• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, May 1, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಇದೀಗ

ರೈತ ಮುಖಂಡರೊಂದಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸಭೆ | ನೆರವಿನ ಭರವಸೆ

ಪ್ರತಿಧ್ವನಿ by ಪ್ರತಿಧ್ವನಿ
August 22, 2023
in ಇದೀಗ, ಕರ್ನಾಟಕ, ರಾಜಕೀಯ
0
ಮುಖ್ಯಮಂತ್ರಿ ಸಿದ್ದರಾಮಯ್ಯ

ರೈತ ಮುಖಂಡರೊಂದಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸಭೆ

Share on WhatsAppShare on FacebookShare on Telegram

ಕರ್ನಾಟಕ ಗ್ರಾಮೀಣ ಬ್ಯಾಂಕಿನಿಂದ ಸಾಲ ಪಡೆದ ರೈತರ ಸಮಸ್ಯೆ ಬಗೆಹರಿಸಲು ಮುಖ್ಯ ಕಾರ್ಯದರ್ಶಿ ನೇತೃತ್ವದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮಂಗಳವಾರ (ಆಗಸ್ಟ್ 22) ವಿಶೇಷ ಸಭೆ ನಡೆಸಿದರು.

ADVERTISEMENT

ಬಳ್ಳಾರಿಯ ಕರ್ನಾಟಕ ಗ್ರಾಮೀಣ ಬ್ಯಾಂಕಿನಿಂದ ಬೆಳೆಸಾಲ ಪಡೆದು ಸುಸ್ತಿದಾರರಾಗಿರುವ ರೈತರಿಗೆ ಓ.ಟಿ.ಎಸ್. (One Time Settlement) ಯೋಜನೆಯಡಿ ಅನುಕೂಲ ಕಲ್ಪಿಸುವ ಕುರಿತು ಬ್ಯಾಂಕಿನ ಮುಖ್ಯಸ್ಥರು, ನಬಾರ್ಡ್ ಹಾಗೂ ಪ್ರವರ್ತಕ ಬ್ಯಾಂಕ್ ಆದ ಕೆನರಾ ಬ್ಯಾಂಕ್ ಅಧಿಕಾರಿಗಳೊಂದಿಗೆ ಸಭೆ ನಡೆಸಿ, ಪರಿಹಾರ ಕಂಡುಕೊಳ್ಳಲು ಮುಖ್ಯ ಕಾರ್ಯದರ್ಶಿ ಹಾಗೂ ಹಣಕಾಸು ಇಲಾಖೆ ಅಪರ ಮುಖ್ಯ ಕಾರ್ಯದರ್ಶಿಗಳಿಗೆ ಸೂಚಿಸುವುದಾಗಿ ಸಿದ್ದರಾಮಯ್ಯ ತಿಳಿಸಿದರು.

ಮುಖ್ಯಮಂತ್ರಿ ಸಿದ್ದರಾಮಯ್ಯ ಮಂಗಳವಾರ ಗೃಹ ಕಚೇರಿ ಕೃಷ್ಣಾದಲ್ಲಿ ಶಾಸಕ ಬಿ.ಆರ್. ಪಾಟೀಲ ಹಾಗೂ ದರ್ಶನ್ ಪುಟ್ಟಣ್ಣಯ್ಯ ಅವರ ನೇತೃತ್ವದಲ್ಲಿ ತಮ್ಮನ್ನು ಭೇಟಿಯಾದ ರೈತ ಮುಖಂಡರ ನಿಯೋಗದೊಂದಿಗೆ ಈ ಸಮಸ್ಯೆ ಕುರಿತು ಚರ್ಚೆ ನಡೆಸಿದರು.

ಮುಖ್ಯಮಂತ್ರಿ ಸಿದ್ದರಾಮಯ್ಯ
ರೈತ ಮುಖಂಡರೊಂದಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸಭೆ

ಬಳ್ಳಾರಿ ಜಿಲ್ಲೆಯಲ್ಲಿ ಕರ್ನಾಟಕ ಗ್ರಾಮೀಣ ಬ್ಯಾಂಕಿನಿಂದ ಬೆಳೆ ಸಾಲ ಪಡೆದ ರೈತರು, ಅತಿವೃಷ್ಟಿ, ಅನಾವೃಷ್ಟಿ, ಬೆಲೆ ಕುಸಿತ ದಂತಹ ಸಮಸ್ಯೆಗಳಿಂದಾಗಿ ಸಕಾಲದಲ್ಲಿ ಸಾಲ ತೀರಿಸಲಾಗದೆ ಸಂಕಷ್ಟಕ್ಕೆ ಒಳಗಾಗಿದ್ದಾರೆ. ಬ್ಯಾಂಕಿನ ಸಿಬ್ಬಂದಿ ಸಾಲ ಮರುಪಾವತಿಗೆ ನೋಟೀಸು, ಲೀಗಲ್ ನೋಟೀಸುಗಳನ್ನು ಕಳುಹಿಸಿ, ಅದರ ವೆಚ್ಚವನ್ನೂ ರೈತರ ಮೇಲೆಯೇ ಹಾಕುತ್ತಿದ್ದಾರೆ. ಇಂತಹ ಕ್ರಮಗಳಿಂದಾಗಿ 30,000 ರೂ. ಮೊತ್ತದ ಸಾಲಕ್ಕೆ 2.8 ಲಕ್ಷ ರೂ. ಪಾವತಿಸುವಂತೆ, 3 ಲಕ್ಷ ರೂ. ಸಾಲಕ್ಕೆ 3೦ ಲಕ್ಷ ರೂ. ಪಾವತಿಸುವಂತೆ ಕಿರುಕುಳ ನೀಡಲಾಗುತ್ತಿದೆ. ಇದನ್ನು ಪ್ರತಿಭಟಿಸಿ, 8 ತಿಂಗಳಿನಿಂದ ರೈತ ಹೋರಾಟಗಾರರು ಧರಣಿ ನಡೆಸುತ್ತಿದ್ದಾರೆ. ರೈತರು ಓ.ಟಿ.ಎಸ್. ಅಡಿ ಶೇ. 50 ರಷ್ಟು ಅಸಲು ಪಾವತಿಸಲು ಸಿದ್ಧರಿದ್ದಾರೆ. ರೈತರ ಸಮಸ್ಯೆ ಬಗೆಹರಿಸಿ, ಅನುಕೂಲ ಮಾಡಿಕೊಡುವಂತೆ ಮನವಿ ಮಾಡಿದರು. ಹಲವು ರಾಷ್ಟ್ರೀಕೃತ ಬ್ಯಾಂಕುಗಳು ರೈತರಿಗೆ ಈ ಅನುಕೂಲ ಕಲ್ಪಿಸಿವೆ ಎಂದು ತಿಳಿಸಿದರು.

ಇದಕ್ಕೆ ಪ್ರತಿಕ್ರಿಯಿಸಿದ ಬ್ಯಾಂಕ್ ಅಧಿಕಾರಿಗಳು, ಬ್ಯಾಂಕಿನ ಆಡಳಿತ ಮಂಡಳಿ ಇದಕ್ಕೆ ತೀರ್ಮಾನ ಕೈಗೊಳ್ಳಬೇಕಾಗುತ್ತದೆ. ಬ್ಯಾಂಕಿನಲ್ಲಿ 6500 ಕೋಟಿ ರೂ. ಸುಸ್ತಿ ಸಾಲವಿದ್ದು, ಅದರಲ್ಲಿ 5000 ಕೋಟಿ ರೂ. ಬೆಳೆ ಸಾಲವಾಗಿದೆ ಎಂದರು. ಬ್ಯಾಂಕಿನ ಅಧ್ಯಕ್ಷರು ಗೈರು ಹಾಜರಾದ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಅಸಮಾಧಾನ ವ್ಯಕ್ತಪಡಿಸಿದರು.

ರೈತರ ಕುರಿತು ಮಾನವೀಯತೆಯಿಂದ ವರ್ತಿಸುವಂತೆ ಅಧಿಕಾರಿಗಳಿಗೆ ಸಿದ್ದರಾಮಯ್ಯ ಅವರು ಸಲಹೆ ಮಾಡಿದರಲ್ಲದೆ, ಮುಖ್ಯ ಕಾರ್ಯದರ್ಶಿಗಳ ನೇತೃತ್ವದಲ್ಲಿ ಸಂಬಂಧಿಸಿದ ಬ್ಯಾಂಕರುಗಳ ಸಭೆ ನಡೆಸಿದ ಪರಿಹಾರ ಸೂತ್ರ ಕಂಡುಕೊಂಡ ನಂತರ ಮತ್ತೊಮ್ಮೆ ರೈತ ಪ್ರತಿನಿಧಿಗಳೊಂದಿಗೆ ಸಭೆ ನಡೆಸುವುದಾಗಿ ತಿಳಿಸಿದರು.

ಸಭೆಯಲ್ಲಿ ಕೃಷಿ ತಜ್ಞ ಡಾ. ಪ್ರಕಾಶ್ ಕಮ್ಮರಡಿ, ರೈತ ಮುಖಂಡರಾದ ಬಡಗಲಪುರ ನಾಗೇಂದ್ರ, ಜಿ.ಸಿ. ಬಯ್ಯಾರೆಡ್ಡಿ, ಮಾಧವರೆಡ್ಡಿ, ಚಾಗನೂರು ಮಲ್ಲಿಕಾರ್ಜುನ ರೆಡ್ಡಿ, ಝಾನ್ಸಿಲಕ್ಷ್ಮಿ, ಟಿ.ಯಶವಂತ್, ಅಲಿಬಾಬ ಸೇರಿ ಹಲವು ರೈತ ಮುಖಂಡರು ಭಾಗವಹಿಸಿದ್ದರು.

Tags: CM SiddaramaiahFarmer LeadersFarmersಮುಖ್ಯಮಂತ್ರಿ ಸಿದ್ದರಾಮಯ್ಯರೈತರು
Previous Post

ಕ್ರಿಮಿನಲ್‌ ಮಾನಹಾನಿ ಪ್ರಕರಣ | ಐಪಿಎಸ್‌ ಅಧಿಕಾರಿ ಡಿ.ರೂಪಾ ಅರ್ಜಿ ವಜಾ

Next Post

ಮೆಗಾಸ್ಟಾರ್ ಚಿರಂಜೀವಿ ಹುಟ್ಟುಹಬ್ಬಕ್ಕೆ ಅನೌನ್ಸ್ ಆಯ್ತು 157ನೇ ಸಿನಿಮಾ

Related Posts

ಗುಜರಾತ್‌ಗೆ ಗೆಲುವು ತಂದುಕೊಟ್ಟ ಆರ್‌ಸಿಬಿ ಕಳಪೆ ಪ್ರದರ್ಶನ : ಸೋಲಿಗೆ ಕಾರಣ ಬಿಚ್ಚಿಟ್ಟ ಪಾಟಿದಾರ್..‌!
Top Story

ಗುಜರಾತ್‌ಗೆ ಗೆಲುವು ತಂದುಕೊಟ್ಟ ಆರ್‌ಸಿಬಿ ಕಳಪೆ ಪ್ರದರ್ಶನ : ಸೋಲಿಗೆ ಕಾರಣ ಬಿಚ್ಚಿಟ್ಟ ಪಾಟಿದಾರ್..‌!

by ಪ್ರತಿಧ್ವನಿ
May 1, 2026
0

ಅಹಮದಾಬಾದ್‌ : ಇಲ್ಲಿ ನಡೆದ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಗುಜರಾತ್ ಟೈಟಾನ್ಸ್ ನಡುವಿನ ಪಂದ್ಯದಲ್ಲಿ ಆಲೌಟ್‌ ಆಗುವ ಮೂಲಕ ಆರ್‌ಸಿಬಿ ಹೀನಾಯ ಸೋಲು ಕಂಡಿದೆ. ಆರಂಭದಲ್ಲಿ...

Read moreDetails
ಪಶ್ಚಿಮ ಬಂಗಾಳದಲ್ಲಿ ಮತದಾನ ಗೊಂದಲ: ಇವಿಎಂ ತೊಂದರೆ ಆರೋಪ, ಮರುಮತದಾನ ಚಿಂತನೆ

ಪಶ್ಚಿಮ ಬಂಗಾಳದಲ್ಲಿ ಮತದಾನ ಗೊಂದಲ: ಇವಿಎಂ ತೊಂದರೆ ಆರೋಪ, ಮರುಮತದಾನ ಚಿಂತನೆ

May 1, 2026
227 ಕೋಟಿ ರೂ. ವೆಚ್ಚದಲ್ಲಿ ವಿಜಯಪುರದಲ್ಲಿ ಕೆ.ಎಸ್.ಡಿ.ಎಲ್ ಘಟಕ: ಯೋಜನೆಗೆ ಸಂಪುಟ ಸಭೆ ಅಸ್ತು

227 ಕೋಟಿ ರೂ. ವೆಚ್ಚದಲ್ಲಿ ವಿಜಯಪುರದಲ್ಲಿ ಕೆ.ಎಸ್.ಡಿ.ಎಲ್ ಘಟಕ: ಯೋಜನೆಗೆ ಸಂಪುಟ ಸಭೆ ಅಸ್ತು

April 30, 2026
ಒಂದು ಮಳೆಯ ಅಬ್ಬರಕ್ಕೆ ಸಿಲಿಕಾನ್ ಸಿಟಿ ಶಾಕ್: ಫುಟ್‌ಪಾತ್ ವ್ಯಾಪಾರಕ್ಕೆ ಬ್ರೇಕ್

ಒಂದು ಮಳೆಯ ಅಬ್ಬರಕ್ಕೆ ಸಿಲಿಕಾನ್ ಸಿಟಿ ಶಾಕ್: ಫುಟ್‌ಪಾತ್ ವ್ಯಾಪಾರಕ್ಕೆ ಬ್ರೇಕ್

April 30, 2026
ಕಾಂಗ್ರೆಸ್ ಪಕ್ಷ ಅಧಃಪತನಕ್ಕೆ ಹೋಗಿ, ಬಿಜೆಪಿ ಆಕಾಶದೆತ್ತರಕ್ಕೆ ಹಾರೋ ಕಾಲ ಸಮೀಪಿಸುತ್ತಿದ್ದೆ..

ಕಾಂಗ್ರೆಸ್ ಪಕ್ಷ ಅಧಃಪತನಕ್ಕೆ ಹೋಗಿ, ಬಿಜೆಪಿ ಆಕಾಶದೆತ್ತರಕ್ಕೆ ಹಾರೋ ಕಾಲ ಸಮೀಪಿಸುತ್ತಿದ್ದೆ..

April 30, 2026
Next Post
ಮೆಗಾಸ್ಟಾರ್‌ ಚಿರಂಜೀವಿ

ಮೆಗಾಸ್ಟಾರ್ ಚಿರಂಜೀವಿ ಹುಟ್ಟುಹಬ್ಬಕ್ಕೆ ಅನೌನ್ಸ್ ಆಯ್ತು 157ನೇ ಸಿನಿಮಾ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada