• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, April 15, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಕಾಂಗ್ರೆಸ್ನಿಂದ ಸೆ.7 ರಂದು ಭಾರತದ ಎಲ್ಲಾ ಜಿಲ್ಲೆಗಳಲ್ಲಿ ಭಾರತ್ ಜೋಡೋ ಯಾತ್ರೆ

ಪ್ರತಿಧ್ವನಿ by ಪ್ರತಿಧ್ವನಿ
September 4, 2023
in Top Story, ಇದೀಗ, ದೇಶ, ರಾಜಕೀಯ
0
ಭಾರತ್‌ ಜೋಡೋ ಯಾತ್ರೆ

ಭಾರತ್‌ ಜೋಡೋ ಯಾತ್ರೆ

Share on WhatsAppShare on FacebookShare on Telegram

ಕಳೆದ ವರ್ಷ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಆರಂಭಿಸಿದ್ದ ಭಾರತ್ ಜೋಡೋ ಯಾತ್ರೆ ಸೆಪ್ಟೆಂಬರ್ 7ಕ್ಕೆ ಒಂದು ವರ್ಷ ಪೂರೈಸಲಿದೆ. ಮೊದಲ ವಾರ್ಷಿಕೋತ್ಸವದ ನೆನಪಿಗಾಗಿ ಕಾಂಗ್ರೆಸ್ ಅದೇ ದಿನ ಭಾರತದ ಎಲ್ಲಾ ಜಿಲ್ಲೆಗಳಲ್ಲಿ ಭಾರತ್ ಜೋಡೋ ಯಾತ್ರೆ ಆಯೋಜಿಸಲಿದೆ.

ADVERTISEMENT

ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕೆ.ಸಿ ವೇಣುಗೋಪಾಲ್ ಅವರು ಭಾರತ್ ಜೋಡೋ ಪಾದಯಾತ್ರೆಯ ಮೊದಲ ವಾರ್ಷಿಕೋತ್ಸವದ ಸ್ಮರಣಾರ್ಥವಾಗಿ ಸೆಪ್ಟೆಂಬರ್ 7 ರಂದು ಪ್ರತಿ ಜಿಲ್ಲೆಯಲ್ಲಿ ಸಂಜೆ 5 ರಿಂದ 6 ರವರೆಗೆ ‘ಭಾರತ್ ಜೋಡೋ’ ಆಚರಿಸಲು ನಿರ್ಧರಿಸಲಾಗಿದೆ ಎಂದು ಘೋಷಿಸಿದ್ದಾರೆ ಎಂದು ವರದಿಯಾಗಿದೆ.

ಭಾರತ್ ಜೋಡೋ ಯಾತ್ರೆಯಲ್ಲಿ ರಾಹುಲ್ ಗಾಂಧಿಯವರು ಕನ್ಯಾಕುಮಾರಿಯಿಂದ ಕಾಶ್ಮೀರದವರೆಗೆ 136 ದಿನಗಳ ಕಾಲ ದೇಶದಾದ್ಯಂತ 12 ರಾಜ್ಯಗಳಲ್ಲಿ ಕಾಲ್ನಡಿಗೆ ಮೂಲಕ ಸಾಗಿದ್ದರು. ಎಲ್ಲಾ ರಾಜ್ಯಗಳಲ್ಲೂ ಭರ್ಜರಿ ಪ್ರತಿಕ್ರಿಯೆ ವ್ಯಕ್ತವಾಗಿದ್ದು, ಆಯಾ ರಾಜ್ಯಗಳ ಕಾಂಗ್ರೆಸ್ ಕಾರ್ಯಕರ್ತರು, ನಾಯಕರು, ಜನರು ಭಾಗವಹಿಸಿದ್ದರು. ಅಲ್ಲದೇ ಕೆಲ ಸೆಲೆಬ್ರಿಟಿಗಳೂ, ಸಮಾನ ಮನಸ್ಸಿನ ಇತರ ಪಕ್ಷಗಳ ಕೆಲ ನಾಯಕರೂ ರಾಹುಲ್ ಗಾಂಧಿ ಜೊತೆ ಹೆಜ್ಜೆ ಹಾಕಿದ್ದರು.

Congress party to organise 'Bharat Jodo Yatra' in all the districts across the country to Commemorate the first anniversary of 'Bharat Jodo Yatra' on September 7. pic.twitter.com/PFxyUtwwKM

— ANI (@ANI) September 3, 2023

“ನಾನು ಈ ಯಾತ್ರೆಯನ್ನು ನನಗಾಗಲಿ ಅಥವಾ ಕಾಂಗ್ರೆಸ್ಗಾಗಿ ಮಾಡಿಲ್ಲ, ಆದರೆ ದೇಶದ ಜನರಿಗಾಗಿ ಮಾಡಿದ್ದು. ಈ ದೇಶದ ಅಡಿಪಾಯವನ್ನು ನಾಶಮಾಡಲು ಬಯಸುವ ಸಿದ್ಧಾಂತದ ವಿರುದ್ಧ ನಿಲ್ಲುವುದು ನಮ್ಮ ಗುರಿಯಾಗಿದೆ” ಎಂದು ರಾಹುಲ್ ಗಾಂಧಿ ಕಾಶ್ಮೀರದಲ್ಲಿ ನಡೆದ ಸಮಾರೋಪ ಸಮಾರಂಭದಲ್ಲಿ ಹೇಳಿದ್ದರು.

ಯಾತ್ರೆಯ ಅವಧಿಯಲ್ಲಿ, ರಾಹುಲ್ ಗಾಂಧಿಯವರು 12 ಸಾರ್ವಜನಿಕ ಸಭೆಗಳು, 100 ಕ್ಕೂ ಹೆಚ್ಚು ಸಣ್ಣ ಸಭೆಗಳು ಮತ್ತು 13 ಪತ್ರಿಕಾಗೋಷ್ಠಿಗಳನ್ನು ಉದ್ದೇಶಿಸಿ ಮಾತನಾಡಿದ್ದರು. 136 ದಿನಗಳಲ್ಲಿ 4,000 ಕಿ.ಮೀ ದೂರವನ್ನು ರಾಹುಲ್ ಗಾಂಧಿ ಕ್ರಮಿಸಿದ್ದಾರೆ.

ಸೆಪ್ಟೆಂಬರ್ 7 ರಿಂದ ತಮಿಳುನಾಡಿನ ಕನ್ಯಾಕುಮಾರಿಯಲ್ಲಿ ಕಾಂಗ್ರೆಸ್ ಪಕ್ಷದ ಮಹತ್ವದ ಭಾರತ್ ಜೋಡೋ ಯಾತ್ರೆಯನ್ನು ರಾಹುಲ್ ಗಾಂಧಿ ಆರಂಭಿಸಿದ್ದರು. ಕನ್ಯಾಕುಮಾರಿಯಿಂದ ಆರಂಭವಾಗಿ ಭಾರತದ ಮುಕುಟ ಕಾಶ್ಮೀರದಲ್ಲಿ ಜನವರಿ 30 ರಂದು ಯಾತ್ರೆ ಅಂತ್ಯಗೊಂಡಿತು. ಭಾರತ್ ಜೋಡೋ ಯಾತ್ರೆ 75 ಜಿಲ್ಲೆಗಳು, 12 ರಾಜ್ಯಗಳು ಮತ್ತು 2 ಕೇಂದ್ರಾಡಳಿತ ಪ್ರದೇಶಗಳಲ್ಲಿ ಸಾಗಿತ್ತು.

Tags: bharat jodo yatraRahul Gandhiಕಾಂಗ್ರೆಸ್‌ಭಾರತ್‌ ಜೋಡೋಭಾರತ್‌ ಜೋಡೋ ಯಾತ್ರೆರಾಹುಲ್‌ ಗಾಂಧಿ
Previous Post

ಚಂದ್ರಯಾನ 3 ಕೌಂಟ್‌ಡೌನ್‌ ಹಿಂದಿನ ಧ್ವನಿಯಾಗಿದ್ದ ವಿಜ್ಞಾನಿ ವಲರ್ಮತಿ ನಿಧನ

Next Post

ಉತ್ತರ ಪ್ರದೇಶ |3 ಅಂತಸ್ತಿನ ಕಟ್ಟಡ ಕುಸಿದು ಇಬ್ಬರು ಸಾವು, ಮುಂದುವರಿದ ಶೋಧ

Related Posts

ಸಿದ್ದರಾಮಯ್ಯ ಲವ್ ಸ್ಟೋರಿ ಮರುಚರ್ಚೆ: ‘ಭಾಗ್ಯ’ ಯೋಜನೆಗಳ ಅರ್ಥ ಏನು? ಸಿಎಂ ಸ್ಪಷ್ಟನೆ
ರಾಜಕೀಯ

ಸಿದ್ದರಾಮಯ್ಯ ಲವ್ ಸ್ಟೋರಿ ಮರುಚರ್ಚೆ: ‘ಭಾಗ್ಯ’ ಯೋಜನೆಗಳ ಅರ್ಥ ಏನು? ಸಿಎಂ ಸ್ಪಷ್ಟನೆ

by ಪ್ರತಿಧ್ವನಿ
April 14, 2026
0

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ಕಾಲೇಜು ದಿನಗಳ ಪ್ರೇಮಕಥೆ ಹಾಗೂ ಸರ್ಕಾರದ ‘ಭಾಗ್ಯ’ ಯೋಜನೆಗಳ ಅರ್ಥ ಕುರಿತು ನೀಡಿದ ಹೇಳಿಕೆ ಇದೀಗ ಮತ್ತೆ ಚರ್ಚೆಗೆ ಗ್ರಾಸವಾಗಿದೆ.ಇತ್ತೀಚಿನ ಸಂದರ್ಶನವೊಂದರಲ್ಲಿ...

Read moreDetails
ಸಂಪೂರ್ಣವಾಗಿ ಸಮಾನತೆಯನ್ನು ಸಾಧಿಸಲಾಗಿಲ್ಲ ಎನ್ನುವುದು ನನ್ನ ನೋವಾಗಿದೆ : ಸಿಎಂ ಸಿದ್ದರಾಮಯ್ಯ ಬೇಸರ..!

ಸಂಪೂರ್ಣವಾಗಿ ಸಮಾನತೆಯನ್ನು ಸಾಧಿಸಲಾಗಿಲ್ಲ ಎನ್ನುವುದು ನನ್ನ ನೋವಾಗಿದೆ : ಸಿಎಂ ಸಿದ್ದರಾಮಯ್ಯ ಬೇಸರ..!

April 14, 2026
ಬಿಹಾರದಲ್ಲಿ ನಿತೀಶ್‌ ಯುಗಾಂತ್ಯ : ಸಿಎಂ ಸ್ಥಾನಕ್ಕೆ ಹಿರಿಯ ನಾಯಕನ ರಾಜೀನಾಮೆ..

ಬಿಹಾರದಲ್ಲಿ ನಿತೀಶ್‌ ಯುಗಾಂತ್ಯ : ಸಿಎಂ ಸ್ಥಾನಕ್ಕೆ ಹಿರಿಯ ನಾಯಕನ ರಾಜೀನಾಮೆ..

April 14, 2026
ದೀದಿ ರಾಜ್ಯದಲ್ಲಿ ಮೋದಿ “SIR” : ಎಷ್ಟು ಲಕ್ಷ ಮತದಾರರ ಭವಿಷ್ಯ ಅತಂತ್ರ ಗೊತ್ತಾ..?

ದೀದಿ ರಾಜ್ಯದಲ್ಲಿ ಮೋದಿ “SIR” : ಎಷ್ಟು ಲಕ್ಷ ಮತದಾರರ ಭವಿಷ್ಯ ಅತಂತ್ರ ಗೊತ್ತಾ..?

April 14, 2026
ಹರಿಹರ ಪೀಠದಿಂದ ವಚನಾನಂದ ಸ್ವಾಮೀಜಿ ಉಚ್ಚಾಟನೆ : ಯತ್ನಾಳ್‌ ಹೀಗ್ಯಾಕಂದ್ರು..?

ಹರಿಹರ ಪೀಠದಿಂದ ವಚನಾನಂದ ಸ್ವಾಮೀಜಿ ಉಚ್ಚಾಟನೆ : ಯತ್ನಾಳ್‌ ಹೀಗ್ಯಾಕಂದ್ರು..?

April 14, 2026
Next Post
ಉತ್ತರ ಪ್ರದೇಶ

ಉತ್ತರ ಪ್ರದೇಶ |3 ಅಂತಸ್ತಿನ ಕಟ್ಟಡ ಕುಸಿದು ಇಬ್ಬರು ಸಾವು, ಮುಂದುವರಿದ ಶೋಧ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada