• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, May 29, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಸಿನಿಮಾ

ಬಂಡೆ ಮಹಾಕಾಳಿ ಸನ್ನಿಧಿಯಲ್ಲಿ ಸೆಟ್ಟೇರಿತು ರೂಪೇಶ್ ಶೆಟ್ಟಿ-ಜಾಹ್ನವಿ ‘ಅಧಿಪತ್ರ’ ಸಿನಿಮಾ

ಪ್ರತಿಧ್ವನಿ by ಪ್ರತಿಧ್ವನಿ
August 24, 2023
in ಸಿನಿಮಾ
0
ಬಂಡೆ ಮಹಾಕಾಳಿ ಸನ್ನಿಧಿಯಲ್ಲಿ ಸೆಟ್ಟೇರಿತು ರೂಪೇಶ್ ಶೆಟ್ಟಿ-ಜಾಹ್ನವಿ ‘ಅಧಿಪತ್ರ’ ಸಿನಿಮಾ
Share on WhatsAppShare on FacebookShare on Telegram

ಬಿಗ್ ಬಾಸ್ ಖ್ಯಾತಿಯ ರಾಕ್ ಸ್ಟಾರ್ ರೂಪೇಶ್ ಶೆಟ್ಟಿ ನಟನೆಯ ಅಧಿಪತ್ರ ಸಿನಿಮಾ ಇಂದು ಸೆಟ್ಟೇರಿದೆ. ಬೆಂಗಳೂರಿನ ಬಂಡೆ ಮಹಾಕಾಳಿ ಸನ್ನಿಧಿಯಲ್ಲಿ ಮುಹೂರ್ತ ನೆರವೇರಿದೆ. ಈಗಾಗಲೇ ತುಳು ಚಿತ್ರರಂಗದಲ್ಲಿ ಗುರುತಿಸಿಕೊಂಡಿರುವ ರೂಪೇಶ್ ಸ್ಯಾಂಡಲ್ವುಡ್ನಲ್ಲಿ ಹೊಸ ಹೆಜ್ಜೆ ಇಟ್ಟಿದ್ದಾರೆ.

ADVERTISEMENT

ನಟ ರೂಪೇಶ್ ಶೆಟ್ಟಿ ಮಾತನಾಡಿ, ಬಿಗ್ ಬಾಸ್ ಆದ್ಮೇಲೆ ಕನ್ನಡ ಸಿನಿಮಾ ಯಾವಾಗ ಎಂದು ಎಲ್ಲರೂ ಕೇಳುತ್ತಿದ್ದರು. ಬಿಗ್ ಬಾಸ್ ಗೂ ಮುಂಚೆ ಸರ್ಕಸ್ ಎಂಬ ತುಳು ಸಿನಿಮಾ ನಿರ್ದೇಶನ ಮಾಡಿ ನಟಿಸಿದ್ದೆ. ಆ ಚಿತ್ರದ ಕೆಲಸ ತುಂಬಾ ಇತ್ತು. ಈ ಚಿತ್ರದ ಕೆಲಸ ಮುಗಿಸಿ ಬೇರೆ ಸಿನಿಮಾದ ಒಪ್ಪಿಕೊಳ್ಳುವುದು ಎಂದು ತೀರ್ಮಾನ ಮಾಡಿದ್ದೆ. ದೇವರ ದಯೆಯಿಂದ ಆ ಚಿತ್ರ ಹಿಟ್ ಆಗಿದೆ. 150 ಥಿಯೇಟರ್ ಗಳಲ್ಲಿ ಓಡಿದೆ. ಅಧಿಪತ್ರ ಸಿನಿಮಾ ನಿರ್ದೇಶಕರು ಕಥೆ ಹೇಳಿದಾಗ ಇಂಟ್ರೆಸ್ಟ್ ಎನಿಸಿತು. ಅವರ ಮೊದಲ ಸಿನಿಮಾವಾದರೂ ಸ್ಕ್ರೀನ್ ಪ್ಲೇ ವಿವರಿಸಿದಾಗ ಎಷ್ಟು ತಯಾರಾಗಿದ್ದರೂ ಎಂದರೆ ಪ್ರತಿ ಸೀನ್ ಡ್ರಾಯಿಂಗ್ ಮಾಡಿಕೊಂಡಿದ್ದರು. ನನಗೆ ಅದನ್ನು ನೋಡಿ ತುಂಬಾ ಧೈರ್ಯ ಬಂತು. ಅವರಿಗೆ ಒಂದು ವಿಷನ್ ಇದೆ. ಈ ಕಾರಣದಿಂದ ಅಧಿಪತ್ರ ಸಿನಿಮಾ ಒಪ್ಪಿಕೊಂಡಿದ್ದೇನೆ. ಸದ್ಯದಲ್ಲಿ ಈ ಚಿತ್ರಕ್ಕಾಗಿ ನನ್ನ ಗೆಟಪ್ ಬದಲಾಗಲಿದೆ ಎಂದರು.

ನಟಿ ಜಾಹ್ನವಿ ಮಾತನಾಡಿ, ಅಧಿಪತ್ರ ಸಿನಿಮಾ ಈಗ ಶುರುವಾಗಿದೆ. ಇವತ್ತು ಮುಹೂರ್ತ ಆಗಿದೆ. ಈ ರೀತಿ ಒಂದು ಸಿನಿಮಾ ಬರ್ತಿದೆ ಅಂದಾಗಲೇ ತುಂಬಾ ಚೆನ್ನಾಗಿ ಪ್ರಮೋಷನ್ ಸಿಕ್ತಿದೆ. ಟೈಟಲ್ ತುಂಬಾ ಕ್ಯಾಚಿಯಾಗಿದೆ. ನನ್ನ ಪಾತ್ರದ ಹೆಸರು ಬೃಹತಿ. ನನ್ನ ಪಾತ್ರದ ರೀತಿ ಲ್ಲಾ ಪಾತ್ರದ ಹೆಸರು ಕೂಡ ವಿಭಿನ್ನವಾಗಿದೆ. ಈ ಸಿನಿಮಾ ತುಂಬಾ ಪಾಸಿಟಿವ್ ಆಗಿದೆ ಎಂದರು.

ನಿರ್ದೇಶಕ ಚಹನ್ ಶೆಟ್ಟಿ ಮಾತನಾಡಿ, ರೂಪೇಶ್ ಶೆಟ್ಟಿ ಹುಟ್ಟಹಬ್ಬಕ್ಕೆ ಟೈಟಲ್ ಅನೌನ್ಸ್ ಮಾಡಿದ್ದೆವು. ಆ ದಿನವೇ ನಮಗೆ ಒಳ್ಳೆ ಪ್ರೋತ್ಸಾಹ ಸಿಕ್ಕಿದೆ. ರೂಪೇಶ್ ಶೆಟ್ಟಿ ಅವರ ಹಿಂದಿನ ಸಿನಿಮಾಗಳಿಗಿಂತ ಈ ಚಿತ್ರದಲ್ಲಿ ವಿಭಿನ್ನ ಪಾತ್ರ ನಿರ್ವಹಿಸಲಿದ್ದಾರೆ. ಗಣೇಶ್ ಹಬ್ಬದ ಬಳಿಕ ಶೂಟಿಂಗ್ ಶುರುವಾಗಲಿದೆ. ಚಿತ್ರದಲ್ಲಿ ಎರಡು ಹಾಡುಗಳಿವೆ.

ತುಳು ಸಿನಿಮಾರಂಗದಲ್ಲಿ ರೂಪೇಶ್ ಶೆಟ್ಟಿಗೆ ಸಾಕಷ್ಟು ಅನುಭವ ಇದೆ. ಸಿನಿಮಾದ ನಾನಾ ವಿಭಾಗಳಲ್ಲಿ ಕೆಲಸ ಮಾಡಿದ್ದಾರೆ. ನಟನಾಗಿ ಮತ್ತು ನಿರ್ದೇಶಕನಾಗಿ ಅವರು ಅಲ್ಲಿ ನೆಲೆ ಕಂಡುಕೊಂಡಿದ್ದಾರೆ. ಬಿಗ್ ಬಾಸ್ಗೆ ಕಾಲಿಟ್ಟ ಬಳಿಕ ಅವರಿಗೆ ಜನಪ್ರಿಯತೆ ಹೆಚ್ಚಾಯಿತು. ಬಿಗ್ ಬಾಸ್ ವಿನ್ ಆದ ಬಳಿಕ ಅವರು ತುಳು ಭಾಷೆಯ ‘ಸರ್ಕಸ್’ ಸಿನಿಮಾವನ್ನು ನಿರ್ದೇಶಿಸಿ, ನಿರ್ಮಾಣ ಮಾಡಿದರು. ಆ ಸಿನಿಮಾದಿಂದ ಅವರಿಗೆ ದೊಡ್ಡ ಯಶಸ್ಸು ಸಿಕ್ಕಿತು. ಕನ್ನಡದಲ್ಲಿ ಸ್ವಲ್ಪ ತಡವಾಗಿ ಆದರೂ ಪರವಾಗಿಲ್ಲ, ಒಂದು ಒಳ್ಳೆಯ ಕಥೆಯ ಮೂಲಕ, ಡಿಫರೆಂಟ್ ಆದಂತಹ ಪಾತ್ರದ ಮೂಲಕ ಪ್ರೇಕ್ಷಕರ ಎದುರು ಬರಬೇಕು ಎಂಬುದು ರೂಪೇಶ್ ಶೆಟ್ಟಿ ಅವರ ಉದ್ದೇಶ ಆಗಿತ್ತು. ಅದೆಲ್ಲವನ್ನೂ ಗಮನದಲ್ಲಿ ಇಟ್ಟುಕೊಂಡು ಅವರು ‘ಅಧಿಪತ್ರ’ ಸಿನಿಮಾ ಒಪ್ಪಿಕೊಂಡಿದ್ದಾರೆ.

ಸುದ್ದಿವಾಹಿನಿಯಲ್ಲಿ ನಿರೂಪಕಿಯಾಗಿ ಗುರುತಿಸಿಕೊಂಡಿರುವ ಜಾಹ್ನವಿ, ಅಲ್ಲಿಂದ ಕಿರುತೆರೆ ರಿಯಾಲಿಟಿ ಶೋಗಳಲ್ಲಿಯೂ ಕಣಕ್ಕಿಳಿದು ಇದೀಗ ನೇರವಾಗಿ ಸಿನಿಮಾ ನಾಯಕಿಯಾಗಿ ಹೊಸ ಇನ್ನಿಂಗ್ಸ್‌ ಆರಂಭಿಸಿದ್ದಾರೆ. ರೂಪೇಶ್‌ ಶೆಟ್ಟಿ ಅಧಿಪತ್ರ ಚಿತ್ರದಲ್ಲಿ ನಾಯಕಿಯಾಗಿ ನಟಿಸುತ್ತಿದ್ದಾರೆ. ಈ ಹಿಂದೆ ಕೆಲವು ಸಿನಿಮಾಗಳಲ್ಲಿ ಸಹಾಯಕ ನಿರ್ದೇಶಕರಾಗಿ ಹಾಗೂ ಇವರು ನಿರ್ದೇಶನ ಮಾಡಿದ ಶಾರ್ಟ್ ಫಿಲಂ ಸಾಮಾಜಿಕ ಜಾಲತಾಣಗಳಲ್ಲಿ ಉತ್ತಮ ಪ್ರಶಂಸೆ ಪಡೆದಿತ್ತು ಹಾಗೂ ಕೆಲವು ಜಾಹಿರಾತು ಗಳಿಗೆ ನಿರ್ದೇಶನ ಮಾಡಿರುವ ಅನುಭವ ಹೊಂದಿರುವ ಚಯನ್ ಶೆಟ್ಟಿ, ಅಧಿಪತ್ರ ಚಿತ್ರವನ್ನು ನಿರ್ದೇಶಿಸುತ್ತಿದ್ದಾರೆ. ಈ ಸಿನಿಮಾಕ್ಕೆ ಕೆ.ಆರ್ ಸಿನಿಕಂಬೈನ್ಸ್ ಬ್ಯಾನರ್ ಬಂಡವಾಳ ಹೂಡುತ್ತಿದ್ದು, ನೈಜ ಘಟನೆಯಿಂದ ಸ್ಫೂರ್ತಿ ಪಡೆದು ಸಸ್ಪೆನ್ಸ್ ಥ್ರಿಲ್ಲರ್ ಶೈಲಿಯಲ್ಲಿ ಸಿನಿಮಾ ಮೂಡಿಬರಲಿದೆ.

Tags: kannada new movieKFIRoopesh Shettysandalwood
Previous Post

ಮುಕ್ತಾಯ ಹಂತದಲ್ಲಿ ಶಿವಣ್ಣ – ಪ್ರಭುದೇವ ಅಭಿನಯದ “ಕರಟಕ ದಮನಕ” ಚಿತ್ರ..!

Next Post

ಇನ್‌ಸ್ಟಾಗ್ರಾಂನಲ್ಲಿ ಪರಿಚಯವಾದ ಯುವತಿ, ಲಾಡ್ಜ್‌ಗೆ ಕರೆದೊಯ್ದು ಯುವಕನಿಂದ ಅತ್ಯಾಚಾರ

Related Posts

ಬೆಂಗಳೂರಿನಲ್ಲಿ ‘ಪೆದ್ದಿ’ ಪ್ರಮೋಷನ್..ರಾಮ್ ಚರಣ್ ಗೆ ರಾಷ್ಟ್ರಪ್ರಶಸ್ತಿ ಕೊಡ್ಬೇಕು ಎಂದ ಶಿವಣ್ಣ
Top Story

ಬೆಂಗಳೂರಿನಲ್ಲಿ ‘ಪೆದ್ದಿ’ ಪ್ರಮೋಷನ್..ರಾಮ್ ಚರಣ್ ಗೆ ರಾಷ್ಟ್ರಪ್ರಶಸ್ತಿ ಕೊಡ್ಬೇಕು ಎಂದ ಶಿವಣ್ಣ

by ಪ್ರತಿಧ್ವನಿ
May 26, 2026
0

ಬೆಂಗಳೂರು : ಗ್ಲೋಬಲ್ ಸ್ಟಾರ್ ರಾಮ್ ಚರಣ್ ನಟನೆಯ ಬಹು ನಿರೀಕ್ಷಿತ ಪೆದ್ದಿ ಸಿನಿಮಾದ ಪ್ರಚಾರ ಜೋರಾಗಿದೆ. ಮುಂಬೈನಲ್ಲಿ ಅದ್ದೂರಿಯಾಗಿ ಟ್ರೇಲರ್ ಲಾಂಚ್ ಮಾಡಿದ್ದ ಚಿತ್ರತಂಡ ನಿನ್ನೆ...

Read moreDetails
ಬಿಪಿಎಲ್ ಕುಟುಂಬಗಳಿಗೆ ಶಾಕ್: ಅಕ್ಕಿ ಪ್ರಮಾಣ ಕಡಿತದ ಹಿಂದೆ ಏನು ಕಾರಣ?

ಮರಾಠಿ ಭಾಷೆಗೆ ರಿಮೇಕ್‌ ಆದ ಕನ್ನಡದ ‘ಸು ಫ್ರಮ್‌ ಸೋ’

May 25, 2026
ದರ್ಶನ್‌ ಆತ್ಮಹತ್ಯೆ ವದಂತಿಗೆ ಜೈಲು ಡಿಜಿಪಿ ಸ್ಪಷ್ಟನೆ ಏನು

ದರ್ಶನ್‌ ಆತ್ಮಹತ್ಯೆ ವದಂತಿಗೆ ಜೈಲು ಡಿಜಿಪಿ ಸ್ಪಷ್ಟನೆ ಏನು

May 21, 2026
ಕೆಡಿ ಗಳಿಸಿದ್ದು 23 ಕೋಟಿನಾ? ಇದು ಗೆಲುವಾ, ಸೋಲಾ?

ಕೆಡಿ ಗಳಿಸಿದ್ದು 23 ಕೋಟಿನಾ? ಇದು ಗೆಲುವಾ, ಸೋಲಾ?

May 20, 2026
ಜೂ.ಎನ್‌ಟಿಆರ್‌ ಬರ್ತ್‌ಡೇಗೆ ಬಂತು ಡ್ರ್ಯಾಗನ್‌ ಗ್ಲಿಂಪ್ಸ್!‌ : ಚರ್ಚೆಗೆ ಕಾರಣವಾಯ್ತು ಪ್ರಶಾಂತ್‌ ನೀಲ್‌ ಸಿನಿಮಾ

ಜೂ.ಎನ್‌ಟಿಆರ್‌ ಬರ್ತ್‌ಡೇಗೆ ಬಂತು ಡ್ರ್ಯಾಗನ್‌ ಗ್ಲಿಂಪ್ಸ್!‌ : ಚರ್ಚೆಗೆ ಕಾರಣವಾಯ್ತು ಪ್ರಶಾಂತ್‌ ನೀಲ್‌ ಸಿನಿಮಾ

May 20, 2026
Next Post
ಇನ್‌ಸ್ಟಾಗ್ರಾಂನಲ್ಲಿ ಪರಿಚಯವಾದ ಯುವತಿ, ಲಾಡ್ಜ್‌ಗೆ ಕರೆದೊಯ್ದು ಯುವಕನಿಂದ ಅತ್ಯಾಚಾರ

ಇನ್‌ಸ್ಟಾಗ್ರಾಂನಲ್ಲಿ ಪರಿಚಯವಾದ ಯುವತಿ, ಲಾಡ್ಜ್‌ಗೆ ಕರೆದೊಯ್ದು ಯುವಕನಿಂದ ಅತ್ಯಾಚಾರ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada