ಏಷ್ಯಾ ಕಪ್ನ ಸೂಪರ್-4 ಹಂತದ ಅಂಕ ಪಟ್ಟಿಯಲ್ಲಿ ಉಭಯ ತಂಡಗಳು ಮೊದಲೆರಡು ಸ್ಥಾನಗಳನ್ನು ಅಲಂಕರಿಸಿದರೆ ಏಷ್ಯಾಕಪ್ ಫೈನಲ್ನಲ್ಲಿ ಮತ್ತೆ ಮುಖಾಮುಖಿಯಾಗಬಹುದು. ಹೀಗಾಗಿ ಈ ಬಾರಿಯ ಏಷ್ಯಾಕಪ್ನಲ್ಲಿ ಭಾರತ-ಪಾಕ್ ನಡುವಣ ಮೂರು ಪಂದ್ಯಗಳನ್ನು ವೀಕ್ಷಿಸುವ ಅವಕಾಶ ಕ್ರಿಕೆಟ್ ಪ್ರೇಮಿಗಳಿಗೆ ದೊರೆಯಲಿದೆಯಾ ಕಾದು ನೋಡಬೇಕಿದೆ.
ಏಷ್ಯಾಕಪ್ನ 5ನೇ ಪಂದ್ಯದಲ್ಲಿ ಭರ್ಜರಿ ಜಯ ಸಾಧಿಸುವ ಮೂಲಕ ಟೀಮ್ ಇಂಡಿಯಾ ಸೂಪರ್-4 ಹಂತಕ್ಕೇರಿದೆ. ಪಲ್ಲೆಕಲೆ ಮೈದಾನದಲ್ಲಿ ನಡೆದ ನೇಪಾಳ ವಿರುದ್ಧದ ಪಂದ್ಯದಲ್ಲಿ ಭಾರತ ತಂಡವು 10 ವಿಕೆಟ್ಗಳ ಅಮೋಘ ಗೆಲುವು ದಾಖಲಿಸಿತು. ಈ ಗೆಲುವಿನೊಂದಿಗೆ ಟೀಮ್ ಇಂಡಿಯಾ ಗ್ರೂಪ್-A ನಿಂದ ಸೂಪರ್ ಫೋರ್ ಹಂತಕ್ಕೇರಿದ 2ನೇ ತಂಡ ಎನಿಸಿಕೊಂಡಿದೆ.
ಇದಕ್ಕೂ ಮುನ್ನ ಪಾಕಿಸ್ತಾನ್ ತಂಡವು ಸೂಪರ್ ಫೋರ್ ಹಂತಕ್ಕೇರಿತ್ತು. ಇದೀಗ ಇದೇ ಗ್ರೂಪ್ನಿಂದ ಭಾರತ ತಂಡ ಕೂಡ ಮುಂದಿನ ಸುತ್ತಿಗೆ ಪ್ರವೇಶಿಸಿದೆ. ಇದರೊಂದಿಗೆ ಮತ್ತೊಮ್ಮೆ ಉಭಯ ತಂಡಗಳ ಮುಂದಿನ ಮುಖಾಮುಖಿಗೆ ಡೇಟ್ ಫಿಕ್ಸ್ ಆದಂತಾಗಿದೆ.
ಅಂದರೆ ಸೂಪರ್-4 ಹಂತದಲ್ಲಿ ಒಟ್ಟು 4 ತಂಡಗಳು ಪರಸ್ಪರ ಸೆಣಸಲಿದೆ. ಇಲ್ಲಿ ಭಾರತ ಹಾಗೂ ಪಾಕಿಸ್ತಾನ್ ತಂಡಗಳು ಸೆಪ್ಟೆಂಬರ್ 10 ರಂದು ಮುಖಾಮುಖಿಯಾಗುವುದು ಖಚಿತವಾಗಿದೆ. ಅದರಂತೆ ಈ ಬಾರಿಯ ಏಷ್ಯಾಕಪ್ನಲ್ಲಿ ಭಾರತ-ಪಾಕ್ ನಡುವಣ ಮೂರು ಪಂದ್ಯಗಳನ್ನು ವೀಕ್ಷಿಸುವ ಅವಕಾಶ ಕ್ರಿಕೆಟ್ ಪ್ರೇಮಿಗಳಿಗೆ ದೊರೆಯಲಿದೆಯಾ ಅನ್ನೋದನ್ನ ಕಾದು ನೋಡಬೇಕಿದೆ.