• Home
  • About Us
  • ಕರ್ನಾಟಕ
Sunday, February 1, 2026
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಅಂಕಣ

ಲೋಕಸಭಾ ಚುನಾವಣೆಗೆ ಗಿಮಿಕ್​ ಶುರು ಮಾಡಿದ ನರೇಂದ್ರ ಮೋದಿ.. ಜನರೇನು ಮೂರ್ಖರೇ..?

ಕೃಷ್ಣ ಮಣಿ by ಕೃಷ್ಣ ಮಣಿ
August 30, 2023
in ಅಂಕಣ, ಅಭಿಮತ
0
ಲೋಕಸಭಾ ಚುನಾವಣೆಗೆ ಗಿಮಿಕ್​ ಶುರು ಮಾಡಿದ ನರೇಂದ್ರ ಮೋದಿ.. ಜನರೇನು ಮೂರ್ಖರೇ..?
Share on WhatsAppShare on FacebookShare on Telegram

ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರತಿ ಚುನಾವಣೆಯಲ್ಲೂ ಜನರನ್ನು ಭಾವನಾತ್ಮಕವಾಗಿ ಸೆಳೆಯುವ ಕೆಲಸ ಮಾಡುತ್ತದೆ. ಈ ಭಾರಿ ಭಾವನಾತ್ಮಕ ಅಸ್ತ್ರ ಇನ್ನೂ ಬಳಕೆ ಆಗಿಲ್ಲ. ಆದರೆ ದರ ಏರಿಕೆಯಿಂದ ದೇಶದ ಜನರು ಕಂಗಾಲಾಗಿದ್ದು, ಅದರಲ್ಲೂ ಪ್ರಮುಖವಾಗಿ ಇಂಧನ ದರ ಏರಿಕೆಯಿಂದ ಪ್ರತಿಯೊಂದು ವಸ್ತುಗಳ ದರ ಹೆಚ್ಚಳ ಆಗಿದೆ ಎನ್ನುವ ಮಾತಿತ್ತು. ಅದೇ ಕಾರಣಕ್ಕೆ ಕೇಂದ್ರ ಬಿಜೆಪಿ ಸರ್ಕಾರ ಪೆಟ್ರೋಲಿಯಂ ಉತ್ಪನ್ನಗಳ ದರ ಇಳಿಸುವ ಚಿಂತನೆಯಲ್ಲಿದೆ ಎನ್ನುವ ವರದಿಗಳಾಗಿದ್ದವು. ಇದರ ಮೊದಲ ಭಾಗವಾಗಿ ಅಡುಗೆ ಅನಿಲ ದರದವನ್ನು 200 ರೂಪಾಯಿ ಇಳಿಕೆ ಮಾಡಲಾಗಿದೆ. ಇನ್ಮುಂದೆ ಲೋಕಸಭಾ ಚುನಾವಣೆ ಹತ್ತಿರ ಆಗುತ್ತಿದ್ದ ಹಾಗೆ, ಪೆಟ್ರೋಲಿಯಂ ಉತ್ಪನ್ನಗಳ ಬೆಲೆಯಲ್ಲಿಯೂ ಗಣನೀಯವಾಗಿ ಇಳಿಕೆ ಮಾಡುವ ಸಾಧ್ಯತೆಗಳಿವೆ ಎನ್ನಲಾಗ್ತಿದೆ..

ADVERTISEMENT
ಗೃಹ ಬಳಕೆ ಎಲ್‌ಪಿಜಿ ಸಿಲಿಂಡರ್‌

2104ರಿಂದ 695 ರೂಪಾಯಿ ಸಿಲಿಂಡರ್​ ದರ ಏರಿಕೆ..?

ಪ್ರಧಾನಿ ನರೇಂದ್ರ ಮೋದಿ ಗ್ಯಾಸ್​ ಸಿಲಿಂಡರ್​ ದರ ಇಳಿಕೆ ಬೆನ್ನಲ್ಲೇ ಮಾತನಾಡಿದ್ದು, ನನ್ನ ಸಹೋದರಿಯರಿಗೆ ಗ್ಯಾಸ್​ ದರ ಇಳಿಕೆಯಿಂದ ಅನುಕೂಲವಾಗಲಿದೆಲ. ನನ್ನ ಸಹೋದರಿಯರ ಬದುಕು ಇನ್ನಷ್ಟು ಸರಳವಾಗಲಿದೆ. ಸಹೋದರಿಯರ ಕುಟುಂಬದ ಸೌಕರ್ಯ ಹೆಚ್ಚಿಸುತ್ತದೆ. ಪ್ರತಿಯೊಬ್ಬ ಸಹೋದರಿಯೂ ಸಂತೋಷವಾಗಿರಲಿ, ಆರೋಗ್ಯವಾಗಿರಲಿ, ಸಂತೋಷವಾಗಿರಲಿ ಎಂದಿದ್ದಾರೆ ಪ್ರಧಾನಿ ನರೇಂದ್ರ ಮೋದಿ. ಆದರೆ ನರೇಂದ್ರ ಮೋದಿ ಪ್ರಧಾನಿ ಆಗುವ ಮೊದಲು 2014ರ ಮಾರ್ಚ್​-ಏಪ್ರಿಲ್​ನಲ್ಲಿ 410 ರುಪಾಯಿಗೆ ಗ್ಯಾಸ್​ ಸಿಲಿಂಡರ್​​ ದೊರೆಯುತ್ತಿತ್ತು. ಆದರೆ ಅಧಿಕಾರಕ್ಕೆ ಬರುತ್ತಿದ್ದ ಹಾಗೆ ಪೆಟ್ರೋಲಿಯಂ ಕಂಪನಿಗಳಿಗೆ ನೀಡಲಾಗ್ತಿದ್ದ ಸಬ್ಸಿಡಿ ರದ್ದು ಮಾಡಿದ ಪ್ರಧಾನಿ ಮೋದಿ, ಜನರ ಖಾತೆಗೆ ಹಣ ವರ್ಗಾವಣೆ ಮಾಡುವ ಪದ್ದತಿ ಜಾರಿ ಮಾಡಿದರು.

ಸಬ್ಸಿಡಿ ಆಸೆ ತೋರಿಸಿ ಮೆಲ್ಲಗೆ ನಿಲ್ಲಿಸಿದ ಕೇಂದ್ರ ಸರ್ಕಾರ..!

ಪ್ರಧಾನಿ ನರೇಂದ್ರ ಮೋದಿ ಅಧಿಕಾರಕ್ಕೆ ಬರುತ್ತಿದ್ದ ಹಾಗೆ ಪೆಟ್ರೋಲಿಯಂ ಉತ್ಪನ್ನಗಳ ಮೇಲಿನ ನಿಯಂತ್ರಣ ತೆರವು ಮಾಡಿದ್ದರಿಂದ ಅಂತಾರಾಷ್ಟ್ರೀಯ ಮಾರುಕಟ್ಟೆಯ ದರಕ್ಕೆ ಅನುಗುಣವಾಗಿ ಬೆರೆ ಏರಿಕೆ ಇಳಿಕೆ ಆಗಲಿದೆ ಎಂದಿದ್ದರು. ಆದರೆ ಜನರ ಖಾತೆಗೆ ಸಬ್ಸಿಡಿ ಹಣವನ್ನು ನೇರವಾಗಿ ಹಾಕುತ್ತೇವೆ ಎಂದು ಘೋಷಣೆ ಮಾಡಿದ್ದರು. ಆ ಬಳಿಕ ನಿಧಾನವಾಗಿ ತೆರಿಗೆ ಪಾವತಿದಾರರಿಗೆ ಸಬ್ಸಿಡಿ ಕೊಡುವುದಿಲ್ಲ ಎಂದು ಸ್ಥಗಿತ ಮಾಡಲಾಯ್ತು. ಆ ಬಳಿಕ ಕೆಲವೇ ವರ್ಷಗಳಲ್ಲಿ ಮೆಲ್ಲಗೆ ಎಲ್ಲರಿಗೂ ಸಬ್ಸಿಡಿ ನಿಲ್ಲಿಸಲಾಯ್ತು. ಆದರೆ ಉಜ್ವಲಾ ಯೋಜನೆಯಲ್ಲಿ ಸಿಲಿಂಡರ್​ ಪಡೆದ ಕೆಲವೇ ಮಂದಿಗೆ ಸಬ್ಸಿಡಿ ಮುಂದುವರಿಸಲಾಯ್ತು. ಇದೀಗ ಈಗಾಗಲೇ 200 ರುಪಾಯಿ ಸಬ್ಸಿಡಿ ಪಡೆದು 1105ರ ಬದಲು 905 ರೂಪಾಯಿ ಕಟ್ಟುತ್ತಿದ್ದ ಉಜ್ವಲಾ ಯೊಜನೆಯ ಫಲಾನುಭವಿಗಳು ಇನ್ಮುಂದೆ 705 ರೂಪಾಯಿ ಹಾಗು ಇನ್ನುಳಿದ ಎಲ್ಲರೂ 1105 ರೂಪಾಯಿ ಬದಲು 905 ರೂಪಾಯಿಗೆ ಸಿಲಿಂಡರ್​ ಕೊಂಡುಕೊಳ್ಳಬಹುದು. ಆದರೆ ಇದು ಚುನಾವಣೆ ತನಕ ಮಾತ್ರ ಅನ್ನೋದು ಈಗಿನ ಚರ್ಚೆ.

ಲೋಕಸಭಾ ಚುನಾವಣೆಗೂ ಮುನ್ನ ಈ ರೀತಿ ಮಾಡುತ್ತಲೇ ಇರ್ತಾರೆ..!

ಚುನಾವಣೆಯಲ್ಲಿ ಬೆಲೆ ಏರಿಕೆ ಬಿಸಿ ತಟ್ಟಬಾರದು ಅನ್ನೋ ಕಾರಣಕ್ಕೆ ಈ ರೀತಿ ದರ ಇಳಿಕೆಗೆ ಬೇಕಾದ ವ್ಯವಸ್ಥೆಯನ್ನು ಕೇಂದ್ರ ಸರ್ಕಾರ ಮಾಡುತ್ತಿದೆ. 2014ರಲ್ಲಿ ಪ್ರಧಾನಿ ನರೇಂದ್ರ ಮೋದಿ ಜಯಭೇರಿ ಬಾರಿಸಿದ ಬಳಿಕ 2019ರಲ್ಲಿ ಪೆಟ್ರೋಲಿಯಂ ಉತ್ಪನ್ನಗಳು ಸೇರಿದಂತೆ ಸಾಕಷ್ಟು ಬೆಲೆ ಏರಿಕೆ ಆಗಿತ್ತು. ಆ ವೇಳೆ ಕೂಡ ದರ ಸಮರಕ್ಕೆ ಇತಿಶ್ರೀ ಹಾಡುವ ಕೆಲಸ ಮಾಡಿದ್ದರು. ಚುನಾವಣೆ ಮುಗಿದು ಅಧಿಕಾರಕ್ಕೆ ಬಂದ ಬಳಿಕ ನಿಧಾನವಾಗಿ ದರ ಏರಿಕೆ ಮಾಡಿಕೊಂಡರು. ಇದೀಗ ಮತ್ತೇ ಅದೇ ತಂತ್ರಗಾರಿಕೆಯನ್ನು ಬಳಸಿಕೊಳ್ಳಲು ಮುಂದಾಗಿದ್ದಾರೆ. ಕಾಂಗ್ರೆಸ್​ ಸರ್ಕಾರದಲ್ಲೂ ಸಿಲಿಂಡರ್​ ಬೆಲೆ 800, 900 ರೂಪಾಯಿ ಆಸುಪಾಸಿನಲ್ಲೇ ಇತ್ತು. ಆದರೆ ನೇರವಾಗಿ ಕಂಪನಿಗಳಿಗೆ ಸಬ್ಸಿಡಿ ಹಣ ಪಾವತಿ ಮಾಡುವ ಮೂಲಕ ಜನರಿಗೆ ಹೊರೆಯಾಗದಂತೆ ಕ್ರಮ ತೆಗೆದುಕೊಂಡಿದ್ದರು. ಆದರೆ ಬಿಜೆಪಿ ಸರ್ಕಾರ ಕಂಪನಿಗಳಿಗೆ ಕೊಡ್ತಿದ್ದ ಸಬ್ಸಿಡಿ ನಿಲ್ಲಿಸಿ, ಜನರಿಗೆ ಕೊಡ್ತೇವೆ ಎಂದು ಹೇಳಿ ಆನಂತರ ಎಲ್ಲರಿಗೂ ಟೋಪಿ ಹಾಕಿದ್ದರು. ಇದೀಗ ಚುನಾವಣೆ ಬಂತು ಅನ್ನೋ ಕಾರಣಕ್ಕೆ ಮತ್ತೊಂದು ರೀತಿಯಲ್ಲಿ ಟೋಪಿ ಸಿದ್ಧ ಮಾಡುತ್ತಿದ್ದಾರೆ. ಜನ ಮತ್ತೆ ಮರುಳಾಗ್ತಾರಾ..? ಕಾದು ನೋಡ್ಬೇಕು.

ಕೃಷ್ಣಮಣಿ

Tags: Amit ShahBJP GovernmentLPG Gas PriceNarendra ModiNirmala Sitharaman
Previous Post

ಡಾ. ಎಂ.ಎಂ. ಕಲಬುರ್ಗಿಯವರ ಬರಹಗಳು ಯಾರ ಬಂಡವಾಳ ಬಯಲು ಮಾಡುತ್ತವೆ?

Next Post

ಗೃಹಲಕ್ಷ್ಮಿ ಯೋಜನೆ’ಗೆ ಇಂದು ಚಾಲನೆ : ಮನೆ ಯಜಮಾನಿಯರಿಗೆ ಹೆಚ್ಚಾಯಿತು ನಿರೀಕ್ಷೆ

Related Posts

ಲಿಂಗಾಯತರು ಕೈಗಾರಿಕಾ  ರಂಗಕ್ಕೆ ಧುಮುಕಬೇಕು: ಎಂ ಬಿ ಪಾಟೀಲ
Top Story

ಲಿಂಗಾಯತರು ಕೈಗಾರಿಕಾ ರಂಗಕ್ಕೆ ಧುಮುಕಬೇಕು: ಎಂ ಬಿ ಪಾಟೀಲ

by ಪ್ರತಿಧ್ವನಿ
January 29, 2026
0

ಬೆಂಗಳೂರು: ವೀರಶೈವ ಲಿಂಗಾಯತ ಸಮುದಾಯವು ಶಿರಸಂಗಿ ಲಿಂಗರಾಜ ದೇಸಾಯಿ, ವಾರದ ಮಲ್ಲಪ್ಪ, ಬಿ.ವಿ.ಭೂಮರೆಡ್ಡಿ ಅವರಂತಹ ಸಾಹಸಿ ಉದ್ಯಮಿಗಳ ದೀರ್ಘ ಇತಿಹಾಸ ಹೊಂದಿದೆ. ಆದ್ದರಿಂದ ಕೇವಲ ಕೃಷಿಗೆ ಸೀಮಿತರಾಗದೆ,...

Read moreDetails
ವಿದ್ಯಾರ್ಥಿ-ಯುವ ಸಮೂಹ ಆದ್ಯತೆ-ಬಾಧ್ಯತೆಗಳು

ವಿದ್ಯಾರ್ಥಿ-ಯುವ ಸಮೂಹ ಆದ್ಯತೆ-ಬಾಧ್ಯತೆಗಳು

January 28, 2026
ಕುಟುಂಬ ರಾಜಕಾರಣ: ಭಾರತೀಯ ಪ್ರಜಾಪ್ರಭುತ್ವದ ಮೇಲೆ ನಡೆಯುತ್ತಿರುವ ಭೀಕರ ದಾಳಿ! 

ಕುಟುಂಬ ರಾಜಕಾರಣ: ಭಾರತೀಯ ಪ್ರಜಾಪ್ರಭುತ್ವದ ಮೇಲೆ ನಡೆಯುತ್ತಿರುವ ಭೀಕರ ದಾಳಿ! 

January 26, 2026

ಬೆಂಗಳೂರಿನ ಹೃದಯಭಾಗದಲ್ಲೊಂದು ಅತ್ಯಾಕರ್ಷಕ ಹಾಗೂ ಸುಸಜ್ಜಿತ ಸಿನಿಮಾ ಮಲ್ಟಿಪ್ಲೆಕ್ಸ್ “AMB ಸಿನಿಮಾಸ್”(ಕಪಾಲಿ ಮಾಲ್)

January 22, 2026
Eshwar Khandre: ವೀರಶೈವ ಮಹಾಸಭಾದ ಅಧ್ಯಕ್ಷರಾಗಿ ಆಯ್ಕೆಯಾದ ಸಚಿವ ಈಶ್ವರ ಖಂಡ್ರೆ..!!

Eshwar Khandre: ವೀರಶೈವ ಮಹಾಸಭಾದ ಅಧ್ಯಕ್ಷರಾಗಿ ಆಯ್ಕೆಯಾದ ಸಚಿವ ಈಶ್ವರ ಖಂಡ್ರೆ..!!

January 21, 2026
Next Post
BREAKING ಯುವನಿಧಿ ಯೋಜನೆ ಅಧಿಕೃತವಾಗಿ ಜಾರಿಗೊಳಿಸಿದ ರಾಜ್ಯ ಸರ್ಕಾರ..!

ಗೃಹಲಕ್ಷ್ಮಿ ಯೋಜನೆ'ಗೆ ಇಂದು ಚಾಲನೆ : ಮನೆ ಯಜಮಾನಿಯರಿಗೆ ಹೆಚ್ಚಾಯಿತು ನಿರೀಕ್ಷೆ

Please login to join discussion

Recent News

ರಾಜ್ಯಕ್ಕೆ ಹೆಚ್ಚಿನ ತೆರಿಗೆ ಪಾಲು: ಕಾಂಗ್ರೆಸಿಗರ ಟೀಕೆಗೆ ಕುಮಾರಸ್ವಾಮಿ ಖಡಕ್‌ ಉತ್ತರ
Top Story

ರಾಜ್ಯಕ್ಕೆ ಹೆಚ್ಚಿನ ತೆರಿಗೆ ಪಾಲು: ಕಾಂಗ್ರೆಸಿಗರ ಟೀಕೆಗೆ ಕುಮಾರಸ್ವಾಮಿ ಖಡಕ್‌ ಉತ್ತರ

by ಪ್ರತಿಧ್ವನಿ
February 1, 2026
Vijayapura: 27 ಭೂ ಕಬಳಿಕೆ ಪ್ರಕರಣಗಳಲ್ಲಿ 200 ಆರೋಪಿಗಳ ವಿರುದ್ಧ ದೋಷಾರೋಪ ಪಟ್ಟಿ
Top Story

Vijayapura: 27 ಭೂ ಕಬಳಿಕೆ ಪ್ರಕರಣಗಳಲ್ಲಿ 200 ಆರೋಪಿಗಳ ವಿರುದ್ಧ ದೋಷಾರೋಪ ಪಟ್ಟಿ

by ಪ್ರತಿಧ್ವನಿ
February 1, 2026
ಕೇಂದ್ರದಿಂದ ಕರ್ನಾಟಕಕ್ಕೆ ಪದೇ ಪದೇ ಅನ್ಯಾಯ: ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಕಿಡಿ
Top Story

ಕೇಂದ್ರದಿಂದ ಕರ್ನಾಟಕಕ್ಕೆ ಪದೇ ಪದೇ ಅನ್ಯಾಯ: ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಕಿಡಿ

by ಪ್ರತಿಧ್ವನಿ
February 1, 2026
400 ಕೋಟಿ ದರೋಡೆ ಕೇಸ್‌: ದಿಢೀರ್‌ ಪೊಲೀಸರಿಗೆ ಶರಣಾದ ವ್ಯಕ್ತಿ ಯಾರು..?
Top Story

400 ಕೋಟಿ ದರೋಡೆ ಕೇಸ್‌: ದಿಢೀರ್‌ ಪೊಲೀಸರಿಗೆ ಶರಣಾದ ವ್ಯಕ್ತಿ ಯಾರು..?

by ಪ್ರತಿಧ್ವನಿ
February 1, 2026
ಕೊಟ್ಟೂರು ನರಮೇ**: ಗರ್ಭಿಣಿ ತಂಗಿ ಮತ್ತು ಹೆತ್ತವರನ್ನು ಮುಗಿಸಿದ್ಯಾಕೆ ಅಣ್ಣ..?
Top Story

ಕೊಟ್ಟೂರು ನರಮೇ**: ಗರ್ಭಿಣಿ ತಂಗಿ ಮತ್ತು ಹೆತ್ತವರನ್ನು ಮುಗಿಸಿದ್ಯಾಕೆ ಅಣ್ಣ..?

by ಪ್ರತಿಧ್ವನಿ
February 1, 2026
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಅಕ್ರಮ ಗಣಿಗಾರಿಕೆಗೆ ಜೆಸಿಬಿ ಮೇಲೆ ಕಲ್ಲೆಸೆದು ಕಾನೂನಿನ ಗಡುಸು ಮುಖ ತೋರಿಸಿದ ಮಹಿಳಾ ಅಧಿಕಾರಿ

ಅಕ್ರಮ ಗಣಿಗಾರಿಕೆಗೆ ಜೆಸಿಬಿ ಮೇಲೆ ಕಲ್ಲೆಸೆದು ಕಾನೂನಿನ ಗಡುಸು ಮುಖ ತೋರಿಸಿದ ಮಹಿಳಾ ಅಧಿಕಾರಿ

February 1, 2026
ರಾಜ್ಯಕ್ಕೆ ಹೆಚ್ಚಿನ ತೆರಿಗೆ ಪಾಲು: ಕಾಂಗ್ರೆಸಿಗರ ಟೀಕೆಗೆ ಕುಮಾರಸ್ವಾಮಿ ಖಡಕ್‌ ಉತ್ತರ

ರಾಜ್ಯಕ್ಕೆ ಹೆಚ್ಚಿನ ತೆರಿಗೆ ಪಾಲು: ಕಾಂಗ್ರೆಸಿಗರ ಟೀಕೆಗೆ ಕುಮಾರಸ್ವಾಮಿ ಖಡಕ್‌ ಉತ್ತರ

February 1, 2026
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada