ಕರ್ನಾಟಕ ಸರ್ಕಾರದ ಬಹು ನಿರೀಕ್ಷಿತ ಗೃಹಲಕ್ಷ್ಮಿ ಯೋಜನೆ ಆಗಸ್ಟ್ 30 ರಂದು ಮೈಸೂರಿನಲ್ಲಿ ಚಾಲನೆ ಪಡೆಯಲಿದೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಹೇಳಿದ್ದಾರೆ.
ಬೆಂಗಳೂರಿನ ಅರಮನೆ ಮೈದಾನದ ವೃಕ್ಷ ಸಾಂಪ್ರದಾಯಿಕ ಕಲಾಮಂಟಪದಲ್ಲಿ ನಡೆದ ‘ನಮ್ಮೂರ ನಾಗಪಂಚಮಿ-2022’ ಹಬ್ಬದ ಸಂಭ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, “ಚಾಮುಂಡೇಶ್ವರಿ ತಾಯಿಯ ಕ್ಷೇತ್ರದಲ್ಲಿ ಈ ಯೋಜನೆಗೆ ಚಾಲನೆ ಸಿಗುತ್ತಿರುವುದು ನನ್ನ ಅದೃಷ್ಟ” ಎಂದು ಹೇಳಿದರು.
“ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರು ಈ ಯೋಜನೆಗೆ ಚಾಲನೆ ನೀಡಲಿದ್ದಾರೆ. ಗೃಹಲಕ್ಷ್ಮಿ ಯೋಜನೆಯ ಉದ್ಘಾಟನೆ ಕಾರ್ಯಕ್ರಮ ಸಿದ್ಧತೆ ಕುರಿತು ವೀಕ್ಷಿಸಲು ಇಂದು ಮೈಸೂರಿಗೆ ತೆರಳುತ್ತಿದ್ದು, ಮೈಸೂರು, ಮಂಡ್ಯ ಹಾಗೂ ಹಾಸನ ಜಿಲ್ಲೆಯ ಸಚಿವರು, ಶಾಸಕರೊಂದಿಗೆ ಸಭೆ ನಡೆಸಲಾಗುವುದು” ಎಂದು ತಿಳಿಸಿದರು.
ಈ ಸುದ್ದಿ ಓದಿದ್ದೀರಾ? ಸಕ್ಕರೆನಾಡಲ್ಲಿ ಭರ್ಜರಿ ಆಪರೇಷನ್.. ದಳಪತಿಗಳಿಗೆ ಶಾಕ್ ಕೊಟ್ಟು ಕೈ ಹಿಡಿಯೋಕೆ ಪುಟ್ಟರಾಜು ಸಜ್ಜು..!
ಗೃಹಲಕ್ಷ್ಮಿ ಯೋಜನೆ ಉದ್ಘಾಟನೆ ಕಾರ್ಯಕ್ರಮ ಅದ್ದೂರಿಯಾಗಿ ನಡೆಯಲಿದ್ದು, ಈಗಾಗಲೇ ಸಿದ್ಧತೆ ಕೈಗೊಳ್ಳಲಾಗಿದೆ. ರಾಹುಲ್ ಗಾಂಧಿ ಅವರ ದಿನಾಂಕ ಹೊಂದಾಣಿಕೆ ದೃಷ್ಟಿಯಿಂದ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರೊಂದಿಗೆ ಚರ್ಚೆ ನಡೆಸಿ ಮೈಸೂರಿನಲ್ಲಿ ಕಾರ್ಯಕ್ರಮ ಆಯೋಜಿಸಲಾಗುತ್ತಿದೆ ಎಂದು ಲಕ್ಷ್ಮಿ ಹೆಬ್ಬಾಳ್ಕರ್ ತಿಳಿಸಿದರು.