• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, April 10, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಇದೀಗ

ಆನೆಗಳ ಸಂಖ್ಯೆಯಲ್ಲಿ ಕರ್ನಾಟಕ ನಂ 1

ಪ್ರತಿಧ್ವನಿ by ಪ್ರತಿಧ್ವನಿ
August 9, 2023
in ಇದೀಗ, ಕರ್ನಾಟಕ, ರಾಜಕೀಯ
0
ಈಶ್ವರ ಖಂಡ್ರೆ
Share on WhatsAppShare on FacebookShare on Telegram

ಹಲಿಗಳ ಗಣತಿಯಲ್ಲಿ ಎರಡನೇ ಸ್ಥಾನ ಪಡೆದಿರುವ ಕರ್ನಾಟಕ ರಾಜ್ಯಕ್ಕೆ ಆನೆಗಳ ಗಣತಿಯಲ್ಲಿ ಮೊದಲ ಸ್ಥಾನ ದೊರೆತಿದೆ ಎಂದು ಅರಣ್ಯ ಸಚಿವ ಈಶ್ವರ ಖಂಡ್ರೆ ಬುಧವಾರ (ಆಗಸ್ಟ್‌ 9) ಹೇಳಿದ್ದಾರೆ.

ADVERTISEMENT

ಈ ವರ್ಷದ ಹುಲಿಗಳ ಗಣತಿಯಲ್ಲಿ ಕರ್ನಾಟಕ ಎರಡನೇ ಸ್ಥಾನ ಪಡೆದಿದೆ. ಆದರೆ ಆನೆಗಳ ಗಣತಿಯಲ್ಲಿ ಕರ್ನಾಟಕ ದೇಶದಲ್ಲೇ ಮೊದಲ ಸ್ಥಾನ ಪಡೆದಿದೆ. ವರದಿ ಪ್ರಕಾರ ರಾಜ್ಯದಲ್ಲಿ ಈಗ 6.395 ಆನೆಗಳಿವೆ ಎಂದು ಸಚಿವ ಖಂಡ್ರೆ ತಿಳಿಸಿದರು.

ಬೆಂಗಳೂರಿನಲ್ಲಿ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು. “2017ರ ಗಣತಿ ಪ್ರಕಾರ ರಾಜ್ಯದಲ್ಲಿ 6,049 ಆನೆಗಳಿದ್ದವು. ಈ ವರ್ಷ 6,395 ಆನೆಗಳಿರುವುದು ಗಣತಿಯಲ್ಲಿ ಪತ್ತೆಯಾಗಿದೆ. ಅನೆಗಳ ಸಂಖ್ಯೆಯಲ್ಲಿ ಗಣನೀಯ ಏರಿಕೆ ಕಂಡು ಬಂದಿದೆ” ಎಂದು ಸಚಿವ ಈಶ್ವರ ಖಂಡ್ರೆ ಹೇಳಿದರು.

2023ರ ಮೇ 17ರಿಂದ ಮೇ 19ರವರೆಗೆ ಮೂರು ದಿನಗಳ ಕಾಲ ರಾಜ್ಯದ 32 ವಿಭಾಗಗಳಲ್ಲಿ ಆನೆ ಗಣತಿ ನಡೆಸಲಾಗಿದೆ. ಸುಮಾರು 3,400 ಅಧಿಕಾರಿಗಳು, ಸಿಬ್ಬಂದಿ ಗಣತಿಯಲ್ಲಿ ಪಾಲ್ಗೊಂಡಿದ್ದರು ಎಂದು ಮಾಹಿತಿ ನೀಡಿದರು.

32 ವಿಭಾಗಗಳ ಪೈಕಿ 23 ವಿಭಾಗಗಳಲ್ಲಿ ಗಣತಿ ಸಮಯದಲ್ಲಿ ನೇರವಾಗಿ ಆನೆಗಳು ಕಂಡು ಬಂದಿವೆ. 2,219 ಆನೆಗಳನ್ನು ನೇರವಾಗಿ ಗುರುತಿಸಲಾಗಿದೆ ಎಂದು ಈಶ್ವರ ಖಂಡ್ರೆ ಹೇಳಿದರು.

ಈ ಸುದ್ದಿ ಓದಿದ್ದೀರಾ? ಮೈತ್ರಿ ಬಗ್ಗೆ ವರಿಷ್ಠರು ತೀರ್ಮಾನ ಮಾಡಲಿದ್ದಾರೆ‌; ಜೆಡಿಎಸ್‌ ಶಾಸಕ ಜಿ.ಟಿ ದೇವೇಗೌಡ

ಅರಣ್ಯ ಇಲಾಖೆಯ ಆಡಳಿತ ನಿರ್ವಹಣೆಗೆ ಸಂಪೂರ್ಣ ತಂತ್ರಾಂಶ ಅಳವಡಿಸುವ ಪ್ರಕ್ರಿಯೆಗೆ ಚಾಲನೆ ನೀಡಲಾಗಿದೆ. ಆಡಳಿತ ನಿರ್ವಹಣೆ, ನಾಗರಿಕರಿಗೆ ಸ್ಪಂದನೆ ಮತ್ತು ಅರಣ್ಯ ಜಮೀನು ಹಾಗೂ ಇತರ ಸಂಪನ್ಮೂಲದ ನಿರ್ವಹಣೆಗೆ ಪ್ರತ್ಯೇಕ ತಂತ್ರಾಂಶಗಳನ್ನು ಅಳವಡಿಸಲಾಗಿದೆ ಎಂದು ಮಾಹಿತಿ ನೀಡಿದರು.

ಕಸ್ತೂರಿ ರಂಗನ್ ವರದಿಗೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರವು ಸಂಜಯ್ ಕುಮಾರ್ ನೇತೃತ್ವದ ಪರಿಶೀಲನಾ ಸಮಿತಿ ನೇಮಿಸಿದೆ. ಆ ಸಮಿತಿ ವರದಿ ಸಲ್ಲಿಕೆಯಾದ ಬಳಿಕ ರಾಜ್ಯ ಸರ್ಕಾರ ತನ್ನ ನಿಲುವು ಪ್ರಕಟಿಸಲಿದೆ. ಅರಣ್ಯ ಮತ್ತು ಪರಿಸರದ ಸಂರಕ್ಷಣೆ ಹಾಗೂ ಸುಸ್ಥಿರ ಅಭಿವೃದ್ಧಿ ಎರಡೂ ಸರ್ಕಾರದ ಆದ್ಯತೆ ಎಂದು ಈಶ್ವರ ಖಂಡ್ರೆ ವಿವರಿಸಿದರು.

ಇತ್ತೀಚೆಗೆ ಬಿಡುಗಡೆಯಾಗಿದ್ದ ಅರಣ್ಯ ಇಲಾಖೆ ವರದಿಯಲ್ಲಿ ಹುಲಿಗಳ ಗಣತಿಯಲ್ಲಿ ಮಧ್ಯಪ್ರದೇಶ ಮೊದಲ ಸ್ಥಾನ ಪಡೆದಿದೆ. ರಾಜ್ಯದಲ್ಲಿ ಈಗ 526 ಹುಲಿಗಳಿವೆ ಎಂದು ವರದಿ ಹೇಳಿದೆ.

Tags: Elephants CountIshwara KhandreTigers Countಆನೆಗಳ ಗಣತಿಈಶ್ವರ್‌ ಖಂಡ್ರೆಕರ್ನಾಟಕಸಚಿವ ಈಶ್ವರ ಖಂಡ್ರೆಹುಲಿಗಳ ಗಣತಿ
Previous Post

ಬಿಜೆಪಿ ನಾಯಕರತ್ತ ರಾಹುಲ್‌ ಗಾಂಧಿ ಫ್ಲೈಯಿಂಗ್‌ ಕಿಸ್‌ | ಸ್ಮೃತಿ ಇರಾನಿ ಕಿಡಿ

Next Post

ದಲಿತ ಸಾಹಿತಿ ಅರ್ಜುನ್‌ ಮೌರ್ಯಗೆ ಅಪಮಾನ, ಕೊಡಗು ವಿಶ್ವವಿದ್ಯಾಲಯದಲ್ಲಿದೆಯೇ ಜಾತಿ ಪದ್ದತಿ?

Related Posts

ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ: ಶೇ.86 ಉತ್ತೀರ್ಣ – ದಾಖಲೆಯ ಸಾಧನೆ, ಜಿಲ್ಲಾವಾರು ಪಟ್ಟಿ ಇಲ್ಲಿದೆ
ಕರ್ನಾಟಕ

ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ: ಶೇ.86 ಉತ್ತೀರ್ಣ – ದಾಖಲೆಯ ಸಾಧನೆ, ಜಿಲ್ಲಾವಾರು ಪಟ್ಟಿ ಇಲ್ಲಿದೆ

by ಪ್ರತಿಧ್ವನಿ
April 9, 2026
0

ರಾಜ್ಯದ ಲಕ್ಷಾಂತರ ವಿದ್ಯಾರ್ಥಿಗಳು ಕಾತರದಿಂದ ಕಾಯುತ್ತಿದ್ದ 2026ರ ದ್ವಿತೀಯ ಪಿಯುಸಿ ಪರೀಕ್ಷೆಯ ಫಲಿತಾಂಶವನ್ನು ಇಂದು ಮಧ್ಯಾಹ್ನ 3 ಗಂಟೆಗೆ ಅಧಿಕೃತ ವೆಬ್‌ಸೈಟ್‌ನಲ್ಲಿ ಪ್ರಕಟಿಸಲಾಗಿದೆ. ಈ ಬಾರಿ ರಾಜ್ಯವು...

Read moreDetails
ದೇವನಹಳ್ಳಿ ಭೂ ಹಗರಣದಲ್ಲಿ ಅಧಿಕಾರಿ ಬಿ.ಕೆ.ಮಮತಾ ಪಾತ್ರವೇನು..? : ತಪ್ಪಿಲದಿದ್ರೆ ಪ್ರತಿಕ್ರಿಯೆಗೆ ನಿರಾಕರಣೆ ಯಾಕೆ..?

ದೇವನಹಳ್ಳಿ ಭೂ ಹಗರಣದಲ್ಲಿ ಅಧಿಕಾರಿ ಬಿ.ಕೆ.ಮಮತಾ ಪಾತ್ರವೇನು..? : ತಪ್ಪಿಲದಿದ್ರೆ ಪ್ರತಿಕ್ರಿಯೆಗೆ ನಿರಾಕರಣೆ ಯಾಕೆ..?

April 9, 2026
ತಮಿಳುನಾಡು ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆ ಮಾಡಿದ ಡಿಸಿಎಂ ಡಿ.ಕೆ. ಶಿವಕುಮಾರ್

ಮಂಡ್ಯ ರೈಲು ನಿಲ್ದಾಣ ಮೇಲ್ದರ್ಜೆಗೆ; ವಿಮಾನ ನಿಲ್ದಾಣ ಮಾದರಿಯಲ್ಲಿ ಅಭಿವೃದ್ಧಿ: ಹೆಚ್.ಡಿ. ಕುಮಾರಸ್ವಾಮಿ

April 9, 2026
ತಮಿಳುನಾಡು ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆ ಮಾಡಿದ ಡಿಸಿಎಂ ಡಿ.ಕೆ. ಶಿವಕುಮಾರ್

ತಮಿಳುನಾಡು ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆ ಮಾಡಿದ ಡಿಸಿಎಂ ಡಿ.ಕೆ. ಶಿವಕುಮಾರ್

April 9, 2026
ಕರ್ನಾಟಕದ 2026 ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟಿಸಿದ ಕೆಇಎ..

ಕರ್ನಾಟಕದ 2026 ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟಿಸಿದ ಕೆಇಎ..

April 9, 2026
Next Post
ಅರ್ಜುನ್‌ ಮೌರ್ಯ

ದಲಿತ ಸಾಹಿತಿ ಅರ್ಜುನ್‌ ಮೌರ್ಯಗೆ ಅಪಮಾನ, ಕೊಡಗು ವಿಶ್ವವಿದ್ಯಾಲಯದಲ್ಲಿದೆಯೇ ಜಾತಿ ಪದ್ದತಿ?

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada