20ನೇ ಆಸಿಯಾನ್-ಭಾರತ ಶೃಂಗಸಭೆ ಮತ್ತು 18ನೇ ಪೂರ್ವ ಏಷ್ಯಾ ಶೃಂಗಸಭೆಯಲ್ಲಿ ಭಾಗವಹಿಸಲು ಪ್ರಧಾನಿ ನರೇಂದ್ರ ಮೋದಿ ಬುಧವಾರ (ಸೆಪ್ಟಂಬರ್ 6) ಇಂಡೋನೇಷ್ಯಾಕ್ಕೆ ತೆರಳಲಿದ್ದಾರೆ.
ಗುರುವಾರ ಸಂಜೆ ಪ್ರಧಾನಿ ನರೇಂದ್ರ ಮೋದಿ ದೆಹಲಿಗೆ ಮರಳಿದ್ದಾರೆ ಎಂದು ಪ್ರಧಾನಮಂತ್ರಿ ಕಾರ್ಯಾಲಯ ತಿಳಿಸಿದೆ.
ಇಂಡೋನೇಷ್ಯಾದ ಅಧ್ಯಕ್ಷ ಜೊಕೊ ವಿಡೊಡೊ ಅವರ ಆಹ್ವಾನದ ಮೇರೆಗೆ ಪ್ರಧಾನಿ ಮೋದಿ ಅವರು ಜಕಾರ್ತಗೆ ಭೇಟಿ ನೀಡುತ್ತಿದ್ದಾರೆ. ಆಸಿಯಾನ್-ಭಾರತ ಶೃಂಗಸಭೆ ಮತ್ತು 18ನೇ ಪೂರ್ವ ಏಷ್ಯಾ ಶೃಂಗಸಭೆ ನಾಳೆ ನಡೆಯಲಿದೆ.
ಪ್ರಧಾನಿ ಮೋದಿ ಅವರು ಅದೇ ದಿನ ಭಾರತಕ್ಕೆ ಮರಳಲು ಅನುಕೂಲವಾಗುವಂತೆ ಆಸಿಯಾನ್-ಭಾರತ ಶೃಂಗಸಭೆ ಮತ್ತು ಪೂರ್ವ ಏಷ್ಯಾ ಶೃಂಗಸಭೆ ವೇಳಾಪಟ್ಟಿಯನ್ನು ಸಿದ್ದಪಡಿಸಲಾಗಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.






