ಜಮ್ಮು ಮತ್ತು ಕಾಶ್ಮೀರ ರಾಜ್ಯದ ಪುಲ್ವಾಮಾ ಜಿಲ್ಲೆಯ ಲಾರೋ-ಪರಿಗಮ್ ಪ್ರದೇಶದಲ್ಲಿ ನಡೆದ ಎನ್ಕೌಂಟರ್ನಲ್ಲಿ ಭದ್ರತಾ ಪಡೆಗಳು ಭಯೋತ್ಪಾದಕನನ್ನು ಹತ್ಯೆಗೈದಿದ್ದಾರೆ ಎಂದು ಸೋಮವಾರ (ಆಗಸ್ಟ್ 21) ಮಾಧ್ಯಮಗಳು ವರದಿ ಮಾಡಿವೆ.
ತಡರಾತ್ರಿ ಎನ್ಕೌಂಟರ್ ನಡೆದಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಹತ್ಯೆಯಾದ ಭಯೋತ್ಪಾದಕನನ್ನು ಲಷ್ಕರ್-ಎ-ತೊಯ್ದಾದ ಉನ್ನತ ಕಮಾಂಡರ್ ಎನ್ನಲಾಗಿದ್ದು, ಮೃತದೇಹ ಇನ್ನೂ ಪತ್ತೆಯಾಗಿಲ್ಲ.
ಪುಲ್ವಾಮಾದ ಲಾರೋ-ಪರಿಗಮ್ ಪ್ರದೇಶದಲ್ಲಿ ಎನ್ಕೌಂಟರ್ ಪ್ರಾರಂಭವಾಗಿದೆ. ಪೊಲೀಸ್ ಮತ್ತು ಭದ್ರತಾ ಪಡೆಗಳು ಕಾರ್ಯಾಚರಣೆಯಲ್ಲಿ ತೊಡಗಿವೆ ಎಂದು ಕಾಶ್ಮೀರ ವಲಯ ಪೊಲೀಸರು ಎಕ್ಸ್ನಲ್ಲಿ (ಟ್ವಿಟರ್) ತಿಳಿಸಿದ್ದಾರೆ. ಸೋಮವಾರವೂ ಭದ್ರತಾ ಪಡೆಗಳ ಕಾರ್ಯಾಚರಣೆ ಮುಂದುವರಿದಿದೆ ಎಂದು ವರದಿಯಾಗಿದೆ.