• Home
  • About Us
  • ಕರ್ನಾಟಕ
Saturday, July 5, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

ಮೈಸೂರು ದಸರಾ 2023 | ಗಜಪಡೆಗೆ ಅದ್ಧೂರಿ ಸ್ವಾಗತ ; ಮೆರವಣಿಗೆ ಮೂಲಕ ಅರಮನೆಗೆ ಎಂಟ್ರಿ

ಪ್ರತಿಧ್ವನಿ by ಪ್ರತಿಧ್ವನಿ
September 5, 2023
in Top Story, ಇದೀಗ, ಕರ್ನಾಟಕ
0
ಮೈಸೂರು ದಸರಾ 2023

ಮೈಸೂರು ದಸರಾ ಉತ್ಸವದಲ್ಲಿ ಪಾಲ್ಗೊಳ್ಳಲು ಅರಮನೆಗೆ ಪಾದಾರ್ಪಣೆ ಮಾಡಿದ ಗಜಪಡೆ

Share on WhatsAppShare on FacebookShare on Telegram

ವಿಶ್ವ ವಿಖ್ಯಾತ ಮೈಸೂರು ದಸರಾ 2023 ಮಹೋತ್ಸವಕ್ಕೆ ಅರಮನೆ ನಗರಿ ಸಜ್ಜಾಗುತ್ತಿದ್ದು ಮಂಗಳವಾರ (ಸೆಪ್ಟೆಂಬರ್ 5) ಗಜಪಡೆಗೆ ಅದ್ದೂರಿಯಾಗಿ ಅರಮನೆಗೆ ಸ್ವಾಗತ ಕೋರಲಾಯಿತು. ಮೆರವಣಿಗೆ ಮೂಲಕ ಗಜಪಡೆ ಅರಮನೆಯಂಗಳಕ್ಕೆ ಆಗಮಿಸಿದವು.

ADVERTISEMENT

ಸಾಂಸ್ಕೃತಿಕ ನಗರಿಯಲ್ಲಿ ದಸರಾ ವೈಭವ ಕಳೆಗಟ್ಟಿದ್ದು, ಮೈಸೂರು ಅರಮನೆ ಮಂಡಳಿ ವತಿಯಿಂದ ಗಜಪಡೆಗೆ ಸಾಂಪ್ರದಾಯಿಕ ಸ್ವಾಗತ ದೊರೆಯಿತು.

ಮಂಗಳವಾರ ಮಧ್ಯಾಹ್ನ 12.01 ರಿಂದ 12.51ರ ನಡುವಿನ ಅಭಿಜಿತ್‌ ಲಗ್ನದಲ್ಲಿ ಕ್ಯಾಪ್ಟನ್ ಅಭಿಮನ್ಯು ನೇತೃತ್ವದ 9 ಆನೆಗಳು ಅರಮನೆಗೆ ಆಗಮಿಸಿದವು. ನಂತರ ಅಭಿಜಿನ್ ಲಗ್ನದಲ್ಲಿ ಅರಮನೆಯ ಜಯಮಾರ್ತಾಂಡ ದ್ವಾರದಲ್ಲಿ ಆನೆಗಳಿಗೆ ಸಾಂಪ್ರದಾಯಿಕ ಪೂಜೆ ನೆರವೇರಿಸಲಾಯಿತು.

ಮೈಸೂರು ದಸರಾ 2023
ಮೈಸೂರು ದಸರಾ ಉತ್ಸವದಲ್ಲಿ ಪಾಲ್ಗೊಳ್ಳಲು ಅರಮನೆಗೆ ಪಾದಾರ್ಪಣೆ ಮಾಡಿದ ಗಜಪಡೆ

ಅರ್ಚಕ ಪ್ರಹ್ಲಾದ್ ರಾವ್ ಸಾಂಪ್ರದಾಯಿಕ ಪೂಜಾ ವಿಧಿವಿಧಾನಗಳನ್ನು ಮಾಡಲಾಯಿತು. ಬಳಿಕ ಅರಮನೆಯ ಗೊಂಬೆ ತೊಟ್ಟಿಯಲ್ಲಿ ಮೈಸೂರಿನ ಅಧಿದೇವತೆ ಚಾಮುಂಡೇಶ್ವರಿದೇವಿಗೆ ಪೂಜೆ ಸಲ್ಲಿಸಿದರು.

ಈ ಕಾರ್ಯಕ್ರಮದಲ್ಲಿ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಡಾ. ಹೆಚ್ಸಿ ಮಹದೇವಪ್ಪ ಜಿಲ್ಲಾಧಿಕಾರಿ ಡಾ ಕೆ ವಿ ರಾಜೇಂದ್ರ, ಪೊಲೀಸ್ ಕಮಿಷನರ್ ರಮೇಶ್ ಬಾನೋತ್, ಎಸ್ಪಿ ಸೀಮಾ ಲಾಟ್ಕರ್, ಡಿಸಿಪಿ ಮುತ್ತುರಾಜ್ ಜಾನ್ಹವಿ, ಡಿಸಿಎಫ್ ಸೌರಭ್ ಕುಮಾರ್, ಸಂಸದ ಪ್ರತಾಪಸಿಂಹ, ಶಾಸಕರಾದ ಶ್ರೀವತ್ಸ ಹರೀಶ್ ಗೌಡ, ಎಂಎಲ್ಸಿ ಸಿ.ಎನ್ ಮಂಜೇಗೌಡ ಮೇಯರ್ ಶಿವಕುಮಾರ್, ಅರಮನೆ ಉಪನಿರ್ದೇಶಕ ಟಿ ಎಸ್ ಸುಬ್ರಮಣ್ಯ ಭಾಗಿಯಾಗಿದ್ದರು.

ಮೈಸೂರು ದಸರಾ 2023 ಉತ್ಸವಕ್ಕೆ ಗಜಪಡೆಯನ್ನು 15ಕ್ಕೂ ಹೆಚ್ಚು ಜಾನಪದ ಕಲಾತಂಡಗಳು ಅಭೂತಪೂರ್ವ ಸ್ವಾಗತದೊಂದಿಗೆ ಬರಮಾಡಿಕೊಂಡವು.

ಆನೆಗಳನ್ನು ಮೆರವಣಿಗೆಯಲ್ಲಿ ಕೆಲ ದೂರ ಕರೆದೊಯ್ಯಲಾಯಿತು. ಈ ವೇಳೆ ಆನೆಗಳ ಎದರು ವಿವಿಧ ವಾದ್ಯಗಳನ್ನು ಬಾರಿಸಲಾಯಿತು. ಈ ಬಾರಿ ಮೈಸೂರು ದಸರಾ ಜಂಬೂ ಸವಾರಿಯಲ್ಲಿ 14 ಆನೆಗಳು ಭಾಗಿಯಾಗಲಿವೆ. ಕ್ಯಾಪ್ಟನ್ ಅಭಿಮನ್ಯು ಈ ಬಾರಿಯೂ ಅಂಬಾರಿಯನ್ನು ಹೊರಲಿದ್ದಾನೆ.

ನಿಶಾನೆ ಆನೆಯಾದ ಅರ್ಜುನ ಜಂಬೂಸವಾರಿಯಲ್ಲಿ 22 ವರ್ಷಗಳ ಕಾಲ ಭಾಗವಹಿಸಿದ ಅನುಭವವಿದೆ. ಈ ಹಿಂದೆ ಅಂಬಾರಿ ಹೊರುತ್ತಿದ್ದನಾದರೂ ಈ ಬಾರಿ ನಿಶಾನೆ ಆನೆಯಾಗಿ ಕಾರ್ಯನಿರ್ವಹಿಸಲಿದ್ದಾನೆ.

ಚೈತ್ರಾ ಹಾಗೂ ವಿಕ್ರಮ ಆನೆಗಳು ಈ ಬಾರಿಯ ದಸರಾ ಜಂಬೂಸವಾರಿಗೆ ಮಿಸ್ ಆಗಲಿದ್ದಾರೆ. ಚೈತ್ರಾ ಗರ್ಭಿಣಿ, ವಿಕ್ರಮ ಆನೆಗೆ ಮದ ಹಿನ್ನೆಲೆ ಜಂಬೂಸವಾರಿಯಿಂದ ದೂರ ಉಳಿಯಲಿವೆ.

ಅರಣ್ಯ ಇಲಾಖೆ ಅಧಿಕಾರಿಗಳು ವಿಶೇಷವಾಗಿ ಸಿಂಗರಿಸಿದ್ದ ಅನೆಗಳಿಗೆ ಸಾಂಪ್ರದಾಯಿಕವಾಗಿ ವಿಶೇಷ ಪೂಜೆ ಸಲ್ಲಿಸಿ, ಬೀಳ್ಕೊಟ್ಟರು. ಮೈಸೂರು ದಸರಾ 2023 ಉತ್ಸವದಲ್ಲಿ ಅಂಬಾರಿ ಹೊರುವ ಅಭಿಮನ್ಯು ಮುಂದಾಳತ್ವದಲ್ಲಿ ಎಲ್ಲಾ ಆನೆಗಳು ಮೈಸೂರಿನ ಅರಣ್ಯಭವನದಿಂದ ಅರಮನೆಯತ್ತ ಹೆಜ್ಜೆ ಹಾಕಿದವು.

ಮೈಸೂರು ದಸರಾ 2023
ಮೈಸೂರು ದಸರಾ ಉತ್ಸವದಲ್ಲಿ ಪಾಲ್ಗೊಳ್ಳಲು ಅರಮನೆಗೆ ಆಗಮಿಸಲು ಅರಣ್ಯ ಭವನದಿಂದ ಬೀಳ್ಕೊಡಲಾಯಿತು

ಅರಣ್ಯ ಭವನದಿಂದ ಹೊರಟ ಎಲ್ಲಾ ಆನೆಗಳು ನಗರದ ಪ್ರಮುಖ ರಸ್ತೆಯಲ್ಲಿ ರಾಜಗಾಂಭೀರ್ಯದಿಂದ ಸಾಗಿದವು. ಈ ವೇಳೆ ನೂರಾರು ಮಂದಿ ಸಾರ್ವಜನಿಕರು ರಸ್ತೆಯ ಇಕ್ಕೆಲಗಳಲ್ಲಿ ನಿಂತು ಅರಮನೆಯತ್ತ ಸಾಗುತ್ತಿದ್ದ ಆನೆಗಳನ್ನು ನೋಡಿ ಕಣ್ತುಂಬಿಕೊಂಡರು.

ಮೈಸೂರು ದಸರಾ 2023
ಮೈಸೂರು ದಸರಾ ಉತ್ಸವದಲ್ಲಿ ಪಾಲ್ಗೊಳ್ಳಲು ಗಜಪಡೆಯನ್ನು ಅರಮನೆಗೆ ಅದ್ದೂರಿ ಮೆರವಣಿಗೆ ಮೂಕ ಕರೆತರಲಾಯಿತು
Tags: GajapadeMysore Dasara 2023MysuruPalaceಗಜಪಡೆಮೈಸೂರುಮೈಸೂರು ದಸರಾ 2023
Previous Post

ಯಾವುದೇ ಧರ್ಮ ಧರ್ಮಕ್ಕೆ ಕೆಟ್ಟ ಪ್ರವೃತ್ತಿ ಬೆಳೆಸಿ ಅಂತ ಹೇಳಲ್ಲ ; ಸಚಿವ ಚಲುವರಾಯಸ್ವಾಮಿ

Next Post

ಶಿಕ್ಷಕರು ಮನುಷ್ಯನ ಜೀವನದ ಅವಿಭಾಜ್ಯ ಅಂಗ : ಸಚಿವ ಸಂತೋಷ್ ಲಾಡ್

Related Posts

Top Story

Bhavana Ramanna: ಮದುವೆಯಾಗದೆ 6 ತಿಂಗಳ ಗರ್ಭಿಣಿ, ಶಾಕ್‌ ಕೊಟ್ಟ ನಟಿ ಭಾವನಾ..!!

by ಪ್ರತಿಧ್ವನಿ
July 4, 2025
0

ನಟಿ ಭಾವನಾ ಈಗ ತಾಯಿ! ಮದ್ವೆ ಆಗದೆ ಅವಳಿ ಮಕ್ಕಳಿಗೆ ಅಮ್ಮ.. ನಟಿ ಭಾವನಾ ಅಮ್ಮ ಅಗ್ತಾ ಇದ್ದಾರೆ! ಅರೇ ಇದು ಜಾಕಿ ಭಾವನಾ ಅವರ ಸುದ್ದಿನಾ...

Read moreDetails

KJ George: ಕುಸುಮ್-ಸಿ ಯೋಜನೆಯಡಿ ಶೀಘ್ರ 745 ಮೆ.ವ್ಯಾ. ವಿದ್ಯುತ್ ಉತ್ಪಾದನೆ: ಸಚಿವ ಕೆ.ಜೆ.ಜಾರ್ಜ್‌

July 4, 2025

Lakshmi Hebbalkar: ಬಾಲಕಿಯರ ಬಾಲಮಂದಿರಕ್ಕೆ ದಿಢೀರ್ ಭೇಟಿ ನೀಡಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್

July 4, 2025

CM Siddaramaiah: ಕಾನೂನು ತೊಡಕು ನಿವಾರಿಸಿ ರೈತರ ಸಭೆ-ಮುಖ್ಯಮಂತ್ರಿ ಸಿದ್ದರಾಮಯ್ಯ

July 4, 2025

Lakshmi Hebbalkar: ಅಂಗನವಾಡಿ ನೇಮಕಾತಿ ಇನ್ನಷ್ಟು ಸರಳ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್

July 4, 2025
Next Post
ಶಿಕ್ಷಕರು ಮನುಷ್ಯನ ಜೀವನದ ಅವಿಭಾಜ್ಯ ಅಂಗ : ಸಚಿವ ಸಂತೋಷ್ ಲಾಡ್

ಶಿಕ್ಷಕರು ಮನುಷ್ಯನ ಜೀವನದ ಅವಿಭಾಜ್ಯ ಅಂಗ : ಸಚಿವ ಸಂತೋಷ್ ಲಾಡ್

Please login to join discussion

Recent News

Top Story

Bhavana Ramanna: ಮದುವೆಯಾಗದೆ 6 ತಿಂಗಳ ಗರ್ಭಿಣಿ, ಶಾಕ್‌ ಕೊಟ್ಟ ನಟಿ ಭಾವನಾ..!!

by ಪ್ರತಿಧ್ವನಿ
July 4, 2025
Top Story

KJ George: ಕುಸುಮ್-ಸಿ ಯೋಜನೆಯಡಿ ಶೀಘ್ರ 745 ಮೆ.ವ್ಯಾ. ವಿದ್ಯುತ್ ಉತ್ಪಾದನೆ: ಸಚಿವ ಕೆ.ಜೆ.ಜಾರ್ಜ್‌

by ಪ್ರತಿಧ್ವನಿ
July 4, 2025
Top Story

Lakshmi Hebbalkar: ಬಾಲಕಿಯರ ಬಾಲಮಂದಿರಕ್ಕೆ ದಿಢೀರ್ ಭೇಟಿ ನೀಡಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್

by ಪ್ರತಿಧ್ವನಿ
July 4, 2025
Top Story

CM Siddaramaiah: ಕಾನೂನು ತೊಡಕು ನಿವಾರಿಸಿ ರೈತರ ಸಭೆ-ಮುಖ್ಯಮಂತ್ರಿ ಸಿದ್ದರಾಮಯ್ಯ

by ಪ್ರತಿಧ್ವನಿ
July 4, 2025
Top Story

Lakshmi Hebbalkar: ಅಂಗನವಾಡಿ ನೇಮಕಾತಿ ಇನ್ನಷ್ಟು ಸರಳ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್

by ಪ್ರತಿಧ್ವನಿ
July 4, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

Bhavana Ramanna: ಮದುವೆಯಾಗದೆ 6 ತಿಂಗಳ ಗರ್ಭಿಣಿ, ಶಾಕ್‌ ಕೊಟ್ಟ ನಟಿ ಭಾವನಾ..!!

July 4, 2025

KJ George: ಕುಸುಮ್-ಸಿ ಯೋಜನೆಯಡಿ ಶೀಘ್ರ 745 ಮೆ.ವ್ಯಾ. ವಿದ್ಯುತ್ ಉತ್ಪಾದನೆ: ಸಚಿವ ಕೆ.ಜೆ.ಜಾರ್ಜ್‌

July 4, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada