ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಂಸತ್ ಭವನದಲ್ಲಿ ಗುರುವಾರ (ಆಗಸ್ಟ್ ) ಪ್ರಧಾನಿ ನರೇಂದ್ರ ಮೋದಿ ಅವರನ್ನು ಸೌಹಾರ್ದಯುತವಾಗಿ ಭೇಟಿ ಮಾಡಿ ಮಾತುಕತೆ ನಡೆಸಿದ್ದಾರೆ.
ಸಿದ್ದರಾಮಯ್ಯ ಅವರು ಎರಡನೇ ಸಲ ಮುಖ್ಯಮಂತ್ರಿಯಾದ ಬಳಿಕ ಇದೇ ಮೊದಲ ಬಾರಿಗೆ ಪ್ರಧಾನಿ ಮೋದಿ ಅವರನ್ನು ಭೇಟಿಯಾಗಿದ್ದಾರೆ.
ಭೇಟಿ ವೇಳೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ವಿವಿಧ ಯೋಜನೆಗಳಡಿ ಕೇಂದ್ರದಿಂದ ರಾಜ್ಯಕ್ಕೆ ಬರಬೇಕಾದ ಬಾಕಿ ಅನುದಾನ ಬಿಡುಗಡೆ ಬಗ್ಗೆ ಪ್ರಧಾನಿ ಮೋದಿ ಅವರ ಬಳಿ ಚರ್ಚೆ ನಡೆಸಿದ್ದಾರೆ ಎಂದು ಮಾಧ್ಯಮಗಳು ವರದಿ ಮಾಡಿವೆ.
ಈ ಸುದ್ದಿ ಓದಿದ್ದೀರಾ? ಗ್ಯಾರೆಂಟಿ ಯೋಜನೆಗಳ ಬಗ್ಗೆ ಟೀಕಿಸಿದ ಪ್ರಧಾನಿ ಮೋದಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ತಿರುಗೇಟು
ಇದೇ ವೇಳೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಕ್ಷಣಾ ಸಚಿವರಾದ ರಾಜನಾಥ್ ಸಿಂಗ್ ಅವರನ್ನು ಭೇಟಿ ಮಾಡಿ ಮೈಸೂರು ದಸರಾ ಮಹೋತ್ಸವದಲ್ಲಿ ಏರ್ ಶೋ ನಡೆಸಲು ಮನವಿ ಮಾಡಿದರು.