• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Tuesday, April 14, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಇದೀಗ

ಅಧಿಕಾರಿಗಳ ವರ್ಗಾವಣೆಯಲ್ಲಿ ಸಿಎಂ ಸಿದ್ದರಾಮಯ್ಯ ಟಿಕ್ಕುಗಳ ಕಾರುಭಾರು: ಎಚ್‌.ಡಿ.ಕುಮಾರಸ್ವಾಮಿ ಲೇವಡಿ

ಪ್ರತಿಧ್ವನಿ by ಪ್ರತಿಧ್ವನಿ
August 8, 2023
in ಇದೀಗ, ಕರ್ನಾಟಕ, ರಾಜಕೀಯ
0
ಎಚ್‌.ಡಿ.ಕುಮಾರಸ್ವಾಮಿ
Share on WhatsAppShare on FacebookShare on Telegram

ವಸೂಲಿ ಆರೋಪದ ಬಗ್ಗೆ ಅಧಿಕಾರಿಗಳು ಕೃಷಿ ಸಚಿವ ಚಲುವರಾಯಸ್ವಾಮಿ ವಿರುದ್ಧ ರಾಜ್ಯಪಾಲರಿಗೆ ಬರೆದಿರುವ ದೂರಿನ ಪತ್ರ ಈಗ ರಾಜಕೀಯ ಕೆಸರೆರಚಾಟಕ್ಕೆ ಕಾರಣವಾಗಿದ್ದು, ಮಾಜಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಮಂಗಳವಾರ (ಆಗಸ್ಟ್‌ 8) ಟೀಕಿಸಿದ್ದಾರೆ.

ADVERTISEMENT

ಈ ಬಗ್ಗೆ ಸರಣಿ ಟ್ವೀಟ್‌ ಮಾಡಿರುವ ಕುಮಾರಸ್ವಾಮಿ ಅವರು, “ಅಧಿಕಾರಿಗಳ ವರ್ಗಾವಣೆಗೆ ಟಿಕ್ಕುಗಳ ಮೂಲಕ ಭ್ರಷ್ಟಾಚಾರಕ್ಕೆ ಬೆಂಬಲ ನೀಡುತ್ತಿದ್ದಾರೆ. ವರ್ಗಾವಣೆಗೆ ನಿಮ್ಮ ಟಿಕ್ಕುಗಳ ಲೆಕ್ಕ ಹೇಳಬೇಕಾ ಟಿಕ್‌ ಟಿಕ್‌ ಸಿದ್ಧರಾಮನಯ್ಯನವರೇ?” ಎಂದು ಲೇವಡಿ ಮಾಡಿದ್ದಾರೆ.

ಮಂತ್ರಿಗಳ ಮಾನಗೇಡಿ ಕೃತ್ಯಗಳನ್ನೂ ಸಮರ್ಥನೆ ಮಾಡಿಕೊಳ್ಳುವ ಲಜ್ಜೆಗೇಡಿ ಮುಖ್ಯಮಂತ್ರಿ ಈ ರಾಜ್ಯಕ್ಕೆ ವಕ್ಕರಿಸಿದ್ದಾರೆ!! ಸಚಿವರ ಸುಲಿಗೆಯನ್ನೇ ಸಿಗ್ಗಿಲ್ಲದೆ ಸಮರ್ಥನೆ ಮಾಡಿಕೊಳ್ಳುವ 'ಸಿದ್ದಕಲೆ' ಅಸಹ್ಯ ಮತ್ತು ವಾಕರಿಕೆ ತರಿಸುತ್ತಿದೆ. 1/5#YstTax #CashForPosting

— ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy) August 8, 2023

ನಿಮ್ಮ ಸಚಿವರ ವಿರುದ್ಧ ನಿಮ್ಮ @INCKarnataka ಶಾಸಕರೇ ಬರೆದ ಪತ್ರವನ್ನೇ ನಕಲಿ ಎಂದು ಬಿಂಬಿಸಿದ 'ನಕಲಿರಾಮ'ನ ಉಪ್ಪುಹುಳಿ ಖಾರದ ಬಗ್ಗೆ ನನಗೆ ಗೊತ್ತಿಲ್ಲದ್ದೇನಲ್ಲ. ಶಾಸಕಾಂಗ ಪಕ್ಷದ ಸಭೆಯಲ್ಲಿ ಶಾಸಕರು ಉಗಿದು ಉಪ್ಪಾಕಿದ ಮೇಲೆ ಆ ನಕಲಿ ಪತ್ರ 'ಅಸಲಿ'ಯಾದ ಕಥೆಯ ಹಕೀಕತ್ತು ಏನಿರಬಹುದು ಸಿಎಂ ಸಾಹೇಬರೇ? 4/5

— ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy) August 8, 2023

ನಿಮ್ಮ ರಾಜಕೀಯ ಬದುಕಿಗೆ ಬ್ಲ್ಯಾಕ್'ಮೇಲೇ ಬಂಡವಾಳ. ಗೃಹ ಸಚಿವರು, ಹಿರಿಯ ಪೊಲೀಸ್ ಅಧಿಕಾರಿಗಳ ಸಮ್ಮುಖದಲ್ಲಿ ನಡೆದ 'ಅಪ್ಪಯ್ಯ ಮತ್ತು ಅತೀಂದ್ರನ ಆಟಾಟೋಪ' ಕಂಡು ಹೌಹಾರಿದವರು ಯಾರು? ವರ್ಗಾವಣೆ ಪಟ್ಟಿಗೆ ಅಲ್ಲಿ ಬಿದ್ದ ಟಿಕ್ಕುಗಳ ಲೆಕ್ಕ ಹೇಳಬೇಕಾ ಟಿಕ್ ಟಿಕ್ ಸಿದ್ದರಾಮಯ್ಯ?? 5/5

— ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy) August 8, 2023

“ಮಂತ್ರಿಗಳ ಮಾನಗೇಡಿ ಕೃತ್ಯಗಳನ್ನೂ ಸಮರ್ಥನೆ ಮಾಡಿಕೊಳ್ಳುವ ಲಜ್ಜೆಗೇಡಿ ಮುಖ್ಯಮಂತ್ರಿ ಈ ರಾಜ್ಯಕ್ಕೆ ವಕ್ಕರಿಸಿದ್ದಾರೆ. ಸಚಿವರ ಸುಲಿಗೆಯನ್ನೇ ಸಿಗ್ಗಿಲ್ಲದೆ ಸಮರ್ಥನೆ ಮಾಡಿಕೊಳ್ಳುವ ಸಿದ್ದಕಲೆ ಅಸಹ್ಯ ಮತ್ತು ವಾಕರಿಕೆ ತರಿಸುತ್ತಿದೆ” ಎಂದು ಎಚ್‌.ಡಿ.ಕುಮಾರಸ್ವಾಮಿ ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಸಚಿವ ಚಲುವರಾಯಸ್ವಾಮಿ ವಿರುದ್ಧ ಲಂಚ ಆರೋಪ | ರಾಜ್ಯಪಾಲರಿಗೆ ದೂರು

“ಅಧಿಕಾರಿಗಳ ದೂರಿನ ಪತ್ರ ನಕಲಿ ಎಂದಾದರೆ ರಾಜ್ಯಪಾಲರ ಕಾರ್ಯಾಲಯ ನಕಲಿ ಎಂದಾಗುತ್ತದೆ. ಪತ್ರದ ಮೇಲೆ ಕ್ರಮ ಜರುಗಿಸಿ ಎಂದು ರಾಜ್ಯಪಾಲರಿಗೆ ಹೇಳುವುದು ಸರಿಯಲ್ಲ. ರಾಜಧರ್ಮದ ಪ್ರವಚನಕಾರರೇ ರಾಜಭವನದ ಪಾವಿತ್ರ್ಯವನ್ನೇ ಶಂಕಿಸುವುದು ತರವೇ? ಸ್ವಯಂ ಘೋಷಿತ ನಕಲಿ ಸಂವಿಧಾನ ತಜ್ಞನಿಗೆ ಇದು ಭೂಷಣವಲ್ಲ” ಎಂದು ಕುಮಾರಸ್ವಾಮಿ ಅವರು ಚಾಟಿ ಬೀಸಿದ್ದಾರೆ.

“ನಿಮ್ಮ ಕಾಂಗ್ರೆಸ್‌ ಶಾಸಕರೇ ಬರೆದ ಪತ್ರವನ್ನು ನಕಲಿ ಎಂದು ನೀವು ಬಿಂಬಿಸಿದಿರಿ. ಶಾಸಕಾಂಗ ಪಕ್ಷದಲ್ಲಿ ಶಾಸಕರು ಈ ಬಗ್ಗೆ ಹೇಳಿದಾಗ ಆ ಪತ್ರವನ್ನು ಅಸಲಿಯಾಯಿತು” ಎಂದು ಎಚ್‌.ಡಿ.ಕುಮಾರಸ್ವಾಮಿ ಕುಹಕವಾಡಿದರು.

Tags: Agriculture Minister ChaluvarayaswamycmsiddaramiahHD Kumaraswamyಎಚ್.ಡಿ.ಕುಮಾರಸ್ವಾಮಿಮುಖ್ಯಮಂತ್ರಿ ಸಿದ್ದರಾಮಯ್ಯ
Previous Post

ದೆಹಲಿ ಸೇವಾ ಮಸೂದೆ | ಪ್ರಸ್ತಾವಿತ ಆಯ್ಕೆ ಸಮಿತಿಯಲ್ಲಿ ಒಪ್ಪಿಗೆ ಇಲ್ಲದೇ ಹೆಸರು ಸೇರ್ಪಡೆ ; ಎಎಪಿ ವಿರುದ್ಧ ಆರೋಪ

Next Post

ಸಂಸತ್ತು ಮುಂಗಾರು ಅಧಿವೇಶನ | ರಾಜ್ಯಸಭೆಯಲ್ಲಿ ಅಶಿಸ್ತಿನ ವರ್ತನೆ ; ಟಿಎಂಸಿ ಸಂಸದ ಡೆರೆಕ್ ಒಬ್ರಿಯಾನ್ ಅಮಾನತು

Related Posts

ಬಿಹಾರದಲ್ಲಿ ನಿತೀಶ್‌ ಯುಗಾಂತ್ಯ : ಸಿಎಂ ಸ್ಥಾನಕ್ಕೆ ಹಿರಿಯ ನಾಯಕನ ರಾಜೀನಾಮೆ..
Top Story

ಬಿಹಾರದಲ್ಲಿ ನಿತೀಶ್‌ ಯುಗಾಂತ್ಯ : ಸಿಎಂ ಸ್ಥಾನಕ್ಕೆ ಹಿರಿಯ ನಾಯಕನ ರಾಜೀನಾಮೆ..

by ಪ್ರತಿಧ್ವನಿ
April 14, 2026
0

ಬೆಂಗಳೂರು : ಸುಮಾರು ಎರಡು ದಶಕಗಳ ಕಾಲ 10 ಬಾರಿ ಉನ್ನತ ಹುದ್ದೆಯಲ್ಲಿ ಸೇವೆ ಸಲ್ಲಿಸಿದ ನಂತರ ಬಿಹಾರದ (Bihar CM) ಮುಖ್ಯಮಂತ್ರಿ ಸ್ಥಾನಕ್ಕೆ ನಿತೀಶ್ ಕುಮಾರ್...

Read moreDetails
ದೀದಿ ರಾಜ್ಯದಲ್ಲಿ ಮೋದಿ “SIR” : ಎಷ್ಟು ಲಕ್ಷ ಮತದಾರರ ಭವಿಷ್ಯ ಅತಂತ್ರ ಗೊತ್ತಾ..?

ದೀದಿ ರಾಜ್ಯದಲ್ಲಿ ಮೋದಿ “SIR” : ಎಷ್ಟು ಲಕ್ಷ ಮತದಾರರ ಭವಿಷ್ಯ ಅತಂತ್ರ ಗೊತ್ತಾ..?

April 14, 2026
ಹರಿಹರ ಪೀಠದಿಂದ ವಚನಾನಂದ ಸ್ವಾಮೀಜಿ ಉಚ್ಚಾಟನೆ : ಯತ್ನಾಳ್‌ ಹೀಗ್ಯಾಕಂದ್ರು..?

ಹರಿಹರ ಪೀಠದಿಂದ ವಚನಾನಂದ ಸ್ವಾಮೀಜಿ ಉಚ್ಚಾಟನೆ : ಯತ್ನಾಳ್‌ ಹೀಗ್ಯಾಕಂದ್ರು..?

April 14, 2026
ಕೈ ಅಲ್ಪಸಂಖ್ಯಾತ ನಾಯಕರ ಬುಡ ಅಲ್ಲಾಡಿಸುತ್ತಿರುವ ದಾವಣಗೆರೆ ದಂಗಲ್‌ : ಜಬ್ಬಾರ್‌, ನಜೀರ್‌ ಆಯ್ತು ಮುಂದೆ ಜಮೀರ್..?

ಕೈ ಅಲ್ಪಸಂಖ್ಯಾತ ನಾಯಕರ ಬುಡ ಅಲ್ಲಾಡಿಸುತ್ತಿರುವ ದಾವಣಗೆರೆ ದಂಗಲ್‌ : ಜಬ್ಬಾರ್‌, ನಜೀರ್‌ ಆಯ್ತು ಮುಂದೆ ಜಮೀರ್..?

April 14, 2026
“SIR” ಹೆಸರಲ್ಲಿ ಮತದಾನದ ಹಕ್ಕನ್ನು ಕಿತ್ತುಕೊಳ್ಳುವುದು ಒಪ್ಪಲು ಸಾಧ್ಯವಿಲ್ಲ : ಚುನಾವಣಾ ಆಯೋಗಕ್ಕೆ ಸುಪ್ರೀಂ ಚಾಟಿ :

“SIR” ಹೆಸರಲ್ಲಿ ಮತದಾನದ ಹಕ್ಕನ್ನು ಕಿತ್ತುಕೊಳ್ಳುವುದು ಒಪ್ಪಲು ಸಾಧ್ಯವಿಲ್ಲ : ಚುನಾವಣಾ ಆಯೋಗಕ್ಕೆ ಸುಪ್ರೀಂ ಚಾಟಿ :

April 14, 2026
Next Post
ಡೆರೆಕ್‌ ಒಬ್ರಿಯಾನ್‌

ಸಂಸತ್ತು ಮುಂಗಾರು ಅಧಿವೇಶನ | ರಾಜ್ಯಸಭೆಯಲ್ಲಿ ಅಶಿಸ್ತಿನ ವರ್ತನೆ ; ಟಿಎಂಸಿ ಸಂಸದ ಡೆರೆಕ್ ಒಬ್ರಿಯಾನ್ ಅಮಾನತು

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada