• Home
  • About Us
  • ಕರ್ನಾಟಕ
Friday, October 24, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

ಉದಯನಿಧಿ ಸ್ಟಾಲಿನ್‌ರದ್ದು ಹಿಟ್ಲರ್‌ ಮನಸ್ಥಿತಿ: ಬಸವರಾಜ ಬೊಮ್ಮಾಯಿ

ಪ್ರತಿಧ್ವನಿ by ಪ್ರತಿಧ್ವನಿ
September 4, 2023
in Top Story, ಇದೀಗ, ಕರ್ನಾಟಕ, ರಾಜಕೀಯ
0
ಬಸವರಾಜ ಬೊಮ್ಮಾಯಿ

ಬಸವರಾಜ ಬೊಮ್ಮಾಯಿ

Share on WhatsAppShare on FacebookShare on Telegram

ತಮಿಳುನಾಡು ಡಿಎಂಕೆ ಸಚಿವ ಉದಯನಿಧಿ ಸ್ಟಾಲಿನ್ ಸನಾತನ ಧರ್ಮದ ಕುರಿತು ನೀಡಿರುವ ಹೇಳಿಕೆ ಖಂಡನೀಯವಾಗಿದ್ದು, ಅವರ ಹೇಳಿಕೆ ಅವರ ಹಿಟ್ಲರ್ ಮನಸ್ಥಿತಿ ತೋರಿಸುತ್ತದೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ADVERTISEMENT

ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಚುನಾವಣೆಯಲ್ಲಿ ಒಂದು ವರ್ಗವನ್ನು ಸೆಳೆಯಲು ಈ ರೀತಿ ಮಾಡುತ್ತಾರೆ. ಸಂವಿಧಾನ ವಿರೋಧಿ ಹೇಳಿಕೆ ನೀಡಿರುವ ಉದಯನಿಧಿ ಅವರನ್ನು ತಕ್ಷಣ ಸಂಪುಟದಿಂದ ಕೈಬಿಡಬೇಕು ಎಂದು ಬಸವರಾಜ ಬೊಮ್ಮಾಯಿ ಆಗ್ರಹಿಸಿದ್ದಾರೆ.

ಸನಾತನ ಧರ್ಮ ಸರ್ವೇಜನ ಸುಖಿನೊಭವಂತು ಅಂತ ಹೇಳುತ್ತದೆ. ಮಾನವರಷ್ಟೇ ಅಲ್ಲ ಎಲ್ಲ ಜೀವಿಗಳು ಸುಖವಾಗಿರಲಿ ಅಂತ ಸನಾತನ ಧರ್ಮ ಬಯಸುತ್ತದೆ. ಸನಾತನ ಧರ್ಮವನ್ನು ಕಿತ್ತೊಗೆಯಬೇಕೆಂಬ ಮಾತು ಹಿಟ್ಲರ್ ಮೈಂಡ್ ಸೆಟ್, ಪ್ರಜಾಪ್ರಭುತ್ವ ವಿರೋಧಿಯಾಗಿದೆ. ಸನಾತನ ಧರ್ಮದಲ್ಲಿ ಎಲ್ಲರಿಗೂ ಸಮಾನ ಅವಕಾಶ ಇದೆ. ಉದಯನಿಧಿ ಸ್ಟಾಲಿನ್ ಸಂವಿಧಾನ ವಿರೊಧಿ ಹೇಳಿಕೆ ನೀಡಿದ್ದಾರೆ. ಅವರನ್ನು ಸಂಪುಟದಿಂದ ಕಿತ್ತೊಗೆಯಬೇಕು ಎಂದು ಆಗ್ರಹಿಸಿದ್ದಾರೆ.

ಉದಯನಿಧಿ ಹೇಳಿಕೆ ಬಗ್ಗೆ ಇಂಡಿಯಾ ಕೂಟದ ಮಿತ್ರ ಪಕ್ಷಗಳು ಗೊಂದಲದಲ್ಲಿದ್ದಾವೆ. ಭಾರತದಲ್ಲಿ ಎಲ್ಲ ಧರ್ಮಗಳಿಗೆ ಅವಕಾಶ ಇದೆ. ಇಲ್ಲಿ ಬೌದ್ದ, ಜೈನ, ಸಿಖ್, ಇಸ್ಲಾಂ, ಸಿಖ್ ಧರ್ಮಗಳು ನೆಮ್ಮದಿಯಾಗಿವೆ. ಸುತ್ತಲಿನ ರಾಷ್ಟ್ರಗಳಲ್ಲಿ ಏನು ನಡೆಯುತ್ತಿದೆ ಎನ್ನುವುದು ಎಲ್ಲರಿಗೂ ಗೊತ್ತಿದೆ. ಅವರು ಅಧಿಕಾರದ ಆಸೆಗೆ ತುಷ್ಟೀಕರಣದ ರಾಜಕಾರಣ ಮಾಡುತ್ತಿದ್ದಾರೆ. ಭಾರತದ ಜನರು ಇದೆಲ್ಲವನ್ನು ಗಮನಿಸುತ್ತಾರೆ. ಅವರು ಸೂಕ್ತ ಉತ್ತರ ನೀಡುತ್ತಾರೆ ಎಂದು ಹೇಳಿದರು.

ಉಚಿತ ಯೋಜನೆಗಳಿಗೆ ಪ್ರಧಾನಿ ನರೇಂದ್ರ ಮೋದಿ ವಿರೋಧ ವ್ಯಕ್ತಪಡಿಸುತ್ತಿರುವ ಕುರಿತು ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ಎಲ್ಲ ಜನರ ಆದಾಯ ಹೆಚ್ಚಾಗಿ ಆರ್ಥಿಕತೆ ಹೆಚ್ಚಾಗಬೇಕು, ಆಗ ದೇಶ ಮತ್ತು ವ್ಯಕ್ತಿಗತ ಅಭಿವೃದ್ಧಿಗೆ ಅವಕಾಶ ಸಿಗಲಿದೆ ಎಂದು ಪ್ರಧಾನಿ ಹೇಳಿದ್ದಾರೆ. ಇದು ಶಾರ್ಟ್ ಪಿರಿಯಡ್ ಅಷ್ಟೇ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ ಎಂದರು.

ಈ ಸರ್ಕಾರ ವಿದ್ಯುತ್ ಕ್ಷೇತ್ರವನ್ನು ನಿರ್ಲಕ್ಷಿಸುತ್ತಿದೆ. ಈಗಾಗಲೇ ಲೊಡ್ ಶೆಡ್ಡಿಂಗ್ ರಾಜ್ಯಾಧ್ಯಂತ ಆರಂಭವಾಗಿದೆ. ಈ ಸರ್ಕಾರ ವಿದ್ಯುತ್ ಕ್ಷೇತ್ರ ನಿರ್ಲಕ್ಷ್ಯ ಮಾಡಿದೆ. ನಾವು ಇದ್ದಾಗ ಹೆಚ್ಚುವರಿ ಉತ್ಪಾದನೆಯಾದ ವಿದ್ಯುತ್ ಮಾರಿ ಎರಡು ಸಾವಿರ ಕೋಟಿ ರೂ. ಆದಾಯ ಗಳಿಸಿದ್ದೇವು. ಈ ಸರ್ಕಾರ ಕಲ್ಲಿದ್ದಲು ಉತ್ಪಾದನೆ ಪೂರ್ಣ ಪ್ರಮಾಣದಲ್ಲಿ ಅಗುತ್ತಿಲ್ಲ. ಮಳೆ ಬಾರದೇ ಜಲ ವಿದ್ಯುತ್ ಉತ್ಪಾದನೆ ಆಗುತ್ತಿಲ್ಲ. ಹಣಕಾಸಿನ ಸರಿಯಾದ ನಿರ್ವಹಣೆ ಇಲ್ಲದಿರುವುದಕ್ಕೆ ಇದೆಲ್ಲ ಆಗುತ್ತಿದೆ ಎಂದರು.

ಕಾವೇರಿ ನೀರು ನಿರ್ವಹಣೆಯಲ್ಲಿ ಸರ್ಕಾರ ಆರಂಭದಿಂದಲೂ ವಿಫಲ ಆಗಿದೆ. ಜೂನ್ ತಿಂಗಳಲ್ಲಿ ಮಳೆ ಕಡಿಮೆ ಆದಾಗಲೇ ಎಚ್ಚೇತ್ತಕೊಳ್ಳಬೇಕಿತ್ತು. ನಮ್ಮ ರೈತರಿಗೆ ಆರಂಭದಲ್ಲಿ ನೀರು ಬಿಡಲಿಲ್ಲ. ತಮಿಳುನಾಡಿಗೆ ನಿರಂತರ ನೀರು ಹರಿಸುತ್ತಿದ್ದಾರೆ. ತಮಿಳುನಾಡು ಸರ್ಕಾರ 15000 ಕ್ಯೂಸೆಕ್ಸ್ ನೀರು ಕೇಳಿತ್ತು. ನಾವು 5 ಸಾವಿರ ಕ್ಯೂಸೆಕ್ಸ್ ನೀರು ಬಿಟ್ಟಿದ್ದೇವೆ ಎಂದು ಸಮರ್ಥಿಸಿಕೊಳ್ಳುತ್ತಿದ್ದಾರೆ. ಅದೇ ಇವರ ಸಾಧನೆ ಎಂದು ವಾಗ್ದಾಳಿ ನಡೆಸಿದರು.

ಮೇಕೆದಾಟು ಯೋಜನೆಗೆ ಶತಮಾನಗಳಿಂದಲೂ ಬೇಡಿಕೆ ಇದೆ. ನಮ್ಮ ಅವಧಿಯಲ್ಲಿ ಕಾಂಗ್ರೆಸ್ ನವರು ಪಾದಯಾತ್ರೆ ಮಾಡಿ ಪ್ರಚಾರ ಗಿಟ್ಟಿಸಿಕೊಂಡರು ಆಗ ಈ ಪ್ರಕರಣ ಕೋರ್ಟ್‌ನಲ್ಲಿದೆ ಅಂತ ಹೇಳಿದಾಗ ನಂಬಲಿಲ್ಲ. ಈಗ ಸಿದ್ದರಾಮಯ್ಯ ಪ್ರಕರಣ ಕೋರ್ಟ್ ನಲ್ಲಿದೆ ಅಂತ ಹೇಳುತ್ತಿದ್ದಾರೆ. ಸತ್ಯ ಅವರ ಬಾಯಿಂದಲೇ ಹೊರ ಬಂದಿದೆ.

ಈಗ ಎರಡೂ ರಾಜ್ಯಗಳಲ್ಲಿ ನೀರಾವರಿಗೆ ಹೆಚ್ಚಿನ ಬೇಡಿಕೆ ಇದೆ. ಎರಡೂ ರಾಜ್ಯಗಳಿಗೂ ನೀರಿನ ಅಗತ್ಯ ಹೆಚ್ಚಿದ. ಅದಕ್ಕಾಗಿ ಮತ್ತೊಂದು ಡ್ಯಾಮ್ ಮೂಲಕ ನೀರು ಸಂಗ್ರಹಿಸಿ ಬಳಕೆ ಮಾಡಿಕೊಳ್ಳುವುದರಿಂದ ಎಲ್ಲರಿಗೂ ಅನುಕೂಲವಾಗಲಿದೆ ಎಂದು ಅಭಿಪ್ರಾಯ ಪಟ್ಟರು.

ಕೃಷ್ಣಾ ಯೋಜನೆ ವಿಚಾರದಲ್ಲಿ ಭೂ ಸ್ವಾಧಿನಕ್ಕೆ ಹೊಸ ನಿಯಮಗಳ ಪ್ರಕಾರ ಪರಿಹಾರ ಕೊಡಬೇಕು. ಇವರು ರೈತರನ್ನು ಸಂಪೂರ್ಣ ದಾರಿ ತಪ್ಪಿಸುವ ಕೆಲಸ ಮಾಡುತ್ತಿದ್ದಾರೆ ಎಂದರು.

ಅನ್ನಭಾಗ್ಯ ಯೋಜನೆಯಲ್ಲಿ ಸುಮಾರು 39 ಲಕ್ಷ ಫಲಾನುಭವಿಗಳಿಗೆ 5 ಕೆಜಿ ಅಕ್ಕಿ ಬದಲು ನೀಡುವ ಹಣ ತಲುಪಿಲ್ಲ. ಅದಕ್ಕೆ ಸರ್ಕಾರ ತಾಂತ್ರಿಕ ಕಾರಣದ ಕುಂಟು ನೆಪ ಹೇಳುತ್ತಿದೆ. ಕಳೆದ ಎರಡು ತಿಂಗಳಿಂದ ಅಕ್ಕಿ ಪಡೆಯುತ್ತಿದ್ದವರು ಹೇಗೆ ಅನರ್ಹ ಆಗುತ್ತಾರೆ. ಮುಂದಿನ ದಿನಗಳಲ್ಲಿ ಭಾಗ್ಯಲಕ್ಷ್ಮಿ ಯೋಜನೆ ಅನಷ್ಠಾನದಲ್ಲಿಯೂ ಇದೇ ರೀತಿ ಫಲಾನುಭವಿಗಳಿಗೆ ಅನ್ಯಾಯವಾಗಲಿದೆ ಎಂದು ಹೇಳಿದರು.

ಪಕ್ಷಾಂತರದ ಕುರಿತು ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ಒಂದು ಚುನಾವಣೆ ಮುಗಿದು ಮತ್ತೊಂದು ಚುನಾವಣೆ ಬರುವ ಸಂದರ್ಭದಲ್ಲಿ ಈ ರೀತಿಯ ಮಾತುಗಳು ಕೇಳಿ ಬರುತ್ತವೆ. ನಾನು ಯಾರ ಹೇಳಿಕೆಗಳಿಗೂ ಪ್ರತಿಕ್ರಿಯೆ ನೀಡುವುದಿಲ್ಲ. ಇದಕ್ಕೆಲ್ಲ ಲೋಕಸಭೆ ಚುನಾವಣೆ ಫಲಿತಾಂಶ ಉತ್ತರ ನೀಡಲಿದೆ. ಲೋಕಸಭೆ ಚುನಾವಣೆ ಫಲಿತಾಂಶ ಈ ಸರ್ಕಾರದ ಭವಿಷ್ಯವನ್ನೂ ನಿರ್ಧರಿಸಲಿದೆ ಎಂದು ಬಸವರಾಜ ಬೊಮ್ಮಾಯಿ ಹೇಳಿದರು.

Tags: Basavaraj BommaiSanatana DhramaUdayanidhi Stalinಉದಯನಿಧಿ ಸ್ಟಾಲಿನ್‌ಬಸವರಾಜ ಬೊಮ್ಮಾಯಿಸನಾತನ ಧರ್ಮ
Previous Post

ಉದಯನಿಧಿ ಸ್ಟಾಲಿನ್ ಒಬ್ಬ ರೋಗಿಷ್ಟ ಮನಸ್ಥಿತಿಯುಳ್ಳವ: ಡಾ.ಕೃಷ್ಣ ಪ್ರಸನ್ನ

Next Post

ಭದ್ರಾ ಮೇಲ್ದಂಡೆ ಯೋಜನೆ ಕಾಮಗಾರಿ ಒಂದು ವರ್ಷದಲ್ಲಿ ಅನುಷ್ಠಾನಗೊಳಿಸಿ ನೀರು ಬಿಡಿ: ಟಿ.ಬಿ.ಜಯಚಂದ್ರ

Related Posts

ಹಿಟ್ ಅಂಡ್ ರನ್ ಕೇಸ್: ದಿವ್ಯಾ ಸುರೇಶ್ ಮೊದಲ ಪ್ರತಿಕ್ರಿಯೆ
Top Story

ಹಿಟ್ ಅಂಡ್ ರನ್ ಕೇಸ್: ದಿವ್ಯಾ ಸುರೇಶ್ ಮೊದಲ ಪ್ರತಿಕ್ರಿಯೆ

by ಪ್ರತಿಧ್ವನಿ
October 24, 2025
0

ಬೆಂಗಳೂರು: ಬೈಕ್ ಗೆ ಡಿಕ್ಕಿ ಹೊಡೆದು ಯುವತಿಗೆ ತೀವ್ರ ಗಾಯ ಮಾಡಿರುವ ಬಿಗ್ ಬಾಸ್ ಮಾಜಿ ಸ್ಪರ್ಧಿ ದಿವ್ಯಾ ಸುರೇಶ್ ಪ್ರಕರಣ ಸಂಬಂಧ ಮೊದಲ ಪ್ರತಿಕ್ರಿಯೆ ನೀಡಿದ್ದಾರೆ....

Read moreDetails
ಜಿಬಿಎ ವ್ಯಾಪ್ತಿಗೆ ತರುವ ಹೊರವಲಯ ಪ್ರದೇಶಗಳ ಸಮೀಕ್ಷೆಗೆ ಸೂಚನೆ: ಡಿಸಿಎಂ ಡಿ.ಕೆ. ಶಿವಕುಮಾರ್

ಜಿಬಿಎ ವ್ಯಾಪ್ತಿಗೆ ತರುವ ಹೊರವಲಯ ಪ್ರದೇಶಗಳ ಸಮೀಕ್ಷೆಗೆ ಸೂಚನೆ: ಡಿಸಿಎಂ ಡಿ.ಕೆ. ಶಿವಕುಮಾರ್

October 24, 2025
ಬಿಜೆಪಿಯಿಂದ ತಿರಸ್ಕೃತಗೊಂಡ ನಿರುದ್ಯೋಗಿ ಪ್ರತಾಪ್ ಸಿಂಹ

ಬಿಜೆಪಿಯಿಂದ ತಿರಸ್ಕೃತಗೊಂಡ ನಿರುದ್ಯೋಗಿ ಪ್ರತಾಪ್ ಸಿಂಹ

October 24, 2025
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ವಿಧಾನಸೌಧದ ಸಮ್ಮೇಳನ

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ವಿಧಾನಸೌಧದ ಸಮ್ಮೇಳನ

October 24, 2025
ಡಾಕ್ಟರ್ ಪತ್ನಿ ಕೊಲೆ; ಫಲಿಸಲಿಲ್ಲ ಆರೋಪಿ ಡಾ.ಮಹೇಂದ್ರ ರೆಡ್ಡಿ ಪ್ರಾರ್ಥನೆ

ಡಾಕ್ಟರ್ ಪತ್ನಿ ಕೊಲೆ; ಫಲಿಸಲಿಲ್ಲ ಆರೋಪಿ ಡಾ.ಮಹೇಂದ್ರ ರೆಡ್ಡಿ ಪ್ರಾರ್ಥನೆ

October 24, 2025
Next Post
ಟಿ.ಬಿ.ಜಯಚಂದ್ರ

ಭದ್ರಾ ಮೇಲ್ದಂಡೆ ಯೋಜನೆ ಕಾಮಗಾರಿ ಒಂದು ವರ್ಷದಲ್ಲಿ ಅನುಷ್ಠಾನಗೊಳಿಸಿ ನೀರು ಬಿಡಿ: ಟಿ.ಬಿ.ಜಯಚಂದ್ರ

Please login to join discussion

Recent News

ಹಿಟ್ ಅಂಡ್ ರನ್ ಕೇಸ್: ದಿವ್ಯಾ ಸುರೇಶ್ ಮೊದಲ ಪ್ರತಿಕ್ರಿಯೆ
Top Story

ಹಿಟ್ ಅಂಡ್ ರನ್ ಕೇಸ್: ದಿವ್ಯಾ ಸುರೇಶ್ ಮೊದಲ ಪ್ರತಿಕ್ರಿಯೆ

by ಪ್ರತಿಧ್ವನಿ
October 24, 2025
ಜಿಬಿಎ ವ್ಯಾಪ್ತಿಗೆ ತರುವ ಹೊರವಲಯ ಪ್ರದೇಶಗಳ ಸಮೀಕ್ಷೆಗೆ ಸೂಚನೆ: ಡಿಸಿಎಂ ಡಿ.ಕೆ. ಶಿವಕುಮಾರ್
Top Story

ಜಿಬಿಎ ವ್ಯಾಪ್ತಿಗೆ ತರುವ ಹೊರವಲಯ ಪ್ರದೇಶಗಳ ಸಮೀಕ್ಷೆಗೆ ಸೂಚನೆ: ಡಿಸಿಎಂ ಡಿ.ಕೆ. ಶಿವಕುಮಾರ್

by ಪ್ರತಿಧ್ವನಿ
October 24, 2025
ಬಿಜೆಪಿಯಿಂದ ತಿರಸ್ಕೃತಗೊಂಡ ನಿರುದ್ಯೋಗಿ ಪ್ರತಾಪ್ ಸಿಂಹ
Top Story

ಬಿಜೆಪಿಯಿಂದ ತಿರಸ್ಕೃತಗೊಂಡ ನಿರುದ್ಯೋಗಿ ಪ್ರತಾಪ್ ಸಿಂಹ

by ಪ್ರತಿಧ್ವನಿ
October 24, 2025
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ವಿಧಾನಸೌಧದ ಸಮ್ಮೇಳನ
Top Story

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ವಿಧಾನಸೌಧದ ಸಮ್ಮೇಳನ

by ಪ್ರತಿಧ್ವನಿ
October 24, 2025
ಡಾಕ್ಟರ್ ಪತ್ನಿ ಕೊಲೆ; ಫಲಿಸಲಿಲ್ಲ ಆರೋಪಿ ಡಾ.ಮಹೇಂದ್ರ ರೆಡ್ಡಿ ಪ್ರಾರ್ಥನೆ
Top Story

ಡಾಕ್ಟರ್ ಪತ್ನಿ ಕೊಲೆ; ಫಲಿಸಲಿಲ್ಲ ಆರೋಪಿ ಡಾ.ಮಹೇಂದ್ರ ರೆಡ್ಡಿ ಪ್ರಾರ್ಥನೆ

by ಪ್ರತಿಧ್ವನಿ
October 24, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಹಿಟ್ ಅಂಡ್ ರನ್ ಕೇಸ್: ದಿವ್ಯಾ ಸುರೇಶ್ ಮೊದಲ ಪ್ರತಿಕ್ರಿಯೆ

ಹಿಟ್ ಅಂಡ್ ರನ್ ಕೇಸ್: ದಿವ್ಯಾ ಸುರೇಶ್ ಮೊದಲ ಪ್ರತಿಕ್ರಿಯೆ

October 24, 2025
ಜಿಬಿಎ ವ್ಯಾಪ್ತಿಗೆ ತರುವ ಹೊರವಲಯ ಪ್ರದೇಶಗಳ ಸಮೀಕ್ಷೆಗೆ ಸೂಚನೆ: ಡಿಸಿಎಂ ಡಿ.ಕೆ. ಶಿವಕುಮಾರ್

ಜಿಬಿಎ ವ್ಯಾಪ್ತಿಗೆ ತರುವ ಹೊರವಲಯ ಪ್ರದೇಶಗಳ ಸಮೀಕ್ಷೆಗೆ ಸೂಚನೆ: ಡಿಸಿಎಂ ಡಿ.ಕೆ. ಶಿವಕುಮಾರ್

October 24, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!