• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Saturday, April 25, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಇದೀಗ

ಸಮಗ್ರ ಅಭಿವೃದ್ದಿಗೆ ನೀಲಿನಕ್ಷೆ ತಯಾರಿಸಿ ಸಲ್ಲಿಸಿ: ಸಚಿವ ಪ್ರಿಯಾಂಕ್‌ ಖರ್ಗೆ ಸೂಚನೆ

ಪ್ರತಿಧ್ವನಿ by ಪ್ರತಿಧ್ವನಿ
August 29, 2023
in ಇದೀಗ, ಕರ್ನಾಟಕ, ರಾಜಕೀಯ
0
ಪ್ರಿಯಾಂಕ್‌ ಖರ್ಗೆ

ಪ್ರಿಯಾಂಕ್‌ ಖರ್ಗೆ ಸಭೆ

Share on WhatsAppShare on FacebookShare on Telegram

ಚಿತ್ತಾಪುರ ತಾಲೂಕು ಸಮಗ್ರ ಅಭಿವೃದ್ದಿಗೊಳಿಸಲು ಮುಂದಿನ ಐದು ವರ್ಷಗಳ ಅವಧಿಗಾಗಿ ನೂತನ ಯೋಜನೆಗಳ ಬಗ್ಗೆ ಪರಿಕಲ್ಪನೆ ಹೊಂದಿ ಆ ಬಗ್ಗೆ ವರದಿ ತಯಾರಿಸುವಂತೆ ಕಳೆದ ಸಭೆಯಲ್ಲಿ ಸೂಚಿಸಿದ್ದೆ, ಆದರೆ ಸರ್ಕಾರದ ಬಹುತೇಕ ಇಲಾಖೆಗಳ ಅಧಿಕಾರಿಗಳು ಆ ಬಗ್ಗೆ ಗಮನ ಹರಿಸಿಲ್ಲ ಎಂದು ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಮತ್ತು ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಅಸಮಾಧಾನ ವ್ಯಕ್ತಪಡಿಸಿದರು.

ADVERTISEMENT

ಕಲಬುರಗಿ ಜಿಲ್ಲೆಯ ಚಿತ್ತಾಪುರ ಪಟ್ಟಣದ ತಾಪಂ ಸಭಾಂಗಣದಲ್ಲಿ ನಡೆದ ಅಧಿಕಾರಿಗಳ ಸಭೆಯಲ್ಲಿ ಅಧ್ಯಕ್ಷತೆವಹಿಸಿ ಅವರು ಮಾತನಾಡುತ್ತಿದ್ದರು.

ಚಿತ್ತಾಪುರ ತಾಲೂಕಿನಲ್ಲಿ ಮಳೆಯ ಅಭಾವದಿಂದಾಗಿ ಉದ್ದು ಹಾಗೂ ಹೆಸರು ಸಂಪೂರ್ಣ ಹಾನಿಯಾಗಿದೆ. ತೊಗರಿ ಶೇ 100% ಬಿತ್ತನೆ ಪೂರ್ಣಗೊಂಡಿದೆ. ಆದರೆ, ಇನ್ನೊಂದು ವಾರದೊಳಗೆ ಮಳೆ ಬೀಳದೆ ಇದ್ದರೆ ತೊಗರಿ ಬೆಳೆಯೂ ಕೂಡಾ ಹಾನಿಯಾಗಲಿದೆ ಎಂದು ಕೃಷಿ ಇಲಾಖೆ ಸಹಾಯಕ ನಿರ್ದೇಶಕ ಸಂಜೀವ್ ತಿಳಿಸಿದರು.

ತೊಗರಿಯ ನೆಟೆ‌ರೋಗದ ಪರಿಹಾರದ ಮೂರು ಹಂತಗಳ ಪೈಕಿ ಇದುವರೆಗೆ ಒಂದು ಹಂತದ ಪರಿಹಾರ ಬಿಡುಗಡೆಯಾಗಿದ್ದು ಇನ್ನುಳಿದ ಹಂತದ ಪರಿಹಾರ ಬಿಡುಗಡೆ ಈಗಾಗಲೇ ಮೇಲಾಧಿಕಾರಿಗಳಿಗೆ ಪತ್ರ ಬರೆಯಲಾಗಿದೆ. ಜೊತೆಗೆ ಬರ ಘೋಷಣೆ ಮಾಡುತ್ತಿರುವ ಹಿನ್ನೆಲೆಯಲ್ಲಿ ಬೆಳೆ ಹಾನಿಯ ಸರ್ವೆ ಮಾಡಲಾಗಿದೆ ಎಂದರು.

ತಾಲೂಕಿಗೆ ಗೊಡೌನ್ ಅವಶ್ಯಕತೆ ಇದ್ದು ನಿರ್ಮಾಣ ಮಾಡಿದರೆ ರೈತರಿಗೆ ಅನುಕೂಲವಾಗಲಿದೆ ಎಂದು ಅಧಿಕಾರಿ ತಿಳಿಸಿದಾಗ ಪ್ರಸ್ತಾವನೆ ಸಲ್ಲಿಸಿ ಎಂದು ಸಚಿವರು ಸೂಚಿಸಿದರು.

ಹಳೆ ಕಲ್ಯಾಣಿಗಳ ಪುನಶ್ಚೇತನಗೊಳಿಸುವುದು ಸೇರಿದಂತೆ ತಾಲೂಕಿನ ಜಲಮೂಲಗಳ ಸಂರಕ್ಷಣೆಗೆಗಾಗಿ ಯೋಜನೆ ಹಾಕಿಕೊಳ್ಳಲಾಗಿದ್ದು, ಸಣ್ಣ, ಬೃಹತ್ ನೀರಾವರಿ ಇಲಾಖೆ, ಕೆಬಿಜೆಎನ್‌ಎಲ್, ಕೆಎನ್ ಎನ್ ಎಲ್ ಹಾಗೂ ಗ್ರಾಮೀಣ ಕುಡಿಯುವ ನೀರು ಸರಬರಾಜು ಇಲಾಖೆಗಳಯ ಜಂಟಿಯಾಗಿ ನೀಲನಕ್ಷೆ ತಯಾರಿಸಿ ಎಂದು ಸಚಿವರು ಸೂಚಿಸಿದರು.

ಸನ್ನತಿ ಏತ ನೀರಾವರಿ ಯೋಜನೆಯಡಿಯಲ್ಲಿ 16,000 ಹೆಕ್ಟೇರ್ ಪ್ರದೇಶಕ್ಕೆ ನೀರಾವರಿ ಸೌಲಭ್ಯ ಕಲ್ಪಿಸುವ ಗುರಿ ಹೊಂದಲಾಗಿದ್ದು, ಈವರೆಗೆ 11,830 ಹೆಕ್ಟರ್ ನೀರಾವರಿ ಹೊಂದಲಾಗಿದ್ದು ಸ್ಥಳೀಯ ರೈತರ ಅಸಹಕಾರದಿಂದಾಗಿ ಬಾಕಿ‌ಇರುವ ಪ್ರದೇಶಕ್ಕೆ ನೀರಾವರಿ ಕಲ್ಪಿಸಲಾಗಿಲ್ಲ ಎಂದು ಕೆಎನ್ ಎನ್ ಎಲ್ ಅಧಿಕಾರಿಗಳು ತಿಳಿಸಿದರು.

ಪುನರ್ವಸತಿ ಕುರಿತಂತೆ ಯಾವ ಕ್ರಮ‌ಕೈಗೊಳ್ಳಲಾಗಿದೆ ಎಂದು ಸಚಿವರು ಅಧಿಕಾರಿಗಳಿಗೆ ಪ್ರಶ್ನಿಸಿದಾಗ ಉತ್ತರಿಸಿದ ಅಧಿಕಾರಿಗಳು ಸನ್ನತಿ ಯೋಜನೆಯಿಂದಾಗಿ ಸನ್ನತಿ ಗ್ರಾಮ ಭಾದ್ಯಸ್ಥವಾಗುವುದಿಲ್ಲ ಆದರೆ, ಹುರಸಗುಂಡಗಿ ಗ್ರಾಮದ 700 ಕ್ಕೂ ಅಧಿಕ ಮನೆಗಳು ಹಾನಿಯಾಗುತ್ತಿದ್ದು ಆ ಪೈಕಿ 400 ಕ್ಕೂ ಅಧಿಕ ಮನೆಗಳಿಗೆ ಪರಿಹಾರ ನೀಡಲಾಗಿದೆ ಎಂದು ಅಧಿಕಾರಿಗಳು ತಿಳಿಸಿದರು.

ಕೆಎನ್‌ಎನ್ ಎಲ್‌ಇಲಾಖೆಯ ವತಿಯಿಂದ ಎಸ್ ಸಿಪಿ/ ಟಿಎಸ್ ಪಿ ಯೋಜನೆಯಡಿಯಲ್ಲಿ ಈ ಹಿಂದೆ ಕರೆಯಲಾಗಿರುವ ಎಲ್ಲ ಟೆಂಡರ್ ಗಳನ್ನು ರದ್ದುಗೊಳಿಸಿ ಹೊಸದಾಗಿ ಟೆಂಡರ್ ಕರೆಯಲು ಕ್ರಮ ಕೈಗೊಳ್ಳಿ ಎಂದು ಸಚಿವರು ಸೂಚಿಸಿದರು.

ಪಿಎಂ‌ಜಿಎಸ್ ವೈ ಹಾಗೂ ಪಿಆರ್ ಇ ಇಲಾಖೆಯವರು ಯಾವ ರಸ್ತೆಗಳನ್ನು ಮೇಲ್ದರ್ಜೆಗೇರಿಸಬೇಕು ಎನ್ನುವ ಕುರಿತು ಪ್ರಸ್ತಾವನೆ ಸಲ್ಲಿಸಿದ್ದೀರಾ ಎಂದು ಸಚಿವರು ಪ್ರಶ್ನಿಸಿದಾಗ ಸಿಇಓ ಅವರಿಗೆ ಕಳಿಸಿದ್ದೇವೆ ಎಂದು ಅಧಿಕಾರಿಗಳು ತಿಳಿಸಿದರು.

15 ಹೊಸ ಶಾಲೆಗಳ ನಿರ್ಮಾಣಕ್ಕಾಗಿ ನೀಲಿನಕ್ಷೆ ತಯಾರಿಸಲಾಗಿದೆ ಎಂದು ಬಿಇಓ ಸಿದ್ದವೀರಯ್ಯ ರುದ್ನೂರು ಹೇಳಿದಾಗ, ಶಾಲೆ ಕಟ್ಟಡಗಳ ನಿರ್ಮಾಣಕ್ಕಾಗಿ ಕೋಟಿಗಟ್ಟಲೇ ಅನುದಾನ ಬಿಡುಗಡೆ ಮಾಡಿದ್ದರೂ ಕೂಡಾ ಕಳಪೆ ಕಾಮಗಾರಿ ಆಗುತ್ತಿವೆ ಎಂದು ಸಚಿವರು ಅಸಮಧಾನ ವ್ಯಕ್ತಪಡಿಸಿದರು. ಕಟ್ಟಡಗಳ ಕಳಪೆ ಕಾಮಗಾರಿಯಲ್ಲಿ ಅಧಿಕಾರಿಗಳು ಯಾವುಕ್ಕೆ ಕ್ರಮ ಯಾಕೆ ಕೈಗೊಳ್ಳುವುದಿಲ್ಲ. ಕಟ್ಟಡ ನಿರ್ಮಾಣ ಮಾಡಿ ನಾಲ್ಕು ವರ್ಷ ಆಗಿರುವುದಿಲ್ಲ ಆದರೂ ಸೋರುತ್ತಿವೆ ಯಾಕೆ ? ಎಂದರು.

ತಾಲೂಕಿನಲ್ಲಿ 334 ಶಿಕ್ಷಕರ ಕೊರತೆ ಇದ್ದು 254 ಅತಿಥಿ ಶಿಕ್ಷಕರನ್ನು ಇಲಾಖೆ ಒದಗಿಸಿದೆ ಎಂದು ರುದ್ನೂರು ಹೇಳಿದರು. ಆಗ ಉತ್ತರಿಸಿದ ಸಚಿವರು, ಮೂಲಭೂತ ಸೌಲಭ್ಯ ಒದಗಿಸುವ ಜವಾಬ್ದಾರಿ ನನ್ನದು ಆದರೆ, ಉತ್ತಮ ಕಲಿಕೆ ಜವಾಬ್ದಾರಿ ನಿಮ್ಮದು ಎಂದರು.

ಜಿಲ್ಲಾ ಪಂಚಾಯತ ಇಂಜಿನಿಯರಿಂಗ್ ವಿಭಾಗದ ಇಂಜಿನಿಯರ್ ಗಳು ವರ್ಗಾವಣೆಯಾದರೂ ಯಾಕೆ ರಿಲೀವ್ ಆಗಿಲ್ಲ ಹಾಗೂ ಯಾಕೆ ರಿಲೀವ್ ಮಾಡಿಲ್ಲ. ಸಂಬಂದಪಟ್ಟ ಆ ಎಲ್ಲ ಅಧಿಕಾರಿಗಳನ್ನು ಅಮಾನತು ಮಾಡಿ ಎಂದು ಸಚಿವರು ಪಂಚಾಯತ ರಾಜ್ ಇಲಾಖೆಯ ಕಾರ್ಯದರ್ಶಿ ಅಂಜುಂ ಪರ್ವೇಜ್ ಅವರಿಗೆ ಸೂಚಿಸಿದರು.

ತಾಲೂಕಿನಲ್ಲಿ ಇನ್ನೂ ಎಷ್ಟು ಪ್ರಾಥಮಿಕ ಆರೋಗ್ಯ ಕೇಂದ್ರ ಬೇಕಾಗುತ್ತದೆ ಹಾಗೂ ಅದಕ್ಕೆ ಬೇಕಾಗುವ ಸಿಬ್ಬಂದಿಗಳು ಮತ್ತು ಇತರೆ ಮೂಲಭೂತ ಸೌಲಭ್ಯಗಳ ಬಗ್ಗೆ ಸಮಗ್ರ ವರದಿ ಸಲ್ಲಿಸುವಂತೆ ಸಚಿವರು ಆರೋಗ್ಯ ಇಲಾಖೆಯ ಅಧಿಕಾರಿಗಳಿಗೆ ಸೂಚಿಸಿದರು.

ಇಲಾಖೆಯ ವತಿಯಿಂದ ಮೆಟ್ರಿಕ್ ಪೂರ್ವ ಹಾಗೂ ನಂತರದ ಹೊಸ ಹಾಸ್ಟೆಲ್ ಗಳ ನಿರ್ಮಾಣಕ್ಕೆ ಹಾಗೂ ಹಳೆ ಹಾಸ್ಟೆಲ್ ಗಳನ್ನು ಹೊಡೆದುಹಾಕಿ ನೂತನ ಹಾಸ್ಟೆಲ್ ಗಳ ಮತ್ತು ಜನಸಂಖ್ಯೆಗೆ ಅನುಗುಣವಾಗಿ ಹೊಸ ಹಾಸ್ಟೆಲ್ ನಿರ್ಮಾಣಕ್ಕೆ ಸಂಬಂಧಿಸಿದಂತೆ ಆದಷ್ಟು ಬೇಗ ಪ್ರಸ್ತಾವನೆ ಸಲ್ಲಿಸಬೇಕು ಎಂದು ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿಗಳಿಗೆ ಸೂಚಿಸಿದರು.

ತಾಲೂಕಿನ ಸಮಗ್ರ ಅಭಿವೃದ್ಧಿಗೆ ವಿನೂತನ ಕಾರ್ಯಕ್ರಮಗಳನ್ನು ಜಾರಿಗೆ ತರಲು ಪ್ರಯತ್ನಿಸುತ್ತಿದ್ದು ಕೆಲ ಅಧಿಕಾರಿಗಳನ್ನು ಹೊರತುಪಡಿಸಿ ಉಳಿದವರು ಆ ಬಗ್ಗೆ ಗಂಭೀರವಾಗಿ ಪರಿಗಣಿಸಿದಂತೆ ಕಂಡು ಬರುತ್ತಿಲ್ಲ. ಹಾಗಾಗಿ, ಸರ್ಕಾರದ ಇಲಾಖೆಯ ಅಧಿಕಾರಿಗಳು ಆದಷ್ಟು ಬೇಗ ಪ್ರಸ್ತಾವನೆ ಸಲ್ಲಿಸಿ, ಈ ಅವಧಿಯಲ್ಲಿ ಚಿತ್ತಾಪುರದ ಅಭಿವೃದ್ದಿ ಆಗದಿದ್ದರೆ ಮುಂದೆಯೂ ಆಗುವುದಿಲ್ಲ. ನೀವು ಬಜೆಟ್ ಬಂದ ಮೇಲೂ ಮೈಗಳ್ಳತನ ತೋರಿಸಿದರೆ ನಾನೂ ಕೂಡಾ ಕ್ರಮ ಕೈಗೊಳ್ಳುವುದು ಅನಿವಾರ್ಯವಾಗುತ್ತದೆ ಎಂದು ಖಡಕ್ ಆಗಿ ಹೇಳಿದರು.

ವೇದಿಕೆಯ ಮೇಲೆ ತಾಪಂ ಇಓ ನೀಲಗಂಗಾ, ತಹಸೀಲ್ದಾರ ಶಾ ವಲಿ, ಸಿಪಿಐ ಪ್ರಕಾಶ ಯಾತನೂರು, ಕಾಳಗಿ ಮತ್ತು ಶಹಾಬಾದ್ ತಹಸೀಲ್ದಾರ ಅವರು ಉಪಸ್ಥಿತರಿದ್ದರು.

Tags: Kalburgi‌Priyank Khargeಕಲಬುರಗಿಪ್ರಿಯಾಂಕ್‌ ಖರ್ಗೆ
Previous Post

ನಮ್ಮ ಸರ್ಕಾರಕ್ಕೆ ರಾಜಕೀಯ ಇಚ್ಛಾಶಕ್ತಿ ಇದೆ: ಮುಖ್ಯಮಂತ್ರಿ ಸಿದ್ದರಾಮಯ್ಯ

Next Post

ಉತ್ತರ ಪ್ರದೇಶ | ಕಪಾಳಮೋಕ್ಷ ಪ್ರಕರಣ ; ವಿದ್ಯಾರ್ಥಿಯ ಗುರುತು ಬಹಿರಂಗ, ಮೊಹಮ್ಮದ್ ಜುಬೈರ್ ವಿರುದ್ಧ ಪ್ರಕರಣ

Related Posts

ಅನ್ನ-ನೀರಿಗೆ ಭವಿಷ್ಯದಲ್ಲಿ ಸಂಕಷ್ಟ ಎಚ್ಚರಿಕೆ: ಹವಾಮಾನ ಬದಲಾವಣೆಯ ಕುರಿತು ಕೋಡಿಮಠ ಶ್ರೀಗಳ ಭವಿಷ್ಯವಾಣಿ
ಕರ್ನಾಟಕ

ಅನ್ನ-ನೀರಿಗೆ ಭವಿಷ್ಯದಲ್ಲಿ ಸಂಕಷ್ಟ ಎಚ್ಚರಿಕೆ: ಹವಾಮಾನ ಬದಲಾವಣೆಯ ಕುರಿತು ಕೋಡಿಮಠ ಶ್ರೀಗಳ ಭವಿಷ್ಯವಾಣಿ

by ಪ್ರತಿಧ್ವನಿ
April 25, 2026
0

ಮಂಡ್ಯ: ಹವಾಮಾನ  ವೈಪರಿತ್ಯಗಳು ಮತ್ತು ಹವಾಮಾನ ಬದಲಾವಣೆಗಳ ಬಗ್ಗೆ ಮುನ್ಸೂಚನೆ ನೀಡುತ್ತಾ ಬಂದಿರುವ ಅರಸೀಕೆರೆ ಶ್ರೀ ಕೋಡಿಮಠ ಮಹಾಸಂಸ್ಥಾನದ ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿ ಅವರು ಇದೀಗ...

Read moreDetails
ರಾಘವ್ ಚಡ್ಡಾ ರಾಜಕೀಯ ತಿರುವು: ಪಕ್ಷ ತೊರೆಯುವ ನಿರ್ಧಾರಕ್ಕೆ ರಾಷ್ಟ್ರ ರಾಜಕೀಯದಲ್ಲಿ ಚರ್ಚೆ

ರಾಘವ್ ಚಡ್ಡಾ ರಾಜಕೀಯ ತಿರುವು: ಪಕ್ಷ ತೊರೆಯುವ ನಿರ್ಧಾರಕ್ಕೆ ರಾಷ್ಟ್ರ ರಾಜಕೀಯದಲ್ಲಿ ಚರ್ಚೆ

April 25, 2026
ಒಳ ಮೀಸಲಾತಿ ಹಂಚಿಕೆ: ಸಂಪುಟ ಸಭೆಯಲ್ಲಿ ಮಹತ್ವದ ತೀರ್ಮಾನ

ಒಳ ಮೀಸಲಾತಿ ಹಂಚಿಕೆ: ಸಂಪುಟ ಸಭೆಯಲ್ಲಿ ಮಹತ್ವದ ತೀರ್ಮಾನ

April 24, 2026
ಆಯುಕ್ತರ ಹೆಸರಿನಲ್ಲಿ ವಾಟ್ಸ್‌ಆಪ್ ವಂಚನೆ ಯತ್ನ: ಬೆಂಗಳೂರು ಪಾಲಿಕೆಗಳಿಂದ ಸಾರ್ವಜನಿಕರಿಗೆ ಎಚ್ಚರಿಕೆ

ಆಯುಕ್ತರ ಹೆಸರಿನಲ್ಲಿ ವಾಟ್ಸ್‌ಆಪ್ ವಂಚನೆ ಯತ್ನ: ಬೆಂಗಳೂರು ಪಾಲಿಕೆಗಳಿಂದ ಸಾರ್ವಜನಿಕರಿಗೆ ಎಚ್ಚರಿಕೆ

April 24, 2026
ದೆಹಲಿ ಭೇಟಿ ಕುರಿತು ಡಿಕೆ ಶಿವಕುಮಾರ್ ಗುಟ್ಟು ಮಾತು: ಹೈಕಮಾಂಡ್ ಭೇಟಿ ಸುಳಿವು

ದೆಹಲಿ ಭೇಟಿ ಕುರಿತು ಡಿಕೆ ಶಿವಕುಮಾರ್ ಗುಟ್ಟು ಮಾತು: ಹೈಕಮಾಂಡ್ ಭೇಟಿ ಸುಳಿವು

April 24, 2026
Next Post
ಮೊಹಮ್ಮದ್‌ ಜುಬೈರ್‌

ಉತ್ತರ ಪ್ರದೇಶ | ಕಪಾಳಮೋಕ್ಷ ಪ್ರಕರಣ ; ವಿದ್ಯಾರ್ಥಿಯ ಗುರುತು ಬಹಿರಂಗ, ಮೊಹಮ್ಮದ್ ಜುಬೈರ್ ವಿರುದ್ಧ ಪ್ರಕರಣ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada