• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Tuesday, April 14, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಅಂಕಣ

ಸರ್ಕಾರಕ್ಕೆ ಸಂಕಷ್ಟ ತಂದಿಟ್ಟ ಕೃಷಿ ಅಧಿಕಾರಿಗಳ ಪತ್ರ.. ಚಲುವರಾಯಸ್ವಾಮಿ ನಿರಾಕರಣೆ..

ಕೃಷ್ಣ ಮಣಿ by ಕೃಷ್ಣ ಮಣಿ
August 7, 2023
in ಅಂಕಣ, ಅಭಿಮತ
0
ಸರ್ಕಾರಕ್ಕೆ ಸಂಕಷ್ಟ ತಂದಿಟ್ಟ ಕೃಷಿ ಅಧಿಕಾರಿಗಳ ಪತ್ರ.. ಚಲುವರಾಯಸ್ವಾಮಿ ನಿರಾಕರಣೆ..
Share on WhatsAppShare on FacebookShare on Telegram

ರಾಜ್ಯ ಸರ್ಕಾರದ ಕೃಷಿ ಸಚಿವ ಎನ್​ ಚಲುವರಾಯಸ್ವಾಮಿ ವಿರುದ್ದ ಲಂಚದ ಆರೋಪ ಕೇಳಿಬಂದಿದೆ. ಸಚಿವರ ವಿರುದ್ಧ ಲಂಚದ ಆರೋಪ ರಾಜಭವನ‌ ಅಂಗಳಕ್ಕೆ ತಲುಪಿದೆ. ಸ್ವತಃ ಮಂಡ್ಯ ಜಿಲ್ಲೆಯ ಎಲ್ಲಾ ತಾಲೂಕುಗಳ ಕೃಷಿ ಇಲಾಖೆ ಸಹಾಯಕ ನಿರ್ದೇಶಕರು ದೂರು ನೀಡಿದ್ದಾರೆ ಎನ್ನಲಾಲಾಗಿದೆ. ರಾಜ್ಯಪಾಲರಿಗೆ ಸಲ್ಲಿಕೆಯಾಗಿದೆ ಎನ್ನಲಾಗಿರುವ ದೂರಿನಲ್ಲಿ ಮಂಡ್ಯ ಜಿಲ್ಲೆಯ 7 ತಾಲ್ಲೂಕಿನ ಕೃಷಿ ಸಹಾಯಕ ನಿರ್ದೇಶಕರ ಹೆಸರು ಉಲ್ಲೇಖ ಆಗಿದೆ. ಪ್ರತಿ ನಿರ್ದೇಶಕರು ಎಷ್ಟು ಹಣ ನೀಡಬೇಕು..? ಎಂದು ದೂರಿನಲ್ಲಿ ನಮೂದು ಮಾಡಲಾಗಿದೆ. ಜಿಲ್ಲೆಯ ಎಲ್ಲಾ ಸಹಾಯಕ ನಿರ್ದೇಶಕರ ಸಹಿ ಇರುವ ದೂರನ್ನು ರಾಜ್ಯಪಾಲರಿಗೆ ಕಳುಹಿಸಲಾಗಿದ್ದು, ಕೃಷಿ ಇಲಾಖೆಯ ಸಿಬ್ಬಂದಿ ರಮೇಶ್ ಎಂಬುವವರ ಫ್ರಮ್ ಅಡ್ರಸ್ ಅನ್ನು ಎನ್ವಲಪ್ ಕವರ್ ಮೇಲೆ ಬರೆಯಲಾಗಿದೆ.

ADVERTISEMENT

ಅಧಿಕಾರಿಗಳಿಂದ 6 ರಿಂದ 8 ಲಕ್ಷ ಹಣಕ್ಕೆ ಡಿಮ್ಯಾಂಡ್​..!

ರಾಜಭವನದ ಕದ ತಟ್ಟಿರುವ ಅಧಿಕಾರಿಗಳು ಕೃಷಿ ಸಚಿವ ಚಲುವರಾಯಸ್ವಾಮಿ ವಿರುದ್ಧ ಲಂಚ ಬೇಡಿಕೆ ಆರೋಪ ಮಾಡಿದ್ದಾರೆ. 6 ರಿಂದ 8 ಲಕ್ಷ ರೂಪಾಯಿ ನೀಡುವಂತೆ ಕೃಷಿ ಸಚಿವ ಚಲುವರಾಯಸ್ವಾಮಿ ಒತ್ತಡ ಹಾಕಿರುವ ಬಗ್ಗೆ ಪತ್ರದಲ್ಲಿ ಆರೋಪ ಮಾಡಿದ್ದಾರೆ. ಲಂಚದ ಅನಿಷ್ಟ ಪದ್ದತಿಗೆ ಕಡಿವಾಣ ಹಾಕದಿದ್ದರೆ ಅಧಿಕಾರಿಗಳು ಕುಟುಂಬ ಸಮೇತ ವಿಷ ಕುಡಿಯುವುದಾಗಿ ದೂರಿನ ಪ್ರತಿಯಲ್ಲಿ ಉಲ್ಲೇಖ ಮಾಡಲಾಗಿದೆ. ರಾಜ್ಯಪಾಲರ ಕಚೇರಿ‌ಯಿಂದ ಸರ್ಕಾರಕ್ಕೆ ಈ ಬಗ್ಗೆ ಪತ್ರ ಬರೆದಿದ್ದು, ರಾಜ್ಯಪಾಲರ ಅಧೀನ‌ ಕಾರ್ಯದರ್ಶಿ ಸರ್ಕಾರದ ಮುಖ್ಯಕಾರ್ಯದರ್ಶಿಗಳಿಗೆ ಪತ್ರ ಬರೆದಿದ್ದು, ಲಂಚದ ಬಗ್ಗೆ ಅಧಿಕಾರಿಗಳು ಬರೆದಿರುವ ಪತ್ರದ ಬಗ್ಗೆ ಕ್ರಮವಹಿಸುವಂತೆ ಮುಖ್ಯಕಾರ್ಯದರ್ಶಿಗೆ ರಾಜಭನದಿಂದ ಪತ್ರದ ಬರೆದು ಸೂಚನೆ ನೀಡಲಾಗಿದೆ. ಇದೀಗ ರಾಜ್ಯಪಾಲರ ಕಚೇರಿಯಿಂದ ಪತ್ರ ಬಂದಿರುವ ಹಿನ್ನೆಲೆಯಲ್ಲಿ ಸರ್ಕಾರ ತನಿಖೆ ನಡೆಸಬೇಕಾದ ಅನಿವಾರ್ಯತೆಗೆ ಸಿಲುಕಿಕೊಂಡಿದೆ.

ಅದೊಂದು ಫೇಕ್​ ಲೆಟರ್​ ಎಂದು ಷರಾ ಬರೆದ ಸಚಿವರು..!

ಕೃಷಿ ಇಲಾಖೆ ADAಗಳು ಸಚಿವ ಚಲುವರಾಯಸ್ವಾಮಿ ವಿರುದ್ದ ದೂರು ನೀಡಿರುವ ಪ್ರಕರಣದ ಬಗ್ಗೆ ಸಚಿವರು ಮಾತನಾಡಿದ್ದು, ಆ ಲೆಟರ್ ಫೇಕ್ ಲೆಟರ್ ಎಂದಿದ್ದಾರೆ ಕೃಷಿ ಸಚಿವ ಚಲುವರಾಯಸ್ವಾಮಿ. ಮಂಡ್ಯದಲ್ಲಿ ಮಾತನಾಡಿರುವ ಕೃಷಿ ಸಚಿವ ಚಲುವರಾಯಸ್ವಾಮಿ, ನಾನು ಆ ಪತ್ರದ ವಿಚಾರವಾಗಿ ಕೃಷಿ ಇಲಾಖೆ ಜೆಡಿ ಜೊತೆ ಮಾತನಾಡಿದ್ದೇನೆ. ಆ ರೀತಿ ಯಾರು ಕೂಡ ದೂರು ನೀಡಿಲ್ಲ ಎಂದು ನನಗೆ ಮಾಹಿತಿ ನೀಡಿದ್ದಾರೆ. ಬಹಳ ಜನ ಈ ರೀತಿ ವಿಚಾರಗಳನ್ನ ಹುಡುಕಿ ಹುಡುಕಿ ನನ್ನ ವಿರುದ್ಧ ಕೆಲಸ ಮಾಡ್ತಿದ್ದಾರೆ. ನನ್ನ ಇಲಾಖೆಯ ಕಾರ್ಯದರ್ಶಿಗಳಿಗೂ ತನಿಖೆ ಮಾಡಲು ಹೇಳುತ್ತೇನೆ. ಮೊದಲು ಆ ಲೆಟರ್ ಬರೆದಿರೋದು ಸತ್ಯವಾ..? ಅಥವಾ ಫೇಕಾ..? ಅಂತ ವಿಚಾರಿಸಿ ನಂತರ ತನಿಖೆ ಮಾಡಿಸ್ತೇವೆ. ಈ ರೀತಿ ನನ್ನ ವಿರುದ್ದ ಪಿತೂರಿ ಮಾಡುತ್ತಿದ್ರೆ ನಾನು ಹೆಚ್ಚು ಪ್ರಕಾಶಮಾನವಾಗ್ತಿನಿ ಎಂದಿದ್ದಾರೆ. ರಾಜ್ಯದಲ್ಲೇ ನಾನು ಆ ರೀತಿ ಯಾರ ಹತ್ರನೂ ನಡೆದುಕೊಂಡಿಲ್ಲ, ಇನ್ನು ನನ್ನ ಜಿಲ್ಲೆಯಲ್ಲಿ ಹಾಗೆ ನಡೆದುಕೊಳ್ತಿನಾ.? ಎಂದು ಮರು ಪ್ರಶ್ನೆ ಮಾಡಿದ್ದಾರೆ.

ಈ ಸುದ್ದಿಯನ್ನೂ ಓದಿ ; ಪಕ್ಷ ಸಂಘಟನೆಗಾಗಿ ಜೆಡಿಎಸ್ ಸಂಘಟಿತ ಹೋರಾಟ: ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ

ಮಂಡ್ಯದಲ್ಲಿ ಕಾಂಗ್ರೆಸ್​ನಿಂದಲೇ ಪತ್ರದ ಬಗ್ಗೆ ಎಸ್​ಪಿಗೆ ದೂರು..!

ಮಂಡ್ಯ ಜಿಲ್ಲೆಯ ಕೃಷಿ ಅಧಿಕಾರಿಗಳು ಕೃಷಿ ಸಚಿವ ಚಲುವರಾಯಸ್ವಾಮಿ ವಿರುದ್ಧ ರಾಜ್ಯಪಾಲರಿಗೆ ದೂರು ನೀಡಿರುವ ಪ್ರಕರಣದಲ್ಲಿ ಕಾಂಗ್ರೆಸ್​ ಸ್ವಯಂಪ್ರೇರಿತವಾಗಿ ದೂರು ನೀಡಿದೆ. ಸುಳ್ಳು ದೂರು ಪತ್ರ ನೀಡಲಾಗಿದೆ ಎಂದು ಮಂಡ್ಯ ಎಸ್​ಪಿಗೆ ಮಂಡ್ಯ ಜಿಲ್ಲೆಯ ಶಾಸಕರು ದೂರು ಸಲ್ಲಿಸಿದ್ದಾರೆ. ಪ್ರಕರಣದ ಬಗ್ಗೆ ತನಿಖೆ ನಡೆಸಿ ಎಂದು ಮಂಡ್ಯ ಎಸ್​ಪಿಗೆ ಲಿಖಿತ ದೂರು ನೀಡಿದ್ದು, ಮಂಡ್ಯ ಶಾಸಕ ರವಿಕುಮಾರ್ ಗೌಡ, ಶಾಸಕ ರಮೇಶ್ ಬಂಡಿಸಿದ್ದೇಗೌಡ, ಎಂಎಲ್‌ಸಿ ಮಧು ಜಿ ಮಾದೇಗೌಡ, ಎಂಎಲ್‌ಸಿ ದಿನೇಶ್ ಗೂಳಿ ಗೌಡ ತಪ್ಪಿತಸ್ಥರ ವಿರುದ್ದ ಕ್ರಮ ಕೈಗೊಳ್ಳುವಂತೆ ಆಗ್ರಹ ಮಾಡಿದ್ದಾರೆ. ಕೃಷಿ ಅಧಿಕಾರಿಗಳು ರಾಜ್ಯಪಾಲರಿಗೆ ದೂರು ನೀಡಿದ ವಿಚಾರದ ಬಗ್ಗೆ ಡಿಸಿಎಂ ಡಿ.ಕೆ.ಶಿವಕುಮಾರ್ ಮಾತನಾಡಿದ್ದು, ತನಿಖೆ ಮಾಡಿಸೋಣ ಬಿಡಿ, ಪಾಪ ಅವರಿಗೆ ಸಹಿಸಿಕೊಳ್ಳಲು ಆಗ್ತಿಲ್ಲ. ನಾವು ಏಳಕ್ಕೆ ಆರು ಗೆದ್ದಿದ್ದೀವಲ್ಲ ಅದಕ್ಕೆ ಸಹಿಸಿಕೊಳ್ಳಲು ಆಗ್ತಿಲ್ಲ, ಹೊಟ್ಟೆಕಿಚ್ಚು ಜಲಸಿಗೆ ಅಸೂಯೆಗೆ ಮದ್ದಿಲ್ಲ ಎಂದು ಜೆಡಿಎಸ್​ ಕಡೆಗೆ ಬೊಟ್ಟು ಮಾಡಿದ್ದಾರೆ. ಆದರೆ ಕಾಂಗ್ರೆಸ್​ ಸರ್ಕಾರಕ್ಕೆ ಮುಜುಗರ ತಂದಿಟ್ಟಿದೆ ಪತ್ರ ಅನ್ನೋದು ಮಾತ್ರ ಸತ್ಯ.

ಕೃಷ್ಣಮಣಿ

Tags: JDSKarnatakaKarnataka PoliticsN Chaluvaraya Swamy
Previous Post

ಪಕ್ಷ ಸಂಘಟನೆಗಾಗಿ ಜೆಡಿಎಸ್ ಸಂಘಟಿತ ಹೋರಾಟ: ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ

Next Post

ವಿಜಯ್​ ರಾಘವೇಂದ್ರ ಪತ್ನಿ ಸಾವಿಗೆ ಕಾರಣವಾದ ಅಂಶಗಳು ಏನೇನು..?

Related Posts

“SIR” ಹೆಸರಲ್ಲಿ ಮತದಾನದ ಹಕ್ಕನ್ನು ಕಿತ್ತುಕೊಳ್ಳುವುದು ಒಪ್ಪಲು ಸಾಧ್ಯವಿಲ್ಲ : ಚುನಾವಣಾ ಆಯೋಗಕ್ಕೆ ಸುಪ್ರೀಂ ಚಾಟಿ :
Top Story

“SIR” ಹೆಸರಲ್ಲಿ ಮತದಾನದ ಹಕ್ಕನ್ನು ಕಿತ್ತುಕೊಳ್ಳುವುದು ಒಪ್ಪಲು ಸಾಧ್ಯವಿಲ್ಲ : ಚುನಾವಣಾ ಆಯೋಗಕ್ಕೆ ಸುಪ್ರೀಂ ಚಾಟಿ :

by ಪ್ರತಿಧ್ವನಿ
April 14, 2026
0

ಬೆಂಗಳೂರು : ಪಶ್ಚಿಮ ಬಂಗಾಳದಲ್ಲಿ 91 ಲಕ್ಷ ಮತದಾರರನ್ನು ಪಟ್ಟಿಯಿಂದ ಕೈ ಬಿಟ್ಟಿರುವುದರ ಕುರಿತು ಸುಪ್ರೀಂಕೋರ್ಟ್ ಈ ಪ್ರಮಾಣದಲ್ಲಿ ಮತದಾನದ ಹಕ್ಕನ್ನು ಕಿತ್ತುಕೊಳ್ಳುವುದನ್ನು ಒಪ್ಪಲು ಸಾಧ್ಯವಿಲ್ಲ. ಚುನಾವಣೆಗಳ...

Read moreDetails
ಆಚರಣೆ ಸಂಭ್ರಮದ ನಡುವೆ ಅಂಬೇಡ್ಕರ್‌ ಎಲ್ಲಿದ್ದಾರೆ ?

ಆಚರಣೆ ಸಂಭ್ರಮದ ನಡುವೆ ಅಂಬೇಡ್ಕರ್‌ ಎಲ್ಲಿದ್ದಾರೆ ?

April 14, 2026
ಒಳದನಿಗೆ ಜೀವತುಂಬಿದ ʼ ಪ್ರತಿಧ್ವನಿ ʼ ಯೊಡನೆ- ನಾ ದಿವಾಕರ  ಲೇಖನ

ಒಳದನಿಗೆ ಜೀವತುಂಬಿದ ʼ ಪ್ರತಿಧ್ವನಿ ʼ ಯೊಡನೆ- ನಾ ದಿವಾಕರ  ಲೇಖನ

April 13, 2026
ಆಚರಣೆ ಸಂಭ್ರಮದ ನಡುವೆ ಅಂಬೇಡ್ಕರ್ ಎಲ್ಲಿದ್ದಾರೆ ?

ಆಚರಣೆ ಸಂಭ್ರಮದ ನಡುವೆ ಅಂಬೇಡ್ಕರ್ ಎಲ್ಲಿದ್ದಾರೆ ?

April 13, 2026
ಶಿಕ್ಷಣೋದ್ಯಮಕ್ಕೆ ಶಿಕ್ಷಣಾರ್ಥಿಗಳೇ ಸರಕುಗಳು- ನಾ ದಿವಾಕರ ಲೇಖನ

ಶಿಕ್ಷಣೋದ್ಯಮಕ್ಕೆ ಶಿಕ್ಷಣಾರ್ಥಿಗಳೇ ಸರಕುಗಳು- ನಾ ದಿವಾಕರ ಲೇಖನ

April 12, 2026
Next Post
ವಿಜಯ್​ ರಾಘವೇಂದ್ರ ಪತ್ನಿ ಸಾವಿಗೆ ಕಾರಣವಾದ ಅಂಶಗಳು ಏನೇನು..?

ವಿಜಯ್​ ರಾಘವೇಂದ್ರ ಪತ್ನಿ ಸಾವಿಗೆ ಕಾರಣವಾದ ಅಂಶಗಳು ಏನೇನು..?

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada