• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, May 28, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಇದೀಗ

ಸಂಸತ್ತಿಗೆ ರಾಹುಲ್‌ ಗಾಂಧಿ ಆಗಮನ | ಕಾಂಗ್ರೆಸ್‌, ಪ್ರತಿಪಕ್ಷಗಳ ಸ್ವಾಗತ

Any Mind by Any Mind
August 7, 2023
in ಇದೀಗ, ದೇಶ, ರಾಜಕೀಯ
0
ರಾಹುಲ್‌ ಗಾಂಧಿ
Share on WhatsAppShare on FacebookShare on Telegram

ಲೋಕಸಭೆ ಸದಸ್ಯತ್ವ ಅನರ್ಹತೆಯನ್ನು ಲೋಕಸಭಾ ಸಚಿವಾಲಯ ಸೋಮವಾರ (ಆಗಸ್ಟ್ 7) ರದ್ದುಪಡಿಸಿದ ನಂತರ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಸಂಸತ್ತಿಗೆ ಆಗಮಿಸಿದ್ದಾರೆ.

ADVERTISEMENT

ಅವರಿಗೆ ಕಾಂಗ್ರೆಸ್ ಮತ್ತು ಇತರ ವಿರೋಧ ಪಕ್ಷದ ಸಂಸದರು ಆತ್ಮೀಯ ಸ್ವಾಗತ ಕೋರಿದ್ದಾರೆ.

ಮಧ್ಯಾಹ್ನ 12 ಗಂಟೆ ಸುಮಾರಿಗೆ ಸಂಸತ್ ಭವನಕ್ಕೆ ಆಗಮಿಸಿದ ರಾಹುಲ್ ಗಾಂಧಿ, ನೇರವಾಗಿ ಮಹಾತ್ಮ ಗಾಂಧಿ ಪ್ರತಿಮೆ ಬಳಿಗೆ ತೆರಳಿ ಪುಷ್ಪ ನಮನ ಸಲ್ಲಿಸಿದರು.

ಸಂಸತ್ತಿನ ಗೇಟ್ ನಂಬರ್ ಒಂದರಲ್ಲಿ ಅವರನ್ನು ಸ್ವಾಗತಿಸಿದ ಕಾಂಗ್ರೆಸ್ ಸಂಸದರು ಮತ್ತು ಇಂಡಿಯಾ ಒಕ್ಕೂಟದ ವಿರೋಧ ಪಕ್ಷದ ಸದಸ್ಯರು ಘೋಷಣೆಗಳನ್ನು ಕೂಗಿದರು.

ಮಾನನಷ್ಟ ಪ್ರಕರಣದಲ್ಲಿ ರಾಹುಲ್ ಗಾಂಧಿ ಅವರನ್ನು ತಪ್ಪಿತಸ್ಥ ಎಂದು ಆದೇಶಿಸಿದ್ದ ಗುಜರಾತ್ನ ಸೂರತ್ ನ್ಯಾಯಾಲಯ, ಮಾರ್ಚ್ 23 ರಂದು ರಾಹುಲ್‌ ಗಾಂಧಿ ಅವರಿಗೆ ಎರಡು ವರ್ಷ ಜೈಲು ಶಿಕ್ಷೆ ವಿಧಿಸಿತ್ತು. ಇದಾದ ಮರುದಿನ ಅವರನ್ನು ಲೋಕಸಭೆಯ ಸದಸ್ಯತ್ವದಿಂದ ಅನರ್ಹಗೊಳಿಸಲಾಗಿತ್ತು.

#WATCH | Congress MP Rahul Gandhi pays tributes to Mahatma Gandhi at the Parliament House.

Lok Sabha Secretariat restored Rahul Gandhi's Lok Sabha membership today after Supreme Court stayed his conviction in the ‘Modi’ surname remark case. pic.twitter.com/jU9bWXG6UL

— ANI (@ANI) August 7, 2023

ಲೋಕಸಭೆ ಸದಸ್ಯತ್ವದಿಂದ ಅನರ್ಹಗೊಂಡ ನಾಲ್ಕು ತಿಂಗಳ ನಂತರ ರಾಹುಲ್‌ ಗಾಂಧಿ ಅವರು ಮತ್ತೆ ಸಂಸತ್‌ ಪ್ರವೇಶಿಸಿದ್ದಾರೆ.

#WATCH | Congress Parliamentary Party Chairperson Sonia Gandhi and MP Rahul Gandhi at the Parliament in Delhi.

Lok Sabha Secretariat today restored Rahul Gandhi's Lok Sabha membership. pic.twitter.com/2MjBSybUEb

— ANI (@ANI) August 7, 2023

ರಾಹುಲ್ ಗಾಂಧಿ ಅವರಿಗೆ ಸೂರತ್ ನ್ಯಾಯಲಯವು ವಿಧಿಸಿದ್ದ 2 ವರ್ಷಗಳ ಜೈಲು ಶಿಕ್ಷೆಗೆ ಸುಪ್ರೀಂ ಕೋರ್ಟ್ ಆಗಸ್ಟ್‌ 4 ರಂದು ತಡೆಯಾಜ್ಞೆ ವಿಧಿಸಿದೆ. ಈ ಹಿನ್ನೆಲೆಯಲ್ಲಿ ರಾಹುಲ್ ಅವರ ಸಂಸದ ಸ್ಥಾನ ಅನರ್ಹತೆಯನ್ನು ತೆರವು ಮಾಡುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ. ಈ ಬಗ್ಗೆ ಸ್ಪೀಕರ್ ಸೋಮವಾರ ನಿರ್ಧಾರ ಕೈಗೊಳ್ಳಲಿದ್ದಾರೆ.

#WATCH | Congress MP Rahul Gandhi arrives at the Parliament.

Lok Sabha Secretariat today restored his Lok Sabha membership after Supreme Court stayed his conviction in the ‘Modi’ surname remark case. pic.twitter.com/fuYd3b2PeD

— ANI (@ANI) August 7, 2023

ಸುಪ್ರೀಂ ಕೋರ್ಟ್‌ ತೀರ್ಪಿನ ನಂತರ ಲೋಕಸಭೆ ಸಚಿವಾಲಯ ಹೇಳಿಕೆ ಬಿಡುಗಡೆ ಮಾಡಿದ್ದು, ರಾಹುಲ್ ಗಾಂಧಿ ಅವರ ಸದಸ್ಯತ್ವದ ಅನರ್ಹತೆಯನ್ನು ಹಿಂಪಡೆದಿದ್ದು, ಸದಸ್ಯತ್ವವನ್ನು ಮರುಸ್ಥಾಪಿಸಲಾಗಿದೆ ಎಂದು ತಿಳಿಸಿದೆ.

ಈ ಸುದ್ದಿ ಓದಿದ್ದೀರಾ? ಅಯೋಧ್ಯೆ ರಾಮ ಮಂದಿರಕ್ಕೆ 400 ಕೆ.ಜಿ ಬೀಗ..!

ಸೂರತ್ ನ್ಯಾಯಾಲಯದ ಆದೇಶವನ್ನು ಪ್ರಶ್ನಿಸಿ ರಾಹುಲ್ ಅವರು ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು.

ರಾಹುಲ್ ಗಾಂಧಿ ಕೇರಳದ ವಯನಾಡ್ ಲೋಕಸಭಾ ಕ್ಷೇತ್ರದಿಂದ ಸಂಸತ್ ಪ್ರವೇಶಿಸಿದ್ದರು.

Tags: Lok SabhaParliamentRahul Gandhisupreme courtಕಾಂಗ್ರೆಸ್‌ರಾಹುಲ್‌ ಗಾಂಧಿಸಂಸತ್ತು
Previous Post

ಸಚಿವ ಚಲುವರಾಯಸ್ವಾಮಿ ವಿರುದ್ಧ ಲಂಚ ಆರೋಪ | ರಾಜ್ಯಪಾಲರಿಗೆ ದೂರು

Next Post

ದೆಹಲಿ | ಏಮ್ಸ್‌ ತುರ್ತು ನಿಗಾ ಘಟಕದಲ್ಲಿ ಅಗ್ನಿ ದುರಂತ ; ರೋಗಿಗಳ ಸ್ಥಳಾಂತರ

Related Posts

ಮೇ 28ರಂದೇ ಸಿಎಂ ಸ್ಥಾನ ತ್ಯಜಿಸುತ್ತಾರಾ ಸಿದ್ದರಾಮಯ್ಯ..? : ನೂತನ ಸಂಪುಟ ಹೇಗಿರಲಿದೆ..?
ರಾಜಕೀಯ

ರಾಜ್ಯಸಭೆ ಸ್ಥಾನಕ್ಕೆ ಸಿದ್ದರಾಮಯ್ಯ ನಿರಾಸಕ್ತಿ? ರಾಜ್ಯ ರಾಜಕೀಯದಲ್ಲೇ ಮುಂದುವರಿಯಲು ಸಿಎಂ ಮನಸ್ಸು!

by ಪ್ರತಿಧ್ವನಿ
May 28, 2026
0

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸದ್ಯ ರಾಜ್ಯಸಭೆ ಸ್ಥಾನ ಸ್ವೀಕರಿಸಲು ಆಸಕ್ತಿ ತೋರಿಲ್ಲ ಎಂದು ಮೂಲಗಳು ತಿಳಿಸಿವೆ. ಮುಖ್ಯಮಂತ್ರಿ ಸ್ಥಾನ ತ್ಯಜಿಸಿ ಉಪಮುಖ್ಯಮಂತ್ರಿ ಡಿ‌ಕೆ ಶಿವಕುಮಾರ್ ಅವರಿಗೆ...

Read moreDetails
ಸಿದ್ದರಾಮಯ್ಯ ರಾಜೀನಾಮೆ ಸುದ್ದಿಗೆ ಬಿಜೆಪಿ ನಾಯಕರು‌ ಹೇಳಿದ್ದೇನು ?

ಸಿದ್ದರಾಮಯ್ಯ ರಾಜೀನಾಮೆ ಸುದ್ದಿಗೆ ಬಿಜೆಪಿ ನಾಯಕರು‌ ಹೇಳಿದ್ದೇನು ?

May 28, 2026
ಸಿಎಂ ರಾಜೀನಾಮೆಗೂ ಮುನ್ನ ರಾಜ್ಯಪಾಲರ ದಿಢೀರ್ ಮುಂಬೈ ಪ್ರವಾಸ! ರಾಜ್ಯ ರಾಜಕಾರಣದಲ್ಲಿ ಭಾರಿ ಕುತೂಹಲ

ಸಿಎಂ ರಾಜೀನಾಮೆಗೂ ಮುನ್ನ ರಾಜ್ಯಪಾಲರ ದಿಢೀರ್ ಮುಂಬೈ ಪ್ರವಾಸ! ರಾಜ್ಯ ರಾಜಕಾರಣದಲ್ಲಿ ಭಾರಿ ಕುತೂಹಲ

May 28, 2026
ಬೈಜೂಸ್ ಸಂಸ್ಥಾಪಕ ಬೈಜು ರವೀಂದ್ರನ್‌ಗೆ 6 ತಿಂಗಳ ಜೈಲು ಶಿಕ್ಷೆ! ಮಾಡಿದ ಅಪರಾಧ ಏನು ?

ಸಿಎಂ ಬದಲಾವಣೆ ಸದ್ಯಕ್ಕಿಲ್ಲ: ಸುರ್ಜೇವಾಲಾ ಸ್ಪಷ್ಟನೆ!

May 27, 2026
ನುಡಿದಂತೆ ನಡೆದ ಹೆಮ್ಮೆ ನಮಗಿದೆ : ರಾಜೀನಾಮೆಯ ಸುಳಿವು ನೀಡಿತಾ ಸಿದ್ದರಾಮಯ್ಯ ಪೋಸ್ಟ್‌..? :

ನುಡಿದಂತೆ ನಡೆದ ಹೆಮ್ಮೆ ನಮಗಿದೆ : ರಾಜೀನಾಮೆಯ ಸುಳಿವು ನೀಡಿತಾ ಸಿದ್ದರಾಮಯ್ಯ ಪೋಸ್ಟ್‌..? :

May 27, 2026
Next Post
ದೆಹಲಿ

ದೆಹಲಿ | ಏಮ್ಸ್‌ ತುರ್ತು ನಿಗಾ ಘಟಕದಲ್ಲಿ ಅಗ್ನಿ ದುರಂತ ; ರೋಗಿಗಳ ಸ್ಥಳಾಂತರ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada