ಸದ್ಯ ಲೋನ್ ಆಪ್ಗಳ ಹಾವಳಿ ಹೆಚ್ಚಾಗಿದ್ದು, ಜನರನ್ನು ಸುಳಿಗೆ ಮಾಡುತ್ತಿರುವ ಘಟನೆ ಬೆಳಕಿಗೆ ಬರುತ್ತಿದ್ದು ಇಂತಹ ಆಪ್ಗಳ ಕಾರಣದಿಂದ ಮಂಗಳೂರು ಬೆಳ್ತಂಗಡಿ ತಾಲೂಕಿನ ಪುದುವೆಟ್ಟು ಗ್ರಾಮದ ಬಾಯತ್ಯಾರು ಎಂಬಲ್ಲಿ ಯುವಕನೊಬ್ಬ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಳಕಿಗೆ ಬಂದಿದೆ.
ಆತ ಲೋನ್ ಆಪ್ಗಳ ಬ್ಲಾಕ್ ಮೇಲ್ ಬೆದರಿಕೆಗೆ ಪ್ರಾಣ ಬಿಟ್ಟಿದ್ದಾನೆ ಎನ್ನಲಾಗಿದೆ.
ಮಂಗಳೂರು ಪುದುವೆಟ್ಟುವಿನ ಸ್ವರಾಜ್ (24) ಆತ್ಮಹತ್ಯೆ ಮಾಡಿಕೊಂಡ ಯುವಕನಾಗಿದ್ದು, ಸ್ವರಾಜ್ ಆನ್ ಲೈನ್ ಲೋನ್ ಆಪ್ ಕಂಪನಿಯಿಂದ ಲೋನ್ ಪಡೆದಿದ್ದು, ಹಂತಹಂತವಾಗಿ ಕಂಪನಿ ಹೆಚ್ಚುವರಿ ಹಣ ವಾಪಸ್ ಪಡೆಯಲು ಬೆದರಿಕೆಗಳನ್ನು ಹಾಕುತ್ತಿತ್ತು. ಸ್ವರಾಜ್ ವಾಟ್ಸಪ್ ನಲ್ಲಿ ಅಕ್ಕನ ಮಗಳ ಡಿಪಿ ಫೋಟೋ ಹಾಕಿದ್ದ. ಇದನ್ನೇ ಬಂಡವಾಳ ಮಾಡಿಕೊಂಡ ಆಪ್ ಕಂಪನಿ ವಿದೇಶದ ವಾಟ್ಸಪ್ ನಂಬರಿನಿಂದ ಸ್ನೇಹಿತರಿಗೆ ‘ಮಗು ಮಾರಾಟಕ್ಕಿದೆ’ ಎಂದು ಬರೆದು ವಿದೇಶಿ ನಂಬರ್ ಹಾಕಿ ಸ್ವರಾಜ್ ಸ್ನೇಹಿತರಿಗೆ ಕೆಲ ದಿನಗಳ ಹಿಂದೆ ಶೇರ್ ಮಾಡಿದ್ದರು.
ಇನ್ನು ಈ ವಿಷಯವನ್ನು ಸ್ಪರಾಜ್ಗೆ ಸ್ನೇಹಿತರು ತಿಳಿಸಿದ್ದು, ಆಗಸ್ಟ್ ೩೦ ಕ್ಕೆ ಸ್ವರಾಜ್ ತನ್ನ ಬ್ಯಾಂಕ್ ಖಾತೆಯಿಂದ 30,000 ಸಾವಿರ ಹಣ ಡ್ರಾ ಮಾಡಿ ಆಪ್ ಕಂಪನಿಗೆ ಕಟ್ಟಿದ್ದ. ಮತ್ತೆ ಹೆಚ್ಚುವರಿ ಹಣ ನೀಡಲು ಆಪ್ ಕಂಪನಿ ಬೆದರಿಕೆ ಹಾಕುತ್ತಿತ್ತು.
ಅದಲ್ಲದೆ ಆಗಸ್ಟ್ 31 ರ ಮಧ್ಯಾಹ್ನ 2 ಗಂಟೆಗೆ ಕೊನೆಯ ಡೆಡ್ ಲೈನ್ ನಿನಗೆ ಎಂದು ಕಂಪನಿ ಸಂದೇಶ ಕಳುಹಿಸಿತ್ತು ಎನ್ನಲಾಗಿದೆ. ಈ ಎಲ್ಲಾ ವಿಚಾರದಿಂದ ನೊಂದಿದ್ದ ಸ್ಪರಾಜ್ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ತಿಳಿದು ಬಂದಿದೆ. ಇಂತಹ ಘಟನೆ ಪದೇ ಪದೇ ನಡೆಯುತ್ತಿದ್ದರು ಇದನ್ನು ಈ ಮೋಸದ ಜಾಲವನ್ನು ತಡೆಯಲು ಸಾಧ್ಯವಾಗುತ್ತಿಲ್ಲ. ಹಾಗಾದರೆ ಇದಕ್ಕೆ ತಡೆಯೇ ಇಲ್ಲವೇ ಎನ್ನುವ ಪ್ರಶ್ನೆ ಹಾಗೂ ಆತಂಕ ಜನರಲ್ಲಿ ಮೂಡಿದೆ.