• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Monday, May 25, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಶಿವಮೊಗ್ಗ ಲೋಕಸಭಾ ಕ್ಷೇತ್ರ: ಕಾಂಗ್ರೆಸ್‌ನಿಂದ ಆಯನೂರು ಮಂಜುನಾಥ್‌ ಕಣಕ್ಕೆ?

ಪ್ರತಿಧ್ವನಿ by ಪ್ರತಿಧ್ವನಿ
August 24, 2023
in Top Story, ರಾಜಕೀಯ
0
ಶಿವಮೊಗ್ಗ ಲೋಕಸಭಾ ಕ್ಷೇತ್ರ: ಕಾಂಗ್ರೆಸ್‌ನಿಂದ ಆಯನೂರು ಮಂಜುನಾಥ್‌ ಕಣಕ್ಕೆ?
Share on WhatsAppShare on FacebookShare on Telegram

ಆಪರೇಶನ್ ಹಸ್ತ ಭರದಿಂದ ಸಾಗುತ್ತಿದ್ದು, ಈಗಾಗಲೇ ಹೀನಾಯವಾಗಿ ಸೋತಿರುವ ಬಿಜೆಪಿ ಹಾಗೂ ಜೆಡಿಎಸ್‌ಗೆ ಭಾರೀ ಆತಂಕ ಶುರುವಾಗಿದೆ. ಲೋಕಸಭಾ ಚುನಾವಣೆಯಲ್ಲಿ ರಾಜ್ಯದಿಂದ 20 ಕ್ಷೇತ್ರಗಳನ್ನು ಗೆಲ್ಲಿಸಿಕೊಡುವುದಾಗಿ INDIA ಮೈತ್ರಿಕೂಟದ ನಾಯಕರಿಗೆ ಡಿಸಿಎಂ ಡಿಕೆ ಶಿವಕುಮಾರ್‌ ಭರವಸೆ ನೀಡಿದ್ದರು. ಅದಕ್ಕೆ ಬೇಕಾದ ಸಿದ್ಧತೆ ಡಿಕೆಶಿ ಶುರು ಮಾಡಿದ್ದು, ಜೆಡಿಎಸ್‌, ಬಿಜೆಪಿಯಲ್ಲಿರುವ ನಾಯಕರನ್ನು ತಮ್ಮೆಡೆಗೆ ಸೆಳೆಯುತ್ತಿದ್ದಾರೆ.

ADVERTISEMENT

ಶಿವಮೊಗ್ಗದ ಮಾಜಿ ರಾಜ್ಯ ಸಭಾ ಸದಸ್ಯ, ಮಾಜಿ ಶಾಸಕ ಮತ್ತು ಮಾಜಿ ವಿಧಾನ ಪರಿಷತ್ ಸದಸ್ಯ ಅಯನೂರು ಮಂಜುನಾಥ್ ಒಂದು ಇಂದು ಬೆಂಗಳೂರಲ್ಲಿ ಕಾಂಗ್ರೆಸ್ ಪಕ್ಷದಲ್ಲಿ ಸೇರ್ಪಡೆಗೊಂಡಿದ್ದಾರೆ.

ರಾಜ್ಯದಲ್ಲಿರುವ ಕಾಂಗ್ರೆಸ್‌ ಪರ ಅಲೆಯನ್ನು ಸರಿಯಾಗಿ ಬಳಸಿಕೊಳ್ಳಲು ಕೈ ಪಾಳೆಯ ಹವಣಿಸಿದ್ದು, ಲೋಕಸಭಾ ಚುನಾವಣೆಯಲ್ಲಿ ಶಿವಮೊಗ್ಗ ಲೋಕಸಭಾ ಕ್ಷೇತ್ರಕ್ಕೆ ಗೆಲ್ಲುವ ಸಾಮರ್ಥ್ಯದ ನಾಯಕನನ್ನು ಕಾಂಗ್ರೆಸ್‌ ಹುಡುಕುತ್ತಿತ್ತು.

ಆಯನೂರು ಮಂಜುನಾಥ್‌ ಕಾಂಗ್ರೆಸ್‌ ಸೇರಿರುವುದರಿಂದ ಈ ಹುಡುಕಾಟ ಬಹುಷ ಕೊನೆಗೊಂಡಿರಬಹುದು ಎಂದು ಹೇಳಲಾಗಿದೆ.

ಕಳೆದ ವಿಧಾನಸಭೆಗೆ ಕಾಂಗ್ರೆಸ್ ನಿಂದ ಸ್ಪರ್ಧಿಸುವ ಆಕಾಂಕ್ಷೆ ಹೊಂದಿದ್ದ ಆಯನೂರು ಮಂಜುನಾಥ್ ಅದಕ್ಕಾಗಿ ವಿಧಾನ ಪರಿಷತ್ ನ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದರು. ಬಿಜೆಪಿ ನಾಯಕರ ವಿರುದ್ಧ ಹರಿಹಾಯ್ದು ಪಕ್ಷವನ್ನೂ ತೊರೆದಿದ್ದರು. ಕೆಪಿಸಿಸಿ ಮಟ್ಟದಲ್ಲಿ ಅವರ ಸೇರ್ಪಡೆಗೆ ಒಪ್ಪಿಗೆ ಸಿಕ್ಕರೂ ಎಐಸಿಸಿಯಲ್ಲಿ ಅದಕ್ಕೆ ತಡೆ ಬಿದ್ದಿತ್ತು. ಹೀಗಾಗಿ ಜೆಡಿಎಸ್ ಸೇರಿ ಚುನಾವಣೆ ಸ್ಪರ್ಧಿಸಿದ್ದರು.

ಇದೀಗ ಜೆಡಿಎಸ್‌ ಬಿಜೆಪಿಯೊಂದಿಗೆ ಸೇರಲಿದೆ ಎಂಬ ಊಹಾಪೋಹಗಳು ಕೇಳಿ ಬಂದಿರುವುದರಿಂದ ಬಿಜೆಪಿ ತೊರೆದು ಜೆಡಿಎಸ್‌ ಸೇರಿರುವ ನಾಯಕರಲ್ಲಿ ತಳಮಳ ಉಂಟಾಗಿದೆ. ಈ ಹಿನ್ನೆಲೆಯಲ್ಲಿ ಆಯನೂರು ಮಂಜುನಾಥ್‌ ಅವರು ಜೆಡಿಎಸ್‌ನಿಂದ ಕಾಂಗ್ರೆಸ್‌ಗೆ ಜಂಪ್‌ ಆಗಿದ್ದಾರೆ.

“ಈ ಹಿಂದೆ ನಾನು ಬಿಜೆಪಿ ಬಿಡಬೇಕು ಎಂದು ನಿರ್ಧಾರ ಮಾಡಿದ್ದಾಗ ಕಾಂಗ್ರೆಸ್ ನಲ್ಲಿ ಅವಕಾಶ ಇರಲಿಲ್ಲ. ಆಗ ಹೆಚ್ ಡಿ ಕುಮಾರಸ್ವಾಮಿಯವರು ಅವಕಾಶ ಕೊಟ್ಟರು. ಬದಲಾದ ಸನ್ನಿವೇಶದಲ್ಲಿ ಮುಂದಿನ ಚುನಾವಣೆ ದೃಷ್ಟಿಯಿಂದ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗುತ್ತಿದ್ದೇನೆ” ಆಯನೂರು ಹೇಳಿದ್ದಾರೆ.

ಮುಂದಿನ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡೇ ಪಕ್ಷ ಬದಲಿಸುತ್ತಿದ್ದೇನೆ ಎಂದು ಆಯನೂರು ಸ್ಪಷ್ಟಪಡಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಶಿವಮೊಗ್ಗದ ಲೋಕಸಭಾ ಕ್ಷೇತ್ರಕ್ಕೆ ಆಯನೂರು ಮಂಜುನಾಥ್‌ ಸಂಭಾವ್ಯ ಅಭ್ಯರ್ಥಿ ಎನ್ನಲಾಗಿದೆ.

Tags: Ayanur ManjunathCongress PartyConstituencyJDSLok SabhaShimogaಬಿ ಎಸ್ ಯಡಿಯೂರಪ್ಪಬಿಜೆಪಿ
Previous Post

ಮಹಿಳಾ ರಾಜಕಾರಣಿಗಳ ಬಗ್ಗೆ ಅವಹೇಳನಕಾರಿ ಬರಹ: ವಿಶ್ವೇಶ್ವರ್‌ ಭಟ್‌ ವಿರುದ್ಧ ಪ್ರಕರಣ ದಾಖಲು

Next Post

ಚೆಸ್‌ ವಿಶ್ವಕಪ್:‌ ಕೊನೆ ಕ್ಷಣದಲ್ಲಿ ಕಾರ್ಲಸನ್‌ ವಿರುದ್ಧ ವಿರೋಚಿತ ಸೋಲು ಕಂಡ ಪ್ರಜ್ಞಾನಂದ

Related Posts

ಕಾಂಗ್ರೆಸ್‌ ವೈಫಲ್ಯಗಳಿಂದ ಗೆಲ್ತೀವಿ ಎಂಬ ಭ್ರಮೆಯಿಂದ ಹೊರಬನ್ನಿ : ಬಿಜೆಪಿ ನಾಯಕರಿಗೆ ನಿತಿನ್‌ ನಬಿನ್‌ ಸಂಘಟನೆಯ ಪಾಠ..!
Top Story

ಕಾಂಗ್ರೆಸ್‌ ವೈಫಲ್ಯಗಳಿಂದ ಗೆಲ್ತೀವಿ ಎಂಬ ಭ್ರಮೆಯಿಂದ ಹೊರಬನ್ನಿ : ಬಿಜೆಪಿ ನಾಯಕರಿಗೆ ನಿತಿನ್‌ ನಬಿನ್‌ ಸಂಘಟನೆಯ ಪಾಠ..!

by ಪ್ರತಿಧ್ವನಿ
May 24, 2026
0

ಬೆಂಗಳೂರು : ಬಿಜೆಪಿ ರಾಷ್ಟ್ರಾಧ್ಯಕ್ಷ ನಿತಿನ್‌ ನಬಿನ್‌ ಕರ್ನಾಟಕ ರಾಜ್ಯ ಪ್ರವಾಸದಲ್ಲಿದ್ದಾರೆ. ಆಡಳಿತಾರೂಢ ಕಾಂಗ್ರೆಸ್‌ ಪಕ್ಷದ ಅಲೆಯ ಎದುರು ಪಕ್ಷವನ್ನು ಬಲಪಡಿಸುವ ನಿಟ್ಟಿನಲ್ಲಿ ಹಾಗೂ ಸಂಘಟನೆಯ ದೃಷ್ಟಿಯಿಂದಲೂ...

Read moreDetails
BREAKING NEWS : ಭಟ್ಕಳದಲ್ಲಿ ಭೀಕರ ದುರಂತ! : ಕಪ್ಪೆ ಚಿಪ್ಪು ತೆಗೆಯಲು ಹೋದವರು ಜಲಸಮಾಧಿ

BREAKING NEWS : ಭಟ್ಕಳದಲ್ಲಿ ಭೀಕರ ದುರಂತ! : ಕಪ್ಪೆ ಚಿಪ್ಪು ತೆಗೆಯಲು ಹೋದವರು ಜಲಸಮಾಧಿ

May 24, 2026
ವಿಶೇಷಚೇತನರ ಸಬಲೀಕರಣಕ್ಕೆ ಕೈ ಜೋಡಿಸೋಣ : ಸಂತೋಷ್‌ ಲಾಡ್‌ ಕರೆ..

ವಿಶೇಷಚೇತನರ ಸಬಲೀಕರಣಕ್ಕೆ ಕೈ ಜೋಡಿಸೋಣ : ಸಂತೋಷ್‌ ಲಾಡ್‌ ಕರೆ..

May 24, 2026
ಟ್ರಂಪ್‌ ಹೆರ್‌ಸ್ಟೈಲ್‌ನಂತೆ ಕಾಣುವ ಅಪರೂಪದ ಎಮ್ಮೆ ವೈರಲ್‌; ಬಾಂಗ್ಲಾದೇಶದಲ್ಲಿ ‘ಡೊನಾಲ್ಡ್ ಟ್ರಂಪ್’ಗೆ ಭಾರೀ ಕ್ರೇಜ್!

‘ಸಿಜೆಪಿ’ ಪೇಜ್ ಹ್ಯಾಕ್‌? ‘ಕಾಕ್ರೋಚ್ ಜನತಾ ಪಕ್ಷ’ ಅಭಿಜಿತ್ ದಿಪ್ಕೆ ಹೇಳಿದ್ದೇನು? 

May 23, 2026
ಟ್ರಂಪ್‌ ಹೆರ್‌ಸ್ಟೈಲ್‌ನಂತೆ ಕಾಣುವ ಅಪರೂಪದ ಎಮ್ಮೆ ವೈರಲ್‌; ಬಾಂಗ್ಲಾದೇಶದಲ್ಲಿ ‘ಡೊನಾಲ್ಡ್ ಟ್ರಂಪ್’ಗೆ ಭಾರೀ ಕ್ರೇಜ್!

ಮುಂಗಾರು ಅಬ್ಬರ: ರಾಜ್ಯಾದ್ಯಂತ ಭಾರೀ ಮಳೆ, ಉತ್ತರ ಕರ್ನಾಟಕದಲ್ಲಿ ಆಲಿಕಲ್ಲು ಮಳೆ ಎಚ್ಚರಿಕೆ

May 23, 2026
Next Post
ಚೆಸ್‌ ವಿಶ್ವಕಪ್:‌  ಕೊನೆ ಕ್ಷಣದಲ್ಲಿ ಕಾರ್ಲಸನ್‌ ವಿರುದ್ಧ ವಿರೋಚಿತ ಸೋಲು ಕಂಡ ಪ್ರಜ್ಞಾನಂದ

ಚೆಸ್‌ ವಿಶ್ವಕಪ್:‌ ಕೊನೆ ಕ್ಷಣದಲ್ಲಿ ಕಾರ್ಲಸನ್‌ ವಿರುದ್ಧ ವಿರೋಚಿತ ಸೋಲು ಕಂಡ ಪ್ರಜ್ಞಾನಂದ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada