ಉತ್ತರ ಪ್ರದೇಶದ ವಾರಾಣಸಿಯಲ್ಲಿರುವ ಜ್ಞಾನವಾಪಿ ಮಸೀದಿ ವೈಜ್ಞಾನಿಕ ಸಮೀಕ್ಷೆ ಮುಂದುವರಿಸಲು ಅಲಹಾಬಾದ್ ಹೈಕೋರ್ಟ್ ಗುರುವಾರ (ಆಗಸ್ಟ್ 3) ಸಮ್ಮತಿಸಿದೆ.
ಈ ಮೂಲಕ ದೇವಸ್ಥಾನದ ಇದ್ದ ಸ್ಥಳದಲ್ಲಿ ಮಸೀದಿಯನ್ನು ನಿರ್ಮಿಸಲಾಗಿದೆಯೇ ಎಂಬುದನ್ನು ನಿರ್ಧರಿಸಲು ಸಮೀಕ್ಷೆ ನಡೆಸುವಂತೆ ಭಾರತೀಯ ಪುರಾತತ್ವ ಸರ್ವೇಕ್ಷಣಾ ಇಲಾಖೆಗೆ (ಎಎಸ್ಐ) ವಾರಾಣಸಿ ಜಿಲ್ಲಾ ನ್ಯಾಯಾಲಯ ನೀಡಿದ್ದ ಆದೇಶವನ್ನು ಪ್ರಶ್ನಿಸಿ ಜ್ಞಾನವಾಪಿ ಮಸೀದಿ ಸಮಿತಿ ಸಲ್ಲಿಸಿದ್ದ ಅರ್ಜಿಯನ್ನು ಅಲಹಾಬಾದ್ ಹೈಕೋರ್ಟ್ ವಜಾಗೊಳಿಸಿದೆ.
ಜುಲೈ 21ರಂದು ವಾರಾಣಸಿ ಜಿಲ್ಲಾ ನ್ಯಾಯಾಲಯ ಜ್ಞಾನವಾಪಿ ಮಸೀದಿಯ ಕುರಿತಂತೆ ಆದೇಶ ಹೊರಡಿಸಿತ್ತು. ಇದನ್ನು ಪ್ರಶ್ನಿಸಿ ಅಂಜುಮನ್ ಇಂತೇಜಾಮಿಯಾ ಮಸೀದಿ ಸಮಿತಿಯು ಹೈಕೋರ್ಟ್ ಮೊರೆ ಹೋಗಿತ್ತು.
“ಜ್ಞಾನವಾಪಿ ಮಸೀದಿಯ ವೈಜಾನಿಕ ಸಮೀಕ್ಷೆ ಪ್ರಾರಂಭಿಸಲು ಅಲಹಾಬಾದ್ ಹೈಕೋರ್ಟ್ ಸೂಚಿಸಿದೆ. ಸಮೀಕ್ಷೆ ನಡೆಲು ಈಗಾಗಲೇ ಸೆಷನ್ಸ್ ನ್ಯಾಯಾಲಯ ನೀಡಿರುವ ತೀರ್ಪನ್ನು ಹೈಕೋರ್ಟ್ ಎತ್ತಿಹಿಡಿದಿದೆ””ಎಂದು ಜ್ಞಾನವಪಿ ಪ್ರಕರಣದಲ್ಲಿ ಹಿಂದೂಪರ ವಕೀಲ ಸುದ್ದಿಗಾರರಿಗೆ ತಿಳಿಸಿದರು.
ಉಭಯ ಪಕ್ಷಗಳ ವಕೀಲರ ವಾದವನ್ನು ಆಲಿಸಿದ್ದ ಮುಖ್ಯ ನ್ಯಾಯಮೂರ್ತಿ ಪ್ರಿಂಕ ದಿವಾಕರ್ ಅವರ ಪೀಠ ಆಗಸ್ಟ್ 3ಕ್ಕೆ ಆದೇಶವನ್ನು ಕಾಯ್ದಿರಿಸಿತ್ತು.
ಈ ಸುದ್ದಿ ಓದಿದ್ದೀರಾ? ಕುತೂಹಲ ಮೂಡಿಸಿದ ರಾಕೇಶ್ ಟಿಕಾಯತ್ ಮತ್ತು ಮುಖ್ಯಮಂತ್ರಿ ಸಿದ್ದರಾಮಯ್ಯ ಭೇಟಿ
ಕಾಶಿ ವಿಶ್ವನಾಥ ದೇವಾಲಯ ಪಕ್ಕದಲ್ಲಿರುವ ಜ್ಞಾನವಾಪಿ ಮಸೀದಿಯ ಕುರಿತು ಎಎಸ್ಐಗೆ ಸಮೀಕ್ಷೆ ನಡೆಸುವಂತೆ ನಿರ್ದೇಶನ ಕೋರಿ ಜುಲೈ 21ರಂದು ನಾಲ್ವರು ಹಿಂದೂ ಮಹಿಳೆಯರು ಸಲ್ಲಿಸಿದ್ದ ಅರ್ಜಿಯನ್ನು ವಾರಾಣಸಿ ಜಿಲ್ಲಾ ನ್ಯಾಯಾಲಯ ಪುರಸ್ಕರಿಸಿತ್ತು. ಮಸೀದಿ ಸಂಕೀರ್ಣದಲ್ಲಿ ಎಎಸ್ಐ ಸಮೀಕ್ಷೆ ನಡೆಸಲು ವಾರಾಣಸಿ ಸೆಷನ್ಸ್ ನ್ಯಾಯಾಲಯ ಆದೇಶಿಸಿತ್ತು.
ಜುಲೈ 24 ರಂದು ಸಮೀಕ್ಷೆ ಆರಂಭವಾಗಿತ್ತು. ಆದರೆ ಕೆಲವು ಗಂಟೆಗಳಲ್ಲಿ ಮಸೀದಿ ಸಮಿತಿಯ ಮನವಿ ಮೇರೆಗೆ ಸುಪ್ರೀಂ ಕೋರ್ಟ್ ಸಮೀಕ್ಷೆಗೆ ತಡೆ ನೀಡಿತ್ತು.