ದಕ್ಷಿಣ ಕನ್ನಡ ಜಿಲ್ಲಾಡಳಿತದಿಂದ ಶಾಸಕರ ಹಕ್ಕಿಗೆ ಚ್ಯುತಿಯಾಗುತ್ತಿದೆ ಹಾಗೂ ಅಧಿಕಾರಿಗಳ ಅಮಾನತು ಖಂಡಿಸಿ ಜಿಲ್ಲೆಯ ಬಿಜೆಪಿ ಶಾಸಕರು ಜಿಲ್ಲಾಧಿಕಾರಿ ಕಚೇರಿ ಎದುರು ಸೋಮವಾರ (ಆಗಸ್ಟ್ 14) ಪ್ರತಿಭಟನೆ ನಡೆಸಿದರು.

ಶಾಸಕರ ಹಕ್ಕುಚ್ಯುತಿ ಉಂಟಾಗಿದೆ. ದಕ್ಷಿಣ ಕನ್ನಡ ಮೂಡುಬಿದಿರೆ ಕ್ಷೇತ್ರದ ಇರುವಲು ಗ್ರಾಮ ಪಂಚಾಯತ್ ಹಾಗೂ ಬಂಟ್ವಾಳ ಕ್ಷೇತ್ರದ ಇರ್ವತ್ತೂರು ಗ್ರಾಮ ಪಂಚಾಯತ್ ನ ಉದ್ಘಾಟನಾ ಕಾರ್ಯಕ್ರಮವನ್ನು ಶಿಷ್ಟಾಚಾರ ನೆಪದಲ್ಲಿ ರದ್ದುಪಡಿಸಿ, ಅಧಿಕಾರಿಗಳ ಅಮಾನತುಗೊಳಿಸಲಾಗಿದೆ. ಅದನ್ನು ಕೂಡಲೇ ಹಿಂಪಡೆಯಬೇಕ ಎಂದು ಬಿಜೆಪಿ ಶಾಸಕರು ಒತ್ತಾಯಿಸಿದ್ದಾರೆ.
ಈ ಸುದ್ದಿ ಓದಿದ್ದೀರಾ? ತುಮಕೂರು | ಎಚ್ಎಎಲ್ ಹುದ್ದೆ ; ತಿದ್ದುಪಡಿಗೆ ಅವಕಾಶ
ಈ ಸಂದರ್ಭ ಸಂಸದರಾದ ನಳಿನ್‌ಕುಮಾರ್ ಕಟೀಲ್, ಮಾಜಿ ಸಚಿವ ಕೋಟ ಶ್ರೀನಿವಾಸ ಪೂಜಾರಿ, ದಕ್ಷಿಣ ಕನ್ನಡ ಶಾಸಕರಾದ ವೇದವ್ಯಾಸ ಕಾಮತ್, ಡಾ.ಭರತ್ ಶೆಟ್ಟಿ, ಉಮಾನಾಥ ಕೋಟ್ಯಾನ್, ಹರೀಶ್ ಪೂಂಜಾ ರಾಜೇಶ್ ನಾಯ್ಕ್, ಎಂಎಲ್ ಸಿ ಪ್ರತಾಪ ಸಿಂಹ ನಾಯಕ್ ಉಪಸ್ಥಿತರಿದ್ದರು






