• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Saturday, April 25, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಶಿರಾ ನಗರದ ಅಭಿವೃದ್ಧಿಗೆ ಅಧಿಕಾರಿಗಳೊಂದಿಗೆ ಮಹತ್ವದ ಸಭೆ ನಡೆಸಿದ ಟಿಬಿ ಜಯಚಂದ್ರ

ಪ್ರತಿಧ್ವನಿ by ಪ್ರತಿಧ್ವನಿ
August 23, 2023
in Top Story, ಕರ್ನಾಟಕ
0
ಶಿರಾ ನಗರದ ಅಭಿವೃದ್ಧಿಗೆ ಅಧಿಕಾರಿಗಳೊಂದಿಗೆ ಮಹತ್ವದ ಸಭೆ ನಡೆಸಿದ ಟಿಬಿ ಜಯಚಂದ್ರ
Share on WhatsAppShare on FacebookShare on Telegram

ಬೆಂಗಳೂರು: ಶಿರಾ ನಗರಕ್ಕೆ ಸಮರ್ಪಕ ಒಳಚರಂಡಿ ನಿರ್ಮಾಣ ಮಾಡಲು ಶಿರಾ ವಿಧಾನಸಭಾ ಕ್ಷೇತ್ರದ ಶಾಸಕರು ಹಾಗೂ ದೆಹಲಿ ವಿಶೇಷ ಪ್ರತಿನಿಧಿ ಟಿಬಿ ಜಯಚಂದ್ರ ಅವರಿಂದ ವಿಧಾನಸೌಧದಲ್ಲಿ ಮಹತ್ವದ  ಸಭೆ ನಡೆಯಿತು.

ADVERTISEMENT

 ಶಿರಾ ನಗರಕ್ಕೆ ಒಳಚರಂಡಿ ವ್ಯವಸ್ಥೆ ನಿರ್ಮಾಣ ಮಾಡಲು 10 ವರ್ಷಗಳ ಹಿಂದೆ ಸಮಗ್ರ ಯೋಜನೆಯನ್ನು ರೂಪಿಸಲಾಗಿತ್ತು. ಆದರೆ ಕೆಲವು ಬಡಾವಣೆಗಳಲ್ಲಿ ಒಳಚರಂಡಿ ಪೈಪ್ ಅಳವಡಿಸಲು  ನಗರ ಸಭೆಯ ಜಾಗವಿಲ್ಲದ ಕಾರಣ ಹಾಗೂ ರಸ್ತೆಗಳಿಲ್ಲದ್ದರಿಂದ ಶಿರಾ ನಗರಕ್ಕೆ ಪೂರ್ತಿಯಾಗಿ ಒಳಚರಂಡಿ ವ್ಯವಸ್ಥೆ ಕಲ್ಪಿಸಲು ಸಾಧ್ಯವಾಗದೆ ಕೆಲವು ಕಡೆ ಕೆಲಸ ನಿಂತಿತ್ತು .ಈ ನಿಟ್ಟಿನಲ್ಲಿ ಈ ಎಲ್ಲಾ ತೊಡಕುಗಳನ್ನ ನಿವಾರಿಸಲು ವಿಧಾನಸೌಧದಲ್ಲಿ ಮಹತ್ವದ ಸಭೆ ಕರೆಯಲಾಗಿತ್ತು. ಒಳಚರಂಡಿ ಹಾಗೂ ಕೊಳಚೆ ನಿರ್ಮೂಲನ ಮಂಡಳಿ ವ್ಯವಸ್ಥಾಪಕ ನಿರ್ದೇಶಕರಾದ  ಶರತ್, ಶಿರಾ ನಗರಸಭೆ ಆಯುಕ್ತರಾದ ಪಲ್ಲವಿ ,ನಗರಸಭೆ ಅಧ್ಯಕ್ಷರಾದ ಪೂಜಾ, ಎಕ್ಸಿಕ್ಯೂಟಿವ್ ಇಂಜಿನಿಯರ್ ಗಂಗಾಧರ್ ಅಸಿಸ್ಟೆಂಟ್ ಎಕ್ಸಿಕ್ಯೂಟಿವ್ ಇಂಜಿನಿಯರ್ ಕೆಂಚಪ್ಪ ಸೇರಿದಂತೆ ನಗರಸಭೆಯ ಹಲವಾರು ಹಿರಿಯ ಅಧಿಕಾರಿಗಳು ಸಭೆಯಲ್ಲಿ ಭಾಗವಹಿಸಿದ್ದರು .

ಶಿರಾದಲ್ಲಿ 26,000 ಮನೆಗಳಿದ್ದು ಎಲ್ಲ ಮನೆಗಳಿಗೆ ಒಳಚರಂಡಿ ವ್ಯವಸ್ಥೆ ಕಲ್ಪಿಸಲು ರೂಪಿಸಲಾಗಿರುವ ಸಮಗ್ರ ಯೋಜನೆಯನ್ನು   ತ್ವರಿತವಾಗಿ ಅನುಷ್ಠಾನಗೊಳಿಸುವಂತೆ ಜಯಚಂದ್ರ ಅವರು ಕಟ್ಟುನಿಟ್ಟಾಗಿ ಆದೇಶಿಸಿದರು.

ಈ ಒಳಚರಂಡಿ ಯೋಜನೆಗೆ ಬಾಕಿ ಇರುವ ಕಾಮಗಾರಿಗಳನ್ನು ಪೂರ್ಣಗೊಳಿಸಲು ಅಗತ್ಯವಿರುವ ಹಣಕಾಸಿನ ನೆರವನ್ನು ನಗರಾಭಿವೃದ್ಧಿ ಇಲಾಖೆಯಿಂದ ಕೊಡಿಸುವುದಾಗಿ ಜಯಚಂದ್ರ ಅವರು ಹೇಳಿದರು .ಕಾಲಮಿತಿಯಲ್ಲಿ ಈ ಒಳಚರಂಡಿ ಯೋಜನೆಯನ್ನು ಪೂರ್ಣಗೊಳಿಸಿ ಎಲ್ಲ ಮನೆಗಳಿಗೆ ಕಡ್ಡಾಯವಾಗಿ ಒಳಚರಂಡಿ ವ್ಯವಸ್ಥೆಯನ್ನು ಕಲ್ಪಿಸುವಂತೆ ಆದೇಶಿಸಿದರು. ಈಗಾಗಲೇ ಸಾಕಷ್ಟು ವಿಳಂಬವಾಗಿದ್ದು ಇನ್ನು ಮುಂದೆ ಯಾವುದೇ ಕಾರಣಕ್ಕೂ ನಿಧಾನವಾಗದೆ ಬಾಕಿ ಕಾಮಗಾರಿಗಳನ್ನ ಸಮರೋಪಾದಿಯಲ್ಲಿ ಮಾಡಿ ಮುಗಿಸುವಂತೆ ಆದೇಶಿಸಿದರು. ಮೊದಲು ಪ್ರಾಯೋಗಿಕವಾಗಿ ಯೋಜನೆಯನ್ನು ಅನುಷ್ಠಾನಗೊಳಿಸಿ ನಂತರ ಕಡ್ಡಾಯವಾಗಿ ಎಲ್ಲಾ ಮನೆಗಳಿಗೂ ಒಳಚರಂಡಿ ಸಂಪರ್ಕ ಕಲ್ಪಿಸುವಂತೆ ಸೂಚಿಸಿದರು. ಮುಂದಿನ ವಾರದಲ್ಲಿ ತಾವೇ ಖುದ್ದಾಗಿ ಕಾಮಗಾರಿ ಪರಿಶೀಲನೆ ಮಾಡುವುದಾಗಿ ಜಯಚಂದ್ರ ಅವರು ತಿಳಿಸಿದರು. ಒಳಚರಂಡಿ ಯೋಜನೆಯ ಅನುಷ್ಠಾನಕ್ಕೆ ಹತ್ತು ವರ್ಷ ತೆಗೆದುಕೊಂಡಿರುವುದಕ್ಕೆ ತೀವ್ರ ಬೇಸರ ವ್ಯಕ್ತಪಡಿಸಿದರು.

Tags: SiraTB Jayachandra
Previous Post

ಮತ್ತೆ ಒಂದಾದ ’ಬಡವ ರಾಸ್ಕಲ್’ ತಂಡ: ಡಾಲಿ ಧನಂಜಯ್ ಹುಟ್ಟುಹಬ್ಬಕ್ಕೆ ’ಅಣ್ಣ From Mexico’ ಸಿನಿಮಾ ಅನೌನ್ಸ್

Next Post

ರಷ್ಯಾದಲ್ಲಿ ವಿಮಾನ ಪತನ- 10 ಸಾವು; ಕೊಲೆಯೋ..? ಅಪಘಾತವೋ..?

Related Posts

ಡಾ. ರಾಜ್‌ಕುಮಾರ್ ಜಯಂತಿ ಸಂಭ್ರಮದ ನಡುವೆ ಚೇತನ್ ಅಹಿಂಸ ಹೇಳಿಕೆಗೆ ವಿವಾದ
Top Story

ಲಕ್ಷ್ಮಣ ಸವದಿ ಎದುರೇ ಅವರ ಆಪ್ತನ ಅಕಾಲಿಕ ನಿಧನ

by ಪ್ರತಿಧ್ವನಿ
April 24, 2026
0

ಬೆಳಗಾವಿ: ಜಿಲ್ಲೆಯ ಅಥಣಿ ತಾಲೂಕಿನ ತಾಂವಶಿ ಗ್ರಾಮದಲ್ಲಿ ನಡೆದ ಗೃಹಪ್ರವೇಶ ಕಾರ್ಯಕ್ರಮದ ವೇಳೆ ದಾರುಣ ಘಟನೆ ಸಂಭವಿಸಿದ್ದು, ಮಾಜಿ ಜಿಲ್ಲಾ ಪಂಚಾಯತ್ ಅಧ್ಯಕ್ಷರು ಹಾಗೂ ಶಾಸಕ ಲಕ್ಷ್ಮಣ...

Read moreDetails
ಸಚಿವ ಡಿ. ಸುಧಾಕರ್ ಆರೋಗ್ಯ ಸ್ಥಿತಿ ಬಗ್ಗೆ ಕಿಮ್ಸ್ ಆಸ್ಪತ್ರೆಯಿಂದ ಹೆಲ್ತ್ ಬುಲೆಟಿನ್ ಬಿಡುಗಡೆ

ಸಚಿವ ಡಿ. ಸುಧಾಕರ್ ಆರೋಗ್ಯ ಸ್ಥಿತಿ ಬಗ್ಗೆ ಕಿಮ್ಸ್ ಆಸ್ಪತ್ರೆಯಿಂದ ಹೆಲ್ತ್ ಬುಲೆಟಿನ್ ಬಿಡುಗಡೆ

April 24, 2026
ಆಯುಕ್ತರ ಹೆಸರಿನಲ್ಲಿ ವಾಟ್ಸ್‌ಆಪ್ ವಂಚನೆ ಯತ್ನ: ಬೆಂಗಳೂರು ಪಾಲಿಕೆಗಳಿಂದ ಸಾರ್ವಜನಿಕರಿಗೆ ಎಚ್ಚರಿಕೆ

ಆಯುಕ್ತರ ಹೆಸರಿನಲ್ಲಿ ವಾಟ್ಸ್‌ಆಪ್ ವಂಚನೆ ಯತ್ನ: ಬೆಂಗಳೂರು ಪಾಲಿಕೆಗಳಿಂದ ಸಾರ್ವಜನಿಕರಿಗೆ ಎಚ್ಚರಿಕೆ

April 24, 2026
ಬ್ಯಾಂಕ್‌ನಲ್ಲೇ ಚಿನ್ನ ಕಳ್ಳತನ: ಅಸಿಸ್ಟೆಂಟ್ ಮ್ಯಾನೇಜರ್ ಕೃತ್ಯದಿಂದ ಗ್ರಾಹಕರಲ್ಲಿ ಆತಂಕ

ಬ್ಯಾಂಕ್‌ನಲ್ಲೇ ಚಿನ್ನ ಕಳ್ಳತನ: ಅಸಿಸ್ಟೆಂಟ್ ಮ್ಯಾನೇಜರ್ ಕೃತ್ಯದಿಂದ ಗ್ರಾಹಕರಲ್ಲಿ ಆತಂಕ

April 24, 2026
ಪ್ರಧಾನಿ ಮೋದಿ ಭೇಟಿ ಸುತ್ತ ಸುಳ್ಳು ಪ್ರಚಾರ: ಜಾಲತಾಣಗಳಲ್ಲಿ ಹರಿದ ವದಂತಿಗೆ ತೆರೆ

ಪ್ರಧಾನಿ ಮೋದಿ ಭೇಟಿ ಸುತ್ತ ಸುಳ್ಳು ಪ್ರಚಾರ: ಜಾಲತಾಣಗಳಲ್ಲಿ ಹರಿದ ವದಂತಿಗೆ ತೆರೆ

April 24, 2026
Next Post
ರಷ್ಯಾದಲ್ಲಿ ವಿಮಾನ ಪತನ- 10 ಸಾವು; ಕೊಲೆಯೋ..? ಅಪಘಾತವೋ..?

ರಷ್ಯಾದಲ್ಲಿ ವಿಮಾನ ಪತನ- 10 ಸಾವು; ಕೊಲೆಯೋ..? ಅಪಘಾತವೋ..?

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada