• Home
  • About Us
  • ಕರ್ನಾಟಕ
Sunday, December 14, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಇದೀಗ

ಇಂದು ಮಹಿಳೆಯರ ಖಾತೆಗೆ ಬರಲಿದೆ ₹2 ಸಾವಿರ ಸಹಾಯಧನ..! ಎಷ್ಟೊತ್ತಿಗೆ ಗೊತ್ತಾ..?

ಪ್ರತಿಧ್ವನಿ by ಪ್ರತಿಧ್ವನಿ
August 30, 2023
in ಇದೀಗ, ಕರ್ನಾಟಕ, ದೇಶ, ರಾಜಕೀಯ
0
ಇಂದು ಮಹಿಳೆಯರ ಖಾತೆಗೆ ಬರಲಿದೆ ₹2 ಸಾವಿರ ಸಹಾಯಧನ..! ಎಷ್ಟೊತ್ತಿಗೆ ಗೊತ್ತಾ..?
Share on WhatsAppShare on FacebookShare on Telegram

ಕಾಂಗ್ರೆಸ್​ ಸರ್ಕಾರ ಘೋಷಣೆ ಮಾಡಿದ್ದ ಗೃಹಲಕ್ಷ್ಮೀ ಯೋಜನೆಗೆ ಇಂದು ಮೈಸೂರಿನಲ್ಲಿ ಚಾಲನೆ ನೀಡಲಾಗ್ತಿದೆ. ಈ ಮೊದಲು ಬೆಳಗಾವಿಯಲ್ಲಿ ಕಾರ್ಯಕ್ರಮ ಮಾಡುವುದಕ್ಕೆ ಸಿದ್ಧತೆ ನಡೆದಿತ್ತಾದರೂ ಅಂತಿಮವಾಗಿ ಸಿಎಂ ಸಿದ್ದರಾಮಯ್ಯ ತವರು ಜಿಲ್ಲೆ ಮೈಸೂರಿನಲ್ಲಿ ಅದ್ಧೂರಿ ಕಾರ್ಯಕ್ರಮದ ಮೂಲಕ ರಾಜ್ಯದ ಮಹಿಳೆಯರ ಖಾತೆಗೆ ಪ್ರತಿ ತಿಂಗಳು 2 ಸಾವಿರ ರೂಪಾಯಿ ಧನಸಹಾಯ ನೀಡುವ ಯೋಜನೆಗೆ ಚಾಲನೆ ಸಿಗಲಿದೆ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಕಾಂಗ್ರೆಸ್​ ನಾಯಕ ರಾಹುಲ್​ ಗಾಂಧಿ ಪ್ರಮುಖ ಅತಿಥಿಯಾಗಿ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ. ಮೈಸೂರಿನ ಮಹಾರಾಜ ಕಾಲೇಜು ಮೈದಾನದಲ್ಲಿ ಬೃಹತ್​ ವೇದಿಕೆ ನಿರ್ಮಾಣ ಮಾಡಲಾಗಿದ್ದು ಒಂದೂವರೆ ಲಕ್ಷಕ್ಕೂ ಅಧಿಕ ಮಂದಿ ಪಾಲ್ಗೊಳ್ಳುವ ನಿರೀಕ್ಷೆ ಇದೆ.

ADVERTISEMENT

ಮಹಿಳೆಯರಿಗೂ ಮುನ್ನ ನಾಡದೇವಿಗೆ 2 ಸಾವಿರ ಅರ್ಪಣೆ..!

ವಿಧಾನಸಭಾ ಚುನಾವಣೆ ವೇಳೆ ಗೃಹಲಕ್ಷ್ಮೀ ಯೋಜನೆ ಘೋಷಣೆ ವೇಳೆ ಮೈಸೂರಿಗೆ ಭೇಟಿ ನೀಡಿದ್ದ ಡಿ.ಕೆ ಶಿವಕುಮಾರ್​ ಹಾಗು ಸಿದ್ದರಾಮಯ್ಯ, ಮೈಸೂರಿನ ಚಾಮುಂಡಿ ಬೆಟ್ಟದಲ್ಲಿ ಪೂಜೆ ಮಾಡಿಸಿ, ಮಹಿಳೆಯರನ್ನು ಶಸಕ್ತರನ್ನಾಗಿ ಮಾಡುವ ಘೋಷಣೆ ಮಾಡಿದ್ದರು. ಇದೀಗ ಯೋಜನೆ ಜಾರಿಗೂ ಮುನ್ನ ಚಾಮುಂಡಿ ಬೆಟ್ಟದಲ್ಲಿ ವಿಶೇಷ ಪೂಜೆ ಸಲ್ಲಿಸಿ, ಮೊದಲಿಗೆ ಚಾಮುಂಡಿ ದೇವಿಗೆ 2 ಸಾವಿರ ಗೃಹಲಕ್ಷ್ಮೀ ಯೋಜನೆಯ ಹಣವನ್ನು ಅರ್ಪಣೆ ಮಾಡಿದ್ದಾರೆ. ಜೊತೆಗೆ ಹೂವು, ಸೀರೆ, ಬಳೆ ನೀಡಿ ಪೂಜೆ ಸಲ್ಲಿಸಿ ಹರಕೆ ತೀರಿಸಿದ್ದಾರೆ. ಚಾಮುಂಡಿ ದೇವಿಗೆ ಸಿಎಂ ಸಿದ್ದರಾಮಯ್ಯ ಹಾಗು ಡಿಸಿಎಂ ಡಿ.ಕೆ ಶಿವಕುಮಾರ್​ ಈಡುಗಾಯಿ ಒಡೆದಿದ್ದಾರೆ. ಆ ಬಳಿಕ ಮಾತನಾಡಿದ ಸಿಎಂ ಬಡವರ ಹತ್ರ ಹಣ ಇದ್ದರಷ್ಟೇ ಬೆಲೆ ಎಂದು ಬಡವರ ಪರ ನಮ್ಮ ನಿಲುವು ಅಚಲ ಎಂದಿದ್ದಾರೆ.

ಸಿಎಂ ಸಿದ್ದರಾಮಯ್ಯ
ಮೈಸೂರು ಚಾಮುಂಡೇಶ್ವರಿಗೆ ಪೂಜೆ ಸಲ್ಲಿಸಿದ ಸಿಎಂ ಸಿದ್ದರಾಮಯ್ಯ ಡಿಸಿಎಂ ಡಿ.ಕೆ ಶಿವಕುಮಾರ್ (ಸಾಂದರ್ಭಿಕ ಚಿತ್ರ)

ಯಾವಾಗ ಮಹಿಳೆಯರ ಖಾತೆಗೆ ಹಣ ಜಮೆ ಆಗಲಿದೆ..?

ಬಿಪಿಎಲ್​, ಎಪಿಎಲ್​ ಕಾರ್ಡ್​ ಹೊಂದಿರುವ ಎಲ್ಲಾ ಕುಟುಂಬದ ಮುಖ್ಯಸ್ಥ ಹೆಣ್ಣು ಮಗಳ ಹೆಸರಿಗೆ ಖಾತೆಗೆ ಹಣ ವರ್ಗಾವಣೆ ಆಗಲಿದೆ ಎನ್ನಲಾಗಿದ್ದು, ಇಂದು ರಾಹುಲ್​ ಗಾಂಧಿ ಕಾರ್ಯಕ್ರಮದಲ್ಲಿ ಚಾಲನೆ ಕೊಟ್ಟ ಬಳಿಕ ಬ್ಯಾಂಕ್​ ಖಾತೆಗೆ ಹಣ ವರ್ಗಾವಣೆ ಆಗಲಿದೆ ಎನ್ನಲಾಗಿದೆ. ರಾಜ್ಯಾದ್ಯಂತ 2 ಸಾವಿರ ಬಸ್‌ಗಳ ವ್ಯವಸ್ಥೆ ಮಾಡಲಾಗಿದ್ದು, ಆಸಕ್ತರನ್ನು ಮೈಸೂರಿನ ಕಾರ್ಯಕ್ರಮಕ್ಕೆ ಕರೆತರುವ ವ್ಯವಸ್ಥೆ ಮಾಡಲಾಗಿದೆ. ಇಷ್ಟು ಮಾತ್ರವಲ್ಲದೆ ರಾಜ್ಯಾದ್ಯಂತ 10 ಸಾವಿರ 400 ಕೇಂದ್ರಗಳಲ್ಲಿ LED ಸ್ಕ್ರೀನ್​, ಪ್ರೊಜೆಕ್ಟರ್‌ ವ್ಯವಸ್ಥೆ ಮಾಡಲಾಗಿದ್ದು, ಜನರು ತಮ್ಮ ಗ್ರಾಮ ಪಂಚಾಯ್ತಿ ಕೇಂದ್ರಗಳು, ಪಾಲಿಕೆ, ನಗರಸಭೆ, ಪುರಸಭೆಗಳಲ್ಲೂ ವೀಕ್ಷಣೆ ಮಾಡಲು ವ್ಯವಸ್ಥೆ ಮಾಡಲಾಗಿದೆ. ರಾಜ್ಯದಲ್ಲಿ ಒಟ್ಟು 1 ಕೋಟಿ 10 ಲಕ್ಷ ಗೃಹಿಣಿಯರ ಖಾತೆಗೆ ಹಣ ಜಮೆಯಾಗಲಿದ್ದು, ₹17 ಸಾವಿರ 500 ಕೋಟಿ ಮೀಸಲು ಇಡಲಾಗಿದೆ.

ಹಳೇ ಮೈಸೂರು ಭಾಗದಲ್ಲಿ ಹಿಡಿತ ಸಾಧಿಸಲು ಆರೋಪ..!

ಈ ಮೊದಲು ಬೆಳಗಾವಿಯಲ್ಲಿ ಕಾರ್ಯಕ್ರಮ ನಿಗದಿಯಾಗಿತ್ತು. ಆದರೆ ಅಂತಿಮ ದಿನಗಳಲ್ಲಿ ಸಿಎಂ ಸಿದ್ದರಾಮಯ್ಯ ಮೈಸೂರಿನಲ್ಲಿ ಕಾರ್ಯಕ್ರಮ ಮಾಡುವಂತೆ ಸೂಚನೆ ಕೊಟ್ಟರು ಎನ್ನಲಾಗ್ತಿದೆ. ಆದರೆ ಸಿದ್ದರಾಮಯ್ಯ ಚಾಮರಾಜನಗರ, ಮೈಸೂರು ಲೋಕಸಭಾ ಚುನಾವಣೆಯಲ್ಲಿ ಗೆಲ್ಲುವುದಕ್ಕೆ ಈ ರೀತಿ ಮಾಡಿದ್ದಾರೆ ಎನ್ನುವುದು ವಿರೋಧ ಪಕ್ಷಗಳ ಆರೋಪ. ಯತೀಂದ್ರ ಸಿದ್ದರಾಮಯ್ಯಗೆ ಮೈಸೂರು ಕೊಡಗು ಲೋಕಸಭಾ ಚುನಾವಣಾ ಟಿಕೆಟ್​ ನೀಡುವ ಉದ್ದೇಶ ಸಿದ್ದರಾಮಯ್ಯ ಅವರದ್ದು, ಮಗನನ್ನು ಗೆಲ್ಲಿಸಿಕೊಳ್ಳುವುದು ಅವರ ಗುರಿ ಎಂದು ಟೀಕಿಸಿದ್ದಾರೆ. ಆದರೆ 2024 ಲೋಕಸಭಾ ಚುನಾವಣೆಯಲ್ಲಿ 20ಕ್ಕೂ ಹೆಚ್ಚು ಕ್ಷೇತ್ರಗಳಲ್ಲಿ ಗೆಲುವ ಗುರಿ ಹೊಂದಿರುವ ಸಿದ್ದರಾಮಯ್ಯ ಮತ್ತು ಡಿಕೆ ಶಿವಕುಮಾರ್​, ವಿರೋಧಿಗಳು ಏನಾದರೂ ಟೀಕೆ ಮಾಡಲಿ. ನಮ್ಮನ್ನು ಟೀಕಿಸಿದಷ್ಟೂ ನಾವು ಒಟ್ಟಾಗಿ ಒಗ್ಗಟ್ಟಾಗಿ ಇರ್ತೇವೆ ಎಂದಿದ್ದಾರೆ ಸಿದ್ದರಾಮಯ್ಯ, ಡಿ.ಕೆ ಶಿವಕುಮಾರ್​.

ಕೃಷ್ಣಮಣಿ

Tags: AICCcmsiddaramiahdcmdkshivakumarLakshmi hebbalkarMallikarjun KhargeRahul Gandhi
Previous Post

ಗೃಹಲಕ್ಷ್ಮಿ ಯೋಜನೆ’ಗೆ ಇಂದು ಚಾಲನೆ : ಮನೆ ಯಜಮಾನಿಯರಿಗೆ ಹೆಚ್ಚಾಯಿತು ನಿರೀಕ್ಷೆ

Next Post

ನಾನು ಜವಾಬ್ದಾರಿಯನ್ನು ಅರಿತಿದ್ದೇನೆ, ಚುನಾವಣೆಯ ಸೋಲು ತಾತ್ಕಾಲಿಕ; ನಿಖಿಲ್ ಕುಮಾರಸ್ವಾಮಿ

Related Posts

ದೇಶದ 140 ಕೋಟಿ ಜನರ ಮತದಾನದ ಹಕ್ಕು ಉಳಿಸಲು ನಮ್ಮ ಹೋರಾಟ: ಡಿ.ಕೆ ಶಿವಕುಮಾರ್
Top Story

ದೇಶದ 140 ಕೋಟಿ ಜನರ ಮತದಾನದ ಹಕ್ಕು ಉಳಿಸಲು ನಮ್ಮ ಹೋರಾಟ: ಡಿ.ಕೆ ಶಿವಕುಮಾರ್

by ಪ್ರತಿಧ್ವನಿ
December 14, 2025
0

ನವದೆಹಲಿ: ದೇಶದ 140 ಕೋಟಿ ಜನರ ಮತದಾನದ ಹಕ್ಕು ಉಳಿಸಲು ನಾವು ಮತಕಳ್ಳತನದ ವಿರುದ್ಧ ಹೋರಾಟ ಮಾಡುತ್ತಿದ್ದೇವೆ. ಇದರಲ್ಲಿ ಯಾವುದೇ ರಾಜಕೀಯ ಉದ್ದೇಶವಿಲ್ಲ ಎಂದು ಡಿಸಿಎಂ ಡಿ.ಕೆ....

Read moreDetails
ಮೊಟ್ಟೆಗಳಲ್ಲಿ ಕ್ಯಾನ್ಸರ್‌ ಕಾರಕ ಅಂಶ ಪತ್ತೆ ಆರೋಪ: ದಿನೇಶ್ ಗುಂಡೂರಾವ್ ಹೇಳಿದ್ದೇನು?

ಮೊಟ್ಟೆಗಳಲ್ಲಿ ಕ್ಯಾನ್ಸರ್‌ ಕಾರಕ ಅಂಶ ಪತ್ತೆ ಆರೋಪ: ದಿನೇಶ್ ಗುಂಡೂರಾವ್ ಹೇಳಿದ್ದೇನು?

December 14, 2025
ಹೊಸ ಬೆಂಗಳೂರು ನಿರ್ಮಾಣ ಮಾಡಿ ವಿಶ್ವದ ಜನರನ್ನು ಆಕರ್ಷಿಸಬೇಕು: ಡಿ.ಕೆ ಶಿವಕುಮಾರ್

ಹೊಸ ಬೆಂಗಳೂರು ನಿರ್ಮಾಣ ಮಾಡಿ ವಿಶ್ವದ ಜನರನ್ನು ಆಕರ್ಷಿಸಬೇಕು: ಡಿ.ಕೆ ಶಿವಕುಮಾರ್

December 14, 2025
ವಿಮಾನದಲ್ಲಿ ವಿದೇಶಿ ಯುವತಿಯ ಜೀವ ಕಾಪಾಡಿದ ಅಂಜಲಿ ನಿಂಬಾಳ್ಕರ್‌ಗೆ ಸಿಎಂ ಮೆಚ್ಚುಗೆ

ವಿಮಾನದಲ್ಲಿ ವಿದೇಶಿ ಯುವತಿಯ ಜೀವ ಕಾಪಾಡಿದ ಅಂಜಲಿ ನಿಂಬಾಳ್ಕರ್‌ಗೆ ಸಿಎಂ ಮೆಚ್ಚುಗೆ

December 14, 2025
ಶಿಲ್ಪಾ ಶೆಟ್ಟಿ ಒಡೆತನದ ಪಬ್‌ನಲ್ಲಿ ಉದ್ಯಮಿ & ಸ್ನೇಹಿತರ ಗಲಾಟೆ

ಶಿಲ್ಪಾ ಶೆಟ್ಟಿ ಒಡೆತನದ ಪಬ್‌ನಲ್ಲಿ ಉದ್ಯಮಿ & ಸ್ನೇಹಿತರ ಗಲಾಟೆ

December 14, 2025
Next Post
ಎಲ್ಲ ಪಕ್ಷಗಳಲ್ಲೂ ಕುಟುಂಬ ರಾಜಕಾರಣ ಇದೇ : ನಿಖಿಲ್‌ ಕುಮಾರಸ್ವಾಮಿ

ನಾನು ಜವಾಬ್ದಾರಿಯನ್ನು ಅರಿತಿದ್ದೇನೆ, ಚುನಾವಣೆಯ ಸೋಲು ತಾತ್ಕಾಲಿಕ; ನಿಖಿಲ್ ಕುಮಾರಸ್ವಾಮಿ

Please login to join discussion

Recent News

BBK 12: ಬಿಗ್‌ಬಾಸ್‌ ಮನೆಯಿಂದ ರಕ್ಷಿತಾ ಶೆಟ್ಟಿ & ಧ್ರುವಂತ್ ಔಟ್‌
Top Story

BBK 12: ಬಿಗ್‌ಬಾಸ್‌ ಮನೆಯಿಂದ ರಕ್ಷಿತಾ ಶೆಟ್ಟಿ & ಧ್ರುವಂತ್ ಔಟ್‌

by ಪ್ರತಿಧ್ವನಿ
December 14, 2025
ದೇಶದ 140 ಕೋಟಿ ಜನರ ಮತದಾನದ ಹಕ್ಕು ಉಳಿಸಲು ನಮ್ಮ ಹೋರಾಟ: ಡಿ.ಕೆ ಶಿವಕುಮಾರ್
Top Story

ದೇಶದ 140 ಕೋಟಿ ಜನರ ಮತದಾನದ ಹಕ್ಕು ಉಳಿಸಲು ನಮ್ಮ ಹೋರಾಟ: ಡಿ.ಕೆ ಶಿವಕುಮಾರ್

by ಪ್ರತಿಧ್ವನಿ
December 14, 2025
ಮೊಟ್ಟೆಗಳಲ್ಲಿ ಕ್ಯಾನ್ಸರ್‌ ಕಾರಕ ಅಂಶ ಪತ್ತೆ ಆರೋಪ: ದಿನೇಶ್ ಗುಂಡೂರಾವ್ ಹೇಳಿದ್ದೇನು?
Top Story

ಮೊಟ್ಟೆಗಳಲ್ಲಿ ಕ್ಯಾನ್ಸರ್‌ ಕಾರಕ ಅಂಶ ಪತ್ತೆ ಆರೋಪ: ದಿನೇಶ್ ಗುಂಡೂರಾವ್ ಹೇಳಿದ್ದೇನು?

by ಪ್ರತಿಧ್ವನಿ
December 14, 2025
ಹೊಸ ಬೆಂಗಳೂರು ನಿರ್ಮಾಣ ಮಾಡಿ ವಿಶ್ವದ ಜನರನ್ನು ಆಕರ್ಷಿಸಬೇಕು: ಡಿ.ಕೆ ಶಿವಕುಮಾರ್
Top Story

ಹೊಸ ಬೆಂಗಳೂರು ನಿರ್ಮಾಣ ಮಾಡಿ ವಿಶ್ವದ ಜನರನ್ನು ಆಕರ್ಷಿಸಬೇಕು: ಡಿ.ಕೆ ಶಿವಕುಮಾರ್

by ಪ್ರತಿಧ್ವನಿ
December 14, 2025
ವಿಮಾನದಲ್ಲಿ ವಿದೇಶಿ ಯುವತಿಯ ಜೀವ ಕಾಪಾಡಿದ ಅಂಜಲಿ ನಿಂಬಾಳ್ಕರ್‌ಗೆ ಸಿಎಂ ಮೆಚ್ಚುಗೆ
Top Story

ವಿಮಾನದಲ್ಲಿ ವಿದೇಶಿ ಯುವತಿಯ ಜೀವ ಕಾಪಾಡಿದ ಅಂಜಲಿ ನಿಂಬಾಳ್ಕರ್‌ಗೆ ಸಿಎಂ ಮೆಚ್ಚುಗೆ

by ಪ್ರತಿಧ್ವನಿ
December 14, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

BBK 12: ಬಿಗ್‌ಬಾಸ್‌ ಮನೆಯಿಂದ ರಕ್ಷಿತಾ ಶೆಟ್ಟಿ & ಧ್ರುವಂತ್ ಔಟ್‌

BBK 12: ಬಿಗ್‌ಬಾಸ್‌ ಮನೆಯಿಂದ ರಕ್ಷಿತಾ ಶೆಟ್ಟಿ & ಧ್ರುವಂತ್ ಔಟ್‌

December 14, 2025
ದೇಶದ 140 ಕೋಟಿ ಜನರ ಮತದಾನದ ಹಕ್ಕು ಉಳಿಸಲು ನಮ್ಮ ಹೋರಾಟ: ಡಿ.ಕೆ ಶಿವಕುಮಾರ್

ದೇಶದ 140 ಕೋಟಿ ಜನರ ಮತದಾನದ ಹಕ್ಕು ಉಳಿಸಲು ನಮ್ಮ ಹೋರಾಟ: ಡಿ.ಕೆ ಶಿವಕುಮಾರ್

December 14, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!