ತೆಲಂಗಾಣದಲ್ಲಿ ವಿಧಾನಸಭೆ ಚುನಾವಣೆ ಸನ್ನಿಹಿತವಾಗುತ್ತಿರುವ ಹಿನ್ನೆಲೆಯಲ್ಲಿ ತಮಗೆ ಟಿಕೆಟ್ ಸಿಗಲಿಲ್ಲ ಎಂದು ಭಾರತ್ ರಾಷ್ಟ್ರ ಸಮಿತಿ ಮಾಜಿ ಉಪಮುಖ್ಯಮಂತ್ರಿ ತಾಟಿಕೊಂಡ ರಾಜಯ್ಯ ಬಿಕ್ಕಿ ಬಿಕ್ಕಿ ಅತ್ತಿದ್ದಾರೆ.
ಘಾನ್ಪುರ ವಿಧಾನಸಭಾ ಕ್ಷೇತ್ರದಿಂದ ಟಿಕೆಟ್ಗಾಗಿ ಅವರು ಬೇಡಿಕೆ ಇಟ್ಟಿದ್ದರು ಆದರೆ ಪಕ್ಷವು ಅವರಿಗೆ ಟಿಕೆಟ್ ನೀಡಲು ನಿರಾಕರಿಸಿದೆ. ಈ ವರ್ಷದ ಕೊನೆಯಲ್ಲಿ ತೆಲಂಗಾಣದಲ್ಲಿ ವಿಧಾನಸಭೆ ಚುನಾವಣೆ ನಡೆಯಲಿದೆ. ಚುನಾವಣೆಯ ದಿನಾಂಕವನ್ನು ಇನ್ನೂ ನಿರ್ಧರಿಸಲಾಗಿಲ್ಲವಾದರೂ, ಮುಂಬರುವ ಚುನಾವಣಾ ದಿನಾಂಕಗಳನ್ನು ಘೋಷಿಸುವ ಮೊದಲೇ ಬಿಆರ್ಎಸ್ ಪಕ್ಷವು ಆಗಸ್ಟ್ 21 ರಂದು ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಿದೆ.
ವರದಿಗಳ ಪ್ರಕಾರ, ತಾಟಿಕೊಂಡ ರಾಜಯ್ಯ ಅವರ ಸ್ವಂತ ಪಕ್ಷದ ಗ್ರಾಮ ಸರಪಂಚರಿಂದ ಲೈಂಗಿಕ ಕಿರುಕುಳದ ಆರೋಪವಿದೆ. ಈ ಆರೋಪಗಳಿಂದಾಗಿ ಪಕ್ಷವು ಅವರಿಗೆ ಟಿಕೆಟ್ ನಿರಾಕರಿಸಿದೆ. ಕದಿಯಂ ಶ್ರೀಹರಿಯವರಿಗೆ ಪಕ್ಷವು ಘನಪುರ ವಿಧಾನಸಭಾ ಕ್ಷೇತ್ರದಿಂದ ಟಿಕೆಟ್ ನೀಡಿದೆ.