ಮೈಸೂರಿನಲ್ಲಿ ಸಿಎಂ ಸಿದ್ದರಾಮಯ್ಯ ಹಾಗೂ ಕಾಂಗ್ರೆಸ್ ಹೈಕಮಾಂಡ್ ನೇತೃತ್ವದಲ್ಲಿ ನಡೆಯುತ್ತಿರುವ ಗ್ರಹಲಕ್ಷ್ಮಿ ಯೋಜನೆ ಅನುಷ್ಠಾನ ಕಾರ್ಯಕ್ರಮದಲ್ಲಿ ಈಗಾಗಲೇ ಗೃಹಲಕ್ಷ್ಮಿ ಯೋಜನೆಗೆ ಅಧಿಕೃತ ರಾಹುಲ್ ಗಾಂಧಿ ಚಾಲನೆಯನ್ನು ನೀಡಿದ್ದಾರೆ. ಮುಂದಿನ ದಿನಗಳಲ್ಲಿ ಪ್ರತಿ ಮನೆಯ ಒಡತಿಗೆ ರೂ.2000 ಹಣವನ್ನು ನೇರವಾಗಿ ಅವರ ಖಾತೆಗೆ ಹಾಕಲಾಗುವುದು ಎಂದು ನಾಯಕರುಗಳು ಸ್ಪಷ್ಟಪಡಿಸಿದ್ದಾರೆ
ಇದರ ನಡುವೆ ಈಗ ಹಲವು ಮನೆಯ ಒಡತಿಯರಿಗೆ ಈಗಾಗಲೇ ಗೃಹಲಕ್ಷ್ಮಿ ಯೋಜನೆಯ ಕುರಿತು ಮೊಬೈಲ್ಗಳಿಗೆ ಮೆಸೇಜ್ ಬರಲು ಆರಂಭಿಸಿದೆ, ಈ ಸಂದೇಶದಲ್ಲಿ
ಅಭಿನಂದನೆಗಳು ನಿಮ್ಮ ಗೃಹಲಕ್ಷ್ಮಿ ಯೋಜನೆಯ ಸಂಖ್ಯೆ GL-220700**** ಅನ್ನು ನಮೂದಿಸಲಾಗಿದೆ ಆಗಸ್ಟ್ 2023 ರಿಂದ ಮೊತ್ತವನ್ನು ನೋಂದಾಯಿಸಿಕೊಂಡಿದ್ದ ಬ್ಯಾಂಕ್ ಖಾತೆಗೆ ಜಮಾ ಮಾಡಲಾಗುವುದು ಎಂಬ ಸಂದೇಶವನ್ನು ರವಾನೆ ಮಾಡಲಾಗಿದೆ
ಇದೀಗ ಈ ಮೆಸೇಜ್ ನೋಡುತ್ತಿದ್ದಂತೆ ಸಾಕಷ್ಟು ಮಂದಿ ಸಂತೋಷ ವ್ಯಕ್ತಪಡಿಸುತ್ತಿದ್ದು, ಈ ಕುರಿತು ಹಲವು ಪೋಸ್ಟ್ಗಳು ಸಾಮಾಜಿಕ ಜಾಲತಾಣದಲ್ಲಿ ಸಿಕ್ಕಾಪಟ್ಟೆ ವೈರಲ್ ಆಗ್ತಾ ಇದೆ…