹುಲ್‌ ಯಡವಟ್ಟಿನಿಂದ ಹೈದ್ರಾಬಾದ್‌ ಎದುರು ಶರಣಾದ ಡೆಲ್ಲಿ ಕ್ಯಾಪಿಟಲ್ಸ್..

April 22, 2026
ಸಂವಿಧಾನದ ಅಶಯಗಳು -ಬಾಬು ಜಗಜೀವನ್ ರಾಮ್-

ಸಂವಿಧಾನದ ಅಶಯಗಳು -ಬಾಬು ಜಗಜೀವನ್ ರಾಮ್-

April 21, 2026
Next Post
ಆರಗ ಜ್ಞಾನೇಂದ್ರ

ಖರ್ಗೆ ಮೈಬಣ್ಣ ಅವಹೇಳನ | ಆರಗ ಜ್ಞಾನೇಂದ್ರ ವಿರುದ್ಧ ಕಾಂಗ್ರೆಸ್‌ ದೂರು

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada