• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, May 28, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಬರಪೀಡಿತ ತಾಲೂಕುಗಳನ್ನು ಘೋಷಿಸಲು ಕೇಂದ್ರದ ನಿಯಮ ಬದಲಾಗಬೇಕಿದೆ: ಸಚಿವ ಕೃಷ್ಣ ಬೈರೇಗೌಡ

ಪ್ರತಿಧ್ವನಿ by ಪ್ರತಿಧ್ವನಿ
September 7, 2023
in Top Story, ಕರ್ನಾಟಕ, ರಾಜಕೀಯ
0
ಇಡಿ, ಸಿಬಿಐ, ಐಟಿ ಅಪ್ಪಿತಪ್ಪಿಯೂ ಬಿಜೆಪಿಯವರನ್ನು ಪ್ರಶ್ನಿಸುವುದಿಲ್ಲ : ಕೃಷ್ಣಭೈರೇಗೌಡ
Share on WhatsAppShare on FacebookShare on Telegram

ತಾಲ್ಲೂಕುಗಳನ್ನು ಬರಪೀಡಿತ ಎಂದು ಘೋಷಿಸಲು ಎನ್‌ಡಿಆರ್‌ಎಫ್ ನಿಯಮಗಳಿಗೆ ತಿದ್ದುಪಡಿ ತರುವ ಅಗತ್ಯವಿದೆ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ಪ್ರತಿಪಾದಿಸಿದ್ದಾರೆ.

ADVERTISEMENT

‘ಹಲವು ತಾಲ್ಲೂಕುಗಳು ಬರಗಾಲದ ಪರಿಸ್ಥಿತಿಯಿಂದ ತತ್ತರಿಸಿದ್ದರೂ, ಕೇಂದ್ರದ ಎನ್‌ಡಿಆರ್‌ಎಫ್ ಮಾರ್ಗಸೂಚಿಗಳಿಂದಾಗಿ, ತಾಲ್ಲೂಕುಗಳನ್ನು ಬರಪೀಡಿತ ಎಂದು ಘೋಷಿಸಲು ರಾಜ್ಯ ಸರ್ಕಾರಕ್ಕೆ ಸಾಧ್ಯವಾಗುತ್ತಿಲ್ಲ. ಆದಷ್ಟು ಬೇಗ ಎನ್‌ಡಿಆರ್‌ಎಫ್‌ ಮಾರ್ಗಸೂಚಿಗಳಲ್ಲಿ ಬದಲಾವಣೆ ತರುವ ಅಗತ್ಯವಿದೆ” ಎಂದು ಅವರು ಪ್ರತಿಪಾದಿಸಿದ್ದಾರೆ.

ಬುಧವಾರ ಚಿತ್ರದುರ್ಗದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು ಈ ವಿಷಯ ತಿಳಿಸಿದರು.

ಮಳೆ ಕೊರತೆಯಿಂದ ರಾಜ್ಯದ ಹಲವು ತಾಲೂಕುಗಳು ಬರಗಾಲಕ್ಕೆ ತುತ್ತಾಗಿದೆ. ಜನರ ನಿರೀಕ್ಷೆಗೆ ತಕ್ಕಂತೆ ಬರ ಪರಿಹಾರ ಕ್ರಮಗಳನ್ನು ಕೈಗೊಳ್ಳಲು ರಾಜ್ಯ ಸರ್ಕಾರಕ್ಕೆ ಸಾಧ್ಯವಾಗುತ್ತಿಲ್ಲ ಎಂದು ಅವರು ಹೇಳಿದ್ದಾರೆ.

ಈ ಬಗ್ಗೆ ಈಗಾಗಲೇ ಕೇಂದ್ರಕ್ಕೆ ಪತ್ರ ಬರೆಯಲಾಗಿದ್ದು, ಎನ್‌ಡಿಆರ್‌ಎಫ್ ನಿಯಮಾವಳಿಗಳಲ್ಲಿ ಬದಲಾವಣೆ ತರುವಂತೆ ಮನವಿ ಮಾಡಲಾಗಿದೆ, ದೆಹಲಿಗೆ ತೆರಳಿ ಕೇಂದ್ರಕ್ಕೆ ಮನವರಿಕೆ ಮಾಡಿಕೊಡುವುದಾಗಿ ಹೇಳಿದರು.

ಬರಗಾಲದ ಪರಿಸ್ಥಿತಿಯನ್ನು ಮೌಲ್ಯಮಾಪನ ಮಾಡಲು 113 ತಾಲ್ಲೂಕುಗಳಲ್ಲಿ ಕಂದಾಯ ಮತ್ತು ಕೃಷಿ ಅಧಿಕಾರಿಗಳ ಜಂಟಿ ಸಮೀಕ್ಷೆಯನ್ನು ಕೈಗೊಳ್ಳಲಾಗಿದೆ. NDRF ಮಾನದಂಡಗಳ ಪ್ರಕಾರ, 62 ತಾಲ್ಲೂಕುಗಳು ಬರ ಪೀಡಿತರ ಪಟ್ಟಿಯಲ್ಲಿ ಸ್ಥಾನ ಪಡೆದಿವೆ. ಉಳಿದ 51 ತಾಲೂಕುಗಳಲ್ಲಿ ಬೆಳೆ ನಷ್ಟದ ಮರು ಸಮೀಕ್ಷೆ ನಡೆಸುವಂತೆ ಅಧಿಕಾರಿಗಳಿಗೆ ತಿಳಿಸಲಾಗಿದೆ ಎಂದರು.

ಸೆಪ್ಟೆಂಬರ್ 2ರ ಮಳೆ ವರದಿ ಆಧರಿಸಿ ಹೆಚ್ಚುವರಿಯಾಗಿ 83 ತಾಲ್ಲೂಕುಗಳಲ್ಲಿ ಬೆಳೆ ನಷ್ಟ ಸಮೀಕ್ಷೆ ನಡೆಸಲಾಗುವುದು ಎಂದು ಸಚಿವರು ತಿಳಿಸಿದರು.

ಮುಂದಿನ ನಾಲ್ಕು ದಿನಗಳಲ್ಲಿ ಬರ ಪೀಡಿತ ತಾಲೂಕುಗಳ ಪಟ್ಟಿಯನ್ನು ಸರಕಾರ ಪ್ರಕಟಿಸಲಿದೆ. ಸರ್ಕಾರ ಬರಪೀಡಿತ ತಾಲ್ಲೂಕುಗಳನ್ನು ಘೋಷಿಸಿದ ನಂತರ ಪರಿಹಾರ ಕ್ರಮಗಳನ್ನು ಕೈಗೊಂಡು ರೈತರಿಗೆ ಬೆಳೆ ನಷ್ಟಕ್ಕೆ ಪರಿಹಾರ ನೀಡಬಹುದು. ಸ್ಥಳೀಯ ಶಾಸಕರ ನೇತೃತ್ವದಲ್ಲಿ ಬರ ಪರಿಹಾರ ಕಾಮಗಾರಿಗಳ ಮೇಲ್ವಿಚಾರಣೆಗೆ ಕಾರ್ಯಪಡೆ ರಚಿಸಲಾಗುವುದು ಎಂದು ಅವರು ಹೇಳಿದ್ದಾರೆ.

Tags: BJPCongress Partyಕೃಷ್ಣ ಬೈರೇಗೌಡನರೇಂದ್ರ ಮೋದಿಬಿ ಎಸ್ ಯಡಿಯೂರಪ್ಪಬಿಜೆಪಿ
Previous Post

ಚೀನಾ ಗಡಿ ವಿವಾದ, ಮಣಿಪುರ ಹಿಂಸಾಚಾರದ ಬಗ್ಗೆ ಚರ್ಚಿಸಲು ಸೋನಿಯಾ ಪತ್ರ: ಪ್ರಲ್ಹಾದ್ ಜೋಶಿ‌ ಆಕ್ಷೇಪ

Next Post

ಸೆಪ್ಟೆಂಬರ್ 15 ರಂದು “ಪರಿಮಳಾ ಡಿಸೋಜ” ಚಿತ್ರ ಬಿಡುಗಡೆ

Related Posts

ಸಿಎಂ ನಿವಾಸದಲ್ಲಿ ಉಪಹಾರ ರಾಜಕೀಯ: ಡಿಕೆಶಿ-ಸಿದ್ದರಾಮಯ್ಯ ಭೇಟಿ ಕುತೂಹಲ
ಕರ್ನಾಟಕ

ಮಧ್ಯಾಹ್ನ ಸಿದ್ದರಾಮಯ್ಯ ರಾಜೀನಾಮೆ ಘೋಷಣೆ: ಡಿಕೆಶಿ ಮುಂದಿನ ಸಿಎಂ ಬಹುತೇಕ ಖಚಿತ?

by ಪ್ರತಿಧ್ವನಿ
May 28, 2026
0

ಕರ್ನಾಟಕ ರಾಜಕೀಯದಲ್ಲಿ ಮಹತ್ವದ ಬೆಳವಣಿಗೆಯೊಂದು ನಡೆದಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಮಧ್ಯಾಹ್ನ ತಮ್ಮ ಸ್ಥಾನಕ್ಕೆ ಅಧಿಕೃತವಾಗಿ ರಾಜೀನಾಮೆ ನೀಡುವುದಾಗಿ ಘೋಷಿಸಿದ್ದಾರೆ. ಬೆಳಿಗ್ಗೆ ತಮ್ಮ ಅಧಿಕೃತ ನಿವಾಸದಲ್ಲಿ...

Read moreDetails
ಮೇ 28ರಂದೇ ಸಿಎಂ ಸ್ಥಾನ ತ್ಯಜಿಸುತ್ತಾರಾ ಸಿದ್ದರಾಮಯ್ಯ..? : ನೂತನ ಸಂಪುಟ ಹೇಗಿರಲಿದೆ..?

ರಾಜ್ಯಸಭೆ ಸ್ಥಾನಕ್ಕೆ ಸಿದ್ದರಾಮಯ್ಯ ನಿರಾಸಕ್ತಿ? ರಾಜ್ಯ ರಾಜಕೀಯದಲ್ಲೇ ಮುಂದುವರಿಯಲು ಸಿಎಂ ಮನಸ್ಸು!

May 28, 2026
ಸಿಎಂ ನಿವಾಸದಲ್ಲಿ ಉಪಹಾರ ರಾಜಕೀಯ: ಡಿಕೆಶಿ-ಸಿದ್ದರಾಮಯ್ಯ ಭೇಟಿ ಕುತೂಹಲ

ಸಿಎಂ ನಿವಾಸದಲ್ಲಿ ಉಪಹಾರ ರಾಜಕೀಯ: ಡಿಕೆಶಿ-ಸಿದ್ದರಾಮಯ್ಯ ಭೇಟಿ ಕುತೂಹಲ

May 28, 2026
ಸಿದ್ದರಾಮಯ್ಯ ರಾಜೀನಾಮೆ ಸುದ್ದಿಗೆ ಬಿಜೆಪಿ ನಾಯಕರು‌ ಹೇಳಿದ್ದೇನು ?

ಸಿದ್ದರಾಮಯ್ಯ ರಾಜೀನಾಮೆ ಸುದ್ದಿಗೆ ಬಿಜೆಪಿ ನಾಯಕರು‌ ಹೇಳಿದ್ದೇನು ?

May 28, 2026
ಸಿಎಂ ರಾಜೀನಾಮೆಗೂ ಮುನ್ನ ರಾಜ್ಯಪಾಲರ ದಿಢೀರ್ ಮುಂಬೈ ಪ್ರವಾಸ! ರಾಜ್ಯ ರಾಜಕಾರಣದಲ್ಲಿ ಭಾರಿ ಕುತೂಹಲ

ಸಿಎಂ ರಾಜೀನಾಮೆಗೂ ಮುನ್ನ ರಾಜ್ಯಪಾಲರ ದಿಢೀರ್ ಮುಂಬೈ ಪ್ರವಾಸ! ರಾಜ್ಯ ರಾಜಕಾರಣದಲ್ಲಿ ಭಾರಿ ಕುತೂಹಲ

May 28, 2026
Next Post
ಸೆಪ್ಟೆಂಬರ್ 15 ರಂದು “ಪರಿಮಳಾ ಡಿಸೋಜ” ಚಿತ್ರ ಬಿಡುಗಡೆ

ಸೆಪ್ಟೆಂಬರ್ 15 ರಂದು "ಪರಿಮಳಾ ಡಿಸೋಜ" ಚಿತ್ರ ಬಿಡುಗಡೆ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada